Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಗ್ಯಾರಂಟಿ ಯೋಜನೆ ಇಲ್ಲದಿದ್ದರೆ ಆರ್ಥಿಕ...

ಗ್ಯಾರಂಟಿ ಯೋಜನೆ ಇಲ್ಲದಿದ್ದರೆ ಆರ್ಥಿಕ ನಿರ್ವಹಣೆ ಸುಲಭ ಇತ್ತು : ಸಚಿವ ಎಚ್.ಸಿ.ಬಾಲಕೃಷ್ಣ

ವಾರ್ತಾಭಾರತಿವಾರ್ತಾಭಾರತಿ27 Sept 2026 6:26 PM IST
share
ಗ್ಯಾರಂಟಿ ಯೋಜನೆ ಇಲ್ಲದಿದ್ದರೆ ಆರ್ಥಿಕ ನಿರ್ವಹಣೆ ಸುಲಭ ಇತ್ತು : ಸಚಿವ ಎಚ್.ಸಿ.ಬಾಲಕೃಷ್ಣ

ಬೆಂಗಳೂರು : ‘ಗೃಹಲಕ್ಷ್ಮೀ ಸೇರಿದಂತೆ ರಾಜ್ಯ ಸರಕಾರದ ಐದು ಗ್ಯಾರಂಟಿ ಯೋಜನೆ ಜಾರಿಗೆ ಬರದೆ ಇದ್ದಿದ್ದರೆ ಆರ್ಥಿಕ ನಿರ್ವಹಣೆ ಇನ್ನಷ್ಟು ಸುಲಭವಾಗುತ್ತಿತ್ತು’ ಎಂದು ನಗರಾಭಿವೃದ್ಧಿ ಸಚಿವ ಎಚ್.ಸಿ. ಬಾಲಕೃಷ್ಣ, ಗ್ಯಾರಂಟಿಗಳ ಅನುಷ್ಟಾನಕ್ಕೆ ಸಂಬಂಧಿಸಿದಂತೆ ಪರೋಕ್ಷವಾಗಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ರವಿವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಐದು ಗ್ಯಾರಂಟಿ ಯೋಜನೆಗಳು ಇಲ್ಲದಿದ್ದರೆ ಇವೆಲ್ಲವೂ ನಮಗೆ ಇಷ್ಟು ದೊಡ್ಡ ಸಮಸ್ಯೆಗಳಾಗಿ ಕಾಣುತ್ತಿರಲಿಲ್ಲ. ಎಲ್ಲವನ್ನೂ ಸುಲಭವಾಗಿ ನಿರ್ವಹಿಸಬಹುದಿತ್ತು. ಆದರೆ ಸರಕಾರ ನಡೆಸಬೇಕಾಗಿದೆ. ವ್ಯವಸ್ಥೆ ಮತ್ತು ಬಜೆಟ್‍ನೊಳಗೆ ಎಲ್ಲವನ್ನೂ ನಿರ್ವಹಿಸಬೇಕಿದೆ ಎಂದು ಹೇಳಿದರು.

ಐದು ಗ್ಯಾರಂಟಿ ಯೋಜನೆಗಳನ್ನು ಜನರ ಕಲ್ಯಾಣಕ್ಕಾಗಿ ಜಾರಿಗೊಳಿಸಲಾಗಿದೆ. ಗೃಹಜ್ಯೋತಿ ಯೋಜನೆಯಡಿ ಅರ್ಹ ಕುಟುಂಬಗಳಿಗೆ ನಿಗದಿತ ಮಿತಿಯವರೆಗೆ ಉಚಿತ ವಿದ್ಯುತ್, ಗೃಹಲಕ್ಷಿ ಯೋಜನೆಯಡಿ ಅರ್ಹ ಮಹಿಳಾ ಕುಟುಂಬ ಮುಖ್ಯಸ್ಥರಿಗೆ ಮಾಸಿಕ 2ಸಾವಿರ ರೂ., ‘ಶಕ್ತಿ’ ಯೋಜನೆಯಡಿ ಸರಕಾರಿ ಸಾಮಾನ್ಯ ಬಸ್‍ಗಳಲ್ಲಿ ಮಹಿಳೆಯರು ಮತ್ತು ತೃತೀಯ ಲಿಂಗಿಗಳಿಗೆ ಉಚಿತ ಪ್ರಯಾಣ, ಅನ್ನಭಾಗ್ಯ ಯೋಜನೆಯಡಿ ಬಿಪಿಎಲ್ ಕುಟುಂಬಗಳಿಗೆ ಆಹಾರಧಾನ್ಯ ಹಾಗೂ ಯುವನಿಧಿ ಯೋಜನೆಯಡಿ ಅರ್ಹ ಪದವೀಧರರು ಮತ್ತು ಡಿಪ್ಲೊ ಮಾ ಪಡೆದವರಿಗೆ ನಿರುದ್ಯೋಗ ಭತ್ಯೆ ನೀಡಲಾಗುತ್ತಿದೆ. ಜನರ ಕಲ್ಯಾಣಕ್ಕಾಗಿ ನಾವು ಈ ಗ್ಯಾರಂಟಿಗಳನ್ನು ನೀಡಿದ್ದೇವೆ ಎಂದರು.

ಬರಗಾಲ ಬಂದಾಗ ರೈತರಿಗೆ ಆರ್ಥಿಕ ನೆರವು ನೀಡಬೇಕಾಗುತ್ತದೆ. ರೈತರೂ ಪ್ರತಿಭಟನೆ ನಡೆಸುತ್ತಾರೆ. ಗ್ಯಾರಂಟಿ ಯೋಜನೆಗಳ ಪ್ರಯೋಜನ ಪಡೆಯುತ್ತಿರುವವರೂ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಎಲ್ಲ ಸಮಸ್ಯೆಗಳ ನಡುವೆ ನಾವು ಸಿಲುಕಿಕೊಂಡು ನಿರ್ವಹಿಸಲು ಕಷ್ಟಪಡುತ್ತಿದ್ದೇವೆ ಎಂದ ಅವರು, ಗ್ಯಾರಂಟಿ ಯೋಜನೆಗಳ ಅನುಷ್ಠಾನವನ್ನು ಸ್ಥಗಿತಗೊಳಿಸುವ ಯಾವುದೇ ಉದ್ದೇಶ ಸರಕಾರಕ್ಕಾಗಲಿ, ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗಾಗಲಿ ಇಲ್ಲ ಎಂದು ಅವರು ಸ್ಪಷ್ಟಪಡಿಸಿದರು.

Tags

Minister H.C. BalakrishnaGuarantees
share
ವಾರ್ತಾಭಾರತಿ
ವಾರ್ತಾಭಾರತಿ
Next Story
X