Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಜನರ ಸಮಸ್ಯೆಗಳಿಗೆ ಸ್ಪಂದಿಸದ ಅಧಿಕಾರಿಗಳ...

ಜನರ ಸಮಸ್ಯೆಗಳಿಗೆ ಸ್ಪಂದಿಸದ ಅಧಿಕಾರಿಗಳ ಮೇಲೆ ನಿಷ್ಠುರ ಕ್ರಮ: ಸಿದ್ದರಾಮಯ್ಯ

ಮಳೆ ಹಾನಿ ಹಿನ್ನೆಲೆ; ಡಿಸಿ, ಸಿಇಒ ಗಳ ಜೊತೆ ಸಿಎಂ ಸಭೆ

ವಾರ್ತಾಭಾರತಿವಾರ್ತಾಭಾರತಿ30 May 2025 12:00 PM IST
share
ಜನರ ಸಮಸ್ಯೆಗಳಿಗೆ ಸ್ಪಂದಿಸದ ಅಧಿಕಾರಿಗಳ ಮೇಲೆ ನಿಷ್ಠುರ ಕ್ರಮ: ಸಿದ್ದರಾಮಯ್ಯ

ಬೆಂಗಳೂರು: ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಾಜ್ಯದ ಪ್ರಗತಿ ಪರಿಶೀಲನೆ, ಮಳೆ ಹಾನಿ ಹಿನ್ನಲೆ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳ ಸಭೆ ನಡೆಯಿತು.

ಸಭೆಯ ಆರಂಭದಲ್ಲಿ ಮಾತನಾಡಿದ ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ಕೆಲವೊಂದು ಸೂಚನೆಗಳು ನೀಡಿದರು.

ಹಿಂದಿನ ಸಭೆಯಲ್ಲಿ ನೀಡಿದ ಸೂಚನೆಗಳು, ತೆಗೆದುಕೊಂಡ ನಿರ್ಣಯಗಳಲ್ಲಿ ಕೆಲವು ಇಲಾಖೆಗಳು ಶೇ100 ರಷ್ಟು ಪ್ರಗತಿ ತೋರಿಸಿಲ್ಲ. ಇದನ್ನು ಸಹಿಸಲು ಸಾಧ್ಯವಿಲ್ಲ. ಈ ವಿಚಾರದಲ್ಲಿ ರಾಜಿ ಇಲ್ಲ. ಜನರ ಸಮಸ್ಯೆಗಳಿಗೆ ಸ್ಪಂದಿಸದ ಅಧಿಕಾರಿಗಳ ಮೇಲೆ ನಿಷ್ಠುರವಾಗಿ ಕ್ರಮ ಕೈಗೊಳ್ಳುವುದು ನಮಗೆ ಅನಿವಾರ್ಯ ಆಗುತ್ತದೆ. ಜಿಲ್ಲಾಧಿಕಾರಿ, ಜಿಲ್ಲಾ ರಕ್ಷಣಾಧಿಕಾರಿಗಳು ಮತ್ತು ಸಿಇಒ ಗಳು ತಮ್ಮ ಅಹಂ ಬದಿಗಿಟ್ಟು ಸಮನ್ವಯದಿಂದ ಕೆಲಸ ಮಾಡಿದರೆ ಮಾತ್ರ ರಾಜ್ಯದ ಸಮಗ್ರ ಅಭಿವೃದ್ಧಿ ಸಾಧ್ಯ. ಈ ಉದ್ದೇಶಕ್ಕೇ ನೀವು ಐಎಎಸ್‌ ಮಾಡಿರುವುದು. ಇದನ್ನು ಅರ್ಥ ಮಾಡಿಕೊಳ್ಳಬೇಕು ಎಂದರು.

ಸಂವಿಧಾನದ ಆಶಯ ಮತ್ತು ಧ್ಯೇಯೋದ್ದೇಶಗಳಿಗೆ ಯಾರೂ ವಿರುದ್ಧವಾಗಿ ಕಾರ್ಯನಿರ್ವಹಿಸಬಾರದು. ಅಂತಹ ಶಕ್ತಿಗಳು ಬೆಳೆಯಲು ಯಾವುದೇ ಕಾರಣಕ್ಕೂ ಅವಕಾಶ ನೀಡಬಾರದು. ಇತ್ತೀಚಿನ ದಿನಗಳಲ್ಲಿ ಇಂತಹ ಶಕ್ತಿಗಳು ತಲೆಎತ್ತುತ್ತಿದ್ದು, ಅಂತಹ ಶಕ್ತಿಗಳನ್ನು ಮೊಳಕೆಯಲ್ಲೇ ಚಿವುಟಿ ಹಾಕಬೇಕು. ಅಂತಹ ವ್ಯಕ್ತಿಗಳೂ ಯಾರೇ ಆಗಿದ್ದರೂ, ಅವರನ್ನು ಮಟ್ಟ ಹಾಕುವುದು ಅಂತಹ ಶಕ್ತಿಗಳು ಬೆಳೆಯದಂತೆ ನೋಡಿಕೊಳ್ಳಬೇಕಾದುದು ಡಿಸಿ, ಸಿಇಒ, ಎಸ್ಪಿಗಳ ಜವಾಬ್ದಾರಿ ತಾನೇ ಎಂದು ಮುಖ್ಯಮಂತ್ರಿಗಳು ಖಾರವಾಗಿ ಪ್ರಶ್ನಿಸಿದರು.

10-10-1949 ರಂದು ಸಂವಿಧಾನ ಜಾರಿ ಸಭೆಯಲ್ಲಿ ಇಂಡಿಯನ್‌ ಸಿವಿಲ್‌ ಸರ್ವೀಸ್‌ ಬೇಕಾ ಎಂದು ಚರ್ಚೆ ಆಗಿ ಐಎಎಸ್‌ ಬೇಕು ಎನ್ನುವ ನಿರ್ಧಾರಕ್ಕೆ ಬರಲಾಗಿದೆ. ಆ ಸಭೆಯಲ್ಲಿ ವಲ್ಲಭಾಬಾಯಿ ಪಟೇಲರು "ದೇಶವನ್ನು ನೈಜ ಸ್ವಾತಂತ್ರ್ಯ ಹೋರಾಟಗಳ ಆಶಯದಲ್ಲಿ ಮುನ್ನಡೆಸಲು ಐಎಎಸ್‌ ಸೇವೆ ಇರಬೇಕು, ಇದರ ನೈಜ ಕಾಳಜಿಯನ್ನು ನೀವು ಅರ್ಥ ಮಾಡಿಕೊಳ್ಳಬೇಕು ಎಂದಿದ್ದರು. ವಲ್ಲಭಬಾಯಿ ಅವರ ಮಾತನ್ನು ನಾವು ಅರ್ಥಮಾಡಿಕೊಳ್ಳಬೇಕು. ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿ ಕೆಲಸ ಮಾಡುವವರ ವಿರುದ್ಧ ಮತ್ತು ಜನಪರ ಆಶಯಗಳಿಗೆ ಸ್ಪಂದಿಸದಿದ್ದರೆ ಅವರ ವಿರುದ್ಧ ನಾವು ಕ್ರಮ ಕೈಗೊಳ್ಳಬೇಕಾಗುತ್ತದೆ. ನೀವೆಲ್ಲಾ ಸಂವಿಧಾನ ಓದಿದ್ದೀರಿ, ಅದರ ಆಶಯಗಳಿಗೆ, ಧ್ಯೇಯೋದ್ದೇಶಗಳಿಗೆ ಬದ್ದರಾಗಿದ್ದೀರಿ ಎಂದು ನಂಬಿದ್ದೇನೆ. ಇದನ್ನು ಕಾರ್ಯ ರೂಪಕ್ಕೆ ತರುವುದರಲ್ಲಿ ವಿಫಲರಾದವರ ವಿರುದ್ಧ ನಾನು ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲು ನಿರ್ಧಿರಿಸಿದ್ದೇನೆ ಎಂದು ಎಚ್ಚರಿಸಿದರು.

ಸಂವಿಧಾನ ವಿರೋಧಿ, ಜನ ವಿರೋಧಿ ದುಷ್ಟ ಶಕ್ತಿಗಳು ಕೆಲವು ಕಡೆ ಬಾಲ ಬಿಚ್ಚುತ್ತಿವೆ. ಅವರು ಎಷ್ಟೇ ಪ್ರಭಾವಿ ಆಗಿರಲಿ, ಕಾನೂನು ಹಾಳು ಮಾಡಿದರೆ ಅಂಥವರ ವಿರುದ್ಧ ಕ್ರಮ ಕೈಗೊಳ್ಳಿ. ಇಲ್ಲದಿದ್ದರೆ ನಿಮ್ಮ ವಿರುದ್ಧ ನಾವು ಕ್ರಮ ಕೈಗೊಳ್ಳುತ್ತೇವೆ ಎಂದು ಜಿಲ್ಲಾಧಿಕಾರಿಮತ್ತು ಜಿಲ್ಲಾ ರಕ್ಷಣಾಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.

ಕಾನೂನು ಸುವ್ಯವಸ್ಥೆ ಹದಗೆಟ್ಟರೆ ರಾಜ್ಯದ ಅಭಿವೃದ್ಧಿ ಸಾಧ್ಯವಿಲ್ಲ. ಇವೆರಡಕ್ಕೂ ನೇರಾನೇರ ಸಂಬಂಧವಿದೆ. ಕಾನೂನು ಸುವ್ಯವಸ್ಥೆ ಹದಗೆಟ್ಟರೆ, ಅಭಿವೃದ್ಧಿ ಕುಂಠಿತವಾದಂತೆ. ಇದಕ್ಕೆ ಜಿಲ್ಲಾಧಿಕಾರಿಗಳು, ಜಿಲ್ಲಾ ರಕ್ಷಣಾಧಿಕಾರಿಗಳು ನೇರ ಹೊಣೆ ಎಂದು ಎಚ್ಚರಿಸಿದರು.

ಶಾಂತಿಭಂಗ ಆದ ಮೇಲೆ ಪೋಸ್ಟ್‌ ಮಾರ್ಟಂ ಮಾಡುತ್ತಾ ಕೂರಬಾರದು :

ನಾವು ಜನರ ತೆರಿಗೆ ದುಡ್ಡಿನಲ್ಲಿ ಆಡಳಿತ ನಡೆಸುತ್ತಿದ್ದೇವೆ. ನಾವು ಮತ್ತು ನೀವು ಎಲ್ಲಾ ಸವಲತ್ತುಗಳನ್ನು ಅನುಭವಿಸುತ್ತಿರುವುದು ಜನರ ತೆರಿಗೆ ಹಣದಿಂದ ಎನ್ನುವುದನ್ನು ಮರೆಯಬಾರದು. ಕಾರು, ಮನೆ ಸೇರಿ ಎಲ್ಲಾ ಸವಲತ್ತುಗಳನ್ನು ನಾವು ಕೊಟ್ಟಿರುವುದು ತೆರಿಗೆ ಹಣದಲ್ಲಿ. ಆದ್ದರಿಂದ ಜನಪರ ಕಾಳಜಿಯಲ್ಲಿ ಕೆಲಸ ಮಾಡಬೇಕು. ಇದೇ ಪ್ರಜಾಪ್ರಭುತ್ವದ ಮೂಲ ಆಶಯ. ಜಿಲ್ಲಾ ಮಟ್ಟದ ಶಾಂತಿ ಸಮಿತಿ ಅಧ್ಯಕ್ಷರು ಜಿಲ್ಲಾಧಿಕಾರಿಗಳೇ ಆಗಿರ್ತಾರೆ. ಶಾಂತಿ ಕಾಪಾಡಲು ಮುಂಜಾಗ್ರತಾ ಕ್ರಮ ತೆಗೆದುಕೊಳ್ಳಬೇಕು. ಅದನ್ನು ಬಿಟ್ಟು ಶಾಂತಿಭಂಗ ಆದ ಮೇಲೆ ಪೋಸ್ಟ್‌ ಮಾರ್ಟಂ ಮಾಡುತ್ತಾ ಕೂರಬಾರದು. ಮೊದಲೇ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳಲು ಏನು ಸಮಸ್ಯೆ ನಿಮಗೆ ಎಂದು ಪ್ರಶ್ನಿಸಿದರು.

ಬಾಲ್ಯ ವಿವಾಹ ಆಗುವುದು ಜಿಲ್ಲಾಧಿಕಾರಿಗಳ ಗಮನಕ್ಕೆ ಏಕೆ ಬರುವುದಿಲ್ಲ? ನಿಮ್ಮ ಕೆಳಗಿನವರು ನಿಮಗೆ ವರದಿ ಮಾಡುವುದಿಲ್ಲವೇ? ಕೆಳಗಿನವರು ನಿಮಗೆ ಹೇಳದಿದ್ದರೆ ನಿಮಗೆ ದಕ್ಷತೆ ಇಲ್ಲ ಎಂದು ಅರ್ಥ. ನಿಮಗೆ ಅಧಿಕಾರಿಗಳ ಮೇಲೆ ನಿಯಂತ್ರಣ ಇಲ್ಲ, ನಿಮ್ಮ ಬಗ್ಗೆ ಅವರಿಗೆ ಭಯ ಇಲ್ಲ ಎಂದೇ ಅರ್ಥ ಎಂದು ತರಾಟೆಗೆ ತೆಗೆದುಕೊಂಡರು.

ಈ ವರ್ಷ 700 ಬಾಲ್ಯ ವಿವಾಹ ನಡೆದಿದೆ, ಬಾಲ್ಯದಲ್ಲೇ ತಾಯಂದಿರಾದ ಘಟನೆಗಳೂ ವರದಿಗಳಾಗಿವೆ. ಈ ಬಗ್ಗೆ ಹಲವು ಕಡೆ ಎಫ್‌ ಐಆರ್‌ ಕೂಡ ದಾಖಲಾಗಿಲ್ಲ ಎನ್ನುವುದು ನನ್ನ ಗಮನಕ್ಕೆ ಬಂದಿದೆ. ಸ್ವಾತಂತ್ರ್ಯ ಬಂದು ಇಷ್ಟ ವರ್ಷಗಳಾದರೂ 700 ಬಾಲ್ಯ ವಿವಾಹ ನಡೆಯುತ್ತಿದೆ ಎಂದರೆ ಹೇಗೆ? ಬಾಲ್ಯವಿವಾಹ ತಡೆಗೆ ಕಾಯ್ದೆ, ಕಾನೂನುಗಳಿವೆ. ಆದರೂ ಇದನ್ನು ಪರಿಣಾಮಕಾರಿಯಾಗಿ ಕೆಲವು ಕಡೆ ಬಳಸಿಲ್ಲ. ಇದು ತಪ್ಪಲ್ಲವೇ ಎಂದು ಖಾರವಾಗಿ ಪ್ರಶ್ನಿಸಿದರು.

ಕೆರೆ ಒತ್ತುವರಿ : ತೆರವುಗೊಳಿಸದ್ದಕ್ಕೆ ಸಿಟ್ಟಾದ ಸಿಎಂ

ಯಾವ್ಯಾವ ಜಿಲ್ಲೆಯಲ್ಲಿ ಎಷ್ಟೆಷ್ಟು ಕೆರೆಗಳ ಒತ್ತುವರಿ ತೆರವುಗೊಳಿಸಲಾಗಿದೆ ಎನ್ನುವುದನ್ನು ಮುಖ್ಯಮಂತ್ರಿಗಳು ಸಭೆಯಲ್ಲಿ ಪರಿಶೀಲನೆ ನಡೆಸಿದರು. ಒಂದೂ ಕೆರೆ ಒತ್ತುವರಿ ತೆರವುಗೊಳಿಸದ ಜಿಲ್ಲಾಧಿಕಾರಿ, ಸಿಇಓ ಗಳ ವಿರುದ್ಧ ಸೂಕ್ತ ಕ್ರಮಕ್ಕೆ ರಾಜ್ಯ ಮುಖ್ಯ ಕಾರ್ಯದರ್ಶಿಯವರಿಗೆ ಸಿಎಂ ಸೂಚಿಸಿದರು.

ಎರಡು ಮೂರು ಜಿಲ್ಲೆಗಳಲ್ಲಿ ಒಂದೂ ಕೆರೆ ಒತ್ತುವರಿ ತೆರವು ಮಾಡದಿರುವುದನ್ನು ಗಮನಿಸಿ ಗರಂ ಆದ ಮುಖ್ಯಮಂತ್ರಿಗಳು, ಆ ಬಗ್ಗೆ ವರದಿ ತರಿಸಿಕೊಂಡು ಅಗತ್ಯ ಕ್ರಮ ಕೈಗೊಳ್ಳುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಸಭೆಯಲ್ಲೇ ಸೂಚನೆ ನೀಡಿದರು.

ರೈತರ ಆತ್ಮಹತ್ಯೆ: ಪರಿಹಾರ ವಿಳಂಬಕ್ಕೆ ಸಿಎಂ ಗರಂ

ಜಿಲ್ಲಾವಾರು ರೈತರ ಆತ್ಮಹತ್ಯೆ ಅಂಕಿ ಅಂಶಗಳನ್ನು ಗಮನಿಸಿದ ಮುಖ್ಯಮಂತ್ರಿಗಳು ಇನ್ನೂ 13 ರೈತರ ಆತ್ಮಹತ್ಯೆ ಪ್ರಕರಣಗಳಲ್ಲಿ ಪರಿಹಾರ ಬಾಕಿ ಇರುವುದನ್ನು ನೋಡಿ ಸಿಟ್ಟಾದ ಮುಖ್ಯಮಂತ್ರಿಗಳು ಜಿಲ್ಲಾಧಿಕಾರಿಗಳಿಂದ ವರದಿ ಪಡೆದರು. ಹಾವೇರಿ ಸೇರಿ ಇನ್ನೆರಡು ಜಿಲ್ಲೆಗಳಲ್ಲಿ ಒಟ್ಟು 13 ರೈತ ಆತ್ಮಹತ್ಯೆ ಪ್ರಕರಣಗಳಲ್ಲಿ ಪರಿಹಾರ ಬಾಕಿ ಇರುವುದನ್ನು ಆದಷ್ಟು ಬೇಗ ಬಗೆಹರಿಸಿ ಪರಿಹಾರ ಒದಗಿಸಿ ಎನ್ನುವ ಸೂಚನೆ ನೀಡಿದರು.

ಅನರ್ಹ ಪಡಿತರ ಚೀಟಿಗಳು ಇನ್ನೂ ಹೇಗೆ ಉಳಿದುಕೊಂಡಿವೆ: ಸಿ.ಎಂ ಪ್ರಶ್ನೆ

ಅನರ್ಹ ಪಡಿತರ ಚೀಟಿಗಳನ್ನು ರದ್ದುಗೊಳಿಸಲು ಈಗಾಗಲೇ ಕಟ್ಟುನಿಟ್ಟಿನ ಸೂಚನೆ ನೀಡಲಾಗಿತ್ತು. ಆದರೆ ಇದರಲ್ಲಿ ನಿರೀಕ್ಷಿತ ಪ್ರಗತಿ ಯಾಕೆ ಸಾಧ್ಯವಾಗಿಲ್ಲ. ರಾಜ್ಯದಲ್ಲಿ ಸುಮಾರು ಶೇ. 74ರಷ್ಟು ಬಿಪಿಎಲ್ ಕಾರ್ಡುಗಳಿದ್ದು, ಅನರ್ಹರನ್ನು ಗುರುತಿಸಿ ತೆಗೆದು ಹಾಕುವ ಮೂಲಕ ಅರ್ಹರಿಗೆ ಸವಲತ್ತು ಒದಗಿಸುವ ಕಾರ್ಯ ನಡೆಯಬೇಕಿದೆ ಎಂದು ಸೂಚನೆ ನೀಡಲಾಗಿತ್ತು. ಆದರೂ ಇದರಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಪ್ರಗತಿ ಆಗಿಲ್ಲ ಏಕೆ ಎಂದು ಪ್ರಶ್ನಿಸಿದರು.

ಈ ಸಭೆಯಲ್ಲಿ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಚಿವರಾದ ಕೆ.ಎಚ್. ಮುನಿಯಪ್ಪ, ಕೆ.ಜೆ. ಜಾರ್ಜ್, ಚೆಲುವರಾಯಸ್ವಾಮಿ, ಶಿವನಂದ ಪಾಟೀಲ್, ತಿಮ್ಮಪುರ್, ವೆಂಕಟೇಶ್, ಕೃಷ್ಣಬೈರೇಗೌಡ, ಪ್ರಿಯಾಂಕ್ ಖರ್ಗೆ, ಭೋಸರಾಜ್, ಸರಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಸೇರಿದಂತೆ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X