Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಪ್ರಧಾನಿ ಜನ ಸಾಮಾನ್ಯರ ದೂತರೇ ಹೊರತು,...

ಪ್ರಧಾನಿ ಜನ ಸಾಮಾನ್ಯರ ದೂತರೇ ಹೊರತು, ದೇವದೂತರಲ್ಲ : ಸಚಿವ ಎಚ್.ಸಿ.ಮಹದೇವಪ್ಪ

ವಾರ್ತಾಭಾರತಿವಾರ್ತಾಭಾರತಿ25 May 2024 9:02 PM IST
share
ಪ್ರಧಾನಿ ಜನ ಸಾಮಾನ್ಯರ ದೂತರೇ ಹೊರತು, ದೇವದೂತರಲ್ಲ : ಸಚಿವ ಎಚ್.ಸಿ.ಮಹದೇವಪ್ಪ

ಬೆಂಗಳೂರು : ಜನರಿಂದಲೆ ‘ಭಗವಾನ್’ ಎಂದು ಕರೆಸಿಕೊಂಡ ಗೌತಮ ಬುದ್ಧ ತಾನು ಎಲ್ಲರಂತೆಯೆ ಸಾಮಾನ್ಯ ಎಂದು ಹೇಳಿಕೊಂಡಿರುವಾಗ, ಜನರ ಬದುಕಿಗೆ ಎಲ್ಲ ರೀತಿಯಲ್ಲೂ ತೊಂದರೆ ಉಂಟು ಮಾಡಿ, ಅಸಮಾತೆಯ ಸಮಾಜದ ನಿರ್ಮಾಣದ ದಿಕ್ಕಿನೆಡೆ ಆಡಳಿತ ನಡೆಸಿರುವ ಪ್ರಧಾನಿ ಮೋದಿ ತಮ್ಮನ್ನು ತಾವೆ ದೇವದೂತ ಎನ್ನುತ್ತಿರುವುದು ಮೂಢನಂಬಿಕೆಯ ಸಮಾಜ ನಿರ್ಮಾಣದ ಸ್ಪಷ್ಟ ಹೆಜ್ಜೆ ಆಗಿದೆ ಎಂದು ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ.ಮಹದೇವಪ್ಪ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಶನಿವಾರ ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಭಾರತವು ಜಗತ್ತು ಕಂಡಂತಹ ಮಹಾನ್ ದೇಶವಾಗಿದ್ದು, ಈ ನೆಲದಲ್ಲಿ ಬುದ್ಧನಂತಹ ಮಹನೀಯರು ಜನಿಸಿದ್ದಾರೆ. ಬುದ್ದ ಪ್ರಪಂಚದ ಶ್ರೇಷ್ಠ ಸಂತ. ಆತನ ಬೋಧನೆಗಳ ಕುರಿತು ವಿಶ್ವದ ಮಹಾನ್ ವಿಜ್ಞಾನಿ ಆಲ್ಬರ್ಟ್ ಐನ್ ಸ್ಟೈನ್ ಅವರು ‘ಮನುಕುಲದ ಉದ್ಧಾರಕ್ಕೆ ವಿಜ್ಞಾನವು ಅಗತ್ಯವಾಗಿರುವ ಹಾಗೆ ಬುದ್ಧನ ಉಪದೇಶಗಳೂ ಕೂಡಾ ಅಷ್ಟೇ ಉಪಯುಕ್ತವಾಗಿವೆ’ ಎಂದು ಹೇಳುತ್ತಾರೆ ಎಂದು ತಿಳಿಸಿದ್ದಾರೆ.

ಮನುಕುಲದ ಉದ್ಧಾರಕ್ಕಾಗಿ ಬಂದ ಬುದ್ಧ ಸ್ವಾರ್ಥಿಯಾಗದೇ ಮನುಷ್ಯರೆಲ್ಲರೂ ಸಮಾನರು ಎಂದು ಹೇಳಿ ಜಗದ ಕಣ್ಣು ತೆರೆಸಿದಾತ. ಎಲ್ಲರೂ ಆತನನ್ನು ದೇವರೆಂದು ಕರೆದರೂ ಕೂಡಾ ಆ ಕೂಗನ್ನು ಬದಿಗೊತ್ತಿ ಬಹಳಷ್ಟು ಸರಳವಾಗಿ ಜೀವಿಸಿದ್ಧ ಮಹಾವ್ಯಕ್ತಿ ಎಂದು ಸ್ವಾಮಿ ವಿವೇಕಾನಂದರು ಹೇಳುತ್ತಾರೆ ಎಂದು ಮಹದೇವಪ್ಪ ತಿಳಿಸಿದ್ದಾರೆ.

ಸ್ವತಃ ಗೌತಮ ಬುದ್ಧರೇ, ಎಷ್ಟೋ ಸಲ ಮಾತನಾಡುತ್ತಾ, ನಾನು ದೇವರೂ ಅಲ್ಲ, ದೇವದೂತನೂ ಅಲ್ಲ ಮಂತ್ರವಾದಿಯೂ ಅಲ್ಲ, ನಾನೂ ಕೂಡಾ ನಿಮ್ಮಂತೆಯೇ ಒಬ್ಬ ಮಹಾನ್ ವ್ಯಕ್ತಿ ಎಂದು ಅವರು ಹೇಳಿದ್ದರು. ಇದರ ಜೊತೆಗೆ ಬುದ್ಧನ ಬೋಧನೆಗಳೂ ಕೂಡಾ ಮೌಢ್ಯಕ್ಕೆ ವಿರುದ್ಧವಾಗಿ, ವೈಚಾರಿಕತೆಯ ಸಂದೇಶವನ್ನು ಸಾರುವಂತಹ ನಿಟ್ಟಿನಲ್ಲೇ ಸದಾ ಇವೆ ಎಂದು ಮಹದೇವಪ್ಪ ತಿಳಿಸಿದ್ದಾರೆ.

ಇಂತಹ ಬುದ್ಧ ಹುಟ್ಟಿದ ನಾಡಿನಲ್ಲಿ, ವಿಜ್ಞಾನ ತಂತ್ರಜ್ಞಾನವು ಇಷ್ಟೊಂದು ಮುಂದುವರೆದ ಕಾಲದಲ್ಲಿ ಪ್ರಧಾನಿ ಆಗಿರುವ ಮೋದಿ ತಾನೊಬ್ಬ ದೇವದೂತ ಎಂದು ಬಹಿರಂಗವಾಗಿ ಹೇಳುತ್ತಿರುವುದು ನಿಜಕ್ಕೂ ಹಾಸ್ಯಾಸ್ಪದ ಸಂಗತಿ. ಜನರಿಗೆ ನಿರಂತರವಾಗಿ ಸಹಾಯ ಮಾಡಿ ಅವರಿಂದಲೇ ಭಗವಾನ್ ಎಂದು ಕರೆಸಿಕೊಂಡ ಗೌತಮ ಬುದ್ಧರೇ ತನ್ನನ್ನು ತಾನು ಎಲ್ಲರಂತೆಯೇ ಸಾಮಾನ್ಯ ಎಂದು ಹೇಳಿಕೊಂಡಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಪ್ರಧಾನಿ ಜನ ಸಾಮಾನ್ಯರ ದೂತರೇ ಹೊರತು, ದೇವದೂತರಲ್ಲ ಎಂಬುದನ್ನು ಅಧಿಕಾರದ ಕೊನೆಯ ಹಂತದಲ್ಲಿರುವ ಮೋದಿ ಅರ್ಥ ಮಾಡಿಕೊಳ್ಳಬೇಕು. ಇನ್ನು ವಿದೇಶಕ್ಕೆ ಹೋದಾಗಲೆಲ್ಲಾ ತಾನು ಬುದ್ಧನ ನಾಡಿನಿಂದ ಬಂದಿದ್ದೇನೆ ಎಂದು ಹೇಳಿಕೊಳ್ಳುವ ಪ್ರಧಾನಿ, ಬುದ್ಧ ಹೇಳಿದ ವಿಚಾರಗಳನ್ನು ಓದಿ ತಿಳಿದುಕೊಳ್ಳಬೇಕು. ಇಲ್ಲದೇ ಇದ್ದಾಗ ಇಂತಹದ್ದೇ ಅರ್ಥವಿಲ್ಲದ, ಮೂಢನಂಬಿಕೆಯ ಮಾತುಗಳನ್ನೇ ಜನರು ಕೇಳಬೇಕಾಗುತ್ತದೆ ಎಂದು ಅವರು ಟೀಕಿಸಿದ್ದಾರೆ.

ಸಮಾನತೆ, ಸಾಮರಸ್ಯ ಮತ್ತು ಸೌಹಾರ್ದತೆಯ ಶತ್ರುವಾದ ಮೂಢನಂಬಿಕೆಯ ಮಾತುಗಳು ಪ್ರಜಾಪ್ರಭುತ್ವದ ಶತ್ರುಗಳು ಎಂಬುದನ್ನು ನಾನು ಮತ್ತೊಮ್ಮೆ ಹೇಳಲು ಬಯಸುತ್ತೇನೆ ಎಂದು ಮಹದೇವಪ್ಪ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X