ಬೆಂಗಳೂರು ಮಾನವ-ಆನೆ ಸಂಘರ್ಷಕ್ಕೆ ‘ಆನೆಧಾಮ’ ಪರಿಹಾರ: ಸಚಿವ ಈಶ್ವರ ಖಂಡ್ರೆ

ಸಚಿವ ಈಶ್ವರ ಖಂಡ್ರೆ
ಬೆಂಗಳೂರು: ರಾಜ್ಯದ ಕಾಡಿನಂಚಿನ ಗ್ರಾಮಗಳಲ್ಲಿನ ಆನೆ-ಮಾನವ ಸಂಘರ್ಷಕ್ಕೆ ಆನೆಧಾಮ ಪರಿಹಾರವಾಗಬಲ್ಲದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಖಂಡ್ರೆ ಹೇಳಿದ್ದಾರೆ.
ಮಂಗಳವಾರ ವಿಕಾಸಸೌಧದಲ್ಲಿ ನಡೆದ 6342 ಗ್ರಾಮ ಗ್ರಂಥಾಲಯಗಳಿಗೆ ಚಾಲನೆ ಕಾರ್ಯಕ್ರಮದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಾವು ಈ ಹಿಂದೆ ಅರಣ್ಯ ಸಚಿವನಾಗಿದ್ದಾಗ ಈ ಯೋಜನೆ ರೂಪಿಸಿದ್ದೆ, ಆದರೆ ಕೇಂದ್ರ ಸರಕಾರ ಹುಲಿ ಸಂರಕ್ಷಿತ ಧಾಮದಲ್ಲಿ ಇದಕ್ಕೆ ಅವಕಾಶ ನೀಡಲು ಸಾಧ್ಯವಿಲ್ಲ ಎಂದು ತಿರಸ್ಕರಿಸಿತ್ತು ಎಂದರು.
ತೋಟಗಳಲ್ಲೇ ಹುಟ್ಟಿ, ತೋಟದಲ್ಲೇ ಬೆಳೆಯುವ ಆನೆಗಳಿಂದ ಸಮಸ್ಯೆ ಹೆಚ್ಚಾಗಿದೆ. ಇಂತಹ ಆನೆಗಳನ್ನು ಆನೆಧಾಮದಲ್ಲಿ ಬಿಟ್ಟರೆ ಸಮಸ್ಯೆ ನಿಯಂತ್ರಿಸಬಹುದು ಎಂದ ಅವರು, ರಾಮಲಿಂಗಾರೆಡ್ಡಿ ಅವರು ಹಿರಿಯ ಮತ್ತು ಅನುಭವಿ ಸಚಿವರಾಗಿದ್ದು, ಅವರು ಈಗಾಗಲೇ ಸಬೆ ನಡೆಸುವುದಾಗಿ ತಿಳಿಸಿದ್ದಾರೆ. ಅವರು ಈ ಸಮಸ್ಯೆಗೆ ಪರಿಹಾರ ಒದಗಿಸುತ್ತಾರೆ ಎಂದು ತಿಳಿಸಿದರು.
Next Story




