Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಎಸ್‍ಸಿ-ಎಸ್‍ಟಿ ವರ್ಗದವರು ಮಾಧ್ಯಮ...

ಎಸ್‍ಸಿ-ಎಸ್‍ಟಿ ವರ್ಗದವರು ಮಾಧ್ಯಮ ಕೇತ್ರದಲ್ಲಿ ಕೆಲಸ ಮಾಡಲು ಆರ್ಥಿಕ ಶಕ್ತಿ ಅಗತ್ಯ : ಸಚಿವ ಎಚ್.ಸಿ.ಮಹದೇವಪ್ಪ

ವಾರ್ತಾಭಾರತಿವಾರ್ತಾಭಾರತಿ29 Nov 2024 8:41 PM IST
share
ಎಸ್‍ಸಿ-ಎಸ್‍ಟಿ ವರ್ಗದವರು ಮಾಧ್ಯಮ ಕೇತ್ರದಲ್ಲಿ ಕೆಲಸ ಮಾಡಲು ಆರ್ಥಿಕ ಶಕ್ತಿ ಅಗತ್ಯ : ಸಚಿವ ಎಚ್.ಸಿ.ಮಹದೇವಪ್ಪ

ಬೆಂಗಳೂರು: ಎಸ್‍ಟಿ-ಎಸ್‍ಟಿ, ಹಿಂದುಳಿದ ವರ್ಗಗಳು ಹಾಗೂ ಶೂದ್ರ ಸಮುದಾಯಗಳು ಮಾಧ್ಯಮ ಕ್ಷೇತ್ರದಲ್ಲಿ ಕೆಲಸ ಮಾಡಲು ಆರ್ಥಿಕ ಶಕ್ತಿ ಅಗತ್ಯ. ಕರ್ನಾಟಕ ಎಸ್‍ಟಿ-ಎಸ್‍ಟಿ ಪತ್ರಿಕಾ ಸಂಘದ ಬೇಡಿಕೆಗಳನ್ನು ಪರಿಶೀಲಿಸಿ, ಜಾರಿಗೊಳಿಸಲಾಗುದು ಎಂದು ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ.ಮಹದೇವಪ್ಪ ಭರವಸೆ ನೀಡಿದ್ದಾರೆ.

ಶುಕ್ರವಾರ ನಗರದ ಗಾಂಧಿ ಭವನದಲ್ಲಿ ರಾಜ್ಯ ಎಸ್‍ಟಿ-ಎಸ್‍ಟಿ ಪತ್ರಿಕಾ ಸಂಪಾದಕರ ಸಂಘದ ವತಿಯಿಂದ ಆಯೋಜಸಿದ್ದ ವಾರ್ಷಿಕ ದತ್ತಿ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಎಸ್‍ಟಿ-ಎಸ್‍ಟಿ, ಹಿಂದುಳಿದ ಮತ್ತು ಅಲ್ಪಸಂಖ್ಯಾತ ಸಮುದಾಯದವರು ಮಾಧ್ಯಮ ಕ್ಷೇತ್ರದಲ್ಲಿ ಇರುವುದು ಕಡಿಮೆ. ಡಾ.ಅಂಬೇಡ್ಕರ್ ‘ಮೂಕನಾಯಕ ಮತ್ತು ಬಹಿಷ್ಕೃತ ಭಾರತ’ ಪತ್ರಿಕೆಯನ್ನು ಪ್ರಾರಂಭಿಸಿದ್ದರು. ಗಾಂಧೀಜಿ, ಲೋಹಿಯಾ, ಬಾಲಗಂಗಾಧರ ತಿಲಕ್‍ರು ಕೂಡ ಪತ್ರಿಕೆ ನಡೆಸುತ್ತಿದ್ದರು. ಗಾಂಧೀಜಿ ಜನರ ಧ್ವನಿಯಾಗಿ ಕೆಲಸ ಮಾಡಲು ಪ್ರಯತ್ನ ಮಾಡಿದರೆ, ಡಾ.ಅಂಬೇಡ್ಕರ್ ಅವರು ಧ್ವನಿ ಇಲ್ಲದವರ ಧ್ವನಿಯಾಗಿ ಕೆಲಸ ಮಾಡಿದರು ಎಂದು ತಿಳಿಸಿದರು.

‘ನಮಗೆ ಬೇಕಾದ ಸಂವಿಧಾನ ಕೊಡಿ, ಮತದಾನದ ಹಕ್ಕನ್ನು ತೆಗೆದು ಹಾಕಿ’ ಎಂದು ಧಾರ್ಮಿಕ ಮುಖ್ಯಸ್ಥರು ಮಾತನಾಡುತ್ತಾರೆ. ದೇಶ ಇಂದು ಎಂತಹ ಅಪಾಯಕಾರಿ ಸನ್ನಿವೇಶದ ಕಡೆಗೆ ಜಾರುತ್ತಿದೆ ಎಂದು ಪತ್ರಕರ್ತರಿಗೆ ಅರ್ಥವಾಗುತಿದೆ. ಅದಕ್ಕಾಗಿ ಪತ್ರಿಕೆಗಳು ಜನರ ಬದುಕು ಭಾವನೆ, ಸಂಸ್ಕೃತಿ, ಪರಂಪರೆ, ಮೌಲ್ಯಗಳನ್ನು ಪ್ರತಿ ಬಿಂಬಿಸುವ ಕೆಲಸ ಮಾಡುಬೇಕು ಎಂದು ಮಹದೇವಪ್ಪ ಸಲಹೆ ನೀಡಿದರು.

ಸಂಸ್ಕೃತಿ ಎಂದರೆ ಧರ್ಮ ಎಂದು ತಿಳಿದುಕೊಳ್ಳಲಾಗಿದೆ. ಸಂಸ್ಕೃತಿ ಎನ್ನುವುದು ವೈವಿಧ್ಯ ಆಚಾರ ವಿಚಾರಗಳ ಬದುಕಿನ ವಿಶ್ಲೆಷಣೆ ಇದರ ತಳಹದಿಯ ಮೇಲೆ ಇರುವುದು ಧರ್ಮ. ಧರ್ಮದ ತಳಹದಿಯ ಮೇಲೆ ನಮ್ಮ ಸಂಸ್ಕೃತಿ ಇಲ್ಲ ಎಂದರು.

ಮಾಜಿ ಸಚಿವ ಎಚ್.ಆಂಜನೇಯ ಮಾತನಾಡಿ, ಸಚಿವ ಡಾ.ಮಹದೇವಪ್ಪ ಅವರು, ಎಸ್‍ಟಿ-ಎಸ್‍ಟಿ ಸಮುದಾಯದ ಪತ್ರಿಕೆಗಳಿಗೆ ಸರಕಾರ ಸರಿಯಾಗಿ ಜಾಹಿರಾತನ್ನು ನೀಡುವ ಮೂಲಕ ಆರ್ಥಿಕ ಬೆಂಬಲ ನೀಡಬೇಕು. ಎಸ್ಸಿಪಿ, ಟಿಎಸ್‍ಪಿ ಅಡಿಯಲ್ಲಿ 39 ಸಾವಿರ ಕೋಟಿ ರೂ.ಹಣ ಇದೆ. ಅದನ್ನು ಎಸ್‍ಟಿ-ಎಸ್‍ಟಿ ವರ್ಗದ ಜನರನ್ನು ಬಲಗೊಳಿಸಲು ಬಳಸಬೇಕು ಎಂದು ಅವರು ತಿಳಿಸಿದರು.

ಇದೇ ವೇಳೆ ಹಿರಿಯ ಪತ್ರಕರ್ತರಾದ ಜಿ.ಎನ್.ಮೋಹನ್‍ಗೆ ಡಾ.ಬಾಬಾ ಸಾಹೇಬ ಅಂಬೇಡ್ಕರ್ ದತ್ತಿ ಪ್ರಶಸ್ತಿ, ಬಿ.ಎಂ.ಹನೀಫ್‍ಗೆ ಬಿ.ರಾಚಯ್ಯ ದತ್ತಿ, ಮಾವಳ್ಳಿ ಶಂಕರ್‍ಗೆ ಪ್ರೊ.ಬಿ.ಕೃಷ್ಣಪ್ಪ ದತ್ತಿ ಪ್ರಶಸ್ತಿ, ಪತ್ರಕರ್ತೆ ಮಂಜುಳಾ ಹುಲಿಕುಂಟೇ ಅವರಿಗೆ ಬಿ.ಬಸವಲಿಂಗಪ್ಪ ದತ್ತಿ ಪ್ರಶಸ್ತಿ ಹಾಗೂ ಕೆ.ಏಕಾಂತಪ್ಪ, ಸೊಗಡು ವೆಂಕಟೇಶ್, ಮಂಜುಳಾ ಕಿರುಗಾವಲು, ಸುರೇಶ್ ಸಿಂಧೆ ಅವರಿಗೆ ಗೌರವ ಪ್ರಶಸ್ತಿ ಪ್ರಧಾನ ಮಾಡಲಾಯಿತು.

ಕಾರ್ಯಕ್ರಮದಲ್ಲಿ ಮಾಧ್ಯಮ ಅಕಾಡಮಿ ಅಧ್ಯಕ್ಷೆ ಆಯೇಷಾ ಖಾನಂ, ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು, ರಾಜ್ಯ ಎಸ್‍ಟಿ-ಎಸ್‍ಟಿ ಪತ್ರಿಕಾ ಸಂಪಾದಕರ ಸಂಘದ ಅಧ್ಯಕ್ಷ ಚೆಲುವರಾಜು, ಪ್ರಧಾನ ಕಾರ್ಯದರ್ಶಿ ಸೋಮಶೇಖರ್ ಕೆರಗೋಡು, ಪ್ರೆಸ್‍ಕ್ಲಬ್ ಕಾರ್ಯದರ್ಶಿ ಶಿವಕುಮಾರ್ ಬೆಳ್ಳಿತಟ್ಟೆ ಮತ್ತಿತರರು ಉಪಸ್ಥಿತರಿದ್ದರು.

‘ಮುಖ್ಯವಾಹಿನಿ ಮಾಧ್ಯಮಗಳಲ್ಲಿ ನಾವು ತುಂಬಾ ಚೆನ್ನಾಗಿ ಕೆಲಸ ಮಾಡಿದರೂ ಭಾಷೆ, ಬಟ್ಟೆ ಮತ್ತು ಜಾತಿಯ ಕಾರಣಕ್ಕಾಗಿ ನಾವು ನಮ್ಮ ಜಾತಿಯನ್ನು ಮುಚ್ಚಿಟ್ಟು ಕೆಲಸ ಮಾಡಬೇಕಾದ ಪರಿಸ್ಥಿತಿ ಇದೆ. ಬಹುತೇಕ ಮಾಧ್ಯಮಗಳ ಉನ್ನತಮಟ್ಟದ ಹುದ್ದೆಗಳನ್ನು ನೋಡಿದರೆ ಜಾತಿಯ ಹಿನ್ನೆಲೆ, ಬಣ್ಣದ ಆಧಾರದಲ್ಲಿಯೇ ಇರುತ್ತವೆ. ಅವರಿಗೆ ಸೃಜನಶೀಲತೆ ಇಲ್ಲದಿದ್ದರೂ, ಉನ್ನತ ಹುದ್ದೆಯಲ್ಲಿರುತ್ತಾರೆ. ನಮ್ಮಂತವರಿಗೆ ಅಲ್ಲಿ ಜಾಗವೇ ಸಿಗುವುದಿಲ್ಲ. ನಮ್ಮ ಅಸ್ತಿತ್ವವನ್ನು ತೋರಿಸಿಕೊಳ್ಳುವ ಆಸೆ ಇದ್ದರೂ ಅದು ಸಾಧ್ಯವಾಗುವುದಿಲ್ಲ’

-ಮಂಜುಳಾ ಹುಲಿಕುಂಟೆ, ಪತ್ರಕರ್ತೆ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X