Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಸರಕಾರಿ ಶಾಲೆಗಳ ಅಗತ್ಯತೆಗಳನ್ನು...

ಸರಕಾರಿ ಶಾಲೆಗಳ ಅಗತ್ಯತೆಗಳನ್ನು ಈಡೇರಿಸಲಿ: ಡಾ. ನಿರಂಜನಾರಾಧ್ಯ ವಿ.ಪಿ ಒತ್ತಾಯ

ವಾರ್ತಾಭಾರತಿವಾರ್ತಾಭಾರತಿ9 Dec 2023 4:12 PM IST
share
ಸರಕಾರಿ ಶಾಲೆಗಳ ಅಗತ್ಯತೆಗಳನ್ನು ಈಡೇರಿಸಲಿ: ಡಾ. ನಿರಂಜನಾರಾಧ್ಯ ವಿ.ಪಿ ಒತ್ತಾಯ

ಬೆಂಗಳೂರು: ಶಾಲಾ ಶಿಕ್ಷಣ ಹಾಗು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಮಕ್ಕಳಿಗೆ ಮುಂದಿನ ವರ್ಷದಿಂದ ಸೈಕಲ್ ನೀಡುವುದಾಗಿ ಭರವಸೆ ನೀಡಿದ್ದು, ಸರಕಾರಿ ಶಾಲೆಗಳ ವಿವಿಧ ಅಗತ್ಯತೆಗಳನ್ನು ಈಡೇರಿಸುವ ನಿಟ್ಟಿನಲ್ಲಿ ಉಳಿದ ಉತ್ತೇಜಕಗಳು ಸಕಾಲಕ್ಕೆ ದೊರೆಯುವಂತೆ ಕ್ರಮವಹಿಸಬೇಕು ಎಂದು ಅಭಿವೃದ್ಧಿ ಶಿಕ್ಷಣ ತಜ್ಞ ಡಾ. ನಿರಂಜನಾರಾಧ್ಯ ವಿ.ಪಿ ಒತ್ತಾಯಿಸಿದ್ದಾರೆ.

ಶನಿವಾರ ಪ್ರಕಟಣೆ ಹೊರಡಿಸಿರುವ ಅವರು, ಶಾಲಾ ಶಿಕ್ಷಣದಲ್ಲಿ ಕೇಂದ್ರ ಬಿಂದು ಮಕ್ಕಳು ಹಾಗೂ ಮಕ್ಕಳ ಕಲಿಕೆ. ಮಕ್ಕಳಿಗಿರುವ ಶಿಕ್ಷಣದ ಮೂಲಭೂತ ಹಕ್ಕಿನ ಭಾಗವಾಗಿ ಒದಗಿಸಬೇಕಾದ ಉತ್ತೇಜಕಗಳು, ಕಲಿಯಲು ಅಗತ್ಯವಾದ ಮೂಲ ಸೌಕರ್ಯ ಹಾಗು ಕಲಿಸಲು ಬೇಕಾದ ಅರ್ಹ ಶಿಕ್ಷಕರನ್ನು ಒದಗಿಸುವುದು ಸರಕಾರದ ಮೊದಲ ಆದ್ಯತೆಯಾಗಬೇಕಾಗುತ್ತದೆ ಎಂದಿದ್ದಾರೆ.

ರಾಜ್ಯದಲ್ಲಿ, ಹಲವು ವರ್ಷಗಳಿಂದ ಶಾಲೆ ಪ್ರಾರಂಭವಾಗಿ ಹಲವು ತಿಂಗಳು ಕಳೆದರೂ, ಮಕ್ಕಳಿಗೆ ಪಠ್ಯಪುಸ್ತಕ ಮತ್ತು ನೋಟ್ ಪುಸ್ತಕ, ಸಮವಸ್ತ್ರ ಮತ್ತು ಶೂ ಹಾಗು ಸಾಕ್ಸ್ ಸಕಾಲಕ್ಕೆ ದೊರೆತಿಲ್ಲ. ಜೊತೆಗೆ, ಏಳನೇ ತರಗತಿಯಿಂದ ಎಂಟು ಅಥವಾ ಎಂಟರಿಂದ ಒಂಭತ್ತನೇ ತರಗತಿಗೆ ಹೋಗುತ್ತಿರುವ ಮಕ್ಕಳಿಗೆ ಕಳೆದ ಮೂರು ವರ್ಷದಿಂದ ಉಚಿತ ಸೈಕಲ್ ಸಿಕ್ಕಿಲ್ಲ ಎಂದು ತಿಳಿಸಿದ್ದಾರೆ.

ಎಲ್ಲ ಮಕ್ಕಳಿಗೆ ಪರಿಷ್ಕೃತ ಪಠ್ಯಪುಸ್ತಕ ಮತ್ತು ನೋಟ್ ಪುಸ್ತಕ, 2 ಜೊತೆ ಸಮವಸ್ತ್ರ ಮತ್ತು 2 ಜೊತೆ ಶೂ ಹಾಗೂ ಸಾಕ್ಸ್ ವಿತರಣೆ ಮಾಡಬೇಕು. ಶೈಕ್ಷಣಿಕ ವರ್ಷದ ಪ್ರಾರಂಭದಲ್ಲಿ ಶಿಕ್ಷಕರ ಖಾಲಿ ಹುದ್ದೆಗಳ ಭರ್ತಿ ಮಾಡಬೇಕು. ವಿಳಂಬವಾದಲ್ಲಿ, ಶಾಲೆ ಪ್ರಾರಂಭದಲ್ಲಿಯೇ ಅತಿಥಿ ಶಿಕ್ಷಕರ ನೇಮಕ ಮಾಡಿಕೊಳ್ಳಬೇಕು ಎಂದಿದ್ದಾರೆ.

ಏಕೋಪಾಧ್ಯಾಯ, ಶೂನ್ಯ ಶಿಕ್ಷಕರಿರುವ ಶಾಲೆಗಳಿಗೆ ಕೂಡಲೇ ಖಾಯಂ ಶಿಕ್ಷಕರ ನೇಮಕ ಮಾಡಬೇಕು. ಖಾಯಂ ಶಿಕ್ಷಕರನ್ನು ಅತ್ಯಗತ್ಯವಿರುವ ಗ್ರಾಮೀಣ ಪ್ರದೇಶಗಳಿಗೆ ನಿಯೋಜನೆ ಮಾಡಬೇಕು. ಯಾವುದೇ ನೆಪಹೇಳಿ ಸರಕಾರಿ ಶಾಲೆಗಳನ್ನು ಸಾಮೂಹಿಕವಾಗಿ ಮುಚ್ಚುವ, ವಿಲೀನಗೊಳಿಸುವ ಪ್ರಕ್ರಿಯೆಯನ್ನು ಪೂರ್ಣವಾಗಿ ನಿಲ್ಲಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಮಕ್ಕಳಿಗೆ ಪೌಷ್ಠಿಕ ಆಹಾರ ನೀಡುವ ಭಾಗವಾಗಿ ಮಧ್ಯಾಹ್ನದ ಬಿಸಿಯೂಟದ ವೆಚ್ಚಕ್ಕೆ ಈಗಿರುವ ಪ್ರತೀ ಮಗುವಿನ ಯುನಿಟ್ ವೆಚ್ಚವನ್ನು ಹೆಚ್ಚಿಸಬೇಕು. ಈ ಶೈಕ್ಷಣಿಕ ವರ್ಷದ ಕೊನೆಯಲ್ಲಿ , ಎಲ್ಲ ಸರಕಾರಿ ಶಾಲೆಗಳಲ್ಲಿ ಮೂಲಭೂತ ಸೌಕರ್ಯಗಳ ಸ್ಥಿತಿಗತಿ ಅರಿಯಲು ಸಿ ಆರ್ ಪಿ, ಶಿಕ್ಷಣ ಸಂಯೋಜಕರು, ಬಿಆರ್ ಸಿ , ಬಿಆರ್ ಪಿ, ಬಿಇಒ, ಡಿಡಿಪಿಐ ಮತ್ತು ಡಯಟ್ ಸಿಬ್ಬಂದಿಗಳು ಶಾಲೆಗಳಿಗೆ ಭೇಟಿ ನೀಡಿ ವಿವರವಾದ ವರದಿ ಸಲ್ಲಿಸಲು ಕ್ರಮ ವಹಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಶಾಲಾ ಹಂತದಲ್ಲಿ ಸಂವಿಧಾನ ಬದ್ಧವಾಗಿ ಕಾರ್ಯನಿರ್ವಹಿಸುತ್ತಿರುವ ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಗಳನ್ನು ಪ್ರಜಾಸತ್ತಾತ್ಮಕವಾಗಿ ರಚಿಸಿ ಬಲವರ್ಧನೆಗೊಳಿಸಲು ಪರಿಣಾಮಕಾರಿ ತರಬೇತಿ ಒದಗಿಸಲು ಕ್ರಮ ವಹಿಸಬೇಕು ಎಂದು ಡಾ. ನಿರಂಜನಾರಾಧ್ಯ ವಿ. ಪಿ. ತಿಳಿಸಿದ್ದಾರೆ.

ಬಾಲ್ಯಪೂರ್ವ ಆರೈಕೆ ಮತ್ತು ಶಿಕ್ಷಣವೂ ಒಳಗೊಂಡಂತೆ ಕನಿಷ್ಠ 12ನೆಯ ತರಗತಿಯವರೆಗೆ ಉಚಿತ ಮತ್ತು ಕಡ್ಡಾಯ ಶಿಕ್ಷಣವನ್ನು ವಿಸ್ತರಿಸಲು ಸಂವಿಧಾನ ಹಾಗು ಶಿಕ್ಷಣಹಕ್ಕು ಕಾಯಿದೆಗೆ ಅಗತ್ಯ ತಿದ್ದುಪಡಿ ತರಲು ಕೇಂದ್ರ ಸರಕಾರದ ಮೇಲೆ ಒತ್ತಡ ಹಾಕಬೇಕು ಎಂದು ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X