Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಬೇಸಿಗೆಯಲ್ಲಿ ಸಮರ್ಪಕ ವಿದ್ಯುತ್...

ಬೇಸಿಗೆಯಲ್ಲಿ ಸಮರ್ಪಕ ವಿದ್ಯುತ್ ಪೂರೈಕೆಗೆ ಕ್ರಮ : ಸಚಿವ ಕೆ.ಜೆ.ಜಾರ್ಜ್

ವಾರ್ತಾಭಾರತಿವಾರ್ತಾಭಾರತಿ9 Jan 2026 9:22 PM IST
share
ಬೇಸಿಗೆಯಲ್ಲಿ ಸಮರ್ಪಕ ವಿದ್ಯುತ್ ಪೂರೈಕೆಗೆ ಕ್ರಮ : ಸಚಿವ ಕೆ.ಜೆ.ಜಾರ್ಜ್
‘ಕೃಷಿ ಪಂಪ್‍ಸೆಟ್‍ಗಳಿಗೆ ಹಗಲು ವೇಳೆ 7 ಗಂಟೆ ವಿದ್ಯುತ್ ಪೂರೈಕೆ’

ಬೆಂಗಳೂರು : ಮುಂಬರುವ ಬೇಸಿಗೆಯಲ್ಲಿ ಬೇಡಿಕೆಗೆ ಅನುಸಾರವಾಗಿ ಸಮರ್ಪಕ ವಿದ್ಯುತ್ ಸರಬರಾಜಿಗೆ ಅಗತ್ಯ ಸಿದ್ಧತೆಗಳನ್ನು ಮಾಡಿಕೊಂಡು ಯಾವುದೇ ಕಾರಣಕ್ಕೂ ಲೋಡ್ ಶೆಡ್ಡಿಂಗ್‍ಗೆ ಅವಕಾಶವಾಗದಂತೆ ನೋಡಿಕೊಳ್ಳಬೇಕು ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್, ಇಂಧನ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಶುಕ್ರವಾರ ನಗರದಲ್ಲಿರುವ ಬೆಸ್ಕಾಂನ ಬೆಳಕು ಭವನದಲ್ಲಿ ಬೇಸಿಗೆಯಲ್ಲಿ ಸಮರ್ಪಕ ವಿದ್ಯುತ್ ಪೂರೈಕೆಗೆ ಸಂಬಂಧಿಸಿದಂತೆ ಇಂಧನ ಇಲಾಖೆಯ ಹಿರಿಯ ಅಧಿಕಾರಿಗಳ ಜತೆ ಸಭೆ ನಡೆಸಿದ ಅವರು, ಇಲಾಖೆ ಕೈಗೊಂಡಿರುವ ಪೂರ್ವ ಸಿದ್ಧತೆಗಳ ಬಗ್ಗೆ ಮಾಹಿತಿ ಪಡೆದರಲ್ಲದೆ, ಬೇಡಿಕೆ ಮತ್ತು ಪೂರೈಕೆಯಲ್ಲಿ ಸಮನ್ವಯತೆ ಸಾಧಿಸಲು ಅಗತ್ಯವಿರುವ ವಿದ್ಯುತ್ ಉತ್ಪಾದನೆ ಮತ್ತು ಖರೀದಿಗೆ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.

ಬೇಸಿಗೆಯಲ್ಲಿ ಅದರಲ್ಲೂ ಮುಖ್ಯವಾಗಿ ಮಾರ್ಚ್‍ನಿಂದ ಮೇ ಅಂತ್ಯದವರೆಗೆ ಮೂರು ತಿಂಗಳಲ್ಲಿ ವಿದ್ಯುತ್ ಬೇಡಿಕೆ ಎಷ್ಟಾಗಬಹುದು ಎಂಬುದನ್ನು ಈಗಲೇ ಲೆಕ್ಕಾಚಾರ ಮಾಡಿ ಅದಕ್ಕೆ ತಕ್ಕಂತೆ ಪೂರೈಸಲು ವಿದ್ಯುತ್ ಬ್ಯಾಂಕಿಂಗ್ ವ್ಯವಸ್ಥೆ ಮಾಡಿಕೊಳ್ಳಬೇಕು. ಹಗಲು ವೇಳೆ ಸೌರ ವಿದ್ಯುತ್ ಹೇರಳವಾಗಿ ಲಭ್ಯವಿರುವುದರಿಂದ ಅದನ್ನು ಬಳಸಿಕೊಂಡು ರಾತ್ರಿ ವೇಳೆ ಜಲ ಮತ್ತು ಕಲ್ಲಿದ್ದಲು ಆಧಾರಿತ ವಿದ್ಯುತ್ ಉತ್ಪಾದನೆಯನ್ನು ಹೆಚ್ಚಿಸುವ ಮೂಲಕ ಪೂರೈಕೆ-ಉತ್ಪಾದನೆಯಲ್ಲಿ ಸಮತೋಲನ ಕಾಯ್ದುಕೊಳ್ಳಬೇಕು ಎಂದು ಜಾರ್ಜ್ ಹೇಳಿದರು.

ಬೇಡಿಕೆಗೆ ತಕ್ಕಂತೆ ವಿದ್ಯುತ್ ಪೂರೈಸಲು ಈಗಿನಿಂದಲೆ ಸಿದ್ಧತೆ ಮಾಡಿಕೊಳ್ಳಬೇಕು. ವಿನಿಮಯ ಅಥವಾ ದೀರ್ಘಾವಧಿ ಖರೀದಿ ಆಧಾರದ ಮೇಲೆ ಅನ್ಯ ರಾಜ್ಯಗಳಿಂದ ವಿದ್ಯುತ್ ಪಡೆಯಲು ಹಾಗೂ ಸಕ್ಕರೆ ಜತೆಗೆ ವಿದ್ಯುತ್ ಉತ್ಪಾದನೆ ಮಾಡುವ ಕಾರ್ಖಾನೆಗಳೊಂದಿಗೆ ಈಗಲೆ ಒಪ್ಪಂದ ಮಾಡಿಕೊಳ್ಳಬೇಕು. ಇದರಿಂದ ಬೇಸಿಗೆಯಲ್ಲಿ ಹೆಚ್ಚುವರಿ ವಿದ್ಯುತ್ ಲಭ್ಯವಾದರೆ ಬೇರೆ ರಾಜ್ಯಗಳಿಗೆ ಮಾರಾಟ ಮಾಡಬಹುದು. ಆದರೆ, ಯಾವುದೆ ಕಾರಣಕ್ಕೂ ಕೊರತೆ ಉಂಟಾಗಬಾರದು ಎಂದು ಅವರು ತಿಳಿಸಿದರು.

ಕೃಷಿಗೆ ಹಗಲು 7 ಗಂಟೆ ವಿದ್ಯುತ್: ರಾಜ್ಯದ ಹಲವು ಭಾಗಗಳಲ್ಲಿ ಈಗಾಗಲೇ ಕುಸುಮ್- ಸಿ ಯೋಜನೆಯಡಿ ಫೀಡ್ ಸೋಲರೈಸೇಷನ್ ಮೂಲಕ ರೈತರ ಕೃಷಿ ಪಂಪ್ ಸೆಟ್ ಗಳಿಗೆ ಹಗಲು 7 ಗಂಟೆ ನಿರಂತರ ವಿದ್ಯುತ್ ಪೂರೈಸಲಾಗುತ್ತಿದೆ. ಪ್ರಸ್ತುತ ಸೌರ ವಿದ್ಯುತ್ ಉತ್ಪಾದನೆ ಹೆಚ್ಚಾಗಿರುವುದರಿಂದ ಇತರೆ ಭಾಗಗಳಲ್ಲೂ ಕೃಷಿ ಪಂಪ್ ಸೆಟ್ ಗಳಿಗೆ ಹಗಲು ನಿರಂತರ 7 ಗಂಟೆ ವಿದ್ಯುತ್ ಪೂರೈಕೆ ಮಾಡಬೇಕು ಎಂದು ಜಾರ್ಜ್ ನಿರ್ದೇಶನ ನೀಡಿದರು.

ಪಿಸಿಕೆಎಲ್ ಅಧಿಕಾರಿಗಳು ಮಾಹಿತಿ ನೀಡಿ, ಪ್ರಸಕ್ತ ಆರ್ಥಿಕ ವರ್ಷದಲ್ಲಿ ಡಿಸೆಂಬರ್ ತಿಂಗಳಲ್ಲಿ ದಾಖಲೆಯ 17,220 ಮೆಗಾವ್ಯಾಟ್ ವಿದ್ಯುತ್ ಬೇಡಿಕೆ ಬಂದಿದ್ದು, ಸಮರ್ಪಕವಾಗಿ ಪೂರೈಕೆ ಮಾಡಲಾಗಿದೆ. ಈ ಬಾರಿಯ ಬೇಸಿಗೆಯಲ್ಲಿ ಕಳೆದ ವರ್ಷಕ್ಕಿಂತ ಶೇ.5ರಷ್ಟು ಹೆಚ್ಚುವರಿ ವಿದ್ಯುತ್ ಬೇಡಿಕೆ ನಿರೀಕ್ಷಿಸಲಾಗಿದ್ದು, ಅದಕ್ಕೆ ತಕ್ಕಂತೆ ಪೂರೈಕೆಗೆ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಬೇಡಿಕೆ ಅವಧಿಯಲ್ಲಿ ಅಂದರೆ ಬೆಳಗ್ಗೆ ಮತ್ತು ಸಂಜೆ ಜಲ ವಿದ್ಯುತ್ ಮತ್ತು ಉಷ್ಣ ವಿದ್ಯುತ್ ಉತ್ಪಾದಿಸಿ ಪೂರೈಸಲಾಗುವುದು ಎಂದು ತಿಳಿಸಿದರು.

ಪ್ರಸ್ತುತ ರಾಜ್ಯದ ಜಲಾಶಯಗಳಲ್ಲಿ ಸಂಗ್ರಹವಾಗಿರುವ ನೀರಿನಲ್ಲಿ ಜುಲೈ ಅಂತ್ಯದವರೆಗೆ ಪ್ರತಿನಿತ್ಯ 33 ಮಿಲಿಯನ್ ಯೂನಿಟ್ ವಿದ್ಯುತ್ ಉತ್ಪಾದಿಸಬಹುದು. ಅದೇ ರೀತಿ ರಾಯಚೂರು, ಯರಮರಸ್ ಮತ್ತು ಬಳ್ಳಾರಿಯ ಉಷ್ಣ ವಿದ್ಯುತ್ ಸ್ಥಾವರಗಳಲ್ಲಿರುವ ಘಟಕಗಳನ್ನೂ ಬೇಸಿಗೆಯಲ್ಲಿ ಅಗತ್ಯ ವಿದ್ಯುತ್ ಉತ್ಪಾದಿಸಲು ಅನುವಾಗುವಂತೆ ಸಿದ್ಧಗೊಳಿಸಲಾಗುತ್ತಿದೆ. ಜತೆಗೆ ನವೀಕರಿಸಬಹುದಾದ ಇಂಧನ ಮೂಲಗಳಿಂದಲೂ ಸಾಕಷ್ಟು ವಿದ್ಯುತ್ ಉತ್ಪಾದಿಸಲಾಗುತ್ತಿದೆ ಎಂದು ವಿವರಿಸಿದರು.

ಇಂಧನ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತ, ಕೆಪಿಟಿಸಿಎಲ್ ವ್ಯವಸ್ಥಾಪಕ ನಿರ್ದೇಶಕ ಪಂಕಜ್ ಕುಮಾರ್ ಪಾಂಡೆ, ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಡಾ.ಶಿವಶಂಕರ ಎನ್., ಹೆಸ್ಕಾಂ ವ್ಯವಸ್ಥಾಪಕ ನಿರ್ದೇಶಕಿ ವೈಶಾಲಿ ಎಂ.ಎಲ್., ಕೃಷ್ಣ ಬಾಜಪೇಯಿ, ಮೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಆರ್. ಜಯಕುಮಾರ್, ಸೆಸ್ಕ್ ವ್ಯವಸ್ಥಾಪಕ ನಿರ್ದೇಶಕ ಕೆ.ಎಂ.ಮುನಿಗೋಪಾಲ ರಾಜು, ಕ್ರೆಡಲ್ ವ್ಯವಸ್ಥಾಪಕ ನಿರ್ದೇಶಕ ಕೆ.ಪಿ.ರುದ್ರಪ್ಪಯ್ಯ ಸೇರಿದಂತೆ ಇಂಧನ ಇಲಾಖೆ ಹಿರಿಯ ಅಧಿಕಾರಿಗಳು ಇದ್ದರು.

Tags

Minister K.J. George
share
ವಾರ್ತಾಭಾರತಿ
ವಾರ್ತಾಭಾರತಿ
Next Story
X