Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಸಬ್ ರಿಜಿಸ್ಟ್ರಾರ್ ಕಚೇರಿಗೆ ದಿಢೀರ್...

ಸಬ್ ರಿಜಿಸ್ಟ್ರಾರ್ ಕಚೇರಿಗೆ ದಿಢೀರ್ ಭೇಟಿ ನೀಡಿದ ಸಚಿವ ಕೃಷ್ಣ ಬೈರೇಗೌಡ

ವಾರ್ತಾಭಾರತಿವಾರ್ತಾಭಾರತಿ5 Sept 2023 6:22 PM IST
share
ಸಬ್ ರಿಜಿಸ್ಟ್ರಾರ್ ಕಚೇರಿಗೆ  ದಿಢೀರ್ ಭೇಟಿ ನೀಡಿದ ಸಚಿವ ಕೃಷ್ಣ ಬೈರೇಗೌಡ

ಬೆಂಗಳೂರು, ಸೆ.5: ಕಾಚರಕನಹಳ್ಳಿ ಸಬ್ ರಿಜಿಸ್ಟ್ರಾರ್ ಕಚೇರಿಗೆ ಮಂಗಳವಾರ ದಿಢೀರ್ ಭೇಟಿ ನೀಡಿದ ಕಂದಾಯ ಸಚಿವ ಕೃಷ್ಣ ಬೈರೇಗೌಡ, ಸಬ್ ರಿಜಿಸ್ಟ್ರಾರ್ ಕಚೇರಿಗಳು ಎಷ್ಟರ ಮಟ್ಟಿಗೆ ದಕ್ಷತೆಯಿಂದ ಜನಸ್ನೇಹಿ ಸೇವೆ ನೀಡುತ್ತಿದೆ ಎಂದು ಪರಿಶೀಲನೆ ನಡೆಸಿದರು. ಅಲ್ಲದೆ, ಒಂದು ಗಂಟೆಗೂ ಹೆಚ್ಚು ಕಾಲ ಜನರ ಸಮಸ್ಯೆಗಳನ್ನು ಆಲಿಸಿದರು.

ರಾಜ್ಯಾದ್ಯಂತ ಪ್ರತಿನಿತ್ಯ 10 ಸಾವಿರಕ್ಕೂ ಅಧಿಕ ನೋಂದಣಿಗಳು ನಡೆಯುತ್ತಿವೆ. ಸುಲಭ ಮತ್ತು ಸರಳ ನೋಂದಣಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಕಾವೇರಿ-2 ತಂತ್ರಾಂಶವನ್ನು ಅಭಿವೃದ್ಧಿಪಡಿಸಲಾಗಿದೆ. ಆದರೂ, ತಂತ್ರಾಂಶದಲ್ಲಿ ಕೆಲವು ತಾಂತ್ರಿಕ ಸಮಸ್ಯೆಗಳಿರುವ ಕುರಿತು ದೂರುಗಳು ಬರುತ್ತಿವೆ. ಇದರಿಂದ ಜನರಿಗೂ ಬೇರೆ ಬೇರೆ ರೀತಿಯ ಸಮಸ್ಯೆಗಳಾಗುತ್ತಿದೆ ಎಂಬ ದೂರುಗಳ ಹಿನ್ನೆಲೆಯಲ್ಲಿ ಇಂದು ಕಾಚರಕನಹಳ್ಳಿ ಸಬ್ ರಿಜಿಸ್ಟ್ರಾರ್ ಕಚೇರಿಗೆ ಕೃಷ್ಣ ಬೈರೇಗೌಡ ದಿಢೀರ್ ಭೇಟಿ ನೀಡದರು.

ಅಲ್ಲದೆ, ಅಲ್ಲಿನ ಕಚೇರಿ ಸಿಬ್ಬಂದಿಗಳು ಎಷ್ಟರ ಮಟ್ಟಿಗೆ ಜನಸ್ನೇಹಿ ಸೇವೆ ನೀಡುತ್ತಿದ್ದಾರೆ. ಕಾವೇರಿ 2 ತಂತ್ರಾಂಶದ ನೈಜ ಸಮಸ್ಯೆಗಳೇನು ಎಂದು ಅಧಿಕಾರಿಗಳಿಂದ ಮಾಹಿತಿ ಕೇಳಿ ಪಡೆದುಕೊಂಡ ಅವರು, ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ಜನರಿಗೆ ಹೇಗೆ ಉತ್ತಮ ಸೇವೆ ನೀಡಬಹುದು ಎಂಬ ಕುರಿತು ಜನಸಾಮಾನ್ಯರಿಂದಲೆ ಸಲಹೆಗಳನ್ನು ಪಡೆದುಕೊಂಡರು.

ಭ್ರಷ್ಟ ರಹಿತ ಜನಸೇವೆಗೆ ಕರೆ: ಸಬ್ ರಿಜಿಸ್ಟ್ರಾರ್ ಕಚೇರಿ ಪರಿಶೀಲನೆ ನಂತರ ಅಧಿಕಾರಿ/ ಸಿಬ್ಬಂದಿಗಳಿಗೆ ಕಿವಿಮಾತು ಹೇಳಿದ ಕೃಷ್ಣ ಬೈರೇಗೌಡ, ಕಂದಾಯ ಇಲಾಖೆಯಲ್ಲಿ ಆಡಳಿತ ಸುಧಾರಣೆ ಹಾಗೂ ರಿಜಿಸ್ಟ್ರಾರ್ ಕಚೇರಿಗಳಲ್ಲಿ ಜನರ ಸುಲಿಗೆ ಮತ್ತು ವಿಳಂಬ ಧೋರಣೆಗೆ ತಡೆ ಒಡ್ಡಲಾಗುವುದು ಎಂದು ಜನಸಾಮಾನ್ಯರಿಗೆ ಈಗಾಗಲೇ ಭರವಸೆ ನೀಡಲಾಗಿದೆ ಎಂದರು.

ಭರವಸೆಯಂತೆ ಅಧಿಕಾರಿಗಳು, ಸಿಬ್ಬಂದಿಗಳು ಜನರಿಗೆ ಸರಳ, ಸುಲಭ ಸೇವೆ ನೀಡಬೇಕು. ಸುಲಿಗೆ, ವಿಳಂಬ ಧೋರಣೆಗೆ ಅವಕಾಶ ನೀಡದೆ, ಭ್ರಷ್ಟಾಚಾರ ಮುಕ್ತ ಸೇವೆ ನೀಡಬೇಕು ಎಂದು ಕೃಷ್ಣ ಬೈರೇಗೌಡ ಕರೆ ನೀಡಿದರು.

ಈ ವೇಳೆ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ವಿ.ರಶ್ಮಿ ಮಹೇಶ್, ನೋಂದಣಿ ಮಹಾಪರಿವೀಕ್ಷಕರು ಮತ್ತು ಮುದ್ರಾಂಕಗಳ ಆಯುಕ್ತೆ ಡಾ.ಮಮತಾ ಬಿ.ಆರ್. ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X