Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ದೇವನಹಳ್ಳಿ, ಹೊಸಕೋಟೆ ವರೆಗೂ ಮೆಟ್ರೋ...

ದೇವನಹಳ್ಳಿ, ಹೊಸಕೋಟೆ ವರೆಗೂ ಮೆಟ್ರೋ ವಿಸ್ತರಣೆ : ಸಿಎಂ ಡಿ.ಕೆ.ಶಿವಕುಮಾರ್

ವಾರ್ತಾಭಾರತಿವಾರ್ತಾಭಾರತಿ5 July 2026 8:04 PM IST
share
ದೇವನಹಳ್ಳಿ, ಹೊಸಕೋಟೆ ವರೆಗೂ ಮೆಟ್ರೋ ವಿಸ್ತರಣೆ : ಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು : ರಾಜಧಾನಿ ಬೆಂಗಳೂರಿಗೆ ಅಂಟಿಕೊಂಡಿರುವ ದೇವನಹಳ್ಳಿ, ಹೊಸಕೋಟೆ ತಾಲೂಕುಗಳಿಗೂ ನಮ್ಮ ಮೆಟ್ರೋ ಸಂಪರ್ಕ ವಿಸ್ತರಣೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಘೋಷಣೆ ಮಾಡಿದ್ದಾರೆ.

ರವಿವಾರ ದೇವನಹಳ್ಳಿಯ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಬಳಿ ಜಿಲ್ಲಾ ಪಂಚಾಯಿತಿ, ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಏರ್ಪಡಿಸಿದ್ದ ಡಾ.ಬಿ.ಆರ್.ಅಂಬೇಡ್ಕರ್ ಅವರ 14 ಅಡಿ ಎತ್ತರದ ಕಂಚಿನ ಪ್ರತಿಮೆ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, ದೇವನಹಳ್ಳಿಗೆ ಮೆಟ್ರೋ ಬರಬೇಕು, ಹೊಸಕೋಟೆಗೆ ಮೆಟ್ರೋ ತಲುಪಬೇಕು. ಇದರ ಬಗ್ಗೆ ಕೂಡ ಈಗಾಗಲೇ ಡಿಪಿಆರ್ ತಯಾರಾಗುತ್ತಿದೆ ಎಂದು ಮಾಹಿತಿ ನೀಡಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಅಂತರ್ಜಲ ಎರಡು ಸಾವಿರ ಅಡಿ ಕೆಳಗೆ ಹೋಗಿದೆರಿದರ ನಡುವೆಯೂ ನಮ್ಮ ಸರಕಾರ ಎತ್ತಿನಹೊಳೆಯಿಂದ, ಕೋಲಾರ, ಚಿಕ್ಕಬಳ್ಳಾಪುರ ಭಾಗಕ್ಕೆ ಕುಡಿಯುವ ನೀರು ತಂದು ಕೆರೆಗಳನ್ನು ತುಂಬಿಸುತ್ತೇವೆ. ನೀರನ್ನು ಈಗಾಗಲೇ ಹೊರಗೆ ತರುವಂತಹ ಶಕ್ತಿ ಭಗವಂತ ನನಗೆ ನೀಡಿದ್ದಾನೆ. ಹೊಸಕೋಟೆ ಕೆರೆ, ದೊಡ್ಡಬಳ್ಳಾಪುರ, ದೇವನಹಳ್ಳಿ, ಚಿಕ್ಕಬಳ್ಳಾಪುರ ಕೆರೆ ಸುತ್ತಮುತ್ತ ಇರುವಂತಹ ನಮ್ಮ ಕೆರೆಗಳಿಗೆ ಹೊಸ ರೂಪ ಕೊಡುವ ಕೆಲಸಕ್ಕೆ ಮಾರ್ಗದರ್ಶನ ಕೊಟ್ಟಿದ್ದೇನೆ ಎಂದರು.

ಕೆಂಪೇಗೌಡರ ಜಯಂತಿ ಅಂಗವಾಗಿ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ರಸ್ತೆಗೆ ಭೂಮಿ ನೀಡಿದ ರೈತರ ಹೆಸರಿರುವ ಗೋಡೆ ನಿರ್ಮಿಸಿ ಗೌರವ ನೀಡಲಾಗಿದೆ. ಮುಂದಿನ ದಿನದಲ್ಲಿ ದೇವನಹಳ್ಳಿ, ದೊಡ್ಡಬಳ್ಳಾಪುರ, ಹೊಸಕೋಟೆ ಈ ಭಾಗದ ಜನರು ಯೋಜನೆಗಳಿಗೆ ಭೂಮಿ ನೀಡಿ ತ್ಯಾಗ ಮಾಡಿದ ನಿಮ್ಮ ಹೆಸರುಗಳನ್ನು ಶಾಶ್ವತವಾಗಿ ಉಳಿಕೊಳ್ಳಲು ವಿಶೇಷವಾದಂತಹ ಕಾರ್ಯಕ್ರಮವನ್ನು ನಾನು ರೂಪಿಸುತ್ತೇನೆ ಎಂದು ಭರವಸೆ ನೀಡಿದರು.

ಮುಂದೆಯೂ ಕಾಂಗ್ರೆಸ್ ಸರಕಾರ: ನಮಗೆ 136 ಸ್ಥಾನವನ್ನು ನೀಡಿ ಈ ರಾಜ್ಯದ ಆಡಳಿತ ನಡೆಸಲು ಜನ ಅವಕಾಶವನ್ನ ಮಾಡಿಕೊಟ್ಟಿದ್ದಾರೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಮೂರು ವರ್ಷ ಕೆಲಸ ಮಾಡಿದ್ದೇವೆ. ಎಲ್ಲರಿಗೂ ಅತ್ಯುತ್ತಮ ಕಾರ್ಯಕ್ರಮ ಕೊಟ್ಟಿದ್ದೇವೆ. ಮುಂದಿನ ಎರಡು ವರ್ಷ ಅಲ್ಲ, 2028, 2029 ರಲ್ಲಿ ರಾಜ್ಯದಲ್ಲಿ ಮತ್ತು ರಾಷ್ಟ್ರದಲ್ಲಿ ಕಾಂಗ್ರೆಸ್ ಸರಕಾರ ರಚನೆ ಆಗುತ್ತದೆ ಎಂದು ಡಿ.ಕೆ.ಶಿವಕುಮಾರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Tags

MetroDevanahalliHoskoteCM D.K. Shivakumar
share
ವಾರ್ತಾಭಾರತಿ
ವಾರ್ತಾಭಾರತಿ
Next Story
X