Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ‘ಹುಬ್ಬಳ್ಳಿ, ಬೆಳಗಾವಿ ವಿಮಾನ...

‘ಹುಬ್ಬಳ್ಳಿ, ಬೆಳಗಾವಿ ವಿಮಾನ ನಿಲ್ದಾಣಗಳನ್ನು ಮೇಲ್ದರ್ಜೆಗೇರಿಸಿ’ : ಕೇಂದ್ರ ವಿಮಾನಯಾನ ಸಚಿವರನ್ನು ಭೇಟಿಯಾದ ಎಂ.ಬಿ.ಪಾಟೀಲ್

ವಾರ್ತಾಭಾರತಿವಾರ್ತಾಭಾರತಿ24 July 2025 8:59 PM IST
share
‘ಹುಬ್ಬಳ್ಳಿ, ಬೆಳಗಾವಿ ವಿಮಾನ ನಿಲ್ದಾಣಗಳನ್ನು ಮೇಲ್ದರ್ಜೆಗೇರಿಸಿ’ : ಕೇಂದ್ರ ವಿಮಾನಯಾನ ಸಚಿವರನ್ನು ಭೇಟಿಯಾದ ಎಂ.ಬಿ.ಪಾಟೀಲ್

ಹೊಸದಿಲ್ಲಿ : ಬೆಂಗಳೂರಿನಲ್ಲಿ ಎರಡನೇ ಅಂತರ್‌ ರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸ್ಥಳ ಆಖೈರು, ವಿಜಯಪುರ ವಿಮಾನ ನಿಲ್ದಾಣ ಲೋಕಾರ್ಪಣೆಗೆ ಒಪ್ಪಿಗೆ, ಹುಬ್ಬಳ್ಳಿ ಮತ್ತು ಬೆಳಗಾವಿ ವಿಮಾನ ನಿಲ್ದಾಣಗಳನ್ನು ಅಂತರ್‌ ರಾಷ್ಟ್ರೀಯ ಮಟ್ಟಕ್ಕೆ ಏರಿಸುವುದು ಸೇರಿದಂತೆ ರಾಜ್ಯದ ವೈಮಾನಿಕ ವಲಯದ ಹಲವು ಬೇಡಿಕೆಗಳ ಕುರಿತು ಕೇಂದ್ರ ಸರಕಾರಕ್ಕೆ ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ.ಪಾಟೀಲ್ ಮನವಿ ಸಲ್ಲಿಸಿದರು.

ಗುರುವಾರ ಹೊಸದಿಲ್ಲಿಯಲ್ಲಿ ಕೇಂದ್ರ ನಾಗರಿಕ ವಿಮಾನಯಾನ ಸಚಿವ ಕೆ.ರಾಮಮೋಹನ್ ನಾಯ್ಡು ಅವರನ್ನು ಭೇಟಿಯಾಗಿ, ಮನವಿ ಸಲ್ಲಿಸಿ ವಿಸ್ತೃತ ಮಾತುಕತೆ ನಡೆಸಿದ ಎಂ.ಬಿ.ಪಾಟೀಲ್, ಬೆಂಗಳೂರಿನ ಸಮೀಪ ಮತ್ತೊಂದು ಅಂತರ್‌ ರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಿಸಲು ರಾಜ್ಯ ಸರಕಾರ ತೀರ್ಮಾನಿಸಿದೆ ಎಂದು ಹೇಳಿದರು.

ಇದಕ್ಕಾಗಿ ಆಯ್ಕೆ ಮಾಡಿದ್ದ ಮೂರು ಸ್ಥಳಗಳನ್ನು ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರದ ಉನ್ನತ ಮಟ್ಟದ ತಂಡವು ಪರಿಶೀಲಿಸಿದೆ. ಹೀಗಾಗಿ ಒಂದು ಸ್ಥಳವನ್ನು ಆದಷ್ಟು ಶೀಘ್ರವೇ ಆಖೈರು ಮಾಡಿದರೆ, ರಾಜ್ಯವು ಮುಂದಿನ ಕೆಲಸ ಕೈಗೆತ್ತಿಕೊಳ್ಳಲು ಅನುಕೂಲವಾಗಲಿದೆ ಎಂದು ಎಂ.ಬಿ.ಪಾಟೀಲ್ ತಿಳಿಸಿದರು.

ಜೊತೆಗೆ, ವಿಜಯಪುರದಲ್ಲಿ ಉದ್ಘಾಟನೆಗೆ ಸಿದ್ಧವಾಗಿರುವ ವಿಮಾನ ನಿಲ್ದಾಣಕ್ಕೆ ಕೇಂದ್ರ ಪರಿಸರ ಇಲಾಖೆಯ ಅನುಮತಿ ಬಾಕಿರುವ ಬಗ್ಗೆ ಹಾಗೂ ಮೈಸೂರು, ಶಿವಮೊಗ್ಗ, ಹಾಸನ, ಕಾರವಾರ, ರಾಯಚೂರು ವಿಮಾನ ನಿಲ್ದಾಣಗಳ ಅಭಿವೃದ್ಧಿ ಮತ್ತು ಭವಿಷ್ಯದ ಯೋಜನೆಗಳ ಬಗ್ಗೆಯೂ ಎಂ.ಬಿ.ಪಾಟೀಲ್ ಸುದೀರ್ಘ ಚರ್ಚೆ ನಡೆಸಿದರು.

ಹುಬ್ಬಳ್ಳಿ, ಬೆಳಗಾವಿ ವಿಮಾನ ನಿಲ್ದಾಣಗಳು ಮೇಲ್ದರ್ಜೆಗೇರಿಸಿ: ಪ್ರಾದೇಶಿಕ ಮತ್ತು ಆರ್ಥಿಕ ಅಭಿವೃದ್ಧಿ ಹಾಗೂ ಉತ್ತರ ಕರ್ನಾಟಕ, ದಕ್ಷಿಣ ಮಹಾರಾಷ್ಟ್ರ ಮತ್ತು ಗೋವಾ ಈ ಭಾಗಗಳಿಗೆ ವಿಮಾನ ಸಂಪರ್ಕ ಸುಧಾರಣೆಯ ಅಗತ್ಯಗಳನ್ನು ಪರಿಗಣಿಸಿ ಹುಬ್ಬಳ್ಳಿ ಮತ್ತು ಬೆಳಗಾವಿ ವಿಮಾನ ನಿಲ್ದಾಣಗಳನ್ನು ಅಂತರ್‍ರಾಷ್ಟ್ರೀಯ ದರ್ಜೆಗೇರಿಸಬೇಕೆಂದು ಎಂ.ಬಿ.ಪಾಟೀಲ್ ಮನವಿ ಸಲ್ಲಿಸಿದರು.

ಎರಡೂ ವಿಮಾನ ನಿಲ್ದಾಣಗಳಲ್ಲಿ ಗಂಟೆಗೆ 2,400 ಪ್ರಯಾಣಿಕರನ್ನು ನಿರ್ವಹಿಸಬಲ್ಲ ಹೊಸ ಟರ್ಮಿನಲ್ ನಿರ್ಮಿಸಲಾಗುತ್ತಿದೆ. ಎ321 ದರ್ಜೆಯ ವಿಮಾನಗಳ ಕಾರ್ಯಾಚರಣೆ ಸಾಧ್ಯವಾಗುವಂತೆ 12 ಪಾರ್ಕಿಂಗ್‌ ಬೇ ಅಭಿವೃದ್ಧಿಪಡಿಸಲಾಗುತ್ತಿದ್ದು, ರಾತ್ರಿ ವೇಳೆಯಲ್ಲೂ ಲ್ಯಾಂಡಿಂಗ್ ಆಗುವಂತೆ ಕ್ರಮ ವಹಿಸಲಾಗಿದೆ. ಜತೆಗೆ ಬೆಳಗಾವಿಯಿಂದ ಫೌಂಡ್ರಿ, ಏರೋಸ್ಪೇಸ್ ಸಾಧನಗಳು, ಅಲ್ಯುಮಿನಿಯಂ ಸಾಧನಗಳು, ಹಣ್ಣು ಮತ್ತು ತರಕಾರಿಗಳನ್ನು ಸಾಗಿಸಲು ಪ್ರತ್ಯೇಕ ಟರ್ಮಿನಲ್ ಇದೆ ಎಂದು ಅವರು ಗಮನ ಸೆಳೆದರು.

ಇದಲ್ಲದೆ ಬೆಳಗಾವಿಯಲ್ಲಿ 3 ವಿಶ್ವವಿದ್ಯಾಲಯಗಳು, 3 ಮೆಡಿಕಲ್ ಕಾಲೇಜುಗಳು, ಕೆಎಲ್‍ಇ ವಿವಿ ಎಲ್ಲವೂ ಇದ್ದು ವಿಶೇಷವಾಗಿ ಮಲೇಷ್ಯಾ ದಿಂದ ಹೆಚ್ಚಿನ ವಿದ್ಯಾರ್ಥಿಗಳು ಇಲ್ಲಿಗೆ ಬರುತ್ತಿದ್ದಾರೆ. ಇನ್ನೊಂದೆಡೆ, ರಕ್ಷಣಾ ವಲಯಕ್ಕೆ ಸಂಬಂಧಪಟ್ಟಂತೆ ಕೇಂದ್ರ ಸರಕಾರದ ಏರ್‌ ಮೆನ್ ತರಬೇತಿ ಶಾಲೆ, ಕಮ್ಯಾಂಡೋ ತರಬೇತಿ ಕೇಂದ್ರ, ಜೂನಿಯರ್ ಲೀಡರ್ಸ್ ವಿಂಗ್, ಇನ್ಫೆಂಟ್ರಿ ಸ್ಕೂಲ್, ಮರಾಠಾ ಲಘು ಪದಾತಿ ದಳದ ಕೇಂದ್ರ ಮತ್ತು ಐಟಿಬಿಪಿ ತರಬೇತಿ ಕೇಂದ್ರಗಳಿವೆ. ಇವೆಲ್ಲವನ್ನೂ ಮೇಲ್ದರ್ಜೆಗೇರಿಸಲು ಪರಿಗಣನೆಗೆ ತೆಗೆದುಕೊಳ್ಳಬೇಕು ಎಂದು ಅವರು ಮನದಟ್ಟು ಮಾಡಿಕೊಟ್ಟರು.

ಹುಬ್ಬಳ್ಳಿಯಲ್ಲಿ ಕೂಡ 16,900 ಚ.ಮೀ. ವಿಸ್ತೀರ್ಣದ ಹೊಸ ಟರ್ಮಿನಲ್ ನಿರ್ಮಿಸಲಾಗುತ್ತಿದ್ದು, ಎಬಿ320 ದರ್ಜೆಯ ವಿಮಾನಗಳ ನಿರ್ವಹಣೆ ಸಾಧ್ಯವಾಗುವಂತೆ ಮಾಡಲಾಗುತ್ತಿದೆ. ಇಲ್ಲಿರುವ ಕಾರ್ಗೋ ಟರ್ಮಿನಲ್‍ನಲ್ಲಿ ಈಗ ವಾರ್ಷಿಕ 15 ಟನ್ ಸರಕು ಸಾಗಣೆ ಆಗುತ್ತಿದೆ. ಜತೆಗೆ ವರ್ಷಕ್ಕೆ 3 ಲಕ್ಷ ಪ್ರಯಾಣಿಕರ ನಿರ್ವಹಣೆ ನಡೆಯುತ್ತಿದೆ. ಮೊದಲಿನಿಂದಲೂ ವಾಣಿಜ್ಯ ವಲಯವಾಗಿರುವ ಹುಬ್ಬಳ್ಳಿ-ಧಾರವಾಡದಲ್ಲಿ ಇತ್ತೀಚೆಗೆ ಐಐಟಿ, ಐಐಐಟಿ ಸಂಸ್ಥೆಗಳು ಬಂದಿದ್ದು, ಕಿಮ್ಸ್ ಆಸ್ಪತ್ರೆ ಕೂಡ ಗಮನ ಸೆಳೆಯುತ್ತಿದೆ ಎಂದು ಅವರು ವಿವರಿಸಿದರು.

755 ಎಕರೆ ಇರುವ ಬೆಳಗಾವಿ ವಿಮಾನ ನಿಲ್ದಾಣ 1990ರಿಂದ ಮತ್ತು 957 ಎಕರೆ ಇರುವ ಹುಬ್ಬಳ್ಳಿ ವಿಮಾನ ನಿಲ್ದಾಣ 1980ರಿಂದ ಸಕ್ರಿಯವಾಗಿವೆ. ಇವುಗಳನ್ನು ಅಂತರ್‍ರಾಷ್ಟ್ರೀಯ ಮೇಲ್ದರ್ಜೆಗೆ ಏರಿಸಿದರೆ ಮಧ್ಯಪ್ರಾಚ್ಯ ದೇಶಗಳು, ಸಿಂಗಾಪುರ ಸೇರಿದಂತೆ ಆಗ್ನೇಯ ಏಷ್ಯಾ ರಾಷ್ಟ್ರಗಳೊಂದಿಗೆ ಸುಗಮ ವಿಮಾನ ಸಂಚಾರ ಸಾಧ್ಯವಾಗಲಿದೆ. ಜತೆಗೆ ಇ-ಕಾಮರ್ಸ್ ಅಭಿವೃದ್ಧಿಯಾಗಲಿದ್ದು, ಉತ್ತರ ಕರ್ನಾಟಕದ ಈ ಎರಡೂ ನಗರಗಳು ಲಾಜಿಸ್ಟಿಕ್ಸ್ ಹಬ್ ಆಗಿ ಬೆಳವಣಿಗೆಯಾಗಲಿವೆ ಎಂದು ಎಂ.ಬಿ.ಪಾಟೀಲ್ ತಿಳಿಸಿದರು.

ರಾಜ್ಯವನ್ನು ಪಾಲುದಾರ ಎಂದು ಪರಿಗಣಿಸಿ: ನಾಗರಿಕ ವಿಮಾನಯಾನ ವಲಯದಲ್ಲಿ ಕರ್ನಾಟಕ ರಾಜ್ಯವನ್ನು ಪಾಲುದಾರ (ಸ್ಟೇಕ್‍ಹೋಲ್ಡರ್) ಎಂದು ಪರಿಗಣಿಸಬೇಕು. ಇದರಿಂದಾಗಿ ವಿಮಾನ ನಿಲ್ದಾಣ ಪ್ರಾಧಿಕಾರ ನಿರ್ವಹಿಸುತ್ತಿರುವ ರಾಜ್ಯದ ಮಂಗಳೂರು, ಮೈಸೂರು, ಹುಬ್ಬಳ್ಳಿ, ಕಲಬುರಗಿ ಮತ್ತು ಬೆಳಗಾವಿ ವಿಮಾನ ನಿಲ್ದಾಣಗಳಿಂದ ರಾಜ್ಯಕ್ಕೂ ಲಾಭದ ಪಾಲು ಸಿಗಲಿದೆ ಎಂದು ಅವರು ಹೇಳಿದರು.

ಈ ವಿಷಯದಲ್ಲಿ ರಾಜ್ಯದ ಪಾತ್ರವನ್ನು ಕೇವಲ ಭೂಸ್ವಾಧೀನ ಮತ್ತು ಸೌಕರ್ಯಗಳ ಅಭಿವೃದ್ಧಿಗೆ ಮಾತ್ರ ಸೀಮಿತಗೊಳಿಸಬಾರದು. ಜೊತೆಗೆ ನಾಗರಿಕ ವಿಮಾನಯಾನ ವಲಯದಲ್ಲಿನ ಆಸ್ತಿ ನಗದೀಕರಣ ಯೋಜನೆಯಲ್ಲೂ ರಾಜ್ಯವನ್ನು ಪಾಲುದಾರ ಎಂದು ಗುರುತಿಸಬೇಕು ಎಂದು ಅವರು ಕೋರಿದರು.

2021ರಲ್ಲಿ ಖಾಸಗೀಕರಣಕ್ಕೆಂದು ಗುರುತಿಸಿದ ದೇಶದ 13 ವಿಮಾನ ನಿಲ್ದಾಣಗಳಲ್ಲಿ ಹುಬ್ಬಳ್ಳಿ ಕೂಡ ಒಂದಾಗಿದೆ. ಆದರೆ, ಆ ಯೋಜನೆಯಲ್ಲಿ ಕಳೆದ ಮೂರ್ನಾಲ್ಕು ವರ್ಷಗಳಿಂದ ಯಾವ ಪ್ರಗತಿಯೂ ಕಂಡುಬಂದಿಲ್ಲ ಎಂದು ನಾಯ್ಡು ಅವರಿಗೆ ಎಂ.ಬಿ.ಪಾಟೀಲ್ ತಿಳಿಸಿದರು.

ಈ ಸಂದರ್ಭದಲ್ಲಿ ಮೂಲಸೌಕರ್ಯ ಅಭಿವೃದ್ಧಿ ಇಲಾಖೆ ಕಾರ್ಯದರ್ಶಿ ಡಾ.ಎನ್.ಮಂಜುಳಾ, ಕೆಎಸ್‍ಐಐಡಿಸಿ ವ್ಯವಸ್ಥಾಪಕ ನಿರ್ದೇಶಕಿ ಖುಷ್ಬೂ ಗೋಯಲ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.


share
ವಾರ್ತಾಭಾರತಿ
ವಾರ್ತಾಭಾರತಿ
Next Story
X