Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಕರ್ನಾಟಕದ ಆರ್ಥಿಕ ಬಲವು ರಾಷ್ಟ್ರೀಯ...

ಕರ್ನಾಟಕದ ಆರ್ಥಿಕ ಬಲವು ರಾಷ್ಟ್ರೀಯ ಬೆಳವಣಿಗೆಗೆ ಇಂಧನ : ಮುಖ್ಯಮಂತ್ರಿ ಸಿದ್ದರಾಮಯ್ಯ

‘16ನೆ ಹಣಕಾಸು ಆಯೋಗದ ಅಧ್ಯಕ್ಷರೊಂದಿಗೆ ಸಭೆ’

ವಾರ್ತಾಭಾರತಿವಾರ್ತಾಭಾರತಿ13 Jun 2025 7:00 PM IST
share
ಕರ್ನಾಟಕದ ಆರ್ಥಿಕ ಬಲವು ರಾಷ್ಟ್ರೀಯ ಬೆಳವಣಿಗೆಗೆ ಇಂಧನ : ಮುಖ್ಯಮಂತ್ರಿ ಸಿದ್ದರಾಮಯ್ಯ

ಹೊಸದಿಲ್ಲಿ : ಕರ್ನಾಟಕದ ಆರ್ಥಿಕ ಬಲವು ರಾಷ್ಟ್ರೀಯ ಬೆಳವಣಿಗೆಗೆ ಇಂಧನವಾಗಿದೆ. ಬೆಳವಣಿಗೆಗೆ ದಂಡ ವಿಧಿಸಬಾರದು, ಬದಲಾಗಿ ಪ್ರೋತ್ಸಾಹ ದೊರೆಯುವಂತೆ ನೋಡಿಕೊಳ್ಳುವ ಸಮಯ ಇದು. ಸಮತೋಲಿತ, ಸಂಪನ್ಮೂಲ ಹಂಚಿಕೆಯ ದೃಷ್ಟಿಕೋನವನ್ನು ಅಳವಡಿಸಿಕೊಳ್ಳುವಂತೆ 16ನೆ ಹಣಕಾಸು ಆಯೋಗವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

ಶುಕ್ರವಾರ ಹೊಸದಿಲ್ಲಿಯಲ್ಲಿ 16ನೆ ಹಣಕಾಸು ಆಯೋಗದ ಅಧ್ಯಕ್ಷ ಡಾ.ಅರವಿಂದ್ ಪನಗಾರಿಯ ಮತ್ತು ಸದಸ್ಯರ ಜೊತೆ ಸಭೆ ನಡೆಸಿದ ಅವರು, ರಾಜ್ಯವು ದೇಶದ ಒಟ್ಟು ಜಿಡಿಪಿಗೆ ಸುಮಾರು ಶೇ.8.7ರಷ್ಟು ಕೊಡುಗೆ ನೀಡುತ್ತಿದ್ದು, ಜಿ.ಎಸ್.ಟಿ ಸಂಗ್ರಹಣೆಯಲ್ಲಿ 2ನೇ ಸ್ಥಾನದಲ್ಲಿದೆ. ಈ ಕೊಡುಗೆಯ ಹೊರತಾಗಿಯೂ, ಸಂಪನ್ಮೂಲ ಹಂಚಿಕೆಯಲ್ಲಿ ತೀವ್ರ ಅಸಮತೋಲನ ಉಂಟಾಗಿದೆ ಎಂದರು.

ರಾಜ್ಯದಿಂದ ಕೇಂದ್ರಕ್ಕೆ ಸ್ವೀಕೃತವಾಗುವ ತೆರಿಗೆಯ ಪ್ರತಿ ರೂಪಾಯಿಗೆ ಪ್ರತಿಯಾಗಿ ರಾಜ್ಯವು ಕೇವಲ 15 ಪೈಸೆ ಮಾತ್ರ ಪಡೆಯುತ್ತದೆ. 15ನೆ ಹಣಕಾಸು ಆಯೋಗವು ಕರ್ನಾಟಕದ ತೆರಿಗೆ ಪಾಲನ್ನು ಶೇ.4.713 ರಿಂದ ಶೇ.3.647ಕ್ಕೆ ಇಳಿಕೆ ಮಾಡಿದ್ದರಿಂದ 15ನೆ ಹಣಕಾಸು ಆಯೋಗದ ಅವಧಿಯಲ್ಲಿ ರಾಜ್ಯಕ್ಕೆ 80 ಸಾವಿರ ಕೋಟಿ ರೂ.ಗಳಷ್ಟು ನಷ್ಟವಾಗಿದೆ ಎಂದು ಮುಖ್ಯಮಂತ್ರಿ ವಿವರಿಸಿದರು.

ರಾಜ್ಯದ ಮುಖ್ಯ ಪ್ರಸ್ತಾವನೆಗಳು: ಕೇಂದ್ರ ಹಾಗೂ ರಾಜ್ಯಗಳ ನಡುವಿನ ಹಂಚಿಕೆಯು ಕನಿಷ್ಠ ಶೇ.50ಕ್ಕೆ ಹೆಚ್ಚಿಸಬೇಕು ಮತ್ತು ಸೆಸ್‍ಗಳು ಮತ್ತು ಸರ್‍ಚಾರ್ಜ್‍ಗಳನ್ನು ಶೇ.5ಕ್ಕೆ ಮಿತಿಗೊಳಿಸಬೇಕು. ಕೇಂದ್ರದ ತೆರಿಗೆಯೇತರ ಆದಾಯವನ್ನು ರಾಜ್ಯಗಳಿಗೆ ಹಂಚಿಕೆಯಾಗುವ ಪಾಲಿನಲ್ಲಿ ಸೇರಿಸಬೇಕು ಎಂದು ಸಿದ್ದರಾಮಯ್ಯ ಹೇಳಿದರು.

ರಾಜ್ಯಗಳ ನಡುವಿನ ಹಂಚಿಕೆಗೆ ಸಂಬಂಧಿಸಿದಂತೆ ಪ್ರತಿ ರಾಜ್ಯವು ತಾನು ನೀಡುವ ಕೊಡುಗೆಯಲ್ಲಿ ಸುಮಾರು ಶೇ.60ರಷ್ಟನ್ನು ಉಳಿಸಿಕೊಳ್ಳಲು ಮತ್ತು ಶೇ.40ರಷ್ಟನ್ನು ಉಳಿದ ರಾಜ್ಯಗಳಿಗೆ ಹಂಚಿಕೆಯಾಗಬೇಕು. ಇದು ಬೆಳವಣಿಗೆ ಮತ್ತು ಸಮಾನತೆ ಎರಡನ್ನೂ ಖಚಿತಪಡಿಸುತ್ತದೆ ಎಂದು ಅವರು ತಿಳಿಸಿದರು.

ಕರ್ನಾಟಕವು ಆದಾಯ-ದೂರ (ಇನ್‍ಕಮ್-ಡಿಸ್ಟೆನ್ಸ್) ಮಾನದಂಡದ ಪಾಲನ್ನು ಕಡಿಮೆ ಮಾಡಲು ಮತ್ತು ರಾಜ್ಯದ ಆರ್ಥಿಕ ಕೊಡುಗೆಗೆ ಹೆಚ್ಚಿನ ಪಾಲನ್ನು ನೀಡಬೇಕು. ಸಂಪನ್ಮೂಲ ಹಂಚಿಕೆಯು ಹೆಚ್ಚು ಬೆಳವಣಿಗೆ ಆಧಾರಿತ ಮತ್ತು ನ್ಯಾಯಯುತವಾಗಿಸಲು ನಿರ್ಣಾಯಕ ಸುಧಾರಣೆಗಳನ್ನು ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಹೇಳಿದರು.

ಹೆಚ್ಚುವರಿ ಜ್ಞಾಪಕ ಪತ್ರದ ಪ್ರಮುಖ ಪ್ರಸ್ತಾವನೆಗಳು: ತಲಾವಾರು ತೆರಿಗೆ ಹಂಚಿಕೆಯಲ್ಲಿ ಹೆಚ್ಚುತ್ತಿರುವ ಅಸಮಾನತೆಗಳು, ಆದಾಯ ಕೊರತೆ, ಅನುದಾನಗಳ ಅವೈಜ್ಞಾನಿಕ ವಿನ್ಯಾಸ ಮತ್ತು ರಾಜ್ಯ-ನಿರ್ದಿಷ್ಟ ಅನುದಾನಗಳ ಅನಿರೀಕ್ಷಿತತೆಯ ಕುರಿತು ಹೆಚ್ಚುವರಿ ಜ್ಞಾಪಕ ಪತ್ರದಲ್ಲಿ ಪ್ರಸ್ತಾಪಿಸಲಾಗಿದೆ ಎಂದು ಅವರು ತಿಳಿಸಿದರು.

14ನೆ ಮತ್ತು 15ನೆ ಹಣಕಾಸು ಆಯೋಗಗಳ ನಡುವಿನ ರಾಷ್ಟ್ರೀಯ ಸರಾಸರಿಯ ಶೇ.95 ರಿಂದ ಶೇ.73ಕ್ಕೆ ಕುಸಿದಿದೆ. ಸಂಪನ್ಮೂಲ ಹಂಚಿಕೆಯಲ್ಲಿ ಸಮಾನತೆ ಮುಖ್ಯವಾಗಿದ್ದರೂ, ಇದು ಸ್ಥಿರವಾದ ಆರ್ಥಿಕ ಕಾರ್ಯಕ್ಷಮತೆ ಮತ್ತು ಆರ್ಥಿಕ ಶಿಸ್ತನ್ನು ಪಾಲಿಸುವ ರಾಜ್ಯಗಳಿಗೆ ದಂಡ ವಿಧಿಸುವಂತಾಗಬಾರದು ಎಂದು ಅವರು ಪ್ರತಿಪಾದಿಸಿದರು.

ಸಂಪನ್ಮೂಲ ಹಂಚಿಕೆಯಲ್ಲಿ ಸಮಾನತೆಯನ್ನು ಫಲಿತಾಂಶ ಆಧಾರಿತ ರೀತಿಯಲ್ಲಿ ಕಾರ್ಯಗತಗೊಳಿಸಬೇಕು. ಆದುದರಿಂದ, ಆದಾಯ-ದೂರ ಮಾನದಂಡದ ಪಾಲನ್ನು ಶೇ.20ರಷ್ಟು ಕಡಿಮೆ ಮಾಡಿ ದೇಶದ ಜಿಡಿಪಿಯಲ್ಲಿ ರಾಜ್ಯಗಳ ಕೊಡುಗೆಯನ್ನು ಅಳತೆಗೊಲಾಗಿ ಪರಿಗಣಿಸಿ ಇದಕ್ಕೆ ಶೇ.20ರಷ್ಟು ಅಂಕವನ್ನು ನೀಡಬೇಕೆಂದು ಮುಖ್ಯಮಂತ್ರಿ ಪ್ರಸ್ತಾಪಿಸಿದರು.

ಹಣಕಾಸು ಆಯೋಗವು ನೀಡುವ ರಾಜಸ್ವ ಕೊರತೆ ಅನುದಾನಗಳ ಪರಿಣಾಮಕಾರಿತ್ವವನ್ನು ಪ್ರಶ್ನಿಸಿದ ಮುಖ್ಯಮಂತ್ರಿ, ಪ್ರಸಕ್ತ ರೂಪದಲ್ಲಿ ರಾಜಸ್ವ ಕೊರತೆ ಅನುದಾನವನ್ನು ಪಡೆಯುತ್ತಿರುವ ಫಲಾನುಭವಿ ರಾಜ್ಯಗಳು, ಈ ಅನುದಾನದ ಹೊರತಾಗಿಯೂ ರಾಜಸ್ವ ಕೊರತೆಯನ್ನು ಶೂನ್ಯವಾಗಿಸುವಲ್ಲಿ ವಿಫಲವಾಗಿರುವುದನ್ನು ಉಲ್ಲೇಖಿಸಿ ರಾಜಸ್ವ ಕೊರತೆ ಅನುದಾನವನ್ನು ತೆರಿಗೆ ಹಂಚಿಕೆಯ ಸೂತ್ರದಲ್ಲೇ ರಾಜ್ಯಗಳಿಗೆ ನೀಡಬೇಕೆಂದು ತಿಳಿಸಿದರು.

ಇದಲ್ಲದೆ, ರಾಜಸ್ವ ಕೊರತೆ ಅನುದಾನಗಳನ್ನು ಅಂದಾಜಿಸಲು ಆಯೋಗವು ಪರಿಕಲ್ಪಿಸುವ ವೆಚ್ಚದ ಆದ್ಯತೆಗಳು ವ್ಯಕ್ತಿನಿಷ್ಠ ಮೌಲ್ಯಮಾಪನಗಳನ್ನು ಪ್ರತಿಬಿಂಬಿಸುತ್ತವೆ. ದುರದೃಷ್ಟವಶಾತ್, ಈ ಮೌಲ್ಯಮಾಪನಗಳು ಸಂಬಳ, ಪಿಂಚಣಿ ಮತ್ತು ಆಡಳಿತಾತ್ಮಕ ವೆಚ್ಚಗಳಿಗೆ ಹೋಲಿಸಿದರೆ ಕಲ್ಯಾಣ ಕಾರ್ಯಕ್ರಮಗಳಿಗೆ ಸರಕಾರ ಭರಿಸುವ ವೆಚ್ಚವನ್ನು ಕಡಿಮೆ ಪ್ರಮಾಣದಲ್ಲಿ ಇರಿಸುತ್ತವೆ ಎಂದು ಅವರು ಹೇಳಿದರು.

ಕಡಿಮೆ ಆದಾಯದ ಕುಟುಂಬಗಳನ್ನು ಸಬಲೀಕರಣಗೊಳಿಸುವ ಮೂಲಕ, ಸ್ಥಳೀಯ ಬೇಡಿಕೆಯನ್ನು ಉತ್ತೇಜಿಸುವ ಮತ್ತು ಸಮಗ್ರ ಬೆಳವಣಿಗೆಯನ್ನು ಹೆಚ್ಚಿಸುವಲ್ಲಿ ಸರಕಾರದ ಕಲ್ಯಾಣ ಕಾರ್ಯಕ್ರಮಗಳು ರೂಪಿತವಾಗಿದೆ. ಆದುದರಿಂದ, ಹಣಕಾಸಿನ ಹಂಚಿಕೆಯಲ್ಲಿ ಮೌಲ್ಯಮಾಪನ ಮಾಡುವಾಗ ಈ ಕಲ್ಯಾಣ ಕಾರ್ಯಕ್ರಮಗಳ ಮೇಲಿನ ವೆಚ್ಚಗಳಿಗೆ ಹೆಚ್ಚಿನ ಆದ್ಯತೆ ನೀಡದೆ ಹೋದರೆ ಕನಿಷ್ಠ ಸಂಬಳ, ಪಿಂಚಣಿ ಮತ್ತು ಬಡ್ಡಿ ಪಾವತಿಗಳಂತಹ ಬದ್ಧ ವೆಚ್ಚಗಳಿಗೆ ಸಮಾನವಾಗಿ ಪರಿಗಣಿಸಬೇಕು ಎಂದು ಮುಖ್ಯಮಂತ್ರಿ ಆಗ್ರಹಿಸಿದರು.

ಕೇಂದ್ರ ಸರಕಾರದ ವಿವೇಚನಾಧಾರಿತ ಅನುದಾನವಾಗಿರುವ ರಾಜ್ಯ ಕೇಂದ್ರಿತ ಅನುದಾನದ ಬದಲಾಗಿ ಒಟ್ಟು ಕೇಂದ್ರ ಸ್ವೀಕೃತಿಗಳ ಶೇ.0.3ರಷ್ಟು ಅನುದಾನವನ್ನು ಸೂತ್ರ ಆಧಾರಿತ ಹಂಚಿಕೆಯ ಮೂಲಕ ರಾಜ್ಯಗಳಿಗೆ ನೀಡಬೇಕೆಂದು ಕರ್ನಾಟಕವು ಶಿಫಾರಸು ಮಾಡಿದೆ ಎಂದು ಸಿದ್ದರಾಮಯ್ಯ ತಿಳಿಸಿದರು.

ಬೆಂಗಳೂರಿನ ಮೂಲಸೌಕರ್ಯವನ್ನು ಬಲಪಡಿಸಲು 1.15 ಲಕ್ಷ ಕೋಟಿ ರೂ. ಹೂಡಿಕೆಗೆ ಬೆಂಬಲವನ್ನು ಕೋರಿದ ಮುಖ್ಯಮಂತ್ರಿ, ಕಡಿಮೆ ಆದಾಯ ಮತ್ತು ಕುಂಠಿತ ಮೂಲಸೌಕರ್ಯ ಅಭಿವೃದ್ಧಿ ಸಮಸ್ಯೆಯನ್ನು ಎದುರಿಸುತ್ತಿರುವ ಕಲ್ಯಾಣ ಕರ್ನಾಟಕ ಮತ್ತು ಮಲೆನಾಡಿನಲ್ಲಿ ಪ್ರಾದೇಶಿಕ ಅಂತರವನ್ನು ಕಡಿಮೆ ಮಾಡುವ ಅಗತ್ಯವನ್ನು ಒತ್ತಿ ಹೇಳಿದರು.

ಸಭೆಯಲ್ಲಿ ಮುಖ್ಯಮಂತ್ರಿ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ, ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್, ಅಪರ ಮುಖ್ಯ ಕಾರ್ಯದರ್ಶಿ ಅಂಜುಮ್ ಪರ್ವೇಝ್, ಮುಖ್ಯಮಂತ್ರಿ ಕಚೇರಿ ಮತ್ತು ಹಣಕಾಸು ಇಲಾಖೆಯ ಹಿರಿಯ ಅಧಿಕಾರಿಗಳು ಹಾಜರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X