Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ‘ಬಸ್ ಪ್ರಯಾಣ ದರ’ ಅಲ್ಪ ಪ್ರಮಾಣದಲ್ಲಿ...

‘ಬಸ್ ಪ್ರಯಾಣ ದರ’ ಅಲ್ಪ ಪ್ರಮಾಣದಲ್ಲಿ ಏರಿಕೆ : ಸಚಿವ ಬೈರತಿ ಸುರೇಶ್

"ಶಕ್ತಿ ಯೋಜನೆಯಡಿ ಒಂದು ಕೋಟಿಗೂ ಅಧಿಕ ಮಹಿಳೆಯರಿಗೆ ʼಉಚಿತ ಸ್ಮಾರ್ಟ್ ಕಾರ್ಡ್ʼಗಳ ವಿತರಣೆ"

ವಾರ್ತಾಭಾರತಿವಾರ್ತಾಭಾರತಿ4 Sept 2026 8:15 PM IST
share
‘ಬಸ್ ಪ್ರಯಾಣ ದರ’ ಅಲ್ಪ ಪ್ರಮಾಣದಲ್ಲಿ ಏರಿಕೆ : ಸಚಿವ ಬೈರತಿ ಸುರೇಶ್

ಬೆಂಗಳೂರು : ರಾಜ್ಯದಲ್ಲಿನ ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ಜನಸಾಮಾನ್ಯರಿಗೆ ಹೆಚ್ಚು ಹೊರೆಯಾಗದ ರೀತಿಯಲ್ಲಿ ಅಲ್ಪ ಪ್ರಮಾಣದಲ್ಲಿ ಬಸ್ ಪ್ರಯಾಣ ದರ ಪರಿಷ್ಕರಣೆ(ಏರಿಕೆ) ಮಾಡಲಾಗುತ್ತದೆ ಎಂದು ಸಾರಿಗೆ ಸಚಿವ ಬೈರತಿ ಸುರೇಶ್ ಮುನ್ಸೂಚನೆ ನೀಡಿದ್ದಾರೆ.

ಶುಕ್ರವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ, ಎಂಟು ತಿಂಗಳಲ್ಲಿ ಕೇಂದ್ರ ಸರಕಾರ ತೈಲೋತ್ಪನ್ನ ದರಗಳನ್ನು ಹೆಚ್ಚಳ ಮಾಡಿದೆ. ಹೀಗಿದ್ದರೂ ನಾವು ಬಸ್ ಪ್ರಯಾಣ ದರವನ್ನು ಹೆಚ್ಚಳ ಮಾಡಿಲ್ಲ. ಇದರಿಂದ ನಮ್ಮ ನಾಲ್ಕೂ ಸಾರಿಗೆ ನಿಗಮಗಳಿಗೆ ಸಾವಿರಾರು ಕೋಟಿ ರೂಪಾಯಿ ನಷ್ಟವಾಗುತ್ತಿದೆ ಎಂದು ಹೇಳಿದರು.

ಈ ಹೊರೆಯನ್ನು ಸರಿದೂಗಿಸಲು ಸರಕಾರದಿಂದ ನೆರವು ನೀಡಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಭರವಸೆ ನೀಡಿದ್ದಾರೆ. ನಿವೃತ್ತ ಹಿರಿಯ ಐಎಎಸ್ ಅಧಿಕಾರಿ ಅತುಲ್ ತಿವಾರಿ ನೇತೃತ್ವದ ಸಮಿತಿ ದರ ಪರಿಷ್ಕರಣೆಗೆ ಸಂಬಂಧಿಸಿದಂತೆ ಅಧ್ಯಯನ ನಡೆಸುತ್ತಿದ್ದು, ಸದ್ಯದಲ್ಲೆ ವರದಿಯನ್ನು ಸರಕಾರಕ್ಕೆ ಸಲ್ಲಿಸಲಿದೆ ಎಂದು ಸುರೇಶ್ ತಿಳಿಸಿದರು.

ಬಿಎಂಟಿಸಿಗೆ 4500 ಎಲೆಕ್ಟ್ರಿಕ್ ಬಸ್: ಕೇಂದ್ರ ಸರಕಾರದ ಪಿಎಂ ಇ-ಡ್ರೈವ್ ಕಾರ್ಯಕ್ರಮದಡಿ ಈ 4500 ಎಲೆಕ್ಟ್ರಿಕ್ ಬಸ್ ಗಳನ್ನು ಪಡೆಯಲಾಗುತ್ತಿದೆ. ಇದಕ್ಕಾಗಿ ರಾಜ್ಯ ಸರಕಾರ ವಾರ್ಷಿಕ 600 ಕೋಟಿ ರೂಪಾಯಿ ವೆಚ್ಚ ಮಾಡಲಿದೆ. 20 ವರ್ಷಕ್ಕೆ ಸುಮಾರು 12 ಸಾವಿರ ಕೋಟಿ ರೂಪಾಯಿಗಳನ್ನು ರಾಜ್ಯ ಸರಕಾರ ಈ ಯೋಜನೆಗೆ ಖರ್ಚು ಮಾಡಲಿದೆ ಎಂದು ಅವರು ತಿಳಿಸಿದರು.

12 ಮೀಟರ್ ಉದ್ದದ 3800 ಎಲೆಕ್ಟ್ರಿಕ್ ಬಸ್ ಗಳು ಮತ್ತು 900 ಬಸ್ ಗಳು 9 ಮೀಟರ್ ಉದ್ದದ್ದಾಗಿರುತ್ತವೆ. ಈ ಪೈಕಿ 400 ಬಸ್ ಗಳು ಹವಾನಿಯಂತ್ರಿತವಾಗಿರುತ್ತವೆ. ವಾಹನ ತಯಾರಿಕಾ ಸಂಸ್ಥೆಗಳು ಹಂತಹಂತವಾಗಿ ಇವಿ ಬಸ್ ಗಳನ್ನು ತಯಾರಿಸಿ ಬಿಎಂಟಿಸಿಗೆ ಪೂರೈಕೆ ಮಾಡಲಿದ್ದು, ಹಂತಹಂತವಾಗಿ ಈ ಬಸ್ ಗಳನ್ನು ಬೆಂಗಳೂರು ನಾಗರಿಕರ ಸೇವೆಗೆ ಲಭ್ಯವಾಗುವಂತೆ ಮಾಡಲಾಗುತ್ತದೆ ಎಂದು ಅವರು ಹೇಳಿದರು.

ಈ ಇವಿ ಬಸ್ ಗಳ ಸಂಚಾರದಿಂದ ಬೆಂಗಳೂರು ನಗರದ ಪರಿಸರ ಮಾಲಿನ್ಯ ಪ್ರಮಾಣ ಕಡಿಮೆಯಾಗಲಿದೆ. ಈ ಮೂಲಕ ರಾಜ್ಯ ಸರಕಾರ ಪರಿಸರ ಸಂರಕ್ಷಣೆಯ ಬದ್ಧತೆಯನ್ನು ಪ್ರದರ್ಶಿಸಲಿದೆ ಎಂದು ಸುರೇಶ್ ತಿಳಿಸಿದರು.

ಕೇಂದ್ರ ಸರಕಾರ ವಿವಿಧ ಬಸ್ ತಯಾರಿಕಾ ಸಂಸ್ಥೆಗಳ ಮೂಲಕ ಈ ಎಲೆಕ್ಟ್ರಿಕ್ ಬಸ್ ಗಳನ್ನು ಪೂರೈಕೆ ಮಾಡುತ್ತದೆ. ಒಂದು ಕಿಲೋಮೀಟರ್ ಗೆ ಇಂತಿಷ್ಟು ನಿಗದಿತ ಹಣವನ್ನು ಬಿಎಂಟಿಸಿ ಸಂಸ್ಥೆಗಳಿಗೆ ಪಾವತಿಸಲಿದೆ. ಕೇಂದ್ರ ಸರಕಾರದಿಂದ 2 ಸಾವಿರ ಕೋಟಿ ರೂಪಾಯಿ ಸಾಲ ತೆಗೆದುಕೊಳ್ಳಲು ನಿರ್ಧರಿಸಲಾಗಿದೆ. ಇಡೀ ರಾಜ್ಯದಲ್ಲಿ ಹೊಸ ಬಸ್ ಡಿಪೋ ನಿರ್ಮಾಣ ಮತ್ತು ಹಳೆಯ ಬಸ್ ನಿಲ್ದಾಣಗಳ ಉನ್ನತೀಕರಣ ಮಾಡಲಾಗುತ್ತದೆ ಅವರು ತಿಳಿಸಿದರು.

1 ಕೋಟಿ ಶಕ್ತಿ ಸ್ಮಾರ್ಟ್ ಕಾರ್ಡ್: ‘ಮಹಿಳೆಯರಿಗೆ ಉಚಿತ ಪ್ರಯಾಣ ಕಲ್ಪಿಸುವ ರಾಜ್ಯ ಸರಕಾರದ ಮಹತ್ವಾಕಾಂಕ್ಷೆಯ ಶಕ್ತಿ ಯೋಜನೆಯಡಿಯಲ್ಲಿ ರಾಜ್ಯದ ಒಂದು ಕೋಟಿಗೂ ಅಧಿಕ ಮಹಿಳೆಯರಿಗೆ ಮೊದಲ ಹಂತದಲ್ಲಿ ಉಚಿತ ಸ್ಮಾರ್ಟ್ ಕಾರ್ಡ್ ಗಳನ್ನು ವಿತರಿಸಲಾಗುತ್ತದೆ. 250 ಕೋಟಿ ರೂಪಾಯಿಗಳ ವೆಚ್ಚವಾಗುತ್ತದೆ. ಸದ್ಯದಲ್ಲೇ ಈ ಪ್ರಕ್ರಿಯೆಗೆ ಚಾಲನೆ ನೀಡಲಾಗುತ್ತದೆ’

-ಬೈರತಿ ಸುರೇಶ್, ಸಾರಿಗೆ ಸಚಿವ

Tags

Minister Bairati Suresh
share
ವಾರ್ತಾಭಾರತಿ
ವಾರ್ತಾಭಾರತಿ
Next Story
X