Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ರಾಜ್ಯದಲ್ಲಿ 882 ಕೋಟಿ ರೂ.ವೆಚ್ಚದಲ್ಲಿ...

ರಾಜ್ಯದಲ್ಲಿ 882 ಕೋಟಿ ರೂ.ವೆಚ್ಚದಲ್ಲಿ ಹೊಸೊಡಾದ ಸೌರಕೋಶ ತಯಾರಿಕಾ ಘಟಕ : ಎಂ.ಬಿ.ಪಾಟೀಲ್

ವಾರ್ತಾಭಾರತಿವಾರ್ತಾಭಾರತಿ12 Sept 2025 7:33 PM IST
share
ರಾಜ್ಯದಲ್ಲಿ 882 ಕೋಟಿ ರೂ.ವೆಚ್ಚದಲ್ಲಿ ಹೊಸೊಡಾದ ಸೌರಕೋಶ ತಯಾರಿಕಾ ಘಟಕ : ಎಂ.ಬಿ.ಪಾಟೀಲ್

ಬೆಂಗಳೂರು, ಸೆ. 12: ರಾಜ್ಯದಲ್ಲಿ ಅಂದಾಜು 882ಕೋಟಿ ರೂ.ವೆಚ್ಚದಲ್ಲಿ ಸೌರಕೋಶ ತಯಾರಿಸುವ ಘಟಕ ಸಾಪಿಸುವುದನ್ನು ಜಪಾನಿನ ಹೊಸೊಡಾ ಹೋಲ್ಡಿಂಗ್ಸ್ ಕಂಪೆನಿ ದೃಢಪಡಿಸಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ತಿಳಿಸಿದ್ದಾರೆ.

ತೋಂಗ್ ತರ್ ಎನರ್ಜಿ ಸೊಲುಷನ್ಸ್(ಟಿಟಿಇಎಸ್) ಸಹಯೋಗದಲ್ಲಿ ಈ ಯೋಜನೆ ಕಾರ್ಯಗತಗೊಳ್ಳಲಿದೆ. ಆರಂಭದಲ್ಲಿ ಟಿಟಿಇಎಸ್ ಈ ಯೋಜನೆಗೆ 490 ಕೋಟಿ ರೂಪಾಯಿ ವೆಚ್ಚ ಮಾಡಲು ನಿರ್ಧರಿಸಿತ್ತು. ಫೆಬ್ರುವರಿಯಲ್ಲಿ ನಡೆದಿದ್ದ ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ಈ ಯೋಜನೆಯ ಒಪ್ಪಂದಕ್ಕೆ ಅಂಕಿತ ಹಾಕಲಾಗಿತ್ತು ಎಂದು ಅವರು ಮಾಹಿತಿ ನೀಡಿದ್ದಾರೆ.

ಟಿಟಿಇಎಸ್ ಜೊತೆಗಿನ ಪಾಲುದಾರಿಕೆ ಫಲವಾಗಿ ಈ ಯೋಜನೆಯ ಹೂಡಿಕೆ ಮೊತ್ತವನ್ನು ಹೊಸೊಡಾ ಹೋಲ್ಡಿಂಗ್ಸ್ ಹೆಚ್ಚಿಸಿದೆ. ಇದರಿಂದ ರಾಜ್ಯದಲ್ಲಿ 500ಜನರಿಗೆ ಉದ್ಯೋಗ ಅವಕಾಶಗಳು ಸೃಷ್ಟಿಯಾಗಲಿವೆ. ಜಪಾನ್‍ಗೆ ಭೇಟಿ ನೀಡಿರುವ ರಾಜ್ಯದ ಉನ್ನತ ಮಟ್ಟದ ನಿಯೋಗದ ನೇತೃತ್ವವಹಿಸಿರುವ ಸಚಿವ ಪಾಟೀಲ್ ಅವರು, ಶುಕ್ರವಾರ ಹೊಸೊಡಾ ಹೋಲ್ಡಿಂಗ್ಸ್‌ ಅಧ್ಯಕ್ಷ ನಕಾಮುರಾ ಸ್ಯಾನ್ ಅವರ ಜೊತೆಗೆ ನಡೆಸಿದ ಸಮಾಲೋಚನೆಯಲ್ಲಿ ಕಂಪೆನಿಯು ಈ ಹೂಡಿಕೆ ಹೆಚ್ಚಳವನ್ನು ಖಚಿತಪಡಿಸಿದೆ ಎಂದು ತಿಳಿಸಿದರು.

ಬಂಡವಾಳ ಹೂಡಿಕೆ ಹೆಚ್ಚಿಸುವ ಕಂಪೆನಿಯ ನಿರ್ಧಾರವು ಸ್ವಾಗತಾರ್ಹವಾಗಿದ್ದು, ಸೌರಶಕ್ತಿ ಉತ್ಪಾದನೆಗೆ ರಾಜ್ಯ ಸರಕಾರ ನೀಡುತ್ತಿರುವ ಆದ್ಯತೆಯನ್ನು ಈ ನಿರ್ಧಾರವು ಸಮರ್ಥಿಸುತ್ತದೆ. ಕ್ರೀಡಾ ಪರಿಕರಗಳನ್ನು ತಯಾರಿಸುವ ಕರ್ನಾಟಕದಲ್ಲಿನ ತನ್ನ ಘಟಕವು 2027ರ ವೇಳೆಗೆ ಕಾರ್ಯಾರಂಭ ಮಾಡಲಿದೆ ಎಂದು ಜಪಾನಿನ ಇನಾಬತಾ ಕಂಪೆನಿಯು ರಾಜ್ಯದ ನಿಯೋಗಕ್ಕೆ ಭರವಸೆ ನೀಡಿದೆ.

ತಯಾರಿಕಾ ಘಟಕ ಸ್ಥಾಪನೆಗೆ ಅಗತ್ಯವಾದ ಭೂಮಿ ಸ್ವಾಧೀನ ಹಾಗೂ ಸಂಬಂಧಿತ ಅನುಮೋದನೆಗಳನ್ನು ತ್ವರಿತವಾಗಿ ಒದಗಿಸಲಾಗುವುದು ಎಂದು ನಿಯೋಗವು ಭರವಸೆ ನೀಡಿದೆ. ಲೋಹದ ಉಪಕರಣ ಬಳಸಿ ನಿರ್ದಿಷ್ಟ ಆಕಾರದಲ್ಲಿ ನಿಖರವಾಗಿ ಕತ್ತರಿಸುವ ತಂತ್ರಜ್ಞಾನದಲ್ಲಿ ಪರಿಣತಿ ಹೊಂದಿರುವ (ಎನ್‍ಗ್ರೇವಿಂಗ್ ಮತ್ತು ಡೈಕಟಿಂಗ್ ಟೆಕ್ನಾಲಜಿ) ಟೆತ್ಸುಜಿಕವಾ ಕಂಪೆನಿಯು ರಾಜ್ಯದಲ್ಲಿ ತನ್ನ ತಯಾರಿಕಾ ಚಟುವಟಿಕೆ ವಿಸ್ತರಿಸುವ ಮಾಹಿತಿಯನ್ನು ರಾಜ್ಯದ ನಿಯೋಗದ ಜೊತೆ ಹಂಚಿಕೊಂಡಿದೆ.

ಉನ್ನತ ಮಟ್ಟದ ನಿಯೋಗದಲ್ಲಿ ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಡಾ.ಎಸ್. ಸೆಲ್ವಕುಮಾರ್, ಕೈಗಾರಿಕಾ ಇಲಾಖೆ ಆಯುಕ್ತೆ ಗುಂಜನ್ ಕೃಷ್ಣ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X