Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ‘ಮೇಕೆದಾಟು ಯೋಜನೆ’ಗೆ ವೇಗ ನೀಡಲು ಸಚಿವ...

‘ಮೇಕೆದಾಟು ಯೋಜನೆ’ಗೆ ವೇಗ ನೀಡಲು ಸಚಿವ ಚಲುವರಾಯಸ್ವಾಮಿ ಸೂಚನೆ

ವಾರ್ತಾಭಾರತಿವಾರ್ತಾಭಾರತಿ13 Aug 2026 6:51 PM IST
share
‘ಮೇಕೆದಾಟು ಯೋಜನೆ’ಗೆ ವೇಗ ನೀಡಲು ಸಚಿವ ಚಲುವರಾಯಸ್ವಾಮಿ ಸೂಚನೆ

ಬೆಂಗಳೂರು : ‘ಮೇಕೆದಾಟು ಅಣೆಕಟ್ಟು ಯೋಜನೆಯ ಕುರಿತು ಕಾನೂನು ಮತ್ತು ತಾಂತ್ರಿಕ ನಿಯಮಗಳನ್ನು ಪಾಲಿಸಿಕೊಂಡು, ಕೇಂದ್ರ ಸರಕಾರದ ವಿವಿಧ ಇಲಾಖೆಗಳಿಂದ ಅನುಮತಿ ಪಡೆಯುವ ಪ್ರಕ್ರಿಯೆಗೆ ವೇಗ ನೀಡಬೇಕು’ ಎಂದು ಜಲಸಂಪನ್ಮೂಲ ಸಚಿವ ಎನ್.ಚಲುವರಾಯಸ್ವಾಮಿ, ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಗುರುವಾರ ನೂತನ ಸಚಿವರಾಗಿ ಅಧಿಕಾರ ವಹಿಸಿಕೊಂಡ ಬಳಿಕ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಯೋಜನೆಯ ಪ್ರಸ್ತುತ ಸ್ಥಿತಿಗತಿ, ಸವಾಲುಗಳು ಹಾಗೂ ಮುಂದಿನ ಕಾರ್ಯಯೋಜನೆ ಕುರಿತು ಮಾಹಿತಿ ಪಡೆದುಕೊಂಡರು. ಬೆಂಗಳೂರು ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಿಗೆ ಶಾಶ್ವತ ಕುಡಿಯುವ ನೀರು ಒದಗಿಸುವ ದೃಷ್ಟಿಯಿಂದ ಈ ಯೋಜನೆ ಮಹತ್ವದ್ದು ಎಂದರು.

ಯೋಜನೆಯ ವಿಸ್ತೃತ ಯೋಜನಾ ವರದಿ, ಕೇಂದ್ರ ಸರಕಾರ ಹಾಗೂ ಸಂಬಂಧಿಸಿದ ಪ್ರಾಧಿಕಾರಗಳಿಂದ ಅನುಮತಿಗಳು, ಪರಿಸರ-ಅರಣ್ಯ ಸಂಬಂಧಿತ ವಿಷಯಗಳು, ಭೂಸ್ವಾಧೀನ, ಪುನರ್ವಸತಿ, ಯೋಜನೆಯ ತಾಂತ್ರಿಕ ಅಂಶಗಳು ಹಾಗೂ ರಾಜ್ಯದ ಹಿತಾಸಕ್ತಿಯನ್ನು ಕಾಪಾಡಿಕೊಂಡು ಯೋಜನೆಯನ್ನು ಮುಂದುವರಿಸುವ ಕಾರ್ಯತಂತ್ರ ಸೇರಿದಂತೆ ವಿವಿಧ ವಿಷಯಗಳ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದರು.

ಯಾವುದೇ ರಾಜಿ ಇಲ್ಲ: ಮೇಕೆದಾಟು ಯೋಜನೆ ಕೇವಲ ಒಂದು ನೀರಾವರಿ ಯೋಜನೆಯಲ್ಲ, ಬೆಂಗಳೂರು ಸೇರಿದಂತೆ ರಾಜ್ಯದ ಪ್ರಮುಖ ನಗರ ಪ್ರದೇಶಗಳ ಕುಡಿಯುವ ನೀರಿನ ಭವಿಷ್ಯಕ್ಕೆ ಸಂಬಂಧಿಸಿದ ಯೋಜನೆ. ಆದುದರಿಂದ ಯೋಜನೆಗೆ ಸಂಬಂಧಿಸಿದ ಎಲ್ಲ ಪ್ರಕ್ರಿಯೆಗಳನ್ನು ವೈಜ್ಞಾನಿಕವಾಗಿ ಮುಂದುವರಿಸಿಕೊಂಡು ಹೋಗಬೇಕು ಎಂದು ಚಲುವರಾಯಸ್ವಾಮಿ ತಿಳಿಸಿದರು.

ಸಮಗ್ರ ಪ್ರಸ್ತಾವನೆ: ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ಇದುವರೆಗೆ ಕೈಗೊಂಡಿರುವ ಕ್ರಮಗಳು, ಬಾಕಿ ಇರುವ ಅನುಮತಿಗಳು ಹಾಗೂ ಮುಂದಿನ ಹಂತದಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಸಮಗ್ರ ಪ್ರಸ್ತಾವನೆಯನ್ನು ಸಿದ್ಧಪಡಿಸಿ ನೀಡಬೇಕು. ಯೋಜನೆಗೆ ಸಂಬಂಧಿಸಿದ ಎಲ್ಲ ಇಲಾಖೆಗಳ ನಡುವೆ ಸಮನ್ವಯ ಸಾಧಿಸಿ, ಅಗತ್ಯ ದಾಖಲೆಗಳು ಮತ್ತು ತಾಂತ್ರಿಕ ಮಾಹಿತಿಗಳನ್ನು ಸಿದ್ಧಪಡಿಸಬೇಕು ಎಂದು ಅವರು ಹೇಳಿದರು.

ಕುಡಿಯುವ ನೀರಿಗೆ ಆದ್ಯತೆ: ಬೆಂಗಳೂರು ಸೇರಿದಂತೆ ರಾಜ್ಯದ ನಗರ ಪ್ರದೇಶಗಳಲ್ಲಿ ಜನಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಭವಿಷ್ಯದ ಕುಡಿಯುವ ನೀರಿನ ಬೇಡಿಕೆಯನ್ನು ಗಮನದಲ್ಲಿಟ್ಟುಕೊಂಡು ಈಗಿನಿಂದಲೇ ದೀರ್ಘಾವಧಿಯ ಯೋಜನೆಗಳನ್ನು ರೂಪಿಸಬೇಕಾಗಿದೆ. ಮೇಕೆದಾಟು ಯೋಜನೆಯಂತಹ ಮಹತ್ವದ ಯೋಜನೆಗಳನ್ನು ಕೇವಲ ಇಂದಿನ ಅಗತ್ಯಕ್ಕಾಗಿ ಮಾತ್ರವಲ್ಲದೆ, ಮುಂದಿನ ಹಲವು ದಶಕಗಳ ನೀರಿನ ಬೇಡಿಕೆಯನ್ನು ಗಮನದಲ್ಲಿಟ್ಟುಕೊಂಡು ಪರಿಗಣಿಸಬೇಕು ಎಂದು ಅವರು ಅಭಿಪ್ರಾಯಪಟ್ಟರು.

ನೀರು ಜನರ ಮೂಲಭೂತ ಅಗತ್ಯ. ಕುಡಿಯುವ ನೀರಿನ ವಿಚಾರದಲ್ಲಿ ಯಾವುದೇ ರಾಜಕೀಯ ಭಿನ್ನಾಭಿಪ್ರಾಯಗಳಿಗಿಂತ ಜನರ ಹಿತವೇ ಮುಖ್ಯ. ಮೇಕೆದಾಟು ಯೋಜನೆಯ ವಿಚಾರದಲ್ಲಿ ರಾಜ್ಯದ ಕಾನೂನುಬದ್ಧ ಹಕ್ಕುಗಳನ್ನು ರಕ್ಷಿಸಿಕೊಂಡು, ಯೋಜನೆ ಮುಂದುವರಿಸಲು ಸರಕಾರ ಅಗತ್ಯ ಎಲ್ಲ ಪ್ರಯತ್ನಗಳನ್ನು ಮಾಡಲಿದೆ ಎಂದು ಚಲುವರಾಯಸ್ವಾಮಿ ಹೇಳಿದರು.

Tags

Minister Chaluvarayaswamy
share
ವಾರ್ತಾಭಾರತಿ
ವಾರ್ತಾಭಾರತಿ
Next Story
X