Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. 2022ರಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದ...

2022ರಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದ ರೈತನ ಸಾವನ್ನು ವಕ್ಫ್‌ ವಿವಾದಕ್ಕೆ ಎಳೆದು ತಂದ ಮಾಧ್ಯಮಗಳು!

ಸುಳ್ಳು ಸುದ್ದಿಯನ್ನೇ ಟ್ವೀಟ್ ಮಾಡಿದ ಸಂಸದ ತೇಜಸ್ವಿ ಸೂರ್ಯ ; ಹಾವೇರಿ ಪೊಲೀಸರ ಫ್ಯಾಕ್ಟ್ ಚೆಕ್ ಬಳಿಕ ಡಿಲೀಟ್

ವಾರ್ತಾಭಾರತಿವಾರ್ತಾಭಾರತಿ7 Nov 2024 11:30 PM IST
share
2022ರಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದ ರೈತನ ಸಾವನ್ನು ವಕ್ಫ್‌ ವಿವಾದಕ್ಕೆ ಎಳೆದು ತಂದ ಮಾಧ್ಯಮಗಳು!

ಹಾವೇರಿ: ವಕ್ಫ್ ಬೋರ್ಡ್ ಆಸ್ತಿ ಕಿರಿಕಿರಿಗೆ ಬೇಸತ್ತು ಯುವ ರೈತನೋರ್ವ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವಿವಿಧ ಸುದ್ದಿ ಮಾಧ್ಯಮಗಳು ವರದಿ ಮಾಡಿದ್ದು, ಈ ಸುದ್ದಿಯು ಸತ್ಯಕ್ಕೆ ದೂರವಾದ್ದು ಎಂದು ಹಾವೇರಿ ಎಸ್‌ಪಿ ಪ್ರಕಟನೆ ಮೂಲಕ ಸ್ವಷ್ಟನೆ ನೀಡಿದ್ದಾರೆ.

ವಕ್ಫ್ ಕಾರಣ ಹಾವೇರಿ ಜಿಲ್ಲೆಯ ಹರನಗಿ ಗ್ರಾಮದಲ್ಲಿ ರೈತನೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂಬ ಸುಳ್ಳು ಸುದ್ದಿಯನ್ನು ಪಬ್ಲಿಕ್ ಟಿವಿ, ಕನ್ನಡದುನಿಯಾ ಸುದ್ದಿ ಮಾಧ್ಯಮಗಳು ಹಂಚಿಕೊಂಡಿವೆ. ಈ ಸುದ್ದಿಯನ್ನು ಪರಿಶೀಲಿಸದೆ ಪ್ರಕಟಿಸಿದ್ದು ಸಾರ್ವಜನಿಕ ವಲಯದಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ. ಈ ಸುಳ್ಳು ಸುದ್ದಿಯನ್ನು ಬಿಜೆಪಿ ನಾಯಕ ತೇಜಸ್ವಿ ಸೂರ್ಯ ಕೂಡ ಹಂಚಿಕೊಂಡಿದ್ದಾರೆ.

ಜಮೀನಿನ ಪಹಣಿಯಲ್ಲಿ ವಕ್ಫ್ ಹೆಸರು ನಮೂದಾದ ಕಾರಣದಿಂದಾಗಿ ಹಾವೇರಿಯ ರೈತರೊಬ್ಬರು ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ, ಎಂಬುದು ಸುಳ್ಳು ಸುದ್ದಿ ಎಂದು ಹಾವೇರಿ ಪೊಲೀಸರು ಎಕ್ಸ್ ಖಾತೆಯಲ್ಲಿ ಫ್ಯಾಕ್ಟ್ ಚೆಕ್ ಜೊತೆ ಸ್ಪಷ್ಟನೆ ನೀಡಿದ್ದಾರೆ. ಆ ಬಳಿಕ ತೇಜಸ್ವಿ ಸೂರ್ಯ ಅವರು ಟ್ವೀಟ್ ಡಿಲೀಟ್ ಮಾಡಿದ್ದಾರೆ.

ಈ ವಿಚಾರಕ್ಕೆ ಸಂಬಂಧಿಸಿದಂತೆ ಹಾವೇರಿ ಪೊಲೀಸರು ಫ್ಯಾಕ್ಟ್ ಚೆಕ್ ಮೂಲಕ ಸ್ಪಷ್ಟನೆ ನೀಡಿದ್ದಾರೆ. ಸ್ಪಷ್ಟನೆಯಲ್ಲಿ “07.11.2024 ರಂದು ಕನ್ನಡ ನ್ಯೂಸ್ ನೌ ಎಂಬ ಹೆಸರಿನ ಡಿಜಿಟಲ್ ನ್ಯೂಸ್ ನಲ್ಲಿ ಹಾವೇರಿ ಜಿಲ್ಲೆಯ ಹರಣಗಿ ಗ್ರಾಮದ ರೈತ ಚನ್ನಪ್ಪ ಎಂಬುವವರ ಪುತ್ರ ರುದ್ರಪ್ಪ ಎಂಬ ರೈತ, 8 ವರ್ಷಗಳ ಹಿಂದೆ 4 ಎಕರೆ ಹೊಲದ ಪಹಣಿಯಲ್ಲಿ ವಕ್ಫ್ ಹೆಸರು ಬಂದಿರುವುದಕ್ಕೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವದಾಗಿ ಹಾವೇರಿ ರೈತರು ಆರೋಪಿಸಿದ್ದಾರೆಂದು ವರದಿ ಪ್ರಕಟ ಮಾಡಿರುತ್ತಾರೆ. ಆದರೆ ಮೃತ ರುದ್ರಪ್ಪ ತಂದೆ ಚನ್ನಪ್ಪ ಬಾಳಿಕಾಯಿ ಇತನು ತಮ್ಮ ಆಸ್ತಿಯ ಪಹಣಿಯಲ್ಲಿ ವಕ್ಫ್ ಎಂದು ನಮೂದು ಆಗಿದ್ದಕ್ಕೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುತ್ತಾರೆ ಎಂದು ಯಾವುದೇ ರೀತಿ ಪ್ರಕರಣ ದಾಖಲಾಗಿರುವುದಿಲ್ಲ ಎಂದು ತಿಳಿಸಿದ್ದಾರೆ”.

“ದಿನಾಂಕ 06.01.2022 ರಂದು ಚನ್ನಪ್ಪ ಬಾಳಿಕಾಯಿ ಅವರ ಮಗ ರುದ್ರಪ್ಪ ಐಸಿಐಸಿಐ ಬ್ಯಾಂಕ್ ಹಾವೇರಿ ಶಾಖೆಯಲ್ಲಿ 3 ಲಕ್ಷ ಹಾಗೂ ಖಾಸಗಿಯಾಗಿ 4 ಲಕ್ಷ ರೂಪಾಯಿ ಕೈಸಾಲ ಮಾಡಿಕೊಂಡಿದ್ದು, ಅತೀ ಹೆಚ್ಚು ಮಳೆಯಾಗಿ ಬೆಳೆ ಹಾನಿಯಾಗಿದ್ದರಿಂದ ಮನ ನೊಂದು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುತ್ತಾರೆ ಎಂದು ಅವರ ತಂದೆ ಚನ್ನಪ್ಪ ಬಾಳಿಕಾಯಿ ದೂರು ನೀಡಿದ್ದು, ಆಡೂರ ಪೊಲೀಸ್ ಠಾಣೆ ಯುಡಿಆರ್ ಸಂಖ್ಯೆ: 03/2022, ಕಲಂ: 174 ಸಿಆರ್‌ಪಿಸಿ ಪ್ರಕಾರ ಯುಡಿಆ‌ರ್ ದಾಖಲಿಸಿಕೊಳ್ಳಲಾಗಿದೆ. ಅದರಲ್ಲಿ ತಮ್ಮ ಆಸ್ತಿಯಲ್ಲಿ ವಕ್ಫ್ ಎಂದು ನಮೂದಾಗಿದ್ದಕ್ಕೆ ಆತ್ಮಹತ್ಯೆ ಮಾಡಿಕೊಂಡಿರುತ್ತಾರೆ ಎಂದು ಯಾವುದೇ ರೀತಿ ನಮೂದಿಸಿರುವುದಿಲ್ಲ”.

“ಮೃತರ ಬಗ್ಗೆ ಆಡೂರ ಪಿಎಸ್‌ಐ ರವರು ತನಿಖೆ ಕೈಗೊಂಡು, ಬೆಳೆ ಹಾನಿಯಾಗಿದ್ದರಿಂದ ಸಾಲ ಮಾಡಿದ್ದಕ್ಕೆ ಮನ ನೊಂದು ಆತ್ಮಹತ್ಯೆ ಮಾಡಿಕೊಂಡಿರುತ್ತಾರೆ ಎಂದು ಸಾಕ್ಷಾಧಾರಗಳನ್ನು ಸಂಗ್ರಹಿಸಿ, ಅಂತಿಮ ವರದಿಯನ್ನು ಹಾನಗಲ್ ತಹಶೀಲ್ದಾರ್ ರಿಗೆ ಸಲ್ಲಿಸಿರುತ್ತಾರೆ. ಮೃತರ ಕುಟುಂಬಕ್ಕೆ ಸರ್ಕಾರದಿಂದ 5 ಲಕ್ಷ ರೂಪಾಯಿ ಪರಿಹಾರ ಒದಗಿಸಲಾಗಿರುತ್ತದೆ” ಎಂದು ಫ್ಯಾಕ್ಟ್ ಚೆಕ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X