Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. 32.12 ಲಕ್ಷ ರೈತರ ಖಾತೆಗಳಿಗೆ ಸಂಪೂರ್ಣ...

32.12 ಲಕ್ಷ ರೈತರ ಖಾತೆಗಳಿಗೆ ಸಂಪೂರ್ಣ ಬೆಳೆಹಾನಿ ಪರಿಹಾರ ಜಮೆ : ಸಚಿವ ಕೃಷ್ಣ ಬೈರೇಗೌಡ

ವಾರ್ತಾಭಾರತಿವಾರ್ತಾಭಾರತಿ9 May 2024 7:54 PM IST
share
32.12 ಲಕ್ಷ ರೈತರ ಖಾತೆಗಳಿಗೆ ಸಂಪೂರ್ಣ ಬೆಳೆಹಾನಿ ಪರಿಹಾರ ಜಮೆ : ಸಚಿವ ಕೃಷ್ಣ ಬೈರೇಗೌಡ

ಬೆಂಗಳೂರು : ಎನ್.ಡಿ.ಆರ್.ಎಫ್ ಹಣ ಬಿಡುಗಡೆ ಆದ ಕೂಡಲೇ ರೈತರಿಗೆ ಅರ್ಹತೆ ಪ್ರಕಾರ ಪರಿಹಾರ ಪಾವತಿಸಲಾಗಿದೆ. ಇಲ್ಲಿಯವರೆಗೆ ಮೊದಲ ಹಂತದಲ್ಲಿ 2 ಸಾವಿರ ರೂ. ಮತ್ತು ಎರಡನೇ ಕಂತಿನ ಪರಿಹಾರವೂ ಸೇರಿದಂತೆ ಒಟ್ಟು 32.12 ಲಕ್ಷ ರೈತರ ಖಾತೆಗೆ ಈ ದಿನದವರೆಗೆ ಸಂಪೂರ್ಣ ಬೆಳೆ ಪರಿಹಾರ ಜಮೆ ಮಾಡಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.

ಗುರುವಾರ ವಿಕಾಸಸೌಧದಲ್ಲಿ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, "ಇನ್ನೂ ಸುಮಾರು 2 ಲಕ್ಷ ರೈತರಿಗೆ ಪರಿಹಾರ ನೀಡುವ ಪ್ರಕ್ರಿಯೆ ದಾಖಲೆ ಪರಿಶೀಲನೆ ಹಂತದಲ್ಲಿದೆ. ಇದಲ್ಲದೆ, ಸುಮಾರು ತಾಲೂಕುಗಳಲ್ಲಿ ಬರ ಪರಿಹಾರ ಪಟ್ಟಿಯಲ್ಲಿ ಸೇರದೆ ಇದ್ದ ಮಳೆ ಆಧಾರಿತ ಬೆಳೆಗಳಿಗೂ ಪರಿಹಾರ ಧನ ವಿತರಿಸಲು ಮತ್ತು 2 ಲಕ್ಷ ಹೆಕ್ಟೇರ್ ನೀರಾವರಿ ಪ್ರದೇಶವನ್ನು ಒಳಗೊಳ್ಳುವ ಸುಮಾರು 1.63 ಲಕ್ಷ ಅರ್ಹ ರೈತರಿಗೂ ಪರಿಹಾರ ವಿತರಿಸಲು ತೀರ್ಮಾನಿಸಲಾಗಿದೆ ಎಂದು ಹೇಳಿದರು.

ಇದಲ್ಲದೆ, ಸಣ್ಣ ಮತ್ತು ಅತಿಸಣ್ಣ ಒಣ ಬೇಸಾಯ ಮಾಡುವ ಸುಮಾರು 16 ಲಕ್ಷ ಕುಟುಂಬಗಳಿಗೆ ಬರಗಾಲದಿಂದ ಆಗಿರುವ ಜೀವನೋಪಾಯದ ನಷ್ಟಕ್ಕೆ ಪರಿಹಾರವಾಗಿ ತಲಾ 3 ಸಾವಿರ ರೂ. ಪರಿಹಾರ ನೀಡಲೂ ತೀರ್ಮಾನಿಸಲಾಗಿದೆ ಎಂದು ಕೃಷ್ಣ ಬೈರೇಗೌಡ ತಿಳಿಸಿದರು.

ನೀರು ಮತ್ತು ಮೇವಿನ ನಿರ್ವಹಣೆಗಾಗಿ ಇಲ್ಲಿಯವರೆಗೆ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ 202 ಸಭೆಗಳನ್ನು ನಡೆಸಲಾಗಿದೆ ಹಾಗೂ 462 ತಾಲೂಕು ಮಟ್ಟದ ಟಾಸ್ಕ್‌ ಫೋರ್ಸ್ ಸಭೆಗಳನ್ನು ನಡೆಸಲಾಗಿದೆ. ನೀರಿನ ಸಮಸ್ಯೆಯಿಂದ 270 ಗ್ರಾಮಗಳಿಗೆ ಟ್ಯಾಂಕರ್ ಮುಖಾಂತರ ಮತ್ತು 594 ಗ್ರಾಮಗಳಿಗೆ ಖಾಸಗಿ ಬೋರ್ ವೆಲ್ ಬಾಡಿಗೆ ಪಡೆದು ನೀರು ಸರಬರಾಜು ಮಾಡಲಾಗುತ್ತಿದೆ ಎಂದು ಅವರು ಹೇಳಿದರು.

153 ನಗರ ಪ್ರದೇಶದ ವಾರ್ಡ್‍ಗಳಿಗೆ ಟ್ಯಾಂಕರ್ ಮುಖಾಂತರ ಮತ್ತು 35 ವಾರ್ಡ್‍ಗಳಿಗೆ ಖಾಸಗಿ ಬೋರ್‍ವೆಲ್ ಬಾಡಿಗೆ ಪಡೆದು ನೀರು ಸರಬರಾಜು ಮಾಡಲಾಗುತ್ತಿದೆ. ವಿವಿಧ ಭಾಗಗಳಲ್ಲಿ 47 ಮೇವಿನ ಬ್ಯಾಂಕ್‍ಗಳನ್ನು ಮತ್ತು 28 ಕಡೆಗಳಲ್ಲಿ ಗೋಶಾಲೆಗಳನ್ನು ತೆರೆದು ಮೇವಿನ ಕೊರತೆ ನೀಗಿಸಲಾಗುತ್ತಿದೆ. ಈ ವೆಚ್ಚವನ್ನು ಬರಿಸಲು ಜಿಲ್ಲಾಧಿಕಾರಿಗಳು ಮತ್ತು ತಹಶೀಲ್ದಾರರ ಖಾತೆಗಳಲ್ಲಿ 836 ಕೋಟಿ ಅನುದಾನ ಲಭ್ಯವಿದೆ ಎಂದು ಕೃಷ್ಣ ಬೈರೇಗೌಡ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X