Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಎಪಿರಾಕ್‍ ಕಂಪನಿಯಿಂದ 1,500 ಕೋಟಿ...

ಎಪಿರಾಕ್‍ ಕಂಪನಿಯಿಂದ 1,500 ಕೋಟಿ ರೂ.ಹೂಡಿಕೆ : ಸಚಿವ ಎಂ.ಬಿ.ಪಾಟೀಲ್

ಸ್ವೀಡನ್‍ನಲ್ಲಿ ಬಂಡವಾಳ ಹೂಡಿಕೆಯ ಯಶಸ್ವಿ ರೋಡ್ ಶೋ

ವಾರ್ತಾಭಾರತಿವಾರ್ತಾಭಾರತಿ18 Jun 2025 9:03 PM IST
share
ಎಪಿರಾಕ್‍ ಕಂಪನಿಯಿಂದ 1,500 ಕೋಟಿ ರೂ.ಹೂಡಿಕೆ : ಸಚಿವ ಎಂ.ಬಿ.ಪಾಟೀಲ್

ಬೆಂಗಳೂರು : ಗಣಿಗಾರಿಕೆ ಮತ್ತು ಮೂಲಸೌಲಭ್ಯ ವಲಯಗಳಲ್ಲಿ ಬಳಕೆಯಾಗುವ ಯಂತ್ರೋಪಕರಣ ತಯಾರಿಸುವ ಸ್ವೀಡನ್ನಿನ ಎಪಿರಾಕ್ ಕಂಪನಿಯು, ರಾಜ್ಯದಲ್ಲಿ 2030ರ ವೇಳೆಗೆ ಒಟ್ಟು 1,500 ಕೋಟಿ ರೂ. ಮೊತ್ತದ ಬಂಡವಾಳ ಹೂಡಿಕೆ ಮಾಡಲಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ತಿಳಿಸಿದ್ದಾರೆ.

ಬಂಡವಾಳ ಹೂಡಿಕೆ ಆಕರ್ಷಿಸಲು ಸ್ವೀಡನ್ ಪ್ರವಾಸದಲ್ಲಿ ಇರುವ ಎಂ.ಬಿ.ಪಾಟೀಲ್ ನೇತೃತ್ವದ ರಾಜ್ಯದ ಉನ್ನತ ಮಟ್ಟದ ನಿಯೋಗದ ಜೊತೆ ಬುಧವಾರ ನಡೆದ ಸಭೆಯಲ್ಲಿ, ಎಪಿರಾಕ್‍ನ ಭಾರತದ ಕಾರ್ಯಾಚರಣೆಗಳ ಮುಖ್ಯಸ್ಥ ಅರುಣ್ ಕುಮಾರ್ ಈ ಮಾಹಿತಿ ಹಂಚಿಕೊಂಡಿದ್ದಾರೆ.

ಬೆಂಗಳೂರಿನಲ್ಲಿರುವ 500 ಉದ್ಯೋಗಿಗಳು ಕಾರ್ಯನಿರ್ವಹಿಸುತ್ತಿರುವ ಎಪಿರಾಕ್‍ನ ಸಂಶೋಧನೆ ಹಾಗೂ ಅಭಿವೃದ್ಧಿ ಕೇಂದ್ರವು ಕಂಪನಿಯ ಜಾಗತಿಕ ‘ಆರ್ ಆ್ಯನ್ ಡಿ’ ಉತ್ಪಾದನೆಗೆ ಶೇ.25ರಷ್ಟು ಕೊಡುಗೆ ನೀಡುತ್ತಿದೆ. ಪ್ರಸಕ್ತ ಸಾಲಿನಲ್ಲಿ 500 ಕೋಟಿ ರೂ. ಹೂಡಿಕೆ ಮಾಡಲಾಗುವುದು. 2030ರ ವೇಳೆಗೆ ಹೆಚ್ಚುವರಿಯಾಗಿ 1 ಸಾವಿರ ಕೋಟಿ ರೂ. ಮೊತ್ತದ ಬಂಡವಾಳವನ್ನು ಹೂಡಿಕೆ ಮಾಡಲಾಗುವುದು ಎಂದು ಅರುಣ್ ಕುಮಾರ್ ಅವರು ರಾಜ್ಯದ ನಿಯೋಗಕ್ಕೆ ಭರವಸೆ ನೀಡಿದ್ದಾರೆ ಎಂದು ಎಂ.ಬಿ.ಪಾಟೀಲ್ ತಿಳಿಸಿದ್ದಾರೆ.

ಆಹಾರ ಸಂಸ್ಕರಣೆ ಹಾಗೂ ಪ್ಯಾಕೇಜಿಂಗ್ ಕ್ಷೇತ್ರದ ಜಾಗತಿಕ ದಿಗ್ಗಜ ಕಂಪನಿ ಟೆಟ್ರಾ ಪ್ಯಾಕ್ ನ ಮುಖ್ಯಸ್ಥರ ಜೊತೆ ಸಚಿವರು ನಾವೀನ್ಯತೆ, ಸುಸ್ಥಿರತೆ ಮತ್ತು ಅತ್ಯಾಧುನಿಕ ತಂತ್ರಜ್ಞಾನ ಕ್ಷೇತ್ರಗಳಲ್ಲಿ ರಾಜ್ಯ ಸರಕಾರದ ಜೊತೆಗಿನ ಪಾಲುದಾರಿಕೆ ಸಾಧ್ಯತೆಗಳನ್ನು ಚರ್ಚಿಸಿದ್ದಾರೆ.

ತನ್ನ ಬಹುತೇಕ ಇಂಜಿನಿಯರಿಂಗ್ ಮತ್ತು ಡಿಸೈನ್ ಕೆಲಸಗಳನ್ನು ಭಾರತಕ್ಕೆ ವರ್ಗಾಯಿಸಲು ಉದ್ದೇಶಿಸಿರುವುದಾಗಿ ಸ್ವೀಡನ್ನಿನ ವೈಮಾಂತರಿಕ್ಷ ಹಾಗೂ ರಕ್ಷಣಾ ವಲಯದ ಕಂಪನಿ ‘ಎಸ್‍ಎಎಬಿ’ ಮುಖ್ಯ ಕಾರ್ಯತಂತ್ರ ಅಧಿಕಾರಿ ಕ್ರಿಸ್ತಿಯನ್ ಹೆಡೆಲಿನ್ ಅವರು ನಿಯೋಗದ ಗಮನಕ್ಕೆ ತಂದಿದ್ದಾರೆ.

ಈ ಎರಡೂ ವಲಯಗಳಲ್ಲಿನ ರಾಜ್ಯದ ಸಾಮಥ್ರ್ಯಗಳನ್ನು ಹಾಗೂ ವಹಿವಾಟು ವಿಸ್ತರಣೆಗೆ ಇರುವ ವಿಪುಲ ಅವಕಾಶಗಳನ್ನು ಮನದಟ್ಟು ಮಾಡಿಕೊಟ್ಟ ರಾಜ್ಯದ ನಿಯೋಗದ ವಿವರಣೆಗಳಿಂದ ಪ್ರಭಾವಿತರಾದ ಹೆಡೆಲಿನ್ ಅವರು, ರಾಜ್ಯದಲ್ಲಿ ಬಂಡವಾಳ ಹೂಡಿಕೆ ಮಾಡುವುದನ್ನು ಗಂಭೀರವಾಗಿ ಪರಿಶೀಲಿಸುವುದಾಗಿ ಭರವಸೆ ನೀಡಿದ್ದಾರೆ.

ರಾಜ್ಯದಲ್ಲಿನ ಅತ್ಯಾಧುನಿಕ ಡಿಸೈನ್ ಮತ್ತು ತಯಾರಿಕಾ ವಲಯದ ಸಾಮಥ್ರ್ಯಗಳನ್ನು, ಬಂಡವಾಳ ಹೂಡಿಕೆಗೆ ಇರುವ ವಿಪುಲ ಅವಕಾಶಗಳನ್ನು ಸಚಿವರು ಸ್ವೀಡನ್ನಿನ ಬಹುರಾಷ್ಟ್ರೀಯ ಕಂಪನಿಗಳ ಮುಖ್ಯಸ್ಥರಿಗೆ ವಿವರಿಸಿದ್ದಾರೆ.

ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆಯ ಪ್ರಧಾನ ಕಾರ್ಯದರ್ಶಿ ಡಾ.ಎಸ್.ಸೆಲ್ವಕುಮಾರ್, ಕೈಗಾರಿಕಾ ಇಲಾಖೆ ಆಯುಕ್ತೆ ಗುಂಜನ್ ಕೃಷ್ಣ, ಕೆಐಎಡಿಬಿ ಮುಖ್ಯ ಇಂಜಿನಿಯರ್ ವೀರಭದ್ರಯ್ಯ ಸೇರಿದಂತೆ ಇತರರು ನಿಯೋಗದಲ್ಲಿ ಇದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X