Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಹೈನುಗಾರರ ಹಿತಕ್ಕಾಗಿ ಹಾಲಿನ ದರ...

ಹೈನುಗಾರರ ಹಿತಕ್ಕಾಗಿ ಹಾಲಿನ ದರ ಪರಿಷ್ಕರಣೆ: ಸಿಎಂ ಡಿ.ಕೆ. ಶಿವಕುಮಾರ್

ವಾರ್ತಾಭಾರತಿವಾರ್ತಾಭಾರತಿ31 Oct 2026 3:08 PM IST
share
ಹೈನುಗಾರರ ಹಿತಕ್ಕಾಗಿ ಹಾಲಿನ ದರ ಪರಿಷ್ಕರಣೆ: ಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು : ನಮ್ಮ ಹೈನುಗಾರರ ಜೀವನೋಪಾಯವನ್ನು ರಕ್ಷಿಸುವ ಹಾಗೂ ಗ್ರಾಹಕರಿಗೆ 'ನಂದಿನಿ' ಉತ್ಪನ್ನಗಳನ್ನು ಕೈಗೆಟುಕುವ ದರದಲ್ಲಿ ಒದಗಿಸುವ ನಿಟ್ಟಿನಲ್ಲಿ ಕರ್ನಾಟಕ ಸರ್ಕಾರವು ಸದಾ ಬದ್ಧವಾಗಿದೆ. ನವೆಂಬರ್ 1ರಿಂದ ಅನ್ವಯವಾಗುವಂತೆ ಪ್ರತಿ ಲೀಟರ್ ಹಾಲಿನ ದರವನ್ನು 8ರೂ.ರಷ್ಟು ಹೆಚ್ಚಿಸಲಾಗಿದೆ ಎಂದು ಸಿಎಂ ಡಿ.ಕೆ. ಶಿವಕುಮಾರ್‌ ಹೇಳಿದ್ದಾರೆ.

ಈ ಬಗ್ಗೆ ಸಾಮಾಜಿಕ ಜಾಲತಾಣ X ನಲ್ಲಿ ಪ್ರತಿಕ್ರಿಯಿಸಿರುವ ಅವರು, ಜಾನುವಾರುಗಳ ಮೇವು ಮತ್ತು ಹಿಂಡಿ ದರದಲ್ಲಿನ ಹೆಚ್ಚಳ, ಇಂಧನ ಹಾಗೂ ಪ್ಯಾಕೇಜಿಂಗ್ ವೆಚ್ಚದ ಏರಿಕೆ ಮತ್ತು ಬರಗಾಲದ ಪರಿಣಾಮವಾಗಿ ದೈನಂದಿನ ಹಾಲಿನ ಸಂಗ್ರಹಣೆಯಲ್ಲಿ ಉಂಟಾಗಿರುವ ಕುಸಿತ ಈ ಅನಿವಾರ್ಯ ಪರಿಷ್ಕರಣೆಗೆ ಪ್ರಮುಖ ಕಾರಣಗಳಾಗಿವೆ ಎಂದು ತಿಳಿಸಿದ್ದಾರೆ.

ಈ 8 ರೂ. ಹೆಚ್ಚಳದಲ್ಲಿ 7 ರೂ. ನೇರವಾಗಿ ರೈತರಿಗೆ ತಲುಪಲಿದ್ದು, ಪ್ರತಿ ಲೀಟರ್‌ಗೆ 35 ರೂ. ರಿಂದ 42 ರೂ. ಏರಿಕೆಯಾಗಲಿದೆ. ಸರ್ಕಾರ ನೀಡುವ 5 ರೂ. ಪ್ರೋತ್ಸಾಹಧನ ಸೇರಿ ರೈತರಿಗೆ ಪ್ರತಿ ಲೀಟರ್ ಹಾಲಿಗೆ 47 ರೂ. ಕೈಸೇರಲಿದೆ. ಇದರಿಂದ ದಿನಕ್ಕೆ 10 ಲೀಟರ್ ಹಾಲು ಪೂರೈಸುವ ರೈತನಿಗೆ ತಿಂಗಳಿಗೆ ಸುಮಾರು 2,100 ರೂ. ಹೆಚ್ಚುವರಿ ಆದಾಯ ದೊರೆಯಲಿದೆ. ಅಲ್ಲದೆ, ಈ ದರ ಪರಿಷ್ಕರಣೆಯಿಂದ ರಾಜ್ಯದ ಗ್ರಾಮೀಣ ಹೈನುಗಾರರ ಕುಟುಂಬಗಳಿಗೆ ವಾರ್ಷಿಕ ಅಂದಾಜು 1,850 ಕೋಟಿ ರೂ. ನಿಂದ 2,100 ಕೋಟಿ ರೂ. ವರೆಗೆ ಹೆಚ್ಚುವರಿ ಆದಾಯ ದೊರೆಯುವ ನಿರೀಕ್ಷೆಯಿದೆ ಎಂದಿದ್ದಾರೆ.

ಕರ್ನಾಟಕದಲ್ಲಿ ಒಟ್ಟು 28.84 ಲಕ್ಷ ಹೈನುಗಾರರಿದ್ದು, ಕೆಎಂಎಫ್ ಸದಸ್ಯರಲ್ಲಿ ಶೇ.67ರಷ್ಟು ಸಣ್ಣ ಮತ್ತು ಅತಿಸಣ್ಣ ರೈತರಾಗಿದ್ದಾರೆ. ಅವರ ಪರಿಶ್ರಮಕ್ಕೆ ನ್ಯಾಯಯುತ ಪ್ರತಿಫಲ ಒದಗಿಸುವ ನಿಟ್ಟಿನಲ್ಲಿ ಈ ನಿರ್ಧಾರ ಮಹತ್ವದ ಹೆಜ್ಜೆಯಾಗಿದೆ ಎಂದು ತಿಳಿಸಿದ್ದಾರೆ.

ದರ ಪರಿಷ್ಕರಣೆಯ ನಂತರವೂ ನಂದಿನಿ ಟೋನ್ಡ್ ಹಾಲಿನ ದರ ಪ್ರತಿ ಲೀಟರ್‌ಗೆ 54 ರೂ. ಇದ್ದು, ದೇಶದ ಹಲವು ಪ್ರಮುಖ ಡೈರಿ ಬ್ರ್ಯಾಂಡ್‌ಗಳಿಗಿಂತ ಕಡಿಮೆಯಿದೆ. ಅದೇ ರೀತಿ ನಂದಿನಿ ಶುಭಂ (4.5% ಕೊಬ್ಬಿನಾಂಶ) ಹಾಲಿನ ದರ 60 ರೂ. ಇದ್ದು, ಇತರೆ ಹತ್ತು ರಾಜ್ಯಗಳ ಸರಾಸರಿ ದರವಾದ 62.80ರೂ. ಗಿಂತ ಕಡಿಮೆಯೇ ಇದೆ. ರೈತರ ಹಿತದ ರಕ್ಷಣೆ ಮತ್ತು ಗ್ರಾಹಕರಿಗೆ ಕೈಗೆಟುಕುವ ದರದಲ್ಲಿ ಗುಣಮಟ್ಟದ ಹಾಲಿನ ಪೂರೈಕೆ, ಇವೆರಡಕ್ಕೂ ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಹೇಳಿದ್ದಾರೆ.

ನಮ್ಮ ಹೈನುಗಾರರ ಜೀವನೋಪಾಯವನ್ನು ರಕ್ಷಿಸುವ ಹಾಗೂ ಗ್ರಾಹಕರಿಗೆ 'ನಂದಿನಿ' ಉತ್ಪನ್ನಗಳನ್ನು ಕೈಗೆಟುಕುವ ದರದಲ್ಲಿ ಒದಗಿಸುವ ನಿಟ್ಟಿನಲ್ಲಿ ಕರ್ನಾಟಕ ಸರ್ಕಾರವು ಸದಾ ಬದ್ಧವಾಗಿದೆ.

ನವೆಂಬರ್ 1ರಿಂದ ಅನ್ವಯವಾಗುವಂತೆ ಪ್ರತಿ ಲೀಟರ್ ಹಾಲಿನ ದರವನ್ನು ₹8ರಷ್ಟು ಹೆಚ್ಚಿಸಲಾಗಿದೆ. ಜಾನುವಾರುಗಳ ಮೇವು ಮತ್ತು ಹಿಂಡಿ ದರದಲ್ಲಿನ ಹೆಚ್ಚಳ, ಇಂಧನ ಹಾಗೂ ಪ್ಯಾಕೇಜಿಂಗ್ ವೆಚ್ಚದ ಏರಿಕೆ ಮತ್ತು ಬರಗಾಲದ ಪರಿಣಾಮವಾಗಿ ದೈನಂದಿನ ಹಾಲಿನ ಸಂಗ್ರಹಣೆಯಲ್ಲಿ ಉಂಟಾಗಿರುವ ಕುಸಿತ ಈ ಅನಿವಾರ್ಯ ಪರಿಷ್ಕರಣೆಗೆ ಪ್ರಮುಖ ಕಾರಣಗಳಾಗಿವೆ.

ಈ ₹8ರ ಹೆಚ್ಚಳದಲ್ಲಿ ₹7 ನೇರವಾಗಿ ರೈತರಿಗೆ ತಲುಪಲಿದ್ದು, ಪ್ರತಿ ಲೀಟರ್‌ಗೆ ₹35ರಿಂದ ₹42ಕ್ಕೆ ಏರಿಕೆಯಾಗಲಿದೆ. ಸರ್ಕಾರ ನೀಡುವ ₹5 ಪ್ರೋತ್ಸಾಹಧನ ಸೇರಿ ರೈತರಿಗೆ ಪ್ರತಿ ಲೀಟರ್ ಹಾಲಿಗೆ ₹47 ಕೈಸೇರಲಿದೆ.

ಇದರಿಂದ ದಿನಕ್ಕೆ 10 ಲೀಟರ್ ಹಾಲು ಪೂರೈಸುವ ರೈತನಿಗೆ ತಿಂಗಳಿಗೆ ಸುಮಾರು ₹2,100 ಹೆಚ್ಚುವರಿ ಆದಾಯ ದೊರೆಯಲಿದೆ. ಅಲ್ಲದೆ, ಈ ದರ ಪರಿಷ್ಕರಣೆಯಿಂದ ರಾಜ್ಯದ ಗ್ರಾಮೀಣ ಹೈನುಗಾರರ ಕುಟುಂಬಗಳಿಗೆ ವಾರ್ಷಿಕ ಅಂದಾಜು ₹1,850 ಕೋಟಿಯಿಂದ ₹2,100 ಕೋಟಿವರೆಗೆ ಹೆಚ್ಚುವರಿ ಆದಾಯ ದೊರೆಯುವ ನಿರೀಕ್ಷೆಯಿದೆ.

ಕರ್ನಾಟಕದಲ್ಲಿ ಒಟ್ಟು 28.84 ಲಕ್ಷ ಹೈನುಗಾರರಿದ್ದು, ಕೆಎಂಎಫ್ ಸದಸ್ಯರಲ್ಲಿ ಶೇ.67ರಷ್ಟು ಸಣ್ಣ ಮತ್ತು ಅತಿಸಣ್ಣ ರೈತರಾಗಿದ್ದಾರೆ. ಅವರ ಪರಿಶ್ರಮಕ್ಕೆ ನ್ಯಾಯಯುತ ಪ್ರತಿಫಲ ಒದಗಿಸುವ ನಿಟ್ಟಿನಲ್ಲಿ ಈ ನಿರ್ಧಾರ ಮಹತ್ವದ ಹೆಜ್ಜೆಯಾಗಿದೆ.

ದರ ಪರಿಷ್ಕರಣೆಯ ನಂತರವೂ ನಂದಿನಿ ಟೋನ್ಡ್ ಹಾಲಿನ ದರ ಪ್ರತಿ ಲೀಟರ್‌ಗೆ ₹54 ಇದ್ದು, ದೇಶದ ಹಲವು ಪ್ರಮುಖ ಡೈರಿ ಬ್ರ್ಯಾಂಡ್‌ಗಳಿಗಿಂತ ಕಡಿಮೆಯಿದೆ. ಅದೇ ರೀತಿ ನಂದಿನಿ ಶುಭಂ (4.5% ಕೊಬ್ಬಿನಾಂಶ) ಹಾಲಿನ ದರ ₹60 ಇದ್ದು, ಇತರೆ ಹತ್ತು ರಾಜ್ಯಗಳ ಸರಾಸರಿ ದರವಾದ ₹62.80ಕ್ಕಿಂತ ಕಡಿಮೆಯೇ ಇದೆ.

ರೈತರ ಹಿತದ ರಕ್ಷಣೆ ಮತ್ತು ಗ್ರಾಹಕರಿಗೆ ಕೈಗೆಟುಕುವ ದರದಲ್ಲಿ ಗುಣಮಟ್ಟದ ಹಾಲಿನ ಪೂರೈಕೆ, ಇವೆರಡಕ್ಕೂ ನಮ್ಮ ಸರ್ಕಾರ ಬದ್ಧವಾಗಿದೆ.

— DK Shivakumar (@DKShivakumar) October 31, 2026

share
ವಾರ್ತಾಭಾರತಿ
ವಾರ್ತಾಭಾರತಿ
Next Story
X