Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಅಧಿವೇಶನ | ವಿಧಾನಸಭೆಯಲ್ಲಿ ಮೈಕ್ರೋ...

ಅಧಿವೇಶನ | ವಿಧಾನಸಭೆಯಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳ ತಪ್ಪಿಸುವ ವಿಧೇಯಕ ಮಂಡನೆ

ವಾರ್ತಾಭಾರತಿವಾರ್ತಾಭಾರತಿ6 March 2025 5:36 PM IST
share
ಅಧಿವೇಶನ | ವಿಧಾನಸಭೆಯಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳ ತಪ್ಪಿಸುವ ವಿಧೇಯಕ ಮಂಡನೆ

ಬೆಂಗಳೂರು : ಲೇವಾದೇವಿ ಮಾಫಿಯಾಗಳಿಂದ ಸಾಲ ಪಡೆದವರಿಗೆ ಉಂಟಾಗುವ ಕಿರುಕುಳ ತಪ್ಪಿಸಿ ರಕ್ಷಣೆ ನೀಡುವ ಉದ್ದೇಶದಿಂದ ಕರ್ನಾಟಕ ಕಿರು (ಮೈಕ್ರೋ) ಸಾಲ ಮತ್ತು ಸಣ್ಣ ಸಾಲ (ಬಲವಂತದ ಕ್ರಮಗಳ ಪ್ರತಿಬಂಧಕ) ವಿಧೇಯಕ 2025ಅನ್ನು ವಿಧಾನಸಭೆಯಲ್ಲಿ ಮಂಡಿಸಲಾಯಿತು.

ಗುರುವಾರ ವಿಧಾನಸಭೆಯ ಕಲಾಪದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪರವಾಗಿ ಕಾನೂನು ಸಚಿವ ಹೆಚ್.ಕೆ.ಪಾಟೀಲ್ ಈ ವಿಧೇಯಕವರನ್ನು ಮಂಡಿಸಿದರು.

ಸಾಲಗಾರನಿಗೆ ಕೆಲವೊಮ್ಮೆ ಹೆಚ್ಚಿನ ಬಡ್ಡಿಯನ್ನು ಪಾವತಿಸಲು ಒತ್ತಾಯಿಸಲಾಗುತ್ತಿದೆ. ಲೇವಾದೇವಿದಾರರ ಕಾರಣದಿಂದಾಗಿ ಸಾಲಗಾರರು ಬೀದಿಗೆ ಬರುವಂತೆ ಮತ್ತು ಆತ್ಮಹತ್ಯೆ ಮಾಡಿಕೊಳ್ಳುವಂತೆ ಒತ್ತಾಯಪಡಿಸಲಾಗುತ್ತಿದೆ ಎಂದು ವಿಧೇಯಕದಲ್ಲಿ ಪ್ರಸ್ತಾಪಿಸಲಾಗಿದೆ.ಹಾಗೇ, ಸಾಲಗಳನ್ನು ಪಡೆಯುವ ಮತ್ತು ಸಾಲಗಳಲ್ಲೇ ಮುಳುಗಿ ಹೋಗಿರುವ ಅಸಹಾಯಕರನ್ನು ಕಾಪಾಡುವ ಮತ್ತು ರಕ್ಷಿಸುವ ಉದ್ದೇಶವಿದೆ. ಬಡ ಗ್ರಾಮೀಣ ನಿರ್ಗತಿಕರು, ನಗರ ಕಾರ್ಮಿಕರು, ಸಮಾಜದ ಅಶಕ್ತ ಮತ್ತು ದುರ್ಬಲ ವರ್ಗದವರನ್ನು ಪೀಡಿಸುತ್ತಿವೆ ಮತ್ತು ಉಸಿರುಗಟ್ಟಿಸುತ್ತಿವೆ.

ಮೈಕ್ರೊ ಫೈನಾನ್ಸ್ ಸಂಸ್ಥೆಗಳು ಅಥವಾ ಸಾಲ ನೀಡಿಕೆ ಸಂಸ್ಥೆಗಳು ರೈತರಿಂದ ಕೃಷಿ ಉತ್ಪನ್ನಗಳನ್ನು ಪಡೆದು ಕೃಷಿ ಸರಕುಗಳ ಖರೀದಿ ಮತ್ತು ಮಾರಾಟದಲ್ಲಿ ತೊಡಗಿರುವ ಅಥವಾ ಬಡವರಿಗೆ ಸಾಲವನ್ನು ನೀಡುವ ಮತ್ತು ಅಸಲನ್ನು ಬಡ್ಡಿಯೊಂದಿಗೆ ನಗದು ಅಥವಾ ವಸ್ತು ರೂಪದಲ್ಲಿ ತೆಗೆದುಕೊಳ್ಳುವ ಸಂದರ್ಭದಲ್ಲಿ ದುಬಾರಿ ಬಡ್ಡಿದರಗಳು, ಅನುಚಿತ ತೊಂದರೆ, ಬಲವಂತ ಮತ್ತು ಅಮಾನವೀಯ ವಸೂಲಾತಿ ಮಾಡುವುದು ಕಂಡುಬಂದಿದೆ.

ಆರ್ಥಿಕವಾಗಿ ದುರ್ಬಲ ಗುಂಪುಗಳು ಮತ್ತು ವ್ಯಕ್ತಿಗಳು, ವಿಶೇಷವಾಗಿ ಮಹಿಳೆಯರು ಹಾಗೂ ಮಹಿಳಾ ಸ್ವಸಹಾಯ ಗುಂಪುಗಳನ್ನು ರಕ್ಷಿಸಲು ರಾಜ್ಯದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಮೈಕ್ರೋ ಫೈನಾನ್ಸ್ ಸಂಸ್ಥೆಗಳು ಅಥವಾ ಸಾಲ ನೀಡಿಕೆ ಏಜೆನ್ಸಿಗಳು ಅಥವಾ ಸಂಸ್ಥೆಗಳನ್ನು ನಿಯಂತ್ರಿಸಲು ಪರಿಣಾಮಕಾರಿ ಕಾರ್ಯವ್ಯವಸ್ಥೆಯನ್ನು ಸೃಜಿಸುವ ಉದ್ದೇಶವನ್ನು ವಿಧೇಯಕ ಒಳಗೊಂಡಿದೆ.

ಬಲವಂತದ ಹಾಗೂ ಅಮಾನವೀಯ ಸಾಲ ವಸೂಲಾತಿಯಲ್ಲಿ ತಪ್ಪಿತಸ್ಥರಿಗೆ ಹತ್ತು ವರ್ಷಗಳಿಗೆ ವಿಸ್ತರಿಸಬಹುದಾದ ಜೈಲುವಾಸ, 5 ಲಕ್ಷ ರೂ. ವರೆಗೆ ವಿಸ್ತರಿಸಬಹುದಾದ ದಂಡವನ್ನು ಈ ವಿಧೇಯಕದಲ್ಲಿ ಪ್ರಸ್ತಾಪಿಸಲಾಗಿದೆ. ರಾಜ್ಯ ಸರ್ಕಾರ ಈಗಾಗಲೇ ಅಧ್ಯಾದೇಶದ ಮೂಲಕ ಜಾರಿ ಮಾಡಿದ್ದ ಕಾನೂನನ್ನು ಈ ವಿಧೇಯಕದಲ್ಲಿ ಪ್ರಸ್ತಾಪಿಸಲಾಗಿದೆ.

ಕಾನೂನು ಚೌಕಟ್ಟುಗಳವರೆಗೆ ಕಾರ್ಯಾಚರಿಸುವ ನೋಂದಾಯಿತವಲ್ಲದ ಲೇವಾದೇವಿದಾರರನ್ನು ನಿಯಂತ್ರಿಸುವುದು, ಮೂಲಭೂತ ಹಕ್ಕುಗಳ ರಕ್ಷಣೆಯನ್ನು ಖಚಿತಪಡಿಸುವುದು, ಆರ್‌ಬಿಐನ ಕಣ್ತಪ್ಪಿಗೆ ಒಳಪಡದೆ ನೋಂದಾಯಿತವಲ್ಲದ ಮತ್ತು ಅನಿಯಂತ್ರಿತ ಲೇವಾದೇವಿದಾರರಿಗೆ ಈ ವಿಧೇಯಕ ಅನ್ವಯವಾಗಲಿದೆ. ಕಾನೂನುಬದ್ಧ ಲೇವಾದೇವಿಯನ್ನು ನಿರ್ಬಂಧಿಸುವುದಿಲ್ಲ. ಆದರೆ, ಬಲವಂತದ ವಸೂಲಾತಿಗಳನ್ನು ನಿರ್ಬಂಧಿಸುತ್ತದೆ ಎಂದು ಉಲ್ಲೇಖಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X