Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಮೇ 30, 31ಕ್ಕೆ ಬೆಂಗಳೂರಿನಲ್ಲಿ...

ಮೇ 30, 31ಕ್ಕೆ ಬೆಂಗಳೂರಿನಲ್ಲಿ ʼಉತ್ಪಾದನಾ ಮಂಥನ್‌ʼ ಸಮಾವೇಶ: ಎಂ.ಬಿ. ಪಾಟೀಲ್‌

ವಾರ್ತಾಭಾರತಿವಾರ್ತಾಭಾರತಿ5 May 2025 6:25 PM IST
share
ಮೇ 30, 31ಕ್ಕೆ ಬೆಂಗಳೂರಿನಲ್ಲಿ ʼಉತ್ಪಾದನಾ ಮಂಥನ್‌ʼ ಸಮಾವೇಶ: ಎಂ.ಬಿ. ಪಾಟೀಲ್‌

ಬೆಂಗಳೂರು: ಬೆಂಗಳೂರಿನಲ್ಲಿ ಮೇ 30 ಹಾಗೂ 31ರಂದು ಎರಡು ದಿನಗಳ ಕಾಲ ನಡೆಸಲು ಉದ್ದೇಶಿಸಿರುವ ‘ಉತ್ಪಾದನಾ ಮಂಥನ್’ ಕುರಿತ ಪೂರ್ವಭಾವಿ ಸಿದ್ಧತೆಗಳ ಬಗ್ಗೆ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಸೋಮವಾರ ಖನಿಜ ಭವನದಲ್ಲಿ ಉನ್ನತ ಅಧಿಕಾರಿಗಳ ಜೊತೆ ಸಭೆ ನಡೆಸಿದರು.

ಕರ್ನಾಟಕವನ್ನು ‘ಜಾಗತಿಕ ತಯಾರಿಕಾ ಕೇಂದ್ರ’ವನ್ನಾಗಿ ಅಭಿವೃದ್ಧಿಪಡಿಸುವ ಮುನ್ನೋಟ ಕುರಿತ ಈ ಎರಡು ದಿನಗಳ ಚಿಂತನ-ಮಂಥನ ಸಮಾವೇಶದಲ್ಲಿ ಆಯ್ದ ಪ್ರಮುಖ ತಯಾರಿಕಾ ವಲಯಗಳು ಮತ್ತು ನವೋದ್ಯಮಗಳ ಸಿಇಒ ಹಾಗೂ ಇತರ ಉನ್ನತ ಅಧಿಕಾರಿಗಳು ಭಾಗವಹಿಸಲಿದ್ದಾರೆ ಎಂದು ಎಂ.ಬಿ. ಪಾಟೀಲ್ ತಿಳಿಸಿದರು.

ಉದ್ಯಮ ದಿಗ್ಗಜರ ಜೊತೆಗಿನ ವಿಚಾರ ಮಂಥನಕ್ಕೆ ಸಮಾವೇಶವು ವೇದಿಕೆ ಒದಗಿಸಲಿದೆ. ರಾಜ್ಯದ ಹೂಡಿಕೆ ಆಕರ್ಷಣೆ ಹಾಗೂ ಆರು ಪ್ರಮುಖ ತಯಾರಿಕಾ ವಲಯಗಳಲ್ಲಿ ರಾಜ್ಯವು ಕ್ರಮಿಸಬೇಕಾದ ಅಭಿವೃದ್ಧಿ ಪಥದ ದಿಕ್ಸೂಚಿ ಆಗಿರಲಿದೆ ಎಂದು ಅವರು ಹೇಳಿದರು.

ವಾಹನ ತಯಾರಿಕೆ, ವೈಮಾಂತರಿಕ್ಷ ಹಾಗೂ ರಕ್ಷಣೆ, ಎಲೆಕ್ಟ್ರಾನಿಕ್ಸ್ ಸಿಸ್ಟಮ್ ಡಿಸೈನ್ ಆ್ಯಂಡ್ ಮ್ಯಾನುಫ್ಯಾಕ್ಚರಿಂಗ್, ಭಾರಿ ಯಂತ್ರೋಪಕರಣ, ಜೈವಿಕ ತಂತ್ರಜ್ಞಾನ, ಕೃಷಿ ಹಾಗೂ ಆಹಾರ ಸಂಸ್ಕರಣೆ ಕ್ಷೇತ್ರಗಳಲ್ಲಿನ ರಾಜ್ಯದ ಸಾಧನೆಯನ್ನು ಇನ್ನಷ್ಟು ಹೊಸ ಎತ್ತರಕ್ಕೆ ಕೊಂಡೊಯ್ಯಲು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಉದ್ಯಮ ದಿಗ್ಗಜರು ಈ ಸಮಾವೇಶದಲ್ಲಿ ರಾಜ್ಯ ಸರಕಾರಕ್ಕೆ ಸೂಕ್ತ ಮಾರ್ಗದರ್ಶನ ನೀಡಲಿದ್ದಾರೆ ಎಂದು ಎಂ.ಬಿ.ಪಾಟೀಲ್ ತಿಳಿಸಿದರು.

ರಾಜ್ಯದ ಬಂಡವಾಳ ಹೂಡಿಕೆಯ ಆಕರ್ಷಣೆ ಹೆಚ್ಚಿಸಲು ರಾಜ್ಯ ಸರಕಾರಕ್ಕೆ ವಲಯವಾರು ನೀಲನಕ್ಷೆ ರೂಪಿಸುವುದು ಈ ಸಮಾವೇಶದ ಮುಖ್ಯ ಉದ್ದೇಶವಾಗಿದೆ. ಪ್ರಮುಖ 6 ತಯಾರಿಕಾ ವಲಯಗಳಲ್ಲಿ ಬಂಡವಾಳ ಹೂಡಿಕೆ ಆಕರ್ಷಿಸುವುದು ಮತ್ತು ತಯಾರಿಕಾ ಚಟುವಟಿಕೆ ಹೆಚ್ಚಳಕ್ಕೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಉದ್ಯಮ ದಿಗ್ಗಜರು ಸರಕಾರಕ್ಕೆ ನೀಲನಕ್ಷೆ ಸಿದ್ಧಪಡಿಸಿ ಕೊಡಲಿದ್ದಾರೆ ಎಂದು ಅಧಿಕಾರಿಗಳು ಸಭೆಯ ಗಮನಕ್ಕೆ ತಂದರು.

ಸಭೆಯಲ್ಲಿ ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ ಡಾ.ಸೆಲ್ವಕುಮಾರ್, ಆಯುಕ್ತೆ ಗುಂಜನ್ ಕೃಷ್ಣ, ಕೆಐಎಡಿಬಿ ಸಿಇಒ ಡಾ.ಮಹೇಶ್, ಸಚಿವರ ತಾಂತ್ರಿಕ ಸಲಹೆಗಾರ ಅರವಿಂದ ಗಲಗಲಿ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X