Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಹುಬ್ಬಳ್ಳಿ ಎನ್‌ಜಿಇಎಫ್‌ ಪುನಶ್ಚೇತನ:...

ಹುಬ್ಬಳ್ಳಿ ಎನ್‌ಜಿಇಎಫ್‌ ಪುನಶ್ಚೇತನ: ಜಪಾನಿನ ಜೆಎಫ್‌ಇ ಜೊತೆ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್‌ ಚರ್ಚೆ

ವಾರ್ತಾಭಾರತಿವಾರ್ತಾಭಾರತಿ10 Sept 2025 3:09 PM IST
share
ಹುಬ್ಬಳ್ಳಿ ಎನ್‌ಜಿಇಎಫ್‌ ಪುನಶ್ಚೇತನ: ಜಪಾನಿನ ಜೆಎಫ್‌ಇ ಜೊತೆ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್‌ ಚರ್ಚೆ
ಕೊಪ್ಪಳ : 2,345 ಕೋಟಿ ರೂ. ವೆಚ್ಚದ ಉಕ್ಕು ಘಟಕ ಸ್ಥಾಪನೆ

ಬೆಂಗಳೂರು: ʼಪಾಲುದಾರಿಕೆಯಡಿ ಹುಬ್ಬಳ್ಳಿಯಲ್ಲಿರುವ ಪ್ರತಿಷ್ಠಿತ ಎನ್‌ಜಿಇಎಫ್‌ ಕಾರ್ಖಾನೆ ಪುನಶ್ಚೇತನದ ಸಾಧ್ಯತೆಗಳ ಕುರಿತು ಜಪಾನಿನ ಜೆಎಫ್‌ಇ ಷೋಜಿ ಕಂಪನಿ ಜೊತೆ ಬೃಹತ್ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್‌ ಅವರು ಮಾತುಕತೆ ನಡೆಸಿದ್ದು ಕಾರ್ಖಾನೆಗೆ ಆಹ್ವಾನ ನೀಡಿದ್ದಾರೆ.

ಬಂಡವಾಳ ಹೂಡಿಕೆ ಆಕರ್ಷಿಸಲು ಜಪಾನ್‌ಗೆ ಭೇಟಿ ನೀಡಿರುವ ರಾಜ್ಯದ ಉನ್ನತ ಮಟ್ಟದ ನಿಯೋಗದ ನೇತೃತ್ವ ವಹಿಸಿರುವ ಸಚಿವರು, ಕಂಪನಿಯ ಉನ್ನತಾಧಿಕಾರಿಗಳ ಜೊತೆ ಬುಧವಾರ ನಡೆದ ಸಭೆಯಲ್ಲಿ ಹುಬ್ಬಳ್ಳಿ ಎನ್‌ಜಿಇಎಫ್‌ ಪುನಶ್ಚೇತನದ ಪ್ರಸ್ತಾವ ಮುಂದಿಟ್ಟಿದ್ದಾರೆ.

ʼವಿದ್ಯುತ್‌ ಪರಿವರ್ತಕಗಳ ತಯಾರಿಕೆಯಲ್ಲಿ ಜೆಎಫ್‌ಇ ಮುಂಚೂಣಿಯಲ್ಲಿ ಇದೆ. ಹುಬ್ಬಳ್ಳಿಯಲ್ಲಿ ಇರುವ ರಾಜ್ಯ ಸರ್ಕಾರಿ ಸ್ವಾಮ್ಯದ ಉದ್ಯಮವಾಗಿರುವ ನ್ಯೂ ಗವರ್ನಮೆಂಟ್‌ ಎಲೆಕ್ಟ್ರಿಕಲ್‌ ಫ್ಯಾಕ್ಟರಿಯನ್ನು (ಎನ್‌ಜಿಇಎಫ್‌) ರಾಜ್ಯ ಸರ್ಕಾರದ ಪಾಲುದಾರಿಕೆಯಡಿ ಪುನಶ್ಚೇತನಗೊಳಿಸುವ ಸಂಬಂಧ ಪೂರ್ವಭಾವಿ ಮಾತುಕತೆ ನಡೆಸಲು ಕಂಪನಿಯ ಉನ್ನತಾಧಿಕಾರಿಗಳು ಹುಬ್ಬಳ್ಳಿಯ ಘಟಕಕ್ಕೆ ಭೇಟಿ ನೀಡಲು ಆಹ್ವಾನಿಸಲಾಗಿದೆʼ ಎಂದು ಸಚಿವರು ತಿಳಿಸಿದ್ದಾರೆ.

ಸಚಿವರ ಜೊತೆಗಿನ ಸಭೆಯಲ್ಲಿ ಕಂಪನಿಯ ಜೆಎಫ್‌ಇ ಷೋಜಿ ಕಂಪನಿಯ ಯಂತ್ರೋಪಕರಣಗಳ ವಿಭಾಗದ ಜನರಲ್‌ ಮ್ಯಾನೇಜರ್‌ ಹಿರೋಶಿ ಲಿಜಿಮಾ , ಎಲೆಕ್ಟ್ರಿಕಲ್‌ ಅಪ್ಲೈಯನ್ಸಸ್‌ ಸ್ಟೀಲ್‌ ಪ್ಲ್ಯಾನಿಂಗ್‌ ವಿಭಾಗದ ಮ್ಯಾನೇಜರ್‌ ಹಿಡೆಕಸು ಯೋಶಿಒಕೊ ಮತ್ತಿತರರು ಭಾಗವಹಿಸಿದ್ದರು.

ಬ್ಯಾಟರಿ ಚಾಲಿತ ವಿದ್ಯುತ್‌ ವಾಹನಗಳ (ಬಿಇವಿ) ಮತ್ತು ವಿದ್ಯುತ್‌ ಚಾಲಿತ ವಾಹನಗಳ (ಇವಿ) ತಯಾರಿಕೆಯಲ್ಲಿ ಬಳಸಲಾಗುವ ಮೋಟರ್‌ ಕೋರ್ಸ್‌ ತಯಾರಿಸುವ 400 ಕೋಟಿ ವೆಚ್ಚದ ಯೋಜನೆಯು ಶೀಘ್ರದಲ್ಲಿಯೇ ಕಾರ್ಯಗತಗೊಳ್ಳಲಿದೆ ಎಂದು ಕಂಪನಿಯು ರಾಜ್ಯದ ನಿಯೋಗಕ್ಕೆ ಭರವಸೆ ನೀಡಿದೆ.

ಜಪಾನ್‌ ಭೇಟಿಯ ಮೂರನೇ ದಿನ, ರಾಜ್ಯದ ನಿಯೋಗವು ಸುಮಿಟೊಮೊ, ಯಸ್ಕಾವಾ, ಜೆಎಫ್‌ಇ ಶೋಜಿ ಕಂಪನಿಗಳ ಉನ್ನತಾಧಿಕಾರಿಗಳ ಜೊತೆ ಮಾತುಕತೆ ನಡೆಸಿತು.

ಕೊಪ್ಪಳ: 2,345 ಕೋಟಿ ಹೂಡಿಕೆ ಕುರಿತು ಚರ್ಚೆ

ಬಜಾಜ್‌ ಗ್ರೂಪ್‌ ಜೊತೆಗಿನ ಸಹಭಾಗಿತ್ವದ ಮುಕಂದ ಸುಮಿ ಮೂಲಕ ಕೊಪ್ಪಳದಲ್ಲಿನ ಉಕ್ಕು ತಯಾರಿಕಾ ಘಟಕದಲ್ಲಿ 2,345 ಕೋಟಿ ಬಂಡವಾಳ ಹೂಡಿಕೆ ಮಾಡುವುದನ್ನು ಸುಮಿಟೊಮೊ ಖಚಿತಪಡಿಸಿದೆ. ಈ ಘಟಕವು 2028ರ ವೇಳೆಗೆ ಕಾರ್ಯಾರಂಭ ಮಾಡಲಿದೆ. ವಾರ್ಷಿಕ 3,50,000 ಟನ್‌ಗಳಷ್ಟು ಕಬ್ಬಿಣ, ಉಕ್ಕು ತಯಾರಿಸುವ ಸಾಮರ್ಥ್ಯ ಹೊಂದಿದೆ. ಶೀಘ್ರದಲ್ಲಿಯೇ ರಾಜ್ಯದಲ್ಲಿ ಬಯೊಮಾಸ್‌ ಘಟಕವನ್ನು ಸ್ಥಾಪಿಸುವ ಬಗ್ಗೆಯೂ ಸುಮಿಟೊಮೊ ಆಸಕ್ತಿ ವ್ಯಕ್ತಪಡಿಸಿದೆ ಎಂದು ಸಚಿವರು ವಿವರಿಸಿದ್ದಾರೆ.

ಬೆಂಗಳೂರಿನಲ್ಲಿ ತನ್ನ ಮೋಷನ್‌ ಕಂಟ್ರೋಲ್‌ ಮತ್ತು ವೇರಿಯೇಬಲ್‌ ಫ್ರಿಕ್ವೆನ್ಸಿ ಡ್ರೈವ್ಸ್‌ ಘಟಕ ಸ್ಥಾಪಿಸುವ ಸಂಬಂಧದ ಬಂಡವಾಳ ಹೂಡಿಕೆಯನ್ನು ಯಸ್ಕಾವಾ ಕಂಪನಿಯು ರಾಜ್ಯದ ನಿಯೋಗಕ್ಕೆ ಖಚಿತಪಡಿಸಿದೆ. ಇದು ಅತ್ಯಾಧುನಿಕ ತಯಾರಿಕಾ ತಂತ್ರಜ್ಞಾನದ ಕೇಂದ್ರವಾಗಿ ಬೆಳೆಯುವ ಕರ್ನಾಟಕದ ಸ್ಥಾನವನ್ನು ಬಲಪಡಿಸಲಿದೆ ಎಂದು ಅವರು ತಿಳಿಸಿದ್ದಾರೆ.

ಉನ್ನತ ಮಟ್ಟದ ನಿಯೋಗದಲ್ಲಿ ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಡಾ. ಎಸ್ ಸೆಲ್ವಕುಮಾರ್‌, ಕೈಗಾರಿಕಾ ಇಲಾಖೆ ಆಯುಕ್ತರಾದ ಗುಂಜನ್ ಕೃಷ್ಣ, ಮತ್ತಿತರರು ಇದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X