Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ವನ್ಯ ಜೀವಿ ವಿಭಾಗದ ಮುಂಚೂಣಿ ಸಿಬ್ಬಂದಿಗೆ...

ವನ್ಯ ಜೀವಿ ವಿಭಾಗದ ಮುಂಚೂಣಿ ಸಿಬ್ಬಂದಿಗೆ ವಿಶೇಷ ಭತ್ಯೆ : ಸಚಿವ ಈಶ್ವರ್ ಖಂಡ್ರೆ

ವಾರ್ತಾಭಾರತಿವಾರ್ತಾಭಾರತಿ27 July 2024 1:22 PM IST
share
ವನ್ಯ ಜೀವಿ ವಿಭಾಗದ ಮುಂಚೂಣಿ ಸಿಬ್ಬಂದಿಗೆ ವಿಶೇಷ ಭತ್ಯೆ : ಸಚಿವ ಈಶ್ವರ್ ಖಂಡ್ರೆ

ಬೆಂಗಳೂರು : ವನ್ಯಜೀವಿ ವಿಭಾಗಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಮುಂಚೂಣಿ ಸಿಬ್ಬಂದಿಗಳಿಗೆ ಕಠಿಣ ಕೆಲಸದ ಭತ್ಯೆ (ಹಾರ್ಡ್ ಶಿಪ್ ಅಲೋಯನ್ಸ್)ಯನ್ನು ಮಂಜೂರು ಮಾಡಿದ್ದು, ಈ ಸಿಬ್ಬಂದಿಯ ಬಹು ದಿನಗಳ ಬೇಡಿಕೆ ಈಡೇರಿಸಲಾಗಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ್ ಬಿ ಖಂಡ್ರೆ ತಿಳಿಸಿದ್ದಾರೆ.

ವಲಯ ಅರಣ್ಯಾಧಿಕಾರಿ ಮತ್ತು ಉಪ ವಲಯ ಅರಣ್ಯಾಧಿಕಾರಿಗಳಿಗೆ ತಲಾ 3500, ಅರಣ್ಯ ರಕ್ಷಕರಿಗೆ 2700 ಹಾಗೂ ಡಿ ದರ್ಜೆ ನೌಕರರಿಗೆ 2000 ರೂ.ಗಳನ್ನು ಮಾಸಿಕ ನೀಡಲು ತೀರ್ಮಾನಿಸಿ ಆದೇಶ ಹೊರಡಿಸಲಾಗಿದೆ ಎಂದು ಅರಣ್ಯ ಸಚಿವರು ತಿಳಿಸಿದ್ದಾರೆ.

ರಾಜ್ಯದ ಚಿಕ್ಕಮಗಳೂರು, ಹಾಸನ, ಮೈಸೂರು, ಕೊಡಗು, ಚಾಮರಾಜನಗರ, ರಾಮನಗರ, ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನ ಹಾಗೂ ಬಂಡೀಪುರ ವ್ಯಾಪ್ತಿಯಲ್ಲಿ ಆನೆ ಹಾವಳಿ ಹೆಚ್ಚಾಗಿದ್ದು, ಇದರ ನಿಗ್ರಹಕ್ಕಾಗಿ ಆನೆ ಕಾರ್ಯಪಡೆ ರಚಿಸಲಾಗಿದ್ದು, ಇದರಲ್ಲಿ ಕಾರ್ಯ ನಿರ್ವಹಿಸುವ ಹೊರಗುತ್ತಿಗೆ ಸಿಬ್ಬಂದಿಯೂ ಸೇರಿದಂತೆ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಮಾಸಿಕ ಕರ್ತವ್ಯ ನಿರ್ವಹಿಸಿದ 6 ದಿನಗಳಿಗೆ 500 ರೂ. ಆಧಾರದಲ್ಲಿ ತಿಂಗಳಿಗೆ ಗರಿಷ್ಠ 2000 ರೂ. (ಷರತ್ತಿಗೆ ಒಳಪಟ್ಟು) ನೀಡಲು ಆದೇಶ ಹೊರಡಿಸಲಾಗಿದೆ ಎಂದು ತಿಳಿಸಿದ್ದಾರೆ.

ನಂಜನಗೂಡು, ಎಚ್.ಡಿ.ಕೋಟೆ, ಸರಗೂರು, ಟಿ. ನರಸೀಪುರ, ಮಂಡ್ಯ, ಪಾಂಡವಪುರ, ನಾಗಮಂಗಲ ಹಾಗೂ ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಚಿರತೆ ಕಾರ್ಯಪಡೆ, ವನ್ಯ ಜೀವಿಗಳನ್ನು ಹಿಮ್ಮೆಟ್ಟಿಸುವ ಕ್ಷಿಪ್ರ ಸ್ಪಂದನಾ ಪಡೆ ಸಿಬ್ಬಂದಿ ಮತ್ತು ಅರಣ್ಯದೊಳಗಿರುವ ಕಳ್ಳಬೇಟೆ ಶಿಬಿರಗಳಲ್ಲಿ ಕಾರ್ಯ ನಿರ್ವಹಿಸುವ ಅಧಿಕಾರಿ ಮತ್ತು ಸಿಬ್ಬಂದಿ ಹಾಗೂ ಹೊರಗುತ್ತಿಗೆ ನೌಕರರಿಗೂ ಇದು ಅನ್ವಯಿಸುತ್ತದೆ ಎಂದು ಈಶ್ವರ್ ಖಂಡ್ರೆ ತಿಳಿಸಿದ್ದಾರೆ.

ತಾವು ನಾಗರಹೊಳೆ ಮತ್ತು ಬಂಡೀಪುರ ಅಭಯಾರಣ್ಯಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಅಲ್ಲಿನ ಸಿಬ್ಬಂದಿ ಮತ್ತು ಹೊರಗುತ್ತಿಗೆ ನೌಕರರು ಚಳಿ, ಮಳೆ, ಗಾಳಿ ಎನ್ನದೆ, ವನ್ಯಜೀವಿಗಳ ದಾಳಿಯ ಅಪಾಯದ ನಡುವೆಯೂ ಅತ್ಯಂತ ಕ್ಲಿಷ್ಟಕರ ಪರಿಸ್ಥಿತಿಯಲ್ಲಿ ಕಾರ್ಯ ನಿರ್ವಹಿಸುವುದನ್ನು ಗಮನಿಸಿ, ಈ ವಿಶೇಷ ಭತ್ಯೆ ನೀಡಲು ತೀರ್ಮಾನಿಸಿದ್ದಾಗಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X