Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಈಡಿಸ್ ಸೊಳ್ಳೆ ಉತ್ಪತ್ತಿ ತಾಣಗಳನ್ನು...

ಈಡಿಸ್ ಸೊಳ್ಳೆ ಉತ್ಪತ್ತಿ ತಾಣಗಳನ್ನು ನಾಶಪಡಿಸುವ ಜಾಗೃತಿ ಅಭಿಯಾನಕ್ಕೆ ಸಚಿವ ದಿನೇಶ್ ಗುಂಡೂರಾವ್ ಚಾಲನೆ

ಮಂಗಳೂರಿನಲ್ಲಿ ಮನೆ ಮನೆಗೆ ತೆರಳಿ ಪರಿಶೀಲನೆ ನಡೆಸಿದ ಆರೋಗ್ಯ ಸಚಿವರು

ವಾರ್ತಾಭಾರತಿವಾರ್ತಾಭಾರತಿ5 July 2024 3:33 PM IST
share
ಈಡಿಸ್ ಸೊಳ್ಳೆ ಉತ್ಪತ್ತಿ ತಾಣಗಳನ್ನು ನಾಶಪಡಿಸುವ ಜಾಗೃತಿ ಅಭಿಯಾನಕ್ಕೆ ಸಚಿವ ದಿನೇಶ್ ಗುಂಡೂರಾವ್ ಚಾಲನೆ

ಮಂಗಳೂರು: ಡೆಂಗಿ ಜ್ವರಕ್ಕೆ ಕಾರಣವಾಗುವ ಈಡಿಸ್ ಸೊಳ್ಳೆ ಉತ್ಪತ್ತಿ ತಾಣಗಳ ನಾಶಪಡಿಸುವ ಬೃಹತ್ ಅಭಿಯಾನಕ್ಕೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮಂಗಳೂರಿನಲ್ಲಿ ಇಂದು ಚಾಲನೆ ನೀಡಿದರು. ಮಂಗಳೂರಿನಲ್ಲಿ ಆರೋಗ್ಯ ಕಾರ್ಯಕರ್ತರೊಂದಿಗೆ ಮನೆಗಳಿಗೆ ಭೇಟಿ ನೀಡಿದ ಸಚಿವರು, ನೀರು ನಿಂತ ಸ್ಥಳಗಳಲ್ಲಿ ಈಡಿಸ್ ಸೊಳ್ಳೆಯ ಉತ್ಪತ್ತಿ ತಾಣಗಳನ್ನ ಪರಿಶೀಲಿಸಿದರು.‌

ಮನೆಗಳ ಅಕ್ಕಪಕ್ಕದಲ್ಲಿರುವ ತೆಂಗಿನ ಚಿಪ್ಪು, ಟಬ್ ಗಳು, ಟಯರ್ ಸೇರಿದಂತೆ ಮನೆಯ ಮಹಡಿ ಮೇಲೆ ನಿಂತಿರುವ ನೀರಿನಲ್ಲಿ ಈಡಿಸ್ ಸೊಳ್ಳೆಯ ಲಾರ್ವಾಗಳು ಉತ್ಪತ್ತಿಯಾಗಿರುವ ಸ್ಥಳಗಳನ್ನ ಪರಿಶೀಲಿಸಿದ ಸಚಿವರು, ಲಾರ್ವಾ ನಾಶಪಡಿಸಲು ಆರೋಗ್ಯ ಇಲಾಖೆ ಸಿಬ್ಬಂದಿಗಳು ಕೈಗೊಳ್ಳುತ್ತಿರುವ ಕ್ರಮಗಳನ್ನ ವೀಕ್ಷಿಸಿದರು. ಈ ಬಗ್ಗೆ ಎಚ್ಚರಿಕೆ ವಹಿಸುವಂತೆ ಸ್ಥಳೀಯ ನಿವಾಸಿಗಳಿಗೆ ಸಲಹೆ ನೀಡಿದರು.‌

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ದಿನೇಶ್ ಗುಂಡೂರಾವ್, ಡೆಂಗಿ ನಿಯಂತ್ರಣಕ್ಕೆ ಈಡಿಸ್ ಸೊಳ್ಳೆಯ ಉತ್ಪತ್ತಿ ತಾಣಗಳನ್ನ ನಾಶಪಡಿಸುವ ನಿಟ್ಟಿನಲ್ಲಿ ಪ್ರತಿ ಶುಕ್ರವಾರ ಆರೋಗ್ಯ ಇಲಾಖೆ ಅಭಿಯಾನದ ರೀತಿಯಲ್ಲಿ ಕಾರ್ಯಕ್ರಮವನ್ನ ಹಾಕಿಕೊಂಡಿದೆ. ಸಾರ್ವಜನಿಕರು ಇಲಾಖೆಯೊಂದಿಗೆ ಕೈಜೋಡಿಸಬೇಕು. ಆರೋಗ್ಯ ಸಿಬ್ಬಂದಿಗಳು ಪ್ರತಿ ಮನೆಗಳಿಗೆ ತೆರಳಿ ಜನರಲ್ಲಿ ಜಾಗೃತಿ ಮೂಡಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಜನರು ತಮ್ಮ ಮನೆಯ ಸುತ್ತಮುತ್ತಲಿನ ಸ್ಥಳಗಳಲ್ಲಿ ನೀರು ನಿಲ್ಲದಂತೆ ಎಚ್ವರಿಕೆ ವಹಿಸುವುದು ಅಗತ್ಯ. ಈಡಿಸ್ ಸೊಳ್ಳೆಯ ಉತ್ಪತ್ತಿ ತಾಣಗಳನ್ನ ಪತ್ತೆ ಹಚ್ಚಿ ಅದನ್ನ ನಾಶಪಡಿಸುವ ಕಾರ್ಯ ನಡೆಯುತ್ತಿದೆ.

ಡೆಂಗಿ ಜ್ವರ ಹೆಚ್ಚು ಕಂಡುಬಂದಿರುವ ಹಾಟ್ ಸ್ಪಾಟ್ ಗಳನ್ನ ಗುರುತಿಸಿ, ಫೀವರ್ ಕ್ಲಿನಿಕ್ ಗಳನ್ನ ತೆರಯಲು ಸೂಚಿಸಲಾಗಿದೆ. ಇಂಥಹ ಸ್ಥಳಗಳಲ್ಲಿ ಯಾರಿಗೆ ಜ್ವರ ಬಂದರು ಡೆಂಗಿ ಟೆಸ್ಟಿಂಗ್ ನಡೆಸಿ ಸಾಧ್ಯವಾದಷ್ಟು ಮುಂಚಿತವಾಗಿಯೇ ಪತ್ತೆ ಮಾಡಿ ಚಿಕಿತ್ಸೆ ಒದಗಿಸಲು ಸೂಚಿಸಲಾಗಿದೆ. ಇದರಿಂದ ಸಾವುಗಳನ್ನ ತಡೆಯಲು ಸಾಧ್ಯ. ಡೆಂಗಿ ನಿಯಂತ್ರಣದಲ್ಲಿ ಆರೋಗ್ಯ ಇಲಾಖೆ ಜೊತೆಗೆ ಗ್ರಾಮೀಣಾಭಿವೃದ್ದಿ ಇಲಾಖೆ, ಜಿಲ್ಲಾಡಳಿತ, ಸ್ಥಳೀಯ ಪಾಲಿಕೆ ಅಧಿಕಾರಿಗಳು ಹಾಗೂ ಶಿಕ್ಷಕರನ್ನ ಬಳಸಿಕೊಳ್ಳಲಾಗುತ್ತಿದೆ ಎಂದು ಇದೇ ವೇಳೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.‌


Delete Edit


share
ವಾರ್ತಾಭಾರತಿ
ವಾರ್ತಾಭಾರತಿ
Next Story
X