Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಉದ್ಘಾಟನೆಗೆ ಸಜ್ಜಾದ ಮೆಟ್ರೋ ಗುಲಾಬಿ...

ಉದ್ಘಾಟನೆಗೆ ಸಜ್ಜಾದ ಮೆಟ್ರೋ ಗುಲಾಬಿ ಮಾರ್ಗ ಪರಿಶೀಲಿಸಿದ ಸಚಿವ ಕೃಷ್ಣಬೈರೇಗೌಡ: ಸೆಪ್ಟೆಂಬರ್‌ನಲ್ಲಿಯೇ ಈ ಮಾರ್ಗದಲ್ಲಿ ಮೆಟ್ರೋ ಸಂಚಾರ ಸಾಧ್ಯತೆ

ವಾರ್ತಾಭಾರತಿವಾರ್ತಾಭಾರತಿ2 Sept 2026 8:33 PM IST
share
ಉದ್ಘಾಟನೆಗೆ ಸಜ್ಜಾದ ಮೆಟ್ರೋ ಗುಲಾಬಿ ಮಾರ್ಗ ಪರಿಶೀಲಿಸಿದ ಸಚಿವ ಕೃಷ್ಣಬೈರೇಗೌಡ: ಸೆಪ್ಟೆಂಬರ್‌ನಲ್ಲಿಯೇ ಈ ಮಾರ್ಗದಲ್ಲಿ ಮೆಟ್ರೋ ಸಂಚಾರ ಸಾಧ್ಯತೆ

ಬೆಂಗಳೂರು : ಬೆಂಗಳೂರಿನ ಜಯದೇವ ಜಂಕ್ಷನ್‍ನಿಂದ ಕಾಳೇನ ಅಗ್ರಹಾರವರೆಗೆ ಗುಲಾಬಿ ಮಾರ್ಗ (ಪಿಂಕ್‍ಲೈನ್) ಉದ್ಘಾಟನೆಗೆ ಸಿದ್ಧವಾಗಿದ್ದು, ಬುಧವಾರ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣಬೈರೇಗೌಡ, ಸಂಸದ ತೇಜಸ್ವಿ ಸೂರ್ಯ, ಶಾಸಕ ಎಂ.ಕೃಷ್ಣಪ್ಪ ಅವರು ಪರಿಶೀಲನೆ ನಡೆಸಿದರು.

ಈ ವೇಳೆ ಮಾತನಾಡಿದ ಸಚಿವ ಕೃಷ್ಣಬೈರೇಗೌಡ, ಕೇಂದ್ರ ಸರಕಾರದಿಂದ ಉದ್ಘಾಟನೆ ದಿನಾಂಕ ನಿಗದಿಯಾದರೆ ಸೆಪ್ಟೆಂಬರ್‌ ನಲ್ಲಿಯೇ ಸಂಚಾರ ಆರಂಭಿಸಲಾಗುವುದು ಎಂದು ಸ್ಪಷ್ಟಪಡಿಸಿದರು.

ಬನ್ನೇರುಘಟ್ಟ ರಸ್ತೆಯ ಕಾಳೇನ ಅಗ್ರಹಾರ ಮೆಟ್ರೋ ನಿಲ್ದಾಣಕ್ಕೆ ತೆರಳಿ ನಿಲ್ದಾಣದ ಕಾಮಗಾರಿ, ಭದ್ರತೆ ಮತ್ತು ಸಂಚಾರ ವ್ಯವಸ್ಥೆಯ ಬಗ್ಗೆ ಅಧಿಕಾರಿಗಳಿಂದ ಸಚಿವರು ಸಂಪೂರ್ಣ ಮಾಹಿತಿ ಪಡೆದುಕೊಂಡರು. ಅನಂತರ ಸಂಸದ ತೇಜಸ್ವಿ ಸೂರ್ಯ ಅವರೊಂದಿಗೆ ಮೆಟ್ರೋ ಲೋಕೋ ಪೈಲಟ್ ಕ್ಯಾಬಿನ್‍ನಲ್ಲಿ ಕುಳಿತು ಕಾಳೇನ ಅಗ್ರಹಾರದಿಂದ ತಾವರೆಕೆರೆವರೆಗೂ ಸಂಚರಿಸಿ ಪರಿಶೀಲಿಸಿದರು.

ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಮಾಹಿತಿ ಹಂಚಿಕೊಂಡಿರುವ ಸಂಸದ ತೇಜಸ್ವಿ ಸೂರ್ಯ, ಬಿಎಂಆರ್‌ ಸಿಎಲ್ ಈ ಮಾರ್ಗವನ್ನು ಸೆಪ್ಟೆಂಬರ್ ತಿಂಗಳ ಅಂತ್ಯದೊಳಗೆ ಉದ್ಘಾಟಿಸುವ ಗುರಿ ಹೊಂದಿದ್ದು, ನಿಗದಿತ ಗಡುವಿನೊಳಗೆ ಕಾಮಗಾರಿ ಪೂರ್ಣಗೊಳಿಸಿ, ಉದ್ಘಾಟನೆಗೆ ಸಿದ್ಧಪಡಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ.

ಗುಲಾಬಿ ಮಾರ್ಗ ಆರಂಭವಾದರೆ ಬನ್ನೇರುಘಟ್ಟ ರಸ್ತೆಯ ಸಂಚಾರ ದಟ್ಟಣೆ ಗಣನೀಯವಾಗಿ ಕಡಿಮೆಯಾಗಲಿದೆ. ಬೆಂಗಳೂರಿನ ಸಾರ್ವಜನಿಕ ಸಾರಿಗೆ ವ್ಯವಸ್ಥೆ ಮತ್ತಷ್ಟು ಬಲಿಷ್ಠವಾಗಲಿದೆ. ಬೆಂಗಳೂರಿಗೆ ಬೇಕಿರುವುದು ಇಂತಹ ವೈಜ್ಞಾನಿಕ, ಹಾಗೂ ಸಂಚಾರ ದಟ್ಟಣೆ ಕಡಿಮೆ ಮಾಡುವ ಯೋಜನೆಗಳು. ನಗರದ ಹಿತದೃಷ್ಟಿಯಿಂದ ಇಂತಹ ಯೋಜನೆಗಳಿಗೆ ನಾಗರಿಕರು ಮತ್ತು ವಿರೋಧ ಪಕ್ಷವೂ ಬೆಂಬಲ ನೀಡಲಿದೆ ಎಂದು ತೇಜಸ್ವಿ ಸೂರ್ಯ ಹೇಳಿದ್ದಾರೆ.

ಗುಲಾಬಿ ಮಾರ್ಗವು ಮೊದಲ ಹಂತದಲ್ಲಿ ಕಾಳೇನ ಅಗ್ರಹಾರ, ಹುಳಿಮಾವು, ಐಐಎಂ-ಬಿ, ಜೆ.ಪಿ.ನಗರ 4ನೇ ಹಂತ, ಜಯದೇವ ಆಸ್ಪತ್ರೆ(ಹಳದಿ ಮಾರ್ಗದ ಜತೆ ಇಂಟರ್‍ಚೇಂಜ್) ಹಾಗೂ ತಾವರೆಕೆರೆ ನಿಲ್ದಾಣಗಳನ್ನು ಹೊಂದಿದೆ.

Tags

Minister Krishna Byre GowdaMetro
share
ವಾರ್ತಾಭಾರತಿ
ವಾರ್ತಾಭಾರತಿ
Next Story
X