Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಧರ್ಮಸ್ಥಳ ಪ್ರಕರಣ| ಎಸ್‍ಐಟಿ ವಿಚಾರದಲ್ಲಿ...

ಧರ್ಮಸ್ಥಳ ಪ್ರಕರಣ| ಎಸ್‍ಐಟಿ ವಿಚಾರದಲ್ಲಿ ಬಿಜೆಪಿ ರಾಜಕಾರಣ ಮಾಡುತ್ತಿದೆ : ಎಂ.ಬಿ.ಪಾಟೀಲ್

ವಾರ್ತಾಭಾರತಿವಾರ್ತಾಭಾರತಿ28 Aug 2025 6:27 PM IST
share
ಧರ್ಮಸ್ಥಳ ಪ್ರಕರಣ| ಎಸ್‍ಐಟಿ ವಿಚಾರದಲ್ಲಿ ಬಿಜೆಪಿ ರಾಜಕಾರಣ ಮಾಡುತ್ತಿದೆ : ಎಂ.ಬಿ.ಪಾಟೀಲ್

ಬೆಂಗಳೂರು, ಆ.28: ಧರ್ಮಸ್ಥಳ ಕ್ಷೇತ್ರದ ವಿಚಾರದಲ್ಲಿ ಮಿಥ್ಯಾರೋಪಕ್ಕೆ ಪ್ರಚಾರ ಸಿಗುವ ಬದಲು ಸತ್ಯ ದೃಢವಾಗಲಿ ಎನ್ನುವ ಉದ್ದೇಶದಿಂದ ಸರಕಾರ ಎಸ್‍ಐಟಿ ರಚಿಸಬೇಕಾಗಿ ಬಂತು. ಇದನ್ನು ಬಿಜೆಪಿಯವರೂ ಸ್ವಾಗತಿಸಿದ್ದರು. ಈಗ ಇದನ್ನೆ ಅವರು ರಾಜಕೀಯ ಬಂಡವಾಳ ಮಾಡಿಕೊಳ್ಳಲು ಹೊರಟಿದ್ದಾರೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಹೇಳಿದ್ದಾರೆ.

ಗುರುವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾರೋ ಒಬ್ಬ ಅನಾಮಿಕ ತಾನು ಧರ್ಮಸ್ಥಳದಲ್ಲಿ ಹತ್ತಾರು ಶವಗಳನ್ನು ಹೂತು ಹಾಕಿದ್ದಾಗಿ ಹೇಳಲು ಶುರು ಮಾಡಿದ. ಅದೇನೆಂದು ಸರಿಯಾಗಿ ಕಂಡುಕೊಳ್ಳುವುದು ಸರಕಾರದ ಕರ್ತವ್ಯವಾಗಿತ್ತು. ಎಸ್‍ಐಟಿ ಮಾಡಿದ್ದರಿಂದ ಧರ್ಮಸ್ಥಳದ ಶಕ್ತಿ ಮತ್ತು ಆ ಕ್ಷೇತ್ರದ ಬಗೆಗಿನ ವಿಶ್ವಾಸ ಮತ್ತಷ್ಟು ಹೆಚ್ಚಾಗಿದೆ. ಏಕೆಂದರೆ, ಇದರಿಂದ ವಿನಾ ಕಾರಣ ಕಳಂಕ ಅಂಟಿಕೊಳ್ಳುವ ಅಪಾಯ ತಪ್ಪಿತು ಎಂದು ತಿಳಿಸಿದರು.

ಧರ್ಮಸ್ಥಳದಲ್ಲಿ ಏನೋ ನಡೆಯಬಾರದ್ದು ನಡೆದಿರಬಹುದು ಎನ್ನುವ ಅನುಮಾನ ಬಿಜೆಪಿಯವರಿಗೂ ಇತ್ತು. ಇಲ್ಲದಿದ್ದರೆ ಎಸ್‍ಐಟಿ ರಚನೆಯನ್ನೇಕೆ ಅವರು ಸ್ವಾಗತಿಸುತ್ತಿದ್ದರು? ಈಗ ಅಲ್ಲಿ ಅಂಥದ್ದೇನೂ ನಡೆದಿಲ್ಲ ಎಂದಾಗಿದೆ. ಹೀಗಾಗಿ ಬಿಜೆಪಿ ಇದನ್ನು ರಾಜಕೀಯ ಬಂಡವಾಳ ಮಾಡಿಕೊಳ್ಳಲು ಹವಣಿಸುತ್ತಿದೆ. ಎಸ್‍ಐಟಿ ಮಾಡಿದ್ದರಿಂದ ಒಳ್ಳೆಯದೆ ಆಗಿದೆ. ಇದಕ್ಕಾಗಿ ರಾಜ್ಯ ಸರಕಾರ ಕ್ಷಮೆ ಕೇಳುವ ಪ್ರಶ್ನೆಯೆ ಇಲ್ಲ ಎಂದು ಅವರು ಪ್ರತಿಪಾದಿಸಿದರು.

ಬಿಜೆಪಿ ಬಳಿ ವಿಚಾರಗಳೆ ಇಲ್ಲ: ಮೈಸೂರು ದಸರಾ ಉದ್ಘಾಟಕರಾಗಿ ಸಾಹಿತಿ ಬಾನು ಮುಷ್ತಾಕ್ ಅವರನ್ನು ಆಹ್ವಾನಿಸಲು ಸರಕಾರ ತೀರ್ಮಾನಿಸಿದೆ. ಬಿಜೆಪಿ ಇದನ್ನೂ ವಿರೋಧಿಸುತ್ತಿದೆ. ಹಿಂದೆ ಕವಿ ಪ್ರೊ.ಕೆ.ಎಸ್.ನಿಸಾರ್ ಅಹಮದ್ ದಸರಾ ಉದ್ಘಾಟಿಸಿದ್ದರು. ವಿಜಯಪುರದಲ್ಲಿ ನನ್ನನ್ನು ಕೂಡ ಮುಸ್ಲಿಮರು ತಮ್ಮ ಧಾರ್ಮಿಕ ಕೇಂದ್ರಗಳಿಗೆ ಆಹ್ವಾನಿಸುತ್ತಾರೆ. ಇದರಲ್ಲಿ ತಪ್ಪೇನಿದೆ ಎಂದು ಎಂ.ಬಿ.ಪಾಟೀಲ್ ಪ್ರಶ್ನಿಸಿದರು.

ಬಿಜೆಪಿಯವರ ಬತ್ತಳಿಕೆಯಲ್ಲಿ ಗಟ್ಟಿ ವಿಚಾರಗಳೆ ಇಲ್ಲ. ಹೀಗಾಗಿಯೆ ಅವರು ಜಾತಿ ಮತ್ತು ಧರ್ಮಗಳ ಮಧ್ಯೆ ವಿಷಬೀಜ ಬಿತ್ತುವ ಕೆಲಸ ಮಾಡುತ್ತಿದ್ದಾರೆ. ಇದನ್ನು ಬಿಟ್ಟು ಅಮೆರಿಕದ ತೆರಿಗೆ ಹೇರಿಕೆ, ರಾಜ್ಯಕ್ಕೆ ಬರಬೇಕಾದ ತೆರಿಗೆ ಪಾಲು, ಬೆಂಗಳೂರು ನಗರಕ್ಕೆ ಬೇಕಾದ ಎರಡನೆಯ ವಿಮಾನ ನಿಲ್ದಾಣ ಮತ್ತು ರಾಜ್ಯದ ರೈಲ್ವೆ ಯೋಜನೆಗಳ ಬಗ್ಗೆ ಕೇಂದ್ರ ಸರಕಾರದ ಜೊತೆ ಮಾತನಾಡಲಿ ಎಂದು ಎಂ.ಬಿ.ಪಾಟೀಲ್ ಹೇಳಿದರು.

Tags

M.B.Patil
share
ವಾರ್ತಾಭಾರತಿ
ವಾರ್ತಾಭಾರತಿ
Next Story
X