ಪಾದಚಾರಿ ಮಾರ್ಗ ಒತ್ತುವರಿ ತೆರವು ಕಾರ್ಯಾಚರಣೆ | ಸಚಿವ ಕೃಷ್ಣಭೈರೇಗೌಡ ಕಾರ್ಯವೈಖರಿಯನ್ನು ಶ್ಲಾಘಿಸಿದ ಎಚ್.ಡಿ.ದೇವೇಗೌಡ

ಎಚ್.ಡಿ.ದೇವೇಗೌಡ/ಕೃಷ್ಣಭೈರೇಗೌಡ
ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಪಾದಚಾರಿ ಮಾರ್ಗ ಒತ್ತುವರಿ ತೆರವು ಕಾರ್ಯಾಚರಣೆ ಯಶಸ್ವಿಗೊಳಿಸಿರುವ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣಭೈರೇಗೌಡ ಅವರ ಕಾರ್ಯವೈಖರಿಯನ್ನು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಶ್ಲಾಘಿಸಿದ್ದಾರೆ.
ಮಂಗಳವಾರ ಇಲ್ಲಿನ ಶೇಷಾದ್ರಿಪುರಂನಲ್ಲಿರುವ ಜೆಡಿಎಸ್ ಪ್ರಧಾನ ಕಚೇರಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ರಾಜಕೀಯವೇ ಬೇರೆ, ಮಾಡುವ ಕೆಲಸವೇ ಬೇರೆ. ಕೃಷ್ಣಭೈರೇಗೌಡ ಅವರು ಬೆಂಗಳೂರು ನಗರ ಜಿಲ್ಲಾ ಉಸ್ತುವಾರಿ ಅಧಿಕಾರ ವಹಿಸಿಕೊಂಡಾಗಿನಿಂದಲೂ ಅತ್ಯುತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಅದರಲ್ಲೂ ಪಾದಚಾರಿ ಮಾರ್ಗ ತೆರವು, ಬೀದಿ ವ್ಯಾಪಾರಿಗಳಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸುವ ಮತ್ತು ಅವರನ್ನು ಸೂಕ್ತ ಜಾಗಕ್ಕೆ ಸ್ಥಳಾಂತರಿಸುವ ನಿಟ್ಟಿನಲ್ಲಿ ಅವರು ಮಾಡುತ್ತಿರುವ ಕೆಲಸಗಳು ಒಳ್ಳೆಯ ಬೆಳವಣಿಗೆಯಾಗಿವೆ ಎಂದು ನುಡಿದರು.
Next Story




