Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಹುಬ್ಬಳ್ಳಿ ಎನ್‍ಜಿಇಎಫ್‍ಗೆ ಎಸ್ಕಾಂಗಳಿಂದ...

ಹುಬ್ಬಳ್ಳಿ ಎನ್‍ಜಿಇಎಫ್‍ಗೆ ಎಸ್ಕಾಂಗಳಿಂದ 8 ಕೋಟಿ ರೂ.ಬಾಕಿ : ತಕ್ಷಣವೇ ಪಾವತಿಸಲು ಸಚಿವ ಎಂ.ಬಿ.ಪಾಟೀಲ್ ಸೂಚನೆ

ವಾರ್ತಾಭಾರತಿವಾರ್ತಾಭಾರತಿ4 Oct 2025 8:21 PM IST
share
ಹುಬ್ಬಳ್ಳಿ ಎನ್‍ಜಿಇಎಫ್‍ಗೆ ಎಸ್ಕಾಂಗಳಿಂದ 8 ಕೋಟಿ ರೂ.ಬಾಕಿ : ತಕ್ಷಣವೇ ಪಾವತಿಸಲು ಸಚಿವ ಎಂ.ಬಿ.ಪಾಟೀಲ್ ಸೂಚನೆ

ಬೆಂಗಳೂರು, ಅ. 4: ಹುಬ್ಬಳ್ಳಿಯಲ್ಲಿರುವ ಸರಕಾರಿ ಸ್ವಾಮ್ಯದ ಎನ್‍ಜಿಇಎಫ್ ಕಾರ್ಖಾನೆಯಿಂದ ರಾಜ್ಯದ ವಿದ್ಯುತ್ ನಿಗಮಗಳು ಟ್ರಾನ್ಸಫಾರ್ಮರ್‌ಗಳನ್ನು ಖರೀದಿಸಿವೆ. ಈ ಬಾಬ್ತಿನಲ್ಲಿ 8ಕೋಟಿ ರೂ.ಬಾಕಿಯಾಗಿ ಉಳಿದುಕೊಂಡಿದ್ದು ತೊಂದರೆಯಾಗಿದೆ. ವಿದ್ಯುತ್ ಸರಬರಾಜು ಕಂಪೆನಿಗಳು ಈ ಹಣವನ್ನು ಶೀಘ್ರವೇ ಪಾವತಿಸಬೇಕು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಸೂಚಿಸಿದ್ದಾರೆ.

ಶನಿವಾರ ಇಲ್ಲಿನ ಖನಿಜ ಭವನದಲ್ಲಿ ನಡೆದ ಎನ್‍ಜಿಇಎಫ್ ಕಾರ್ಖಾನೆಯ ಆಡಳಿತ ಮಂಡಳಿ ಸಭೆಯಲ್ಲಿ ಮಾತನಾಡಿದ ಅವರು, ವಿದ್ಯುತ್ ವಿತರಣಾ ಕಂಪೆನಿಗಳ ವ್ಯವಸ್ಥಾಪಕ ನಿರ್ದೇಶಕರು ಈ ಸಭೆಗೆ ವರ್ಚುಯಲ್ ರೂಪದಲ್ಲಿ ಭಾಗವಹಿಸಿದ್ದರು. ಹುಬ್ಬಳ್ಳಿ ಎನ್‍ಜಿಇಎಫ್‍ಗೆ ಬೆಸ್ಕಾಂ, ಹೆಸ್ಕಾಂ, ಮೆಸ್ಕಾಂ, ಜೆಸ್ಕಾಂ ಮುಂತಾದ ವಿದ್ಯುತ್ ನಿಗಮಗಳು ತಲಾ 2ಕೋಟಿ ರೂ.ಆಸುಪಾಸಿನಲ್ಲಿ ಹಣವನ್ನು ಬಾಕಿ ಉಳಿಸಿಕೊಂಡಿವೆ. ಸರಕಾರವು ಎನ್‍ಜಿಇಎಫ್ ಪುನಶ್ಚೇತನಕ್ಕೆ ತೀರ್ಮಾನಿಸಿದೆ. ಆದರೆ, ಬಾಕಿ ವಸೂಲಾತಿಯೇ ಸಮಸ್ಯೆಯಾಗಿ ಪರಿಣಮಿಸಿದೆ ಎಂದು ವಿವರಿಸಿದರು.

ಎನ್‍ಜಿಇಎಫ್ ಅತ್ಯುತ್ಕೃಷ್ಟ ಗುಣಮಟ್ಟದ ವಿದ್ಯುತ್ ಪರಿವರ್ತಕಗಳ ತಯಾರಿಕೆಗೆ ಹೆಸರುವಾಸಿಯಾಗಿದೆ. ನೂತನ ಸಂಸತ್ ಭವನದಲ್ಲಿ ಇಲ್ಲಿಯ ಪರಿವರ್ತಕಗಳೇ ಇವೆ. ರೈಲ್ವೆ ಇಲಾಖೆ ಇಲ್ಲಿಂದಲೇ ವಿದ್ಯುತ್ ಪರಿವರ್ತಕಗಳನ್ನು ಖರೀದಿಸುತ್ತದೆ. ಆಫ್ರಿಕಾ ಖಂಡದ ಉಗಾಂಡಾ ಸೇರಿದಂತೆ ಹಲವು ದೇಶಗಳಿಗೆ ಎನ್‍ಜಿಇಎಫ್ ಪರಿವರ್ತಕಗಳನ್ನು ರಫ್ತು ಮಾಡುತ್ತಿದೆ ಎಂದು ಅವರು ಹೇಳಿದರು.

18 ತಿಂಗಳಲ್ಲಿ ಕೆಲಸ ಆಗಬೇಕು: ಬೆಂಗಳೂರಿನ ಕೆಲ ಕೈಗಾರಿಕಾ ಪ್ರದೇಶಗಳಿಗೆ ನದಿ ಮೂಲದಿಂದ ನೀರನ್ನು ಪೂರೈಸುವ ಕೆಲಸ ಎತ್ತಿಕೊಳ್ಳಲಾಗುವುದು. ಇದಕ್ಕೆ ನಾಲ್ಕೈದು ವರ್ಷ ತೆಗೆದುಕೊಂಡರೆ ಪ್ರಯೋಜನವಿಲ್ಲ. ಈ ಕೆಲಸವನ್ನು ಒಂದೂವರೆ ವರ್ಷದಲ್ಲಿ ಪೂರೈಸಬೇಕು ಎಂದು ಅವರು ಅಧಿಕಾರಿಗಳಿಗೆ ಇಲಾಖೆಯ ಪ್ರಗತಿ ಪರಿಶೀಲನೆ ವೇಳೆ ಸೂಚಿಸಿದರು.

ವಿಜಯಪುರ ಕೈಗಾರಿಕಾ ಪ್ರದೇಶಕ್ಕೆ ನೀರು ಪೂರೈಸುವ ಕಾಮಗಾರಿ ಶೇ 95ರಷ್ಟು ಮತ್ತು ಧಾರವಾಡ ಕೈಗಾರಿಕಾ ಪ್ರದೇಶದಲ್ಲಿ ಶೇ 80ರಷ್ಟು ಮುಗಿದಿದೆ. ಕೈಗಾರಿಕಾ ಪ್ರದೇಶಗಳಲ್ಲಿ ಎಸ್‍ಸಿ/ಎಸ್‍ಟಿ ಉದ್ಯಮಿಗಳಿಗೆ ಶೇ.75ರಷ್ಟು ಸಬ್ಸಿಡಿ ದರದಲ್ಲಿ ನಿವೇಶನ ನೀಡಲಾಗುತ್ತದೆ. ಈ ಸಂಬಂಧ 938ಕೋಟಿ ರೂ.ಇಲಾಖೆಗೆ ಬರಬೇಕಾಗಿದೆ. ಇದನ್ನು ಆದಷ್ಟು ಬೇಗ ಬಿಡುಗಡೆ ಮಾಡುವ ಸಂಬಂಧ ಹಣಕಾಸು ಇಲಾಖೆ ಜತೆ ಚರ್ಚಿಸಲು ಅಧಿಕಾರಿಗಳಿಗೆ ಸೂಚಿಸಿದರು.

ಕೈಗಾರಿಕಾ ಪ್ರದೇಶಗಳಲ್ಲಿ ನಿವೇಶನ ಪಡೆದುಕೊಂಡವರು ಕಟ್ಟಡದ ಸುತ್ತ ಸುರಕ್ಷತಾ ದೃಷ್ಟಿಯಿಂದ 6-7 ಮೀಟರ್ ಜಾಗ ಬಿಡಬೇಕು ಎಂಬ ನಿಯಮವನ್ನು ಸಡಿಲಿಸುವ ಚಿಂತನೆ ಇದೆ. ಏಕೆಂದರೆ, ಇಷ್ಟು ಜಾಗ ಬಿಟ್ಟರೆ ಉದ್ಯಮಿಗಳಿಗೆ ತುಂಬಾ ನಷ್ಟವಾಗುತ್ತದೆ. ಈ ದೃಷ್ಟಿಯಿಂದ ಬೇರೆಬೇರೆ ರಾಜ್ಯಗಳು ಮತ್ತು ವಿದೇಶಗಳಲ್ಲಿ ಇರುವ ನೀತಿ ನಿಯಮಗಳನ್ನು ನೋಡಿ, ತೀರ್ಮಾನಿಸಬೇಕು ಎಂದು ಅವರು ಅಧಿಕಾರಿಗಳಿಗೆ ಸೂಚಿಸಿದರು.

ಸಭೆಯಲ್ಲಿ ವಿಜಯಪುರ ಜಿಲ್ಲೆಗೆ ಸಂಬಂಧಿಸಿದ ಹಲವು ಕೈಗಾರಿಕಾ ಯೋಜನೆಗಳು ಮತ್ತು ಕ್ವಿನ್ ಸಿಟಿ ಪ್ರಗತಿ ಕುರಿತೂ ಪರಾಮರ್ಶಿಸಲಾಯಿತು. ಸಭೆಯಲ್ಲಿ ಕೈಗಾರಿಕಾ ಇಲಾಖೆಯ ಕಾರ್ಯದರ್ಶಿ ಸೆಲ್ವಕುಮಾರ್, ಆಯುಕ್ತೆ ಗುಂಜನ್ ಕೃಷ್ಣ, ಕೆಐಎಡಿಬಿ ಸಿಇಒ ಡಾ.ಮಹೇಶ ಸೇರಿದಂತೆ ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X