Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ವಿಜಯಪುರ ಜಿಲ್ಲೆ ಮಮದಾಪುರ ಅರಣ್ಯಕ್ಕೆ...

ವಿಜಯಪುರ ಜಿಲ್ಲೆ ಮಮದಾಪುರ ಅರಣ್ಯಕ್ಕೆ ಶ್ರೀ ಸಿದ್ದೇಶ್ವರ ಸ್ವಾಮಿ ಹೆಸರು : ಸಚಿವ ಈಶ್ವರ್ ಖಂಡ್ರೆ

ವಾರ್ತಾಭಾರತಿವಾರ್ತಾಭಾರತಿ16 Oct 2024 6:16 PM IST
share
ವಿಜಯಪುರ ಜಿಲ್ಲೆ ಮಮದಾಪುರ ಅರಣ್ಯಕ್ಕೆ ಶ್ರೀ ಸಿದ್ದೇಶ್ವರ ಸ್ವಾಮಿ ಹೆಸರು : ಸಚಿವ ಈಶ್ವರ್ ಖಂಡ್ರೆ

ಬೆಂಗಳೂರು : ವಿಜಯಪುರ ಜಿಲ್ಲೆಯ ಮಮದಾಪುರ ಗ್ರಾಮದ 1494 ಎಕರೆ 38 ಗುಂಟೆ ಅರಣ್ಯ ಪ್ರದೇಶಕ್ಕೆ ಶ್ರೀ ಸಿದ್ದೇಶ್ವರ ಸ್ವಾಮೀಜಿ ಜೀವವೈವಿಧ್ಯ ಪಾರಂಪರಿಕ ತಾಣ ಎಂದು ನಾಮಕರಣ ಮಾಡಲು ನಿರ್ಧರಿಸಲಾಗಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ್ ಖಂಡ್ರೆ ತಿಳಿಸಿದ್ದಾರೆ.

ಬುಧವಾರ ವಿಕಾಸಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತಮ್ಮ ಆಧ್ಯಾತ್ಮಿಕ ಬೋಧನೆಗಳಿಂದ ಜನಮನ ಗೆದ್ದಿದ್ದ ಸಿದ್ದೇಶ್ವರ ಸ್ವಾಮೀಜಿ ಪರಿಸರ ಸಂರಕ್ಷಣೆ ಮತ್ತು ಸಮುದಾಯ ಯೋಗಕ್ಷೇಮಕ್ಕೂ ದೊಡ್ಡ ಕೊಡುಗೆ ನೀಡಿದ್ದಾರೆ. ಶ್ರೀಗಳ ಸ್ಮರಣಾರ್ಥ ಅವರ 2ನೇ ಪುಣ್ಯ ಸ್ಮರಣೆಯ ದಿನವಾದ ಜ.2ರಂದು ವಿಜಯಪುರದಲ್ಲಿ ವಿಧ್ಯುಕ್ತವಾಗಿ ಶ್ರೀ ಸಿದ್ದೇಶ್ವರ ಸ್ವಾಮೀಜಿ ಜೀವವೈವಿಧ್ಯ ಪಾರಂಪರಿಕ ತಾಣ ಫಲಕವನ್ನು ಅನಾವರಣ ಮಾಡಲಾಗುವುದು ಎಂದು ತಿಳಿಸಿದರು.

ವಿವಿಧ ಕಾಲಾವಧಿಯಲ್ಲಿ ಮಮದಾಪುರ ಭಾಗದಲ್ಲಿನ ಅರಣ್ಯ ಪ್ರದೇಶಗಳ ಅಧಿಸೂಚನೆಯಾಗಿದ್ದು, ಪ್ರಸ್ತುತ ಸುಮಾರು 1494 ಎಕರೆ 38 ಗುಂಟೆ ವಿಸ್ತೀರ್ಣದ ಅರಣ್ಯವಿದೆ. ಪ್ರಾಣಿಸಂಕುಲ, ಪಕ್ಷಿ ಸಂಕುಲ, ಕೀಟ ಸಂಕುಲ ಮತ್ತು ಸಸ್ಯ ಸಂಕುಲದಿಂದ ಕೂಡಿರುವ ಶ್ರೀಮಂತ ಜೀವವೈವಿಧ್ಯತೆಯ ಈ ತಾಣಕ್ಕೆ ಸಿದ್ದೇಶ್ವರ ಸ್ವಾಮೀಜಿ ಜೀವವೈವೀಧ್ಯ ಪಾರಂಪರಿಕ ತಾಣ ಎಂದು ಜೀವವೈವಿಧ್ಯ ಕಾಯಿದೆ 2022ರ ಸೆಕ್ಷನ್ 37ರನ್ವಯ ಮರು ನಾಮಕರಣ ಮಾಡಲಾಗುತ್ತಿದೆ ಎಂದು ಅವರು ಮಾಹಿತಿ ನೀಡಿದರು.

ಮಮದಾಪುರದ ಅಧಿಸೂಚಿತ ಅರಣ್ಯ ಎಲೆ ಉದುರುವ ಕಾಡು ಮತ್ತು ಕುರುಚಲು ಕಾಡುಗಳಿಂದ ಕೂಡಿದ ಪ್ರದೇಶವಾಗಿದ್ದು, ಚಿರತೆಗಳು, ನರಿಗಳು, ಕತ್ತೆ ಕಿರುಬಗಳು ಮತ್ತು ಹಲವಾರು ಪ್ರಭೇದದ ಪಕ್ಷಿಗಳ ತಾಣವಾಗಿದೆ. ಸಸ್ಯ ಸಂಕುಲ, ಕೀಟ ಸಂಕುಲದ ನೆಲೆವೀಡೂ ಆಗಿದೆ ಎಂದು ಈಶ್ವರ್ ಖಂಡ್ರೆ ಹೇಳಿದರು.

ಬಿಜಾಪುರ, ಬಾಗಲಕೋಟೆ ಭಾಗದಲ್ಲಿ ಅರಣ್ಯ ಪ್ರದೇಶವೇ ಕಡಿಮೆ ಇದ್ದು, ಇರುವ ವನ ಪ್ರದೇಶವನ್ನು ಮತ್ತು ಇಲ್ಲಿನ ಜೀವ ವೈವಿಧ್ಯತೆಯನ್ನು ಸಂರಕ್ಷಿಸುವುದು ಇಂದಿನ ಅತ್ಯಗತ್ಯವಾಗಿದೆ. ಈ ನಿಟ್ಟಿನಲ್ಲಿ ಸಿದ್ಧೇಶ್ವರ ಶ್ರೀಗಳ ಹೆಸರನ್ನು ಈ ಕಾನನ ಪ್ರದೇಶಕ್ಕೆ ಇಡುವುದರಿಂದ ಜನರಲ್ಲಿ ಪರಿಸರ ಜಾಗೃತಿ ಮೂಡಿಸಲೂ ನೆರವಾಗಲಿದೆ ಎಂದು ಅವರು ಅಭಿಪ್ರಾಯಪಟ್ಟರು.

ಈ ಪಾರಂಪರಿಕ ಜೀವವೈವಿಧ್ಯ ತಾಣಕ್ಕೆ ಸಮುದಾಯ ಬೆಂಬಲವೂ ಲಭಿಸಲಿದೆ. ಸಿದ್ದೇಶ್ವರ ಸ್ವಾಮೀಜಿ ಅವರು, ಪರಿಸರದ ಆರೋಗ್ಯವು ಜನರ ಯೋಗಕ್ಷೇಮಕ್ಕೆ ನೇರವಾಗಿ ಸಂಬಂಧಿಸಿದೆ ಎಂದು ಪ್ರತಿಪಾದಿಸುತ್ತಿದ್ದರು. ಮಾನವ ಪ್ರಕೃತಿಯೊಂದಿಗೆ ಸಾಮರಸ್ಯದಿಂದ ಬದುಕಬೇಕು ಎಂದು ಹೇಳುತ್ತಿದ್ದರು. ಅವರ ಈ ನುಡಿಗಳು, ಇಂದಿಗೂ, ಎಂದೆಂದಿಗೂ ಸಾರ್ವಕಾಲಿಕವಾಗಿದ್ದು ಎಂದು ಅವರು ತಿಳಿಸಿದರು.

ಪಾರಂಪರಿಕ ತಾಣ ಘೋಷಣೆಯಿಂದ ಸ್ಥಳೀಯ ಜನರ ಅಥವಾ ಈ ಕಾಡನ್ನು ಅವಲಂಬಿಸಿರುವ ಆದಿವಾಸಿಗಳ ದೈನಂದಿನ ಬದುಕಿನ ಮೇಲೆ ಯಾವುದೇ ದುಷ್ಪರಿಣಾಮ ಬೀರುವುದಿಲ್ಲ ಎಂದು ಸ್ಪಷ್ಟಪಡಿಸಿದ ಅವರು, ಪಾರಂಪರಿಕ ತಾಣದ ನಿರ್ವಹಣೆಯಲ್ಲಿ ಸ್ಥಳೀಯ ಜನರು ಸಂಪೂರ್ಣ ಪಾಲ್ಗೊಳ್ಳಲು ನೆರವಾಗುತ್ತದೆ. ಆದರೆ, ಜೀವವೈವಿಧ್ಯತೆಯ ಸಂರಕ್ಷಣೆಗೆ ಬಾಧಕವಾಗುವ ಯಾವುದೇ ಚಟುವಟಿಕೆಗಳನ್ನು ಅನುಮತಿಸಲಾಗುವುದಿಲ್ಲ ಎಂದು ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಪರಿಸರ ಇಲಾಖೆಯ ಪ್ರಧಾನ ಕಾರ್ಯದರ್ಶಿ ವಿಜಯ ಮೋಹನ್ ರಾಜ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X