Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಡಿಸಿಎಂ ಡಿ.ಕೆ.ಶಿವಕುಮಾರ್‌ರನ್ನು ಭೇಟಿ...

ಡಿಸಿಎಂ ಡಿ.ಕೆ.ಶಿವಕುಮಾರ್‌ರನ್ನು ಭೇಟಿ ಮಾಡಿದ ಎಂ.ಬಿ.ಪಾಟೀಲ್

ಬಾಬಾನಗರದ ಬಳಿ ಹೊಸ ಕೆರೆ ನಿರ್ಮಾಣಕ್ಕೆ 550 ಕೋಟಿ ರೂ. ಅನುದಾನಕ್ಕೆ ಮನವಿ

ವಾರ್ತಾಭಾರತಿವಾರ್ತಾಭಾರತಿ3 July 2025 4:49 PM IST
share
ಡಿಸಿಎಂ ಡಿ.ಕೆ.ಶಿವಕುಮಾರ್‌ರನ್ನು ಭೇಟಿ ಮಾಡಿದ ಎಂ.ಬಿ.ಪಾಟೀಲ್

ಬೆಂಗಳೂರು: ವಿಜಯಪುರ ಜಿಲ್ಲೆಯ ಬಬಲೇಶ್ವರ ಮತ್ತು ತಿಕೋಟಾ, ಬಾಗಲಕೋಟೆ ಜಿಲ್ಲೆಯ ಜಮಖಂಡಿ ಮತ್ತು ಬೆಳಗಾವಿ ಜಿಲ್ಲೆಯ ಅಥಣಿ ತಾಲ್ಲೂಕಿನಲ್ಲಿ ನೀರಾವರಿ ಮತ್ತು ಕುಡಿಯುವ ನೀರು ಪೂರೈಸುವ ತುಬುಚಿ- ಬಬಲೇಶ್ವರ ಏತ ನೀರಾವರಿ ಯೋಜನೆಯಡಿಯಲ್ಲಿ ಬಾಬಾನಗರದ ಬಳಿ ಹೊಸದಾಗಿ ಕೆರೆ ನಿರ್ಮಿಸಲು 550 ಕೋಟಿ ರೂ. ಅನುದಾನ ಒದಗಿಸಬೇಕೆಂದು ಬೃಹತ್ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್‌ ಅವರು ಜಲಸಂಪನ್ಮೂಲ ಸಚಿವರೂ ಆಗಿರುವ ಡಿ.ಕೆ.ಶಿವಕುಮಾರ್ ಅವರಿಗೆ ಮನವಿ ಸಲ್ಲಿಸಿದ್ದಾರೆ.

ಇಲ್ಲಿನ ಸದಾಶಿವನಗರದ ನಿವಾಸದಲ್ಲಿ ಗುರುವಾರ ಎಂ.ಬಿ.ಪಾಟೀಲ್‌ ಅವರು ಉಪಮುಖ್ಯಮಂತ್ರಿಗಳನ್ನು ಭೇಟಿ ಮಾಡಿದ್ದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ತುಬುಚಿ-ಬಬಲೇಶ್ವರ ಏತ ನೀರಾವರಿ ಯೋಜನೆಯಲ್ಲಿ 6.3 ಟಿಎಂಸಿ ನೀರನ್ನು ಮೇಲ್ಕಂಡ ತಾಲ್ಲೂಕುಗಳ 1.30 ಲಕ್ಷ ಎಕರೆಗೆ ಹರಿಸಲಾಗುತ್ತಿದೆ. ಇಲ್ಲಿ ಶೇ.60ರಷ್ಟು ತೋಟಗಾರಿಕೆ ಬೆಳೆಗಳನ್ನು ಬೆಳೆಯಲಾಗುತ್ತಿದ್ದು, ಬೇಸಿಗೆಯಲ್ಲಿ ನೀರಿನ ಕೊರತೆ ಎದುರಾಗುತ್ತಿದೆ. ಇದನ್ನು ಬಗೆಹರಿಸಲು ಬಾಬಾನಗರದ ಸಮೀಪ ಕೆರೆ ಕಟ್ಟಿ, 0.775 ಟಿಎಂಸಿ ನೀರನ್ನು ತುಂಬಲು ಅವಕಾಶವಿದೆ. ಇಲ್ಲಿ 679.25 ಎಕರೆ ಸರಕಾರಿ ಜಮೀನಿದ್ದು, ಈ ಪೈಕಿ 434 ಎಕರೆಯಲ್ಲಿ ಕೆರೆ ಕಟ್ಟಬೇಕೆಂದು ರೈತರು ಆಗ್ರಹಿಸುತ್ತಿದ್ದಾರೆ ಎಂದು ವಿವರಿಸಿದ್ದಾರೆ.

556.5 ಕೋಟಿ ವೆಚ್ಚದಲ್ಲಿ ಹೊಸ ಕೆರೆಯನ್ನು ನಿರ್ಮಿಸಲು ಚಿಂತಿಸಲಾಗಿದೆ. ಈ ನೀರನ್ನು ಬೇಸಿಗೆ ಕಾಲದಲ್ಲಿ ಜನ, ಜಾನುವಾರು ಮತ್ತು ಬೆಳೆಗಳಿಗೆ ಉಪಯೋಗಿಸಿಕೊಳ್ಳಬಹುದಾಗಿದೆ. ಇದಕ್ಕೆ ತುಬುಚಿ-ಬಬಲೇಶ್ವರ ಏತ ನೀರಾವರಿ ಯೋಜನೆಯ ಎರಡನೆಯ ವಿತರಣಾ ತೊಟ್ಟಿಯಿಂದ ನೀರು ಹರಿಸಲು ಅವಕಾಶವಿದೆ. ಇದಕ್ಕೆ ಜಪಸಂಪನ್ಮೂಲ ಇಲಾಖೆಯು ಸಕಾರಾತ್ಮಕವಾಗಿ ಸ್ಪಂದಿಸುವ ನಿರೀಕ್ಷೆ ಇದೆ ಎಂದು ಅವರು ತಿಳಿಸಿದ್ದಾರೆ.

ರೈತರಿಗೆ ಸೂಕ್ತ ಪರಿಹಾರ ಸಿಗಬೇಕು :

ದೇವನಹಳ್ಳಿ ತಾಲೂಕಿನ ಚನ್ನರಾಯಪಟ್ಟಣ ಹೋಬಳಿಯಲ್ಲಿ ಹೈಟೆಕ್ ಡಿಫೆನ್ಸ್ ಮತ್ತು ಏರೋಸ್ಪೇಸ್ ಪಾರ್ಕ್ ನಿರ್ಮಾಣಕ್ಕೆ 10 ಗ್ರಾಮಗಳ ವ್ಯಾಪ್ತಿಗೆ ಸೇರಿರುವ 1,282 ಎಕರೆ ಭೂಮಿ ಅಗತ್ಯವಿದೆ. ಆದರೆ, ರೈತರು ಇದಕ್ಕೆ ವಿರೋಧ ವ್ಯಕ್ತಪಡಿಸಿ ಹೋರಾಡುತ್ತಿದ್ದಾರೆ. ಈ ಸಂಬಂಧ ಜುಲೈ 4ರ ಶುಕ್ರವಾರ ಸಿಎಂ ಜೊತೆ ಸಭೆ ಏರ್ಪಡಿಸಲಾಗಿದೆ. ಕೈಗಾರಿಕೆಗಳಿಗೆ ಜಮೀನು ಬೇಕಾಗುತ್ತದೆ. ಭೂಮಿ ಕಳೆದುಕೊಳ್ಳಲಿರುವ ರೈತರಿಗೆ ಹೊಸ ಕಾಯ್ದೆಯನ್ವಯ ಸೂಕ್ತ ಪರಿಹಾರ ಕೊಡಲಾಗುವುದು ಎಂದು ಪಾಟೀಲ್‌ ಇದೇ ಸಂದರ್ಭದಲ್ಲಿ ಹೇಳಿದ್ದಾರೆ.

ಕೈಗಾರಿಕಾ ರಂಗದಲ್ಲಿ ತಮಿಳುನಾಡು, ಗುಜರಾತ್, ಒಡಿಶಾ, ಅಸ್ಸಾಂ ಮತ್ತಿತರ ರಾಜ್ಯಗಳಿಂದ ನಮಗೆ ತೀವ್ರ ಸ್ಪರ್ಧೆ ಇದೆ. ಅಲ್ಲೆಲ್ಲ ಉದ್ಯಮಿಗಳಿಗೆ ಏನೇನು ಸೌಲಭ್ಯ ಕೊಡಲಾಗುತ್ತಿದೆ, ಕೈಗಾರಿಕಾ ನೀತಿಗಳು ಹೇಗಿವೆ ಎನ್ನುವುದರ ಅರಿವು ನನಗಿದೆ. ಕೈಗಾರಿಕೆ ಮತ್ತು ಕೃಷಿ ಎರಡೂ ಮುಖ್ಯವಾಗಿದ್ದು, ಸರಿದೂಗಿಸಿಕೊಂಡು ಹೋಗುವ ಕೆಲಸ ಅಗತ್ಯವಾಗಿದೆ ಎಂದು ಅವರು ನುಡಿದಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X