Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಕಾವೇರಿ ಸಮಸ್ಯೆಗೆ ಮೇಕೆದಾಟು ಯೋಜನೆಯೊಂದೇ...

ಕಾವೇರಿ ಸಮಸ್ಯೆಗೆ ಮೇಕೆದಾಟು ಯೋಜನೆಯೊಂದೇ ಪರಿಹಾರ: ಡಿ.ಕೆ.ಶಿವಕುಮಾರ್

ವಾರ್ತಾಭಾರತಿವಾರ್ತಾಭಾರತಿ25 Aug 2023 5:18 PM IST
share
ಕಾವೇರಿ ಸಮಸ್ಯೆಗೆ ಮೇಕೆದಾಟು ಯೋಜನೆಯೊಂದೇ ಪರಿಹಾರ: ಡಿ.ಕೆ.ಶಿವಕುಮಾರ್

ಬೆಂಗಳೂರು, ಆ.25: ಸದ್ಯ ಕರ್ನಾಟಕ ಹಾಗೂ ತಮಿಳುನಾಡು ರಾಜ್ಯಗಳ ನಡುವೆ ಕಾವೇರಿ ನೀರು ಹಂಚಿಕೆ ವಿಚಾರವಾಗಿ ಎದ್ದಿರುವ ಸಮಸ್ಯೆಗೆ ಮೇಕೆದಾಟು ಯೋಜನೆಯೊಂದೆ ಪರಿಹಾರ. ಈ ಬಗ್ಗೆ ನಾವು ಸುಪ್ರೀಂಕೋರ್ಟ್ ಗೆ ಮಾಹಿತಿ ನೀಡಿದ್ದೇವೆ ಎಂದು ನೀರಾವರಿ ಸಚಿವರೂ ಆದ ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ಶುಕ್ರವಾರ ಸದಾಶಿವನಗರದಲ್ಲಿರುವ ತಮ್ಮ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನ್ಯಾಯಾಲಯವೆ ಕಾವೇರಿ ನಿರ್ವಹಣಾ ಪ್ರಾಧಿಕಾರ ರಚನೆ ಮಾಡಿದ್ದು, ಇದು ತಾಂತ್ರಿಕ ಸಮಿತಿಯಾಗಿದೆ. ಸದ್ಯ ಅವರು ತಾಂತ್ರಿಕ ಅಂಶಗಳ ಬಗ್ಗೆ ಗಮನಹರಿಸಬೇಕು. ಈ ಪರಿಸ್ಥಿತಿಯಲ್ಲಿ ಪ್ರಮುಖ ಪರಿಹಾರ ಎಂದರೆ ಅದು ಮೇಕೆದಾಟು ಯೋಜನೆ ಮಾತ್ರ ಎಂದರು.

ಮೇಕೆದಾಟು ಆಣೆಕಟ್ಟು ನಿರ್ಮಾಣವಾಗಿದ್ದರೆ ಇಂದು ಈ ಸಮಸ್ಯೆ ಹಾಗೂ ಪರಿಸ್ಥಿತಿಯೆ ಉದ್ಭವಿಸುತ್ತಿರಲಿಲ್ಲ. ಕಳೆದ ವರ್ಷ 400ಕ್ಕೂ ಹೆಚ್ಚು ಟಿಎಂಸಿ ನೀರು ವ್ಯರ್ಥವಾಗಿ ಸಮುದ್ರದ ಪಾಲಾಗಿದೆ. ಅದರಲ್ಲಿ ಸ್ವಲ್ಪ ಪ್ರಮಾಣದ ನೀರನ್ನು ಮೇಕೆದಾಟು ಆಣೆಕಟ್ಟು ಮೂಲಕ ಹಿಡಿದಿಟ್ಟಿದ್ದರೆ ಈ ಸಮಸ್ಯೆಯೆ ಎದುರಾಗುತ್ತಿರಲಿಲ್ಲ ಎಂದು ಶಿವಕುಮಾರ್ ಹೇಳಿದರು.

ಮೇಕೆದಾಟು ಆಣೆಕಟ್ಟು ನೀರನ್ನು ನಾವು ನೀರಾವರಿಗೆ ಬಳಸಲು ಸಾಧ್ಯವಿಲ್ಲ. ಕೇವಲ ಕುಡಿಯುವ ನೀರಿಗೆ ಬಳಸಬಹುದು. ಮೇಕೆದಾಟು ಇಂತಹ ಸಂಕಷ್ಟದ ಸಮಯದಲ್ಲಿ ಹೆಚ್ಚು ಸಹಾಯಕ್ಕೆ ಬರುತ್ತದೆ. ಈ ವಿಚಾರದ ಬಗ್ಗೆ ಸುಪ್ರೀಂಕೋರ್ಟ್ ಗಮನ ಹರಿಸಬೇಕಿದೆ. ನಾವು ನಮ್ಮ ಅರ್ಜಿಯಲ್ಲಿ ಈ ವಿಚಾರ ಪ್ರಸ್ತಾಪಿಸಿದ್ದೇವೆ. ನಾವು ಈ ವಿಚಾರವನ್ನು ಸುಪ್ರೀಂ ಕೋರ್ಟ್ ಗಮನಕ್ಕೆ ತರುತ್ತೇವೆ ಎಂದು ಅವರು ಹೇಳಿದರು.

ನಮ್ಮ ರಾಜ್ಯದಲ್ಲಿ ಕೆಲವು ವಿರೋಧ ಇದ್ದರೂ ನಾವು ನ್ಯಾಯಾಲಯದ ಆದೇಶ ಗೌರವಿಸುತ್ತೇವೆ. ನಮ್ಮ ಸರಕಾರ ನ್ಯಾಯಾಲಯಕ್ಕೆ ಎಲ್ಲ ಮಾಹಿತಿ ನೀಡಿದ್ದು, ನಮ್ಮ ರಾಜ್ಯದ ರೈತರ ಹಿತ ಕಾಯಲು ಬದ್ಧವಿದ್ದೇವೆ. ತಮಿಳುನಾಡು ತನ್ನ ಪಾಲಿನ ನೀರನ್ನು ಯಾವ ಉದ್ದೇಶಕ್ಕಾಗಿ ಬೇಕಾದರೂ ಬಳಸಬಹುದು. ಅದನ್ನು ನಾವು ಪ್ರಶ್ನಿಸಲು ಸಾಧ್ಯವಿಲ್ಲ. ಆದರೆ ತಮಿಳುನಾಡು ಸಂಕಷ್ಟದ ಸಮಯದಲ್ಲಿ ಈ ನೀರನ್ನು ಎಚ್ಚರಿಕೆಯಿಂದ ಬಳಸಬಹುದಾಗಿತ್ತು. ನಾವು ನಮ್ಮ ರೈತರಿಗೆ ಬಿತ್ತನೆ ಮಾಡದಂತೆ ಸಲಹೆ ನೀಡಿರುವಂತೆ ಅವರು ಅವರ ರೈತರಿಗೆ ಸಲಹೆ ನೀಡಬಹುದಾಗಿತ್ತು ಎಂದು ಶಿವಕುಮಾರ್ ತಿಳಿಸಿದರು.

ಮಂಡ್ಯದಲ್ಲಿ ಬಿಜೆಪಿ ಬೆಂಬಲಿತ ರಾಜಕೀಯ ಉದ್ದೇಶದ ವಿರೋಧದ ಹೊರತಾಗಿ ರಾಜ್ಯದ ಯಾವುದೇ ರೈತರು ವಿರೋಧ ವ್ಯಕ್ತಪಡಿಸಿಲ್ಲ. ತಮಿಳುನಾಡಿಗೆ ನೀರು ಬಿಡಬೇಡಿ ಎಂದು ಹೇಳಲಾಗುತ್ತಿದೆಯೆ ಹೊರತು, ನಮಗೆ ನಷ್ಟವಾಗಿದೆ ಎಂದು ಯಾರೂ ಹೇಳುತ್ತಿಲ್ಲ. ಕಾರಣ ನಾವು ನಮ್ಮ ರೈತರಿಗೆ ಅಗತ್ಯ ಸಮಯದಲ್ಲಿ ನೀರು ಹರಿಸಿ, ಅವರ ನೆರವಿಗೆ ಧಾವಿಸಿದ್ದೇವೆ ಎಂದು ಅವರು ಹೇಳಿದರು.

ನಮ್ಮ ಜಿಲ್ಲಾ ಸಚಿವರು ರೈತರ ಜೊತೆ ಸಭೆ ಮಾಡಿ ಈ ಸಮಯದಲ್ಲಿ ಬಿತ್ತನೆ ಮಾಡಬೇಡಿ ಎಂದು ಮನವಿ ಮಾಡಿ, ಅರಿವು ಮೂಡಿಸಿದ್ದಾರೆ. ಇಂದು ಸುಪ್ರೀಂ ಕೋರ್ಟ್ ನೀರು ಬಿಡುಗಡೆ ವಿಚಾರದಲ್ಲಿ ಯಾವುದೆ ನಿರ್ಧಾರ ಕೈಗೊಂಡಿಲ್ಲ. ಈ ಸಮಸ್ಯೆಗೆ ಪರಿಹಾರ ಬೇಕಾದರೆ ಅದಕ್ಕೆ ಮೇಕೆದಾಟು ಯೋಜನೆಯೊಂದೇ ಪರಿಹಾರ ಎಂದು ಸುಪ್ರೀಂ ಕೋರ್ಟ್ ಹಾಗೂ ತಮಿಳುನಾಡಿಗೆ ಹೇಳಲು ಬಯಸುತ್ತೇನೆ ಎಂದು ಶಿವಕುಮಾರ್ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X