Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಒಂದು ದೇಶ ಒಂದು ಚುನಾವಣೆ | ರಾಜ್ಯ...

ಒಂದು ದೇಶ ಒಂದು ಚುನಾವಣೆ | ರಾಜ್ಯ ವಿರೋಧಿ ಧೋರಣೆ : ಸಚಿವ ಎಚ್.ಸಿ.ಮಹದೇವಪ್ಪ

ವಾರ್ತಾಭಾರತಿವಾರ್ತಾಭಾರತಿ20 Sept 2024 6:23 PM IST
share
ಒಂದು ದೇಶ ಒಂದು ಚುನಾವಣೆ | ರಾಜ್ಯ ವಿರೋಧಿ ಧೋರಣೆ : ಸಚಿವ ಎಚ್.ಸಿ.ಮಹದೇವಪ್ಪ

ಬೆಂಗಳೂರು : ‘ಒಂದು ದೇಶ ಒಂದು ಚುನಾವಣೆ’ ಎನ್ನುವುದು ಒಂದು ಹಾಸ್ಯಾಸ್ಪದ ಸಂಗತಿಯಾಗಿದ್ದು, ಸ್ಪಷ್ಟತೆ ಇಲ್ಲದ ಮತ್ತು ರಾಜ್ಯ ವಿರೋಧಿ ಧೋರಣೆಯ ಬಗ್ಗೆ ವಿಪಕ್ಷಗಳು ಗಂಭೀರವಾಗಿ ಹೋರಾಟ ಮಾಡುವಂತಾಗಬೇಕು. ಜತೆಗೆ ರಾಜ್ಯದ ಹಣಕಾಸಿನ ಮೂಲಕ ಚುನಾವಣಾ ವ್ಯವಸ್ಥೆಯಲ್ಲಿ ಸುಧಾರಣೆ ತರಲು ಎಲ್ಲರೂ ಒತ್ತಾಯಿಸಬೇಕು’ ಎಂದು ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ.ಮಹದೇವಪ್ಪ ತಿಳಿಸಿದ್ದಾರೆ.

ಶುಕ್ರವಾರ ಪ್ರಕಟಣೆ ನೀಡಿರುವ ಅವರು, ‘ಆಡಳಿತಾತ್ಮಕವಾಗಿ ಎಲ್ಲ ವಿಧದಲ್ಲೂ ವೈಫಲ್ಯ ಹೊಂದಿರುವ ಕೇಂದ್ರ ಸರಕಾರವು, ಹತ್ತು ವರ್ಷಗಳಿಂದಲೂ ಚುನಾವಣೆಗಳನ್ನು ಮಾಡುವುದರಲ್ಲಿ ಮತ್ತು ಕೋಮು ದ್ವೇಷದ ಮೂಲಕ ದೇಶದ ಆಂತರಿಕ ವ್ಯವಸ್ಥೆಯನ್ನು ಅಸ್ಥಿರಗೊಳಿಸುವುದರಲ್ಲಿ ತೋರಿಸುವ ಆಸಕ್ತಿಯನ್ನು, ಬೇರಾವ ಒಳ್ಳೆಯ ವಿಷಯದಲ್ಲಿ ತೋರಿಸಿದ್ದನ್ನು ನಾನು ಕಾಣಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

‘ಇದೀಗ ನಮ್ಮ ದೇಶದಲ್ಲಿರುವುದು ಒಕ್ಕೂಟ ವ್ಯವಸ್ಥೆ ಎಂಬ ಸಂಗತಿಯನ್ನು ಸಂಪೂರ್ಣವಾಗಿ ಮರೆತಿರುವ ಕೇಂದ್ರ ಸರಕಾರವು ಒಂದು ದೇಶ ಒಂದು ಚುನಾವಣೆಯನ್ನು ಮಾಡಲು ಹೊರಟಿರುವುದನ್ನು ನಾನು ಖಂಡಿಸುತ್ತೇನೆ. ನೆಲ ಜಲ ಮತ್ತು ಭಾಷೆಯ ವಿಷಯದಲ್ಲಿ ಸಾಕಷ್ಟು ವೈವಿಧ್ಯಮಯ ಸನ್ನಿವೇಶವನ್ನು ಹೊಂದಿರುವ ರಾಜ್ಯಗಳು ಭಾಷಾವಾರು ಪ್ರಾಂತ್ಯಗಳಾಗಿ ವಿಂಗಡನೆ ಆದ ಮೇಲೆ ಒಕ್ಕೂಟ ವ್ಯವಸ್ಥೆಯ ಭಾಗವಾಗಿ ತಮ್ಮದೇ ಆದ ಕೆಲವೊಂದು ಅಧಿಕಾರವನ್ನು ಪಡೆದಿವೆ.

ಹೀಗಿರುವ ರಾಜ್ಯಗಳಿಗೆ ಇರುವಂತಹ ಚುನಾವಣಾ ವ್ಯಾಪ್ತಿಯನ್ನು ಬದಲಿಸುವಂತಹ ಕೆಲಸ ಮಾಡುತ್ತಿರುವ ಕೇಂದ್ರ ಸರಕಾರ ರಾಜ್ಯದ ಅಸ್ತಿತ್ವವನ್ನು ವಿಪರೀತವಾಗಿ ಅವಮಾನಿಸುತ್ತಿದೆ. ಚುನಾವಣಾ ವ್ಯವಸ್ಥೆಯಲ್ಲಿ ಅಕ್ರಮಗಳು ನಿಲ್ಲಬೇಕಾದರೆ, ಆಯಾ ರಾಜ್ಯಗಳೇ ಚುನಾವಣಾ ವ್ಯವಸ್ಥೆ ನಡೆಯಲು ಹಣಕಾಸನ್ನು ಒದಗಿಸಬೇಕು. ಆಗ ಮಾತ್ರ ಚುನಾವಣಾ ವ್ಯವಸ್ಥೆಯಲ್ಲಿ ಅಗತ್ಯ ಬದಲಾವಣೆ ತರಬಹುದು ಎಂದು ಅವರು ಪ್ರತಿಪಾದಿಸಿದ್ದಾರೆ.

ಈ ದಿಸೆಯಲ್ಲಿ ಕೇಂದ್ರ ಸರಕಾರ ಯೋಚಿಸಬೇಕೇ ವಿನಃ, ಒಂದು ದೇಶ ಒಂದು ಚುನಾವಣೆ ಎಂಬುದಾಗಿ ಅಲ್ಲ. ಇನ್ನೂ ಮುಖ್ಯವಾಗಿ ನೋಡುವುದಾದರೆ ಕಳೆದ ಬಾರಿ ಸೋಲುವ ಭಯದಿಂದ ಲೋಕಸಭೆ ಚುನಾವಣೆಯನ್ನೇ ಏಳು ಹಂತದಲ್ಲಿ ನಡೆಸಿದ ಇವರು, ಜಮ್ಮು ಮತ್ತು ಕಾಶ್ಮೀರ ಚುನಾವಣೆಯನ್ನು ಒಟ್ಟಾಗಿ ನಡೆಸಿದರೆ ಎಲ್ಲಿ ಅದರ ಮೇಲಿನ ನಿಯಂತ್ರಣ ಕೈತಪ್ಪುವುದೋ ಎಂದು ಹೆದರಿ ಪ್ರತ್ಯೇಕವಾಗಿ ಈ ರಾಜ್ಯಗಳ ಚುನಾವಣೆ ನಡೆಸುತ್ತಿದ್ದಾರೆ ಎಂದು ಅವರು ದೂರಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X