Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಕಾವೇರಿ ವಿವಾದ: ತಮಿಳುನಾಡಿಗೆ ನೀರು...

ಕಾವೇರಿ ವಿವಾದ: ತಮಿಳುನಾಡಿಗೆ ನೀರು ಹರಿಸುವ ಆದೇಶದ ವಿರುದ್ಧ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ : ಸಚಿವ ಚಲುವರಾಯಸ್ವಾಮಿ

ವಾರ್ತಾಭಾರತಿವಾರ್ತಾಭಾರತಿ9 Sept 2026 3:17 PM IST
share
ಕಾವೇರಿ ವಿವಾದ: ತಮಿಳುನಾಡಿಗೆ ನೀರು ಹರಿಸುವ ಆದೇಶದ ವಿರುದ್ಧ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ : ಸಚಿವ ಚಲುವರಾಯಸ್ವಾಮಿ

ಬೆಂಗಳೂರು : ತಮಿಳುನಾಡಿಗೆ ಪ್ರತಿದಿನ 6 ಸಾವಿರ ಕ್ಯೂಸೆಕ್ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ಹಾಗೂ ಪ್ರಾಧಿಕಾರ (CWMA) ನೀಡಿರುವ ಆದೇಶವನ್ನು ಪ್ರಶ್ನಿಸಿ ರಾಜ್ಯ ಸರ್ಕಾರವು ಸುಪ್ರೀಂ ಕೋರ್ಟ್ ಮೆಟ್ಟಿಲೇರಲು ಸಜ್ಜಾಗಿದೆ ಎಂದು ಜಲ ಸಂಪನ್ಮೂಲ ಸಚಿವ ಎನ್.ಚಲುವರಾಯಸ್ವಾಮಿ ಸ್ಪಷ್ಟಪಡಿಸಿದ್ದಾರೆ.

ವಿಧಾನಸೌಧದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಈ ವಿಚಾರವಾಗಿ ಮುಖ್ಯಮಂತ್ರಿಗಳ ಜೊತೆ ಸುದೀರ್ಘ ಚರ್ಚೆ ನಡೆಸಲಾಗಿದೆ. ಕಾನೂನು ತಜ್ಞರ ತಂಡದೊಂದಿಗೆ ಸಮಾಲೋಚಿಸಿ ನಾಳೆಯೇ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ. ಇದರ ಜೊತೆಗೆ ಸಿಡಬ್ಲ್ಯುಆರ್‌ಸಿ ಮುಂದೆಯೂ ಮರುಪರಿಶೀಲನಾ (ರಿವ್ಯೂ) ಅರ್ಜಿ ಸಲ್ಲಿಸುವಂತೆ ಸೂಚಿಸಲಾಗಿದೆ ಎಂದು ತಿಳಿಸಿದರು.

ಸಿಡಬ್ಲ್ಯುಆರ್‌ಸಿ ಆದೇಶವನ್ನೇ ಪ್ರಾಧಿಕಾರ ಕೂಡ ಎತ್ತಿ ಹಿಡಿದಿದೆ. ಆದರೆ, ಪ್ರಸ್ತುತ ನಮ್ಮ ಜಲಾಶಯಗಳ ಪರಿಸ್ಥಿತಿ ತೀರಾ ಹದಗೆಟ್ಟಿದ್ದು, ಬಿಡಲು ನಮ್ಮಲ್ಲೇ ನೀರಿಲ್ಲದಂತಾಗಿದೆ. ಸದ್ಯ ಕೇವಲ ಕುಡಿಯುವ ನೀರಿಗಷ್ಟೇ ಆದ್ಯತೆ ನೀಡಬೇಕಾಗಿದ್ದು, ಇದರ ನಡುವೆ ಬತ್ತಿ ಹೋಗಿರುವ ಕೆರೆ-ಕಟ್ಟೆಗಳನ್ನು ಸಹ ತುಂಬಿಸಬೇಕಾದ ಅನಿವಾರ್ಯತೆ ಇದೆ. ಗೌರಿ-ಗಣೇಶ ಹಬ್ಬದ ಒಂದು ವಾರದೊಳಗೆ ಉತ್ತಮ ಮಳೆಯಾದರೆ ಮಾತ್ರ ಪರಿಸ್ಥಿತಿ ತುಸು ಸುಧಾರಿಸಿಕೊಳ್ಳಬಹುದು ಎಂದು ಅವರು ಆತಂಕ ವ್ಯಕ್ತಪಡಿಸಿದರು.

ನಾವು ಯಾವುದೇ ಕಾರಣಕ್ಕೂ ಸಿಡಬ್ಲ್ಯುಆರ್‌ಸಿ ಆದೇಶವನ್ನು ಸಮರ್ಥಿಸಿಕೊಳ್ಳುವುದಿಲ್ಲ. ಈ ಹಿಂದೆ 100 ಟಿಎಂಸಿ ನೀರು ಬಿಡಲಾಗಿತ್ತು, ಆದರೆ ಈ ಬಾರಿ 30 ಟಿಎಂಸಿ ಮಾತ್ರ ನೀಡಿದ್ದೇವೆ. ಆದರೂ ತಮಿಳುನಾಡು ಸರ್ಕಾರ ನಿರಂತರವಾಗಿ ಒತ್ತಡ ಹೇರುತ್ತಲೇ ಇದೆ. ಕಾವೇರಿ ವಿಚಾರದಲ್ಲಿ ರಾಜ್ಯದ ಹಿತ ಕಾಪಾಡಲು, ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಲಹೆ ನೀಡಿರುವಂತೆ ಸುಪ್ರೀಂ ಕೋರ್ಟ್‌ನಲ್ಲಿ ವಾದ ಮಂಡಿಸಲು ವಿಶೇಷ ವಕೀಲರನ್ನು (Special Advocate) ನೇಮಿಸುವ ಕುರಿತು ಸರ್ಕಾರ ಗಂಭೀರವಾಗಿ ಚಿಂತನೆ ನಡೆಸಲಿದೆ. ಜತೆಗೆ ಅವರೊಟ್ಡಿಗೂ ಸಹ ಮಾತನಾಡಲಾಗುದು ವಿವರಿಸಿದರು.

ಇ.ಡಿ ದಾಳಿ ರಾಜಕೀಯ ಪ್ರೇರಿತ

ಇದೇ ವೇಳೆ, ಸಚಿವ ಸತೀಶ್ ಜಾರಕಿಹೊಳಿ ಹಾಗೂ ಅವರ ಆಪ್ತರ ಮನೆಗಳ ಮೇಲೆ ನಡೆದಿರುವ ಜಾರಿ ನಿರ್ದೇಶನಾಲಯದ (ಇ.ಡಿ) ದಾಳಿಯ ಕುರಿತು ಪ್ರತಿಕ್ರಿಯಿಸಿದ ಸಚಿವರು, ಬಿಜೆಪಿಯವರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಕಾನೂನಿನ ಪ್ರಕಾರ ಅವರು ಏನು ಬೇಕಿದ್ದರೂ ಮಾಡಿಕೊಳ್ಳಲಿ. ಆದರೆ, ಬಿಜೆಪಿಯವರಿಗೆ ವಿಪಕ್ಷ ನಾಯಕರನ್ನು ಗುರಿಯಾಗಿಸಿಕೊಂಡು ದಾಳಿ ಮಾಡಿಸುವುದೇ ಕಾಯಕವಾಗಿದೆ. ಮಧ್ಯಪ್ರದೇಶ, ಒಡಿಶಾ ಸೇರಿದಂತೆ ಬಿಜೆಪಿ ಮತ್ತು ಅದರ ಮಿತ್ರಪಕ್ಷಗಳು ಅಧಿಕಾರದಲ್ಲಿರುವ ಇತರೆ ರಾಜ್ಯಗಳ ಸಚಿವರುಗಳ ಮೇಲೆ ಇಂತಹ ಇ.ಡಿ ದಾಳಿಗಳು ಏಕೆ ನಡೆಯುವುದಿಲ್ಲ ಎಂದು ಪ್ರಶ್ನಿಸಿದರು.

Tags

Minister Chaluvarayaswamy
share
ವಾರ್ತಾಭಾರತಿ
ವಾರ್ತಾಭಾರತಿ
Next Story
X