Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಜೆಜೆಎಂ ಕಾಮಗಾರಿ ಮುಗಿಸದ ಗುತ್ತಿಗೆದಾರರ...

ಜೆಜೆಎಂ ಕಾಮಗಾರಿ ಮುಗಿಸದ ಗುತ್ತಿಗೆದಾರರ ವಿರುದ್ಧ ಕಠಿಣ ಕ್ರಮ : ಸಚಿವ ಈಶ್ವರ್‌ ಖಂಡ್ರೆ

ವಾರ್ತಾಭಾರತಿವಾರ್ತಾಭಾರತಿ11 Sept 2026 5:36 PM IST
share
ಜೆಜೆಎಂ ಕಾಮಗಾರಿ ಮುಗಿಸದ ಗುತ್ತಿಗೆದಾರರ ವಿರುದ್ಧ ಕಠಿಣ ಕ್ರಮ : ಸಚಿವ ಈಶ್ವರ್‌ ಖಂಡ್ರೆ

ಬೆಂಗಳೂರು : ಜಲ ಜೀವನ ಅಭಿಯಾನದ ಅಡಿಯಲ್ಲಿ ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿಗಳು ಅವಧಿ ಮುಗಿದರೂ ಪೂರ್ಣವಾಗದಿರುವ ಬಗ್ಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ್‌ ಬಿ ಖಂಡ್ರೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸೂಚಿಸಿದ್ದಾರೆ.

ಬೆಂಗಳೂರಿನ ಇಲಾಖೆಯ ಆಯುಕ್ತಾಲಯದಲ್ಲಿಂದು ಪ್ರಗತಿ ಪರಿಶೀಲನಾ ಸಭೆ ನಡೆಸಿದ ಅವರು, ಕೇಂದ್ರ ಸರ್ಕಾರದ ಮಾನದಂಡಗಳ ಕಟ್ಟುನಿಟ್ಟಿನ ಪಾಲನೆ ಆಗದಿದ್ದರೆ, ರಾಜ್ಯದ ಮೇಲೆ ಆರ್ಥಿಕ ಹೊರೆ ಬೀಳುತ್ತದೆ. ಹೀಗಾಗಿ ಎಲ್ಲ ಕಾಮಗಾರಿಗಳನ್ನೂ ನಿಗದಿತ ಗಡುವಿನೊಳಗೆ ಪೂರ್ಣಗೊಳಿಸಲೇಬೇಕು ಎಂದು ಸ್ಪಷ್ಟ ಸೂಚನೆ ನೀಡಿದರು.

ಏಕಗ್ರಾಮ ಮತ್ತು ಬಹುಗ್ರಾಮ ಕುಡಿಯುವ ನೀರಿನ ಯೋಜನೆಗಳಿಗೆ 67 ಸಾವಿರ ಕೋಟಿ ರೂ. ವೆಚ್ಚ ಮಾಡಲಾಗುತ್ತಿದೆ. 39 ಸಾವಿರ ಏಕ ಗ್ರಾಮ ಕುಡಿಯುವ ನೀರಿನ ಯೋಜನೆ ಹಾಗೂ 130ಕ್ಕೂ ಅಧಿಕ ಬಹುಗ್ರಾಮ ಕುಡಿಯುವ ನೀರಿನ ಯೋಜನೆಗಳು ಅನುಷ್ಠಾನವಾಗುತ್ತಿದೆಯಾದರೂ ಕಾಮಗಾರಿ ವಿಳಂಬವಾಗಿರುವ ಕಾರಣ ಯೋಜನೆ ಉದ್ದೇಶವೇ ವಿಫಲವಾಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಎಲ್ಲ ಉಳಿಕೆ ಕಾಮಗಾರಿಗಳನ್ನು ಮುಂದಿನ ವರ್ಷ ಮಾರ್ಚ್ ಅಂತ್ಯದೊಳಗೆ ಮುಗಿಸಲೇಬೇಕು ಎಂದು ಗಡುವು ನೀಡಿದ ಈಶ್ವರ ಖಂಡ್ರೆ, ಈ ಬಗ್ಗೆ ಗುತ್ತಿಗೆದಾರರಿಂದ ಮುಚ್ಚಳಿಕೆ ಬರೆಸಿಕೊಳ್ಳುವಂತೆ ತಿಳಿಸಿದರು.

ಈಗ ನಡೆಯುತ್ತಿರುವ ಹಲವು ಕಾಮಗಾರಿಗಳಿಗೆ ನಿಗದಿ ಮಾಡಲಾಗಿದ್ದ ಅವಧಿ ಮುಗಿದಿದ್ದರೂ, ಕಾಮಗಾರಿ ಪೂರ್ಣಗೊಂಡಿಲ್ಲ. ಅಧಿಕಾರಿಗಳು ಏನು ಮಾಡುತ್ತಿದ್ದೀರಿ. ಕೇವಲ ನೋಟಿಸ್ ನೀಡಿದರೆ ಸಾಲದು. ಅಂತಿಮ ನೋಟಿಸ್ ನೀಡಿ ಕ್ರಮ ವಹಿಸಿ ಎಂದು ಸೂಚಿಸಿದರು.

ಗುತ್ತಿಗೆದಾರರಿಗೆ ನೋಟಿಸ್ ನೀಡಲು ಸೂಚನೆ:

ಏಕಗ್ರಾಮ ಮತ್ತು ಬಹುಗ್ರಾಮ ಕುಡಿಯುವ ನೀರಿನ ಯೋಜನೆಗಳ ಕಾಮಗಾರಿ ಕೈಗೊಂಡಿರುವ ಗುತ್ತಿಗೆದಾರರು ಅವಧಿ ಮುಗಿದರೂ ಕಾಮಗಾರಿ ಮುಗಿಸದೇ ಇದ್ದರೆ ಅವರಿಗೆ ನೋಟಿಸ್ ನೀಡಿ ನಿರ್ದಿಷ್ಟ ದಿನದೊಳಗೆ ಪೂರ್ಣಗೊಳಿಸಲು ತಿಳಿಸಿ. ಇಲ್ಲವಾದರೆ, ನಿಯಮಾನುಸಾರ ಅವರ ವಿರುದ್ಧ ಕ್ರಮ ಜರುಗಿಸಿ, ಆ ಗುತ್ತಿಗೆಯನ್ನೇ ರದ್ದು ಮಾಡಿ ಬೇರೆಯವರಿಗೆ ಕಾಮಗಾರಿ ವಹಿಸಿ ಎಂದು ಸೂಚಿಸಿದರು.

ಸಂಬಂಧಿತ ಅಧಿಕಾರಿಗಳು, ಎಂಜಿನಿಯರುಗಳು ತಮ್ಮ ತಮ್ಮ ವ್ಯಾಪ್ತಿಯಲ್ಲಿ ಏಕಗ್ರಾಮ ಮತ್ತು ಬಹುಗ್ರಾಮ ಕುಡಿಯುವ ನೀರಿನ ಕಾಮಗಾರಿಗಳ ಪ್ರಗತಿಯನ್ನು ವಾರಕ್ಕೆ ಒಮ್ಮೆಯಾದರೂ ಖುದ್ದು ಪರಿಶೀಲಿಸಬೇಕು. ಕಾಮಗಾರಿ ವಿಳಂಬವಾಗುತ್ತಿದ್ದರೆ ಆಯಾ ಹಂತದಲ್ಲೇ ನೋಟಿಸ್ ನೀಡಿ, ತ್ವರಿತವಾಗಿ ಮತ್ತು ಗುಣಮಟ್ಟದ ಕಾಮಗಾರಿ ನಡೆಯುವಂತೆ ನೋಡಿಕೊಳ್ಳಬೇಕು. ಇಲ್ಲವಾದರೆ ಕರ್ತವ್ಯಲೋಪ ಎಸಗಿದ ಎಂಜಿನಿಯರುಗಳ ವಿರುದ್ಧವೂ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಸಿದರು.

ಯಾವುದೇ ಕಾರಣಕ್ಕೂ ಕಾಮಗಾರಿಯ ಗುಣಮಟ್ಟದಲ್ಲಿ ರಾಜೀ ಆಗಬಾರದು. ಕಳಪೆ ಕಾಮಗಾರಿ ನಡೆದಿರುವ ಬಗ್ಗೆ ದೂರುಗಳು ಬಂದರೆ, ನಿಷ್ಪಕ್ಷಪಾತ ತನಿಖೆ ನಡೆಸಿ ಗುತ್ತಿಗೆದಾರರ ವಿರುದ್ಧವಷ್ಟೇ ಅಲ್ಲ, ನಿರ್ವಹಿಸಿದ ಅಧಿಕಾರಿಗಳ ವಿರುದ್ಧವೂ ಕ್ರಮ ಜರುಗಿಸಿ ಎಂದು ನಿರ್ದೇಶನ ನೀಡಿದರು.

ಕುಡಿಯುವ ನೀರಿನ ಯೋಜನೆ ಕಾಮಗಾರಿಗಳಲ್ಲಿ ವಿಳಂಬವಾದರೆ ಅದರ ಮೂಲ ಉದ್ದೇಶವೇ ವಿಫಲವಾಗುತ್ತದೆ. ಸರ್ಕಾರದ ವಿರುದ್ಧ ಜನಾಭಿಪ್ರಾಯವೂ ಪ್ರತೀಕೂಲವಾಗುತ್ತದೆ. ಅರಣ್ಯಭೂಮಿ, ರಾಷ್ಟ್ರೀಯ ಹೆದ್ದಾರಿಗಳನ್ನು ದಾಟಿ ಕೊಳವೆ ಮಾರ್ಗ ಅಳವಡಿಸುವ ಯೋಜನೆಗಳಿದ್ದರೆ ವಿಳಂಬ ಆಗುತ್ತದೆ. ಅಂತಹ ಸಮಸ್ಯೆ ಬಗೆಹರಿಸಲು ಪ್ರತ್ಯೇಕ ಸಭೆ ನಡೆಸಲಾಗುವುದು. ಆದರೆ, ಅನಗತ್ಯ ವಿಳಂಬವನ್ನು ಸಹಿಸಿಕೊಳ್ಳುವುದಿಲ್ಲ ಎಂದು ಈಶ್ವರ ಖಂಡ್ರೆ ಸ್ಪಷ್ಟಪಡಿಸಿದರು.

ಸಭೆಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಕಾರ್ಯದರ್ಶಿ ಸಮೀರ್ ಶುಕ್ಲ, ಗುತ್ತಿಗೆದಾರರು, ಹಿರಿಯ ಅಧಿಕಾರಿಗಳು ಪಾಲ್ಗೊಂಡಿದ್ದರು. ವಿವಿಧ ಜಿಲ್ಲೆಗಳ ಸಿಇಓಗಳು ವಿಡಿಯೋ ಕಾನ್ಫರೆನ್ಸ್ ಮೂಲಕ ಭಾಗಿಯಾಗಿದ್ದರು.

Tags

Minister Ishwar Khandre
share
ವಾರ್ತಾಭಾರತಿ
ವಾರ್ತಾಭಾರತಿ
Next Story
X