Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಹಾಲಿನ ದರ ಹೆಚ್ಚಳ ಮಾಡಿಲ್ಲ, ಬದಲಾಗಿ...

ಹಾಲಿನ ದರ ಹೆಚ್ಚಳ ಮಾಡಿಲ್ಲ, ಬದಲಾಗಿ ಹೆಚ್ಚುವರಿ ಹಾಲಿಗೆ 2 ರೂ.ನಿಗದಿ : ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ವಾರ್ತಾಭಾರತಿವಾರ್ತಾಭಾರತಿ25 Jun 2024 4:49 PM IST
share
ಹಾಲಿನ ದರ ಹೆಚ್ಚಳ ಮಾಡಿಲ್ಲ, ಬದಲಾಗಿ ಹೆಚ್ಚುವರಿ ಹಾಲಿಗೆ 2 ರೂ.ನಿಗದಿ : ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಬೆಂಗಳೂರು : ನಂದಿನಿ ಹಾಲಿನ ಪ್ಯಾಕೆಟ್‌ಗಳಲ್ಲಿ ಹಾಲಿನ ಪ್ರಮಾಣವನ್ನು 50 ಎಂ.ಎಲ್‌ ಹೆಚ್ಚಳ ಮಾಡಿ, ಹೆಚ್ಚುವರಿ ಹಾಲಿಗೆ 2ರೂ ದರ ನಿಗದಿಪಡಿಸಿ ಗ್ರಾಹಕರಿಂದ ಸಂಗ್ರಹಿಸಲಾಗುತ್ತಿದೆಯೇ ವಿನಃ ಹಾಲಿನ ಬೆಲೆಯಲ್ಲಿ ಏರಿಕೆ ಮಾಡಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.

ಈ ಸಂಬಂಧ ಪ್ರಕಟನೆ ಹೊರಡಿಸಿರುವ ಅವರು, "ಕಳೆದ ವರ್ಷಕ್ಕೆ ಹೋಲಿಕೆ ಮಾಡಿದರೆ ರಾಜ್ಯದಲ್ಲಿ ಈ ಬಾರಿ ಹಾಲಿನ ಉತ್ಪಾದನೆ ಶೇ.15 ಹೆಚ್ಚಳವಾಗಿದೆ. ಹಿಂದಿನ ವರ್ಷಗಳಲ್ಲಿ ಈ ವೇಳೆಗೆ ನಿತ್ಯ ಸರಾಸರಿ 90 ಲಕ್ಷ ಲೀಟರ್‌ ಉತ್ಪಾದನೆಯಾಗುತ್ತಿದ್ದ ಹಾಲಿನ ಪ್ರಮಾಣ ಈ ಬಾರಿ ಸರಾಸರಿ 99 ಲಕ್ಷ ಲೀಟರ್‌ ಗೆ ಏರಿಕೆಯಾಗಿದೆ. ಹೀಗೆ ಹೆಚ್ಚುವರಿಯಾಗಿ ಉತ್ಪಾದನೆಯಾಗುವ ಹಾಲನ್ನು ರೈತರಿಂದ ಖರೀದಿ ಮಾಡಬೇಕು, ಯಾವುದೇ ಕಾರಣಕ್ಕೂ ಅವರಿಂದ ಹಾಲು ಪಡೆಯಲು ನಿರಾಕರಿಸಬಾರದು ಎಂಬ ಸದುದ್ದೇಶದಿಂದ ಒಂದು ಲೀಟರ್‌ ಹಾಲಿನ ಪ್ಯಾಕೆಟ್‌ಗೆ ಹೆಚ್ಚುವರಿಯಾಗಿ 50 ಮಿ.ಲೀ ಹಾಲನ್ನು ಸೇರಿಸಿ, ಈ ಹೆಚ್ಚುವರಿ ಹಾಲಿನ ಬೆಲೆ 2 ರೂಪಾಯಿಯನ್ನು ಮಾತ್ರ ಗ್ರಾಹಕರಿಂದ ಸಂಗ್ರಹಿಸಲಾಗುತ್ತಿದೆ. ಹಾಲಿನ ಬೆಲೆಯಲ್ಲಿ ಯಾವುದೇ ಹೆಚ್ಚಳವಾಗಿರುವುದಿಲ್ಲ" ಎಂದು ತಿಳಿಸಿದ್ದಾರೆ.

ʼಈವರೆಗೆ 1,000 ಮಿ.ಲೀ ಹಾಲಿಗೆ ರೂ.42 ಹಾಗೂ 500 ಮಿ.ಲೀ ಹಾಲಿಗೆ ರೂ.22 ದರವನ್ನು ನಿಗದಿಪಡಿಸಲಾಗಿತ್ತು, ಇನ್ನು ಮುಂದೆ 1,050 ಮಿ.ಲೀ ಹಾಗೂ 550 ಮಿ.ಲೀ ಹಾಲಿನ ಪ್ಯಾಕೆಟ್‌ ಗಳನ್ನು ಮಾರಾಟ ಮಾಡಲಾಗುತ್ತಿದ್ದು, ಅದಕ್ಕೆ ಕ್ರಮವಾಗಿ ರೂ.44 ಹಾಗೂ ರೂ.24 ದರ ನಿಗದಿಪಡಿಸಲಾಗುತ್ತದೆ. ಇದು ನಾಡಿನ ಲಕ್ಷಾಂತರ ಹೈನುಗಾರರ ಹಿತದೃಷ್ಟಿಯಿಂದ ಕೆ.ಎಂ.ಎಫ್‌ ಸಂಸ್ಥೆಯು ತೆಗೆದುಕೊಂಡ ನಿರ್ಣಯವಾಗಿದ್ದು, ಹೆಚ್ಚುವರಿಯಾಗಿ ಉದ್ಪಾದನೆಯಾಗುತ್ತಿರುವ ಹಾಲನ್ನು ಗ್ರಾಹಕರಿಗೆ ನೇರವಾಗಿ ತಲುಪಿಸುವ ಸದುದ್ದೇಶವನ್ನು ಹೊಂದಿದೆʼ ಎಂದು ಸ್ಪಷ್ಟಪಡಿಸಿದ್ದಾರೆ.

ʼಈಗಾಗಲೇ ಗರಿಷ್ಠ ಪ್ರಮಾಣದ ಹಾಲನ್ನು ಹಾಲಿನ ಹುಡಿ ತಯಾರಿಕೆ ಮಾಡುವ ಉದ್ದೇಶಕ್ಕೆ ಬಳಕೆ ಮಾಡಲಾಗುತ್ತಿದೆ. ನಿತ್ಯ ಸುಮಾರು 30 ಲಕ್ಷ ಲೀಟರ್‌ ಹಾಲು ಪೌಡರ್‌ ತಯಾರಿಕೆಗಾಗಿ ಬಳಸಲ್ಪಡುತ್ತಿದ್ದು, 250 ಮೆಟ್ರಿಕ್‌ ಟನ್‌ ಹಾಲಿನ ಹುಡಿ ತಯಾರಿಸಲಾಗುತ್ತಿದೆ. ಇದು ಹಾಲಿನ ಹುಡಿಗೆ ಇರುವ ಬೇಡಿಕೆಗೆ ಅನುಗುಣವಾಗಿದೆʼ ಎಂದು ಹೇಳಿದ್ದಾರೆ.

ನಮ್ಮ ಸರಕಾರ ಅಧಿಕಾರಕ್ಕೆ ಬರುವ ವೇಳೆ ರಾಜ್ಯದಲ್ಲಿ ನಿತ್ಯ ಸರಾಸರಿ 72 ಲಕ್ಷ ಲೀಟರ್‌ ಗಳಷ್ಟು ಹಾಲು ಸಂಗ್ರಹವಾಗುತ್ತಿತ್ತು. ಈ ಹಿಂದೆ ಹಾಲಿನ ಬೆಲೆಯಲ್ಲಿ ರೂ.3 ಹೆಚ್ಚಳ ಮಾಡಿ ಆ ಹೆಚ್ಚುವರಿ ಹಣವನ್ನು ರೈತರಿಗೆ ನೇರವಾಗಿ ವರ್ಗಾಯಿಸುವ ಪ್ರೋತ್ಸಾಹದಾಯಕ ಕ್ರಮ ಕೈಗೊಂಡಿದ್ದರಿಂದ ಹೈನೋದ್ಯಮವು ಹಿಂದಿಗಿಂತ ಲಾಭ ತಂದುಕೊಡುವ ಉದ್ಯೋಗವಾಯಿತು ಜೊತೆಗೆ ಈ ಬಾರಿ ಉತ್ತಮ ಮಳೆಯಾಗಿರುವುದರಿಂದ ಜಾನುವಾರುಗಳಿಗೆ ಹಸಿರು ಮೇವು ಲಭ್ಯವಾಗುತ್ತಿದೆ. ಈ ಎರಡು ಕಾರಣಗಳಿಂದಾಗಿ ರಾಜ್ಯದಲ್ಲಿ ಹಾಲಿನ ಉತ್ಪಾದನೆ ಇಂದು ನಿತ್ಯ ಸರಿಸುಮಾರು 1 ಕೋಟಿ ಲೀಟರ್‌ ತಲುಪುವ ಹಂತಕ್ಕೆ ಬಂದಿದೆ. ಹೀಗೆ ಹೆಚ್ಚುವರಿಯಾಗಿ ಉತ್ಪಾದನೆಯಾಗುತ್ತಿರುವ ಹಾಲನ್ನು ರೈತರಿಂದ ಖರೀದಿಸಿ, ಗ್ರಾಹಕರಿಗೂ ಹೊರೆಯಾಗದ ರೀತಿಯಲ್ಲಿ ಮಾರಾಟ ಮಾಡುವ ಸಲುವಾಗಿ ಕೆ.ಎಂ.ಎಫ್‌ ಸಂಸ್ಥೆ ಈ ನಿರ್ಧಾರ ಕೈಗೊಂಡಿದೆ ಎಂದು ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X