Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಡೆಂಗ್ಯೂ ಚಿಕಿತ್ಸೆಗೆ ದರ ನಿಗದಿ, ಹೆಚ್ಚು...

ಡೆಂಗ್ಯೂ ಚಿಕಿತ್ಸೆಗೆ ದರ ನಿಗದಿ, ಹೆಚ್ಚು ಹಣ ಪಡೆದರೆ ಕ್ರಮ : ಸಚಿವ ದಿನೇಶ್ ಗುಂಡೂರಾವ್

ವಾರ್ತಾಭಾರತಿವಾರ್ತಾಭಾರತಿ15 July 2024 7:26 PM IST
share
ಡೆಂಗ್ಯೂ ಚಿಕಿತ್ಸೆಗೆ ದರ ನಿಗದಿ, ಹೆಚ್ಚು ಹಣ ಪಡೆದರೆ ಕ್ರಮ : ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು : ಖಾಸಗಿ ಆಸ್ಪತ್ರೆಗಳಲ್ಲಿ ಡೆಂಗ್ಯೂ ಪ್ರಕರಣಗಳ ಚಿಕಿತ್ಸೆಗೆ ಸರಕಾರವೇ ದರ ನಿಗದಿಪಡಿಸಿದ್ದು, ಹೆಚ್ಚಿನ ದರ ತೆಗೆದುಕೊಂಡರೆ ಅಂತಹವರ ಮೇಲೆ ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಎಚ್ಚರಿಕೆ ನೀಡಿದ್ದಾರೆ.

ಸೋಮವಾರ ವಿಧಾನ ಪರಿಷತ್‍ನ ಪ್ರಶ್ನೋತ್ತರ ಕಲಾಪದಲ್ಲಿ ಬಿಜೆಪಿ ಸದಸ್ಯ ಧನಂಜಯ್ಯ ಸರ್ಜಿ ಪರವಾಗಿ ಡಿ.ಎಸ್.ಅರುಣ್ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಸರಕಾರ ಖಾಸಗಿ ಆಸ್ಪತ್ರೆಗಳಿಗೆ ದರ ನಿಗದಿಪಡಿಸಿ ಸುತ್ತೋಲೆ ಹೊರಡಿಸಿದೆ. ಇದನ್ನು ಮೀರಿ ಸಾರ್ವಜನಿಕರಿಂದ ಹೆಚ್ಚಿನ ಹಣ ತೆಗೆದುಕೊಂಡರೆ ಕಾನೂನು ಕ್ರಮ ಖಚಿತ ಎಂದರು.

ಡೆಂಗ್ಯೂ ಪ್ರಕರಣವನ್ನು ಸರಕಾರ ಗಂಭೀರವಾಗಿ ಪರಿಗಣಿಸಿದೆ. ಕೋವಿಡ್ ಮಾದರಿಯಲ್ಲಿ ನಿಯಂತ್ರಣ ಮಾಡಬೇಕೆಂದು ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ, ನಾನು ಹಾಗೂ ಜಿಲ್ಲಾಧಿಕಾರಿಗಳ ಜೊತೆ ಸಭೆ ನಡೆಸಿದ್ದೇವೆ. ಜೊತೆಗೆ ಟಾಸ್ಕ್‌ ಫೋರ್ಸ್ ಕೂಡ ರಚನೆ ಮಾಡಲಾಗಿದೆ ಎಂದು ಅವರು ವಿವರಿಸಿದರು.

ಎರಡಕ್ಕಿಂತ ಹೆಚ್ಚು ಡೆಂಗ್ಯೂ ಪ್ರಕರಣಗಳು ಕಂಡುಬಂದರೆ ಅದನ್ನು ಹಾಟ್‌ ಸ್ಪಾಟ್ ಎಂದು ಘೋಷಣೆ ಮಾಡಲಾಗುವುದು. ಅಲ್ಲದೆ, ಅಂತಹ ಪ್ರದೇಶದಲ್ಲಿ ಹೆಚ್ಚಿನ ಡೆಂಗ್ಯೂ ತಪಾಸಣೆ ನಡೆಸಲು ಸೂಚನೆ ನೀಡಲಾಗಿದೆ. ಅಧಿಕಾರಿಗಳು ಈಗಾಗಲೇ ಸಮಾರೋಪಾದಿಯಲ್ಲಿ ಕೆಲಸಗಳನ್ನು ಕೈಗೊಂಡಿದ್ದಾರೆ ಎಂದು ದಿನೇಶ್ ಗುಂಡೂರಾವ್ ತಿಳಿಸಿದರು.

ಎರಡು ಅಥವಾ ಮೂರಕ್ಕಿಂತ ಡೆಂಗ್ಯೂ ಪ್ರಕರಣಗಳು ಕಾಣಿಸಿಕೊಂಡರೆ ಕ್ಲಿನಿಕ್‍ಗಳನ್ನು ತೆರೆಯಲು ಸೂಚಿಸಲಾಗಿದೆ. ಸರಕಾರಿ ಆಸ್ಪತ್ರೆಗಳಲ್ಲಿ ಉಚಿತವಾಗಿ ಚಿಕಿತ್ಸೆ ನೀಡುತ್ತಿದ್ದೇವೆ. ಕರ್ನಾಟಕ, ತಮಿಳುನಾಡು ಮತ್ತು ಕೇರಳಗಳಲ್ಲಿ ಡೆಂಗ್ಯೂ ಪ್ರಕರಣಗಳು ಹೆಚ್ಚಾಗಿ ಕಾಣಿಸಿಕೊಳ್ಳುತ್ತವೆ. ಉತ್ತರ ಭಾರತದಲ್ಲಿ ಈ ಪ್ರಕರಣಗಳು ಕಡಿಮೆ ಇದೆ ಎಂದು ದಿನೇಶ್ ಗುಂಡೂರಾವ್ ಹೇಳಿದರು.

ಸೆಪ್ಟೆಂಬರ್ ವರೆಗೂ ಎಚ್ಚರಿಕೆ: ‘ಮಳೆಗಾಲವಾಗಿರುವುದರಿಂದ ಡೆಂಗ್ಯೂ ಪ್ರಕರಣ ಹೆಚ್ಚು ಕಾಣಿಸಿಕೊಳ್ಳುತ್ತಿದೆ. ಸೆಪ್ಟೆಂಬರ್ ವರೆಗೆ ಸಾರ್ವಜನಿಕರು ಎಚ್ಚರಿಕೆಯಿಂದ ಇರಬೇಕಾಗುತ್ತದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ನಗರಾಭಿವೃದ್ಧಿ, ಕಂದಾಯ, ಶಿಕ್ಷಣ, ಗ್ರಾಮೀಣಾಭಿವೃದ್ಧಿ ಇಲಾಖೆಗಳ ಮೂಲಕ ಡೆಂಗ್ಯೂ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳುತ್ತಿದ್ದೇವೆ. ಸರಕಾರದ ಜೊತೆಗೆ ಶಾಸಕರು ಸೇರಿದಂತೆ ಇತರೆ ಜನಪ್ರತಿನಿಧಿಗಳು ಕೈಜೋಡಿಸಬೇಕು ಎಂದು ಸಚಿವ ದಿನೇಶ್ ಗುಂಡೂರಾವ್ ಮನವಿ ಮಾಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X