Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಕಾಡಿನೊಳಗಿನ ಜನವಸತಿ ಸ್ಥಳಾಂತರದ ಕುರಿತು...

ಕಾಡಿನೊಳಗಿನ ಜನವಸತಿ ಸ್ಥಳಾಂತರದ ಕುರಿತು ಪರಿಶೀಲನೆ : ಸಚಿವ ಈಶ್ವರ್ ಖಂಡ್ರೆ

ವಾರ್ತಾಭಾರತಿವಾರ್ತಾಭಾರತಿ10 Nov 2025 10:05 PM IST
share
ಕಾಡಿನೊಳಗಿನ ಜನವಸತಿ ಸ್ಥಳಾಂತರದ ಕುರಿತು ಪರಿಶೀಲನೆ : ಸಚಿವ ಈಶ್ವರ್ ಖಂಡ್ರೆ

ಬೆಂಗಳೂರು : ರಾಜ್ಯದಲ್ಲಿ ವನ್ಯಜೀವಿಗಳ ಸಂಖ್ಯೆಯಲ್ಲಿ ಹೆಚ್ಚಳವಾಗಿದ್ದು, ಕಾಡಿನೊಳಗಿರುವ ಜನವಸತಿಗಳನ್ನು ಸ್ಥಳಾಂತರಿಸುವ ಕುರಿತು ಪರಿಶೀಲಿಸಲಾಗುತ್ತಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ್ ಖಂಡ್ರೆ ತಿಳಿಸಿದ್ದಾರೆ.

ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ಕಾರ್ಕಳ ವ್ಯಾಪ್ತಿಯ ನಿವಾಸಿಗಳ ಪುನರ್ ವಸತಿ ಮತ್ತು ಪರಿಹಾರಕ್ಕೆ ಸಂಬಂಧಿಸಿದಂತೆ 2005ರ ಸರಕಾರಿ ಸುತ್ತೋಲೆ ಪುನರ್ ಪರಿಶೀಲಿಸಿ ಮರು ಆದೇಶ ಮಾಡುವಂತೆ ಕೋರಿ ಶಾಸಕ ಟಿ.ಡಿ.ರಾಜೇಗೌಡ ನೇತೃತ್ವದ ನಿಯೋಗವು ಸೋಮವಾರ ವಿಕಾಸಸೌಧದಲ್ಲಿ ಸಲ್ಲಿಸಿದ ಮನವಿ ಸ್ವೀಕರಿಸಿ ಅವರು ಮಾತನಾಡಿದರು.

ಹಿಂದೆ ವನ್ಯಜೀವಿಗಳ ಕಳ್ಳಬೇಟೆ ನಡೆಯುತ್ತಿತ್ತು. ಇಲಾಖೆ ಕಟ್ಟುನಿಟ್ಟಿನ ಕ್ರಮ ಕೈಗೊಂಡು ಇದನ್ನು ನಿಯಂತ್ರಿಸಿದ್ದು, ಉತ್ತಮ ಪರಿಸರವಿರುವುದರಿಂದ ವನ್ಯಜೀವಿಗಳ ಸಂಖ್ಯೆಯಲ್ಲಿ ಹೆಚ್ಚಳವಾಗಿದೆ. ಆದರೆ ಹೆಚ್ಚುತ್ತಿರುವ ವನ್ಯಜೀವಿಗಳ ಸಂಖ್ಯೆಗೆ ಅನುಗುಣವಾಗಿ ವನ ಪ್ರದೇಶ ಹೆಚ್ಚುತ್ತಿಲ್ಲ, ಇದರಿಂದ ಸಮಸ್ಯೆ ಉಲ್ಬಣಿಸುತ್ತಿದೆ ಎಂದು ಅವರು ಹೇಳಿದರು.

1972ರಲ್ಲಿ ಬಂಡೀಪುರದಲ್ಲಿ ಕೇವಲ 12 ಇದ್ದ ಹುಲಿಗಳ ಸಂಖ್ಯೆ ಇಂದು 170ಕ್ಕೂ ಹೆಚ್ಚಾಗಿದೆ, ಹೀಗಾಗಿ ದುರ್ಬಲ ಹುಲಿಗಳು ಕಾಡಿನಿಂದ ಹೊರಬರುತ್ತಿವೆ. ಹಗಲು ರಾತ್ರಿ ಇಲಾಖೆ ಶ್ರಮಿಸುತ್ತಿದ್ದರು, ಮಾನವ-ವನ್ಯಜೀವಿ ಸಂಘರ್ಷದ ಘಟನೆಗಳು ನಡೆಯುತ್ತಿವೆ. ಈ ಹಿನ್ನೆಲೆಯಲ್ಲಿ ವಿವಿಧ ಇಲಾಖೆಗಳೊಂದಿಗೆ ಸಮನ್ವಯ ಹೆಚ್ಚಿಸಲು ಮುಖ್ಯಮಂತ್ರಿ ನೇತೃತ್ವದಲ್ಲಿ ಶೀಘ್ರವೇ ಸಭೆ ನಡೆಯಲಿದೆ ಎಂದು ಈಶ್ವರ್ ಖಂಡ್ರೆ ತಿಳಿಸಿದರು.

ಅರಣ್ಯದೊಳಗಿರುವ ಜನವಸತಿಗಳನ್ನು ಸ್ಥಳಾಂತರದಿಂದ ಅರಣ್ಯವಾಸಿಗಳು ಮತ್ತು ಅವರ ಮಕ್ಕಳು ಸಮಾಜದ ಮುಖ್ಯವಾಹಿನಿಗೆ ಬರುತ್ತಾರೆ. ಜೊತೆಗೆ ಮಾನವ-ವನ್ಯಜೀವಿ ಸಂಘರ್ಷವೂ ಕಡಿಮೆ ಆಗುತ್ತದೆ. ಸ್ಥಳಾಂತರಕ್ಕೆ ಪರಿಹಾರ ನೀಡಬೇಕಾಗುತ್ತದೆ. ಇದನ್ನು ಒಂದೆ ಬಾರಿಗೆ ಮಾಡಲು ಸಾಧ್ಯವಿಲ್ಲ. ಹಂತ ಹಂತವಾಗಿ ಮಾಡಬೇಕಾಗುತ್ತದೆ. ಬಜೆಟ್ ನಲ್ಲಿ ಇದಕ್ಕೆ ಹಣ ಮೀಸಲಿಟ್ಟರೆ ಇದು ಸಾಧ್ಯವಾಗುತ್ತದೆ. ಈ ಬಗ್ಗೆ ಮುಖ್ಯಮಂತ್ರಿ ಜೊತೆ ಚರ್ಚಿಸಲಾಗುವುದು ಎಂದು ಅವರು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X