ವಿರೋಧ ಪಕ್ಷಗಳ ನಾಯಕರ ಸಭೆ; ಬೆಂಗಳೂರಿಗೆ ಆಗಮಿಸಿದ ಖರ್ಗೆ, ಸೋನಿಯಾ, ರಾಹುಲ್, ಮಮತಾ ಬ್ಯಾನರ್ಜಿ
ಬೆಂಗಳೂರು: ವಿರೋಧ ಪಕ್ಷಗಳ ನಾಯಕರ ಸಭೆಯಲ್ಲಿ ಪಾಲ್ಗೊಳ್ಳಲು ದೆಹಲಿಯಿಂದ ವಿಶೇಷ ವಿಮಾನದಲ್ಲಿ ಬೆಂಗಳೂರು ಎಚ್ಎಎಲ್ ವಿಮಾನ ನಿಲ್ದಾಣಕ್ಕೆ ಬಂದಿಳಿದ ಗಣ್ಯರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ ಕೆ ಶಿವಕುಮಾರ್ ಸ್ವಾಗತಿಸಿದರು.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮಾಜಿ ಅಧ್ಯಕ್ಷರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪಶ್ಚಿಮ ಬಂಗಾಖದ ಸಿಎಂ ಮಮತಾ ಬ್ಯಾನರ್ಜಿ ಅವರನ್ನು ಸಿದ್ದರಾಮಯ್ಯ ಹಾಗೂ ಡಿ.ಕೆ ಶಿವಕುಮಾರ್ ಹೂಗುಚ್ಛ ನೀಡಿ ಬರಮಾಡಿಕೊಂಡರು.
2024ರ ಲೋಕಸಭಾ ಚುನಾವಣೆಗೆ ಜಂಟಿ ಕಾರ್ಯತಂತ್ರವನ್ನು ರೂಪಿಸುವ ಸಲುವಾಗಿ ವಿರೋಧ ಪಕ್ಷಗಳು ಇಂದಿನಿಂದ ಎರಡು ದಿನಗಳ ಕಾಲ ಬೆಂಗಳೂರಿನಲ್ಲಿ ಚರ್ಚಿಸಲಿವೆ.
Next Story