Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಮನರೇಗಾ ಜಾಹೀರಾತು ವಿವಾದ: ಯಾವುದೇ...

ಮನರೇಗಾ ಜಾಹೀರಾತು ವಿವಾದ: ಯಾವುದೇ ಕಾನೂನು ಉಲ್ಲಂಘಿಸಿಲ್ಲ ಎಂದ ಸಚಿವ ಪ್ರಿಯಾಂಕ್ ಖರ್ಗೆ

ವಾರ್ತಾಭಾರತಿವಾರ್ತಾಭಾರತಿ29 Jan 2026 8:08 PM IST
share
ಮನರೇಗಾ ಜಾಹೀರಾತು ವಿವಾದ: ಯಾವುದೇ ಕಾನೂನು ಉಲ್ಲಂಘಿಸಿಲ್ಲ ಎಂದ ಸಚಿವ ಪ್ರಿಯಾಂಕ್ ಖರ್ಗೆ
"ಗುಜರಾತಿನಲ್ಲಿ ಮೋದಿಯವರ ಹುಟ್ಟುಹಬ್ಬಕ್ಕೂ ಸರಕಾರದ ತೆರಿಗೆ ಹಣದಲ್ಲಿ ಜಾಹೀರಾತು ನೀಡಲಾಗಿದೆ"

ಬೆಂಗಳೂರು: ‘ಮಹಾತ್ಮ ಗಾಂಧಿ ಗ್ರಾಮೀಣ ಉದ್ಯೋಗ ಖಾತರಿ(ಮನರೇಗಾ)ಯೋಜನೆ ಪುನರ್ ಸ್ಥಾಪಿಸುವ ಸಂಬಂಧ ಪತ್ರಿಕೆಗಳಲ್ಲಿ ಜಾಹೀರಾತು ನೀಡಿರುವುದು ಯಾವ ಕಾನೂನು ಉಲ್ಲಂಘನೆಯಾಗಿದೆ ಎಂಬುದನ್ನು ಸ್ಪಷ್ಟಪಡಿಸಬೇಕು’ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ, ಬಿಜೆಪಿ ಸದಸ್ಯರನ್ನು ಆಗ್ರಹಿಸಿದ್ದಾರೆ.

ಗುರುವಾರ ವಿಧಾನಸಭೆಯಲ್ಲಿ ಪ್ರಶ್ನೋತ್ತರ ಕಲಾಪದ ಬಳಿಕ ವಿಷಯ ಪ್ರಸ್ತಾಪಿಸಿದ ಬಿಜೆಪಿ ಸದಸ್ಯರು, ‘ರಾಜ್ಯದ ಜನರ ತೆರಿಗೆ ಹಣವನ್ನು ಪಕ್ಷದ ಪ್ರಚಾರಕ್ಕಾಗಿ ದುರ್ಬಳಕೆ ಮಾಡಿಕೊಳ್ಳಲಾಗಿದೆ’ ಎಂಬ ಆಕ್ಷೇಪಕ್ಕೆ ಉತ್ತರ ನೀಡಿದ ಪ್ರಿಯಾಂಕ್ ಖರ್ಗೆ, ‘ಕನ್ನಡಿಗರ ತೆರಿಗೆ ಹಣವನ್ನು ಕೇಂದ್ರ ಸರಕಾರ ಬಳಕೆ ಮಾಡಿಕೊಳ್ಳುತ್ತಿದ್ದು, ನಮ್ಮ ರಾಜ್ಯಕ್ಕೆ ನ್ಯಾಯೋಚಿತವಾಗಿ ಪಾಲು ನೀಡುತ್ತಿಲ್ಲ. ರಾಜ್ಯದ ಗ್ರಾಮೀಣಾಭಿವೃದ್ಧಿ ಇಲಾಖೆ ದೇಶದಲ್ಲಿ ಅತ್ಯಂತ ಹೆಚ್ಚು ತೆರಿಗೆ ಸಂಗ್ರಹ ಮಾಡಿದೆ ಎಂದು ಕೇಂದ್ರ ಸರಕಾರವೇ ಪ್ರಶಸ್ತಿ ನೀಡಿ ಗೌರವಿಸಿದೆ’ ಎಂದು ಉಲ್ಲೇಖಿಸಿದರು.

‘ದೇಶದ ಸ್ವಾತಂತ್ರ್ಯಕ್ಕಾಗಿ ಕಾಂಗ್ರೆಸ್‍ನವರು ಹೋರಾಟ ಮಾಡಿದ್ದಾರೆ. ಅದರ ಬದಲಾಗಿ ರಾಷ್ಟ್ರ ಕಟ್ಟಲು ರಾಷ್ಟ್ರ ಇರುವ ವರೆಗೂ ಕಾಂಗ್ರೆಸ್ ಪಕ್ಷವೂ ಇರಬೇಕು, ಅದರ ಅನಿವಾರ್ಯತೆ ಇದೆ’ ಎಂದು ಗಾಂಧೀಜಿಯವರು ಹೇಳಿದ್ದರು. ಆದರೆ, ಬಿಜೆಪಿಯವರು ತಪ್ಪು ಮಾಹಿತಿಯನ್ನು 10ವರ್ಷಗಳಿಂದಲೂ ಪ್ರಚಾರ ಮಾಡುತ್ತಿದ್ದಾರೆ. ಬಿಜೆಪಿಯವರು ಇತಿಹಾಸವನ್ನು ಓದಿಕೊಳ್ಳಬೇಕು. ಬದಲಿಗೆ ವಾಟ್ಸ್ ಆ್ಯಪ್ ಸಂದೇಶಗಳನ್ನು ನೋಡಿಕೊಂಡು ಮಾತನಾಡಿದರೆ ಹೀಗೆ ಆಗುವುದು’ ಎಂದು ಪ್ರಿಯಾಂಕ್ ಖರ್ಗೆ, ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.

‘ಜಾಹೀರಾತಿಗೆ ತೆರಿಗೆ ಹಣ ಬಳಕೆ ಮಾಡಿದೆ ಎಂದು ಆರೋಪ ಮಾಡುತ್ತಿದ್ದಾರೆ. ಹೌದು ರಾಜ್ಯಕ್ಕೆ ಆಗಿರುವ ಅನ್ಯಾಯವನ್ನು ಜನರಿಗೆ ತಿಳಿಸಲು ನಮ್ಮ ಇಲಾಖೆಯಿಂದ ಜಾಹೀರಾತು ನೀಡಿದ್ದೇವೆ, ಇದರಲ್ಲಿ ತಪ್ಪೇನಿದೆ. ಗುಜರಾತಿನಲ್ಲಿ ಮೋದಿಯವರ ಹುಟ್ಟುಹಬ್ಬಕ್ಕೂ ಸರಕಾರದ ತೆರಿಗೆ ಹಣದಲ್ಲಿ ಜಾಹೀರಾತು ನೀಡಲಾಗಿದೆ. ಯಡಿಯೂರಪ್ಪ ಸಿಎಂ ಆಗಿದ್ದ ವೇಳೆ ಬಿಎಸ್‍ವೈ ಹಾಗೂ ಮೋದಿಯವರ ಫೋಟೊದೊಂದಿಗೆ ಜಾಹೀರಾತು ನೀಡಲಾಗಿತ್ತು. ಬಿಜೆಪಿಯವರು ಮಾಡಿದರೆ ಸರಿ, ಕಾಂಗ್ರೆಸ್‍ನವರು ಮಾಡಿದರೆ ತಪ್ಪು ಎಂಬ ದ್ವಿಮುಖ ನೀತಿ ಸರಿಯಲ್ಲ’ ಎಂದು ಪ್ರಿಯಾಂಕ್ ಖರ್ಗೆ ಆಕ್ಷೇಪಿಸಿದರು.

ಬಿಜೆಪಿ ಸಭಾತ್ಯಾಗ: ಇದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ ಪ್ರತಿಪಕ್ಷ ಬಿಜೆಪಿ ಸದಸ್ಯರು, ಆಡಳಿತ ಪಕ್ಷದ ವಿರುದ್ಧ ಆರೋಪಕ್ಕೆ ಮುಂದಾದರು. ಇದರಿಂದ ಪರಸ್ಪರ ವಾಗ್ವಾದ ನಡೆದು ಸದನದಲ್ಲಿ ಗದ್ದಲ, ಕೋಲಾಹಲದ ವಾತಾವರಣ ಸೃಷ್ಟಿಯಾಯಿತು. ಕೇಂದ್ರ ಸರಕಾರದ ಕಾಯ್ದೆಯನ್ನು ವಿರೋಧಿಸಿ ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಜಾಹೀರಾತನ್ನು ಖಂಡಿಸಿ ಪ್ರತಿಪಕ್ಷ ಸದಸ್ಯರು ಸಭಾತ್ಯಾಗ ಮಾಡಿದರು.

ಆರಂಭಕ್ಕೆ ಮಾತನಾಡಿದ ವಿಪಕ್ಷ ನಾಯಕ ಆರ್.ಅಶೋಕ್, ‘ರಾಜ್ಯದ ಜನರ ತೆರಿಗೆ ಹಣವನ್ನು ಬಳಸಿ ಪಕ್ಷದ ಪ್ರಚಾರಕ್ಕಾಗಿ ಜಾಹೀರಾತು ನೀಡಿರುವುದು ಸರಿಯಲ್ಲ. ಅಲ್ಲದೆ, ಗಾಂಧಿ ಚಿತ್ರವನ್ನು ಸರಿಯಾಗಿ ಪ್ರಕಟಿಸದೆ ಅವರಿಗೂ ಅಪಮಾನ ಮಾಡಿದ್ದಾರೆ. ಕೇಂದ್ರ ಸರಕಾರ ನಡೆಯುತ್ತಿರುವುದು ಕರ್ನಾಟಕದ ಜನರ ತೆರಿಗೆ ಹಣದಿಂದಲೇ ಹೊರತು ಕಾಂಗ್ರೆಸ್ ಪಕ್ಷದವರಿಂದ ಅಲ್ಲ’ ಎಂದು ಹೇಳಿದರು.

ಸ್ವಾತಂತ್ರ್ಯಾ ನಂತರ ಕಾಂಗ್ರೆಸ್ ಪಕ್ಷವನ್ನು ವಿಸರ್ಜಿಸುವಂತೆ ಗಾಂಧೀಜಿಯವರು ಹೇಳಿದ್ದರು. ಆದರೆ, ಇವರು ಪಕ್ಷವನ್ನು ವಿಸರ್ಜನೆ ಮಾಡದೇ ಗಾಂಧೀಜಿಗೆ ದ್ರೋಹ ಬಗೆದಿದ್ದಾರೆ. ಸರಕಾರದ ಜಾಹೀರಾತು ನೀಡಲು ಮಾನದಂಡಗಳಿವೆ. ಕಾಂಗ್ರೆಸ್ ಪಕ್ಷದಿಂದ ಜಾಹೀರಾತು ಕೊಟ್ಟದರೆ ನಮ್ಮದೇನೂ ತಕರಾರಿಲ್ಲ. ಪಕ್ಷದ ಬೆಳವಣಿಗೆಗೆ ಜನರ ತೆರಿಗೆ ಹಣ ಬಳಕೆ ಸರಿಯಲ್ಲ ಎಂದು ಅಶೋಕ್ ಟೀಕಿಸಿದರು.

‘ನಮ್ಮ ತೆರಿಗೆ ಹಣದಲ್ಲಿ’ ಉತ್ತರ ಪ್ರದೇಶ, ಗುಜರಾತ್, ಬಿಹಾರ ಉದ್ದಾರ: ‘ಕನ್ನಡಿಗರಿಂದ ಕೇಂದ್ರ ಸರಕಾರವು, 100ರೂ.ತೆರಿಗೆ ವಸೂಲಿ ಮಾಡಿದರೆ ನಮಗೆ ವಾಪಸ್ 15 ರೂ.ಗಳನ್ನು ಮಾತ್ರವೇ ನೀಡುತ್ತಿದೆ. ರಾಜ್ಯದ ಜನರ ತೆರಿಗೆ ಹಣದಲ್ಲಿ ಉತ್ತರಪ್ರದೇಶ, ಬಿಹಾರ, ಮಧ್ಯಪ್ರದೇಶ, ಗುಜರಾತ್ ರಾಜ್ಯಗಳನ್ನು ಉದ್ದಾರ ಮಾಡಿದರೆ ಅದನ್ನು ತೆರಿಗೆ ವಂಚನೆ ಎಂದು ಹೇಳುವುದರಲ್ಲಿ ತಪ್ಪೇನಿದೆ?. ನಮ್ಮ ನ್ಯಾಯಯುತ ತೆರಿಗೆ ಪಾಲು ಕೇಳುವುದು ನಮ್ಮ ಹಕ್ಕು’ ಎಂದು ಪ್ರಿಯಾಂಕ್ ಖರ್ಗೆ ಪ್ರತಿಪಾದಿಸಿದರು.

Tags

Priyank KhargeMGNREGAadvertisement
share
ವಾರ್ತಾಭಾರತಿ
ವಾರ್ತಾಭಾರತಿ
Next Story
X