Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಸೆ.2ರಿಂದ ರಾಜ್ಯಾದ್ಯಂತ ಡಿಜಿಟಲ್ ಪೋಡಿ...

ಸೆ.2ರಿಂದ ರಾಜ್ಯಾದ್ಯಂತ ಡಿಜಿಟಲ್ ಪೋಡಿ ದುರಸ್ಥಿ ಅಭಿಯಾನ : ಸಚಿವ ಕೃಷ್ಣ ಬೈರೇಗೌಡ

ವಾರ್ತಾಭಾರತಿವಾರ್ತಾಭಾರತಿ30 Aug 2024 9:32 PM IST
share
ಸೆ.2ರಿಂದ ರಾಜ್ಯಾದ್ಯಂತ ಡಿಜಿಟಲ್ ಪೋಡಿ ದುರಸ್ಥಿ ಅಭಿಯಾನ : ಸಚಿವ ಕೃಷ್ಣ ಬೈರೇಗೌಡ

ಬೆಂಗಳೂರು : ರಾಜ್ಯಾದ್ಯಂತ ಸೆಪ್ಟೆಂಬರ್ 2 ರಿಂದ 1-5 ನಮೂನೆ ಪೋಡಿ ದುರಸ್ಥಿ ಕಾರ್ಯವನ್ನು ಅಭಿಯಾನ ಮಾದರಿಯಲ್ಲಿ ಜಾರಿಗೊಳಿಸಬೇಕು ಎಂದು ಎಲ್ಲಾ ಜಿಲ್ಲಾಧಿಕಾರಿಗಳು ಹಾಗೂ ತಹಶೀಲ್ದಾರರಿಗೆ ಕಂದಾಯ ಸಚಿವ ಕೃಷ್ಣ ಬೈರೇಗೌಡ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಶುಕ್ರವಾರ ವಿಕಾಸಸೌಧದಲ್ಲಿ ಎಲ್ಲ ಜಿಲ್ಲಾಧಿಕಾರಿಗಳು, ತಹಶೀಲ್ದಾರರು, ಕಂದಾಯ ನಿರೀಕ್ಷಕರೂ ಸೇರಿದಂತೆ ಇಲಾಖೆಯ ಎಲ್ಲಾ ಅಧಿಕಾರಿಗಳ ಜೊತೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದ ಅವರು, ರಾಜ್ಯದಲ್ಲಿ ಸುಮಾರು 10 ಲಕ್ಷ ರೈತರಿಗೆ ಹತ್ತಾರು ವರ್ಷಗಳ ಹಿಂದೆ ಸರಕಾರಿ ಜಮೀನು ಅಕ್ರಮ ಸಕ್ರಮದಡಿ ಮಂಜೂರಾಗಿದ್ದರೂ ಸಹ, ಪೋಡಿ ದುರಸ್ಥಿ ಆಗದೆ ಬಾಕಿ ಉಳಿದಿದೆ ಎಂದರು.

ಲಕ್ಷಾಂತರ ರೈತರು ಅನೇಕ ವರ್ಷಗಳಿಂದ ಪ್ರಯತ್ನ ಮಾಡುತ್ತಿದ್ದರೂ ಸಹ, ಕೆಲವೇ ಕೆಲವರಿಗೆ ಮಾತ್ರ ಪೋಡಿ ದುರಸ್ಥಿಯಾಗಿದ್ದು ಬಹುತೇಕರಿಗೆ ಆಗಿಲ್ಲ. ಇದರಿಂದಾಗಿ ಹಲವು ರೈತರು ತೀವ್ರ ತೊಂದರೆಗೆ ಸಿಲುಕಿದ್ದು, ಅಧಿಕಾರಿಗಳು ಸೆ.2 ರಿಂದ ಅಭಿಯಾನ ಮಾದರಿಯಲ್ಲಿ 1-5 ನಮೂನೆ ಪೋಡಿ ದುರಸ್ಥಿ ಕೆಲಸಕ್ಕೆ ಮುಂದಾಗಬೇಕು, ರೈತರ ಸಮಸ್ಯೆಗೆ ಶಾಶ್ವತ ಪರಿಹಾರ ನೀಡಬೇಕು ಎಂದು ಕೃಷ್ಣ ಬೈರೇಗೌಡ ಸೂಚಿಸಿದರು.

ಜಮೀನು ಮಂಜೂರಾಗಿದ್ದರೂ ಪೋಡಿಯಾಗಿ ಆರ್.ಟಿ.ಸಿ ಆಗದೆ ಇರುವುದರಿಂದ, ಅಂತಹ ರೈತರ ಪರಿಸ್ಥಿತಿ ತ್ರಿಶಂಕುವಿನಂತೆ ಆಗಿದೆ. ತಾಲ್ಲೂಕು ಕಚೇರಿ, ಸರ್ವೆ ಕಚೇರಿಗಳಿಗೆ ಅಲೆದು ಅಲೆದು ಪ್ರಯೋಜನವಾಗದೆ, ತೀವ್ರ ತೊಂದರೆಗೆ ತುತ್ತಾಗಿದ್ದಾರೆ. ಈ ಬಗ್ಗೆ ಬಹಳ ವರ್ಷಗಳಿಂದ ಚರ್ಚೆಗಳು, ಪ್ರಯತ್ನಗಳು ಆಗುತ್ತಿದ್ದರೂ ಸರಿಯಾದ ಪರಿಹಾರ ದೊರೆತಿಲ್ಲ ಎಂದು ಅವರು ಹೇಳಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯನವರು ಈ ಸಮಸ್ಯೆಯನ್ನು ಪರಿಹರಿಸಲು, ಸೂಕ್ತ ಪರಿಹಾರ ಕ್ರಮಕೈಗೊಳ್ಳಲು ಸೂಚಿಸಿದ ಹಿನ್ನೆಲೆಯಲ್ಲಿ, ಕಂದಾಯ ಇಲಾಖೆ ದುರಸ್ಥಿಗೆ ಬಾಕಿಯಿರುವ ಪ್ರಕರಣಗಳ ವಿಲೇವಾರಿಗೆ ವ್ಯವಸ್ಥಿತವಾದ ಯೋಜನೆ ಆರಂಭಿಸಿದೆ ಎಂದು ಕೃಷ್ಣ ಬೈರೇಗೌಡ ಮಾಹಿತಿ ನೀಡಿದರು.

ಈ ಹಿಂದೆ ಪೋಡಿ ದುರಸ್ಥಿ ಮಾಡಲು ಅವಶ್ಯವಿರುವ 1-5 ನಮೂನೆಗಳನ್ನು ತಯಾರಿಸಲು ಕಾಗದದ ಕಡತಗಳನ್ನು ತಯಾರಿಸಲು ಪ್ರಯತ್ನಿಸಲಾಗಿತ್ತು. ಆದರೆ, ಆ ಕೆಲಸವೂ ಸಮರ್ಪಕವಾಗಿ ಆಗಿಲ್ಲ. ಆಗ ಕೆಲವು ಕಡತಗಳು ಕಾಣೆಯಾಗಿವೆ ಅಥವಾ ಕೈಗೆ ಸಿಗುವುದಿಲ್ಲ. ಇದರಿಂದ ಕಡತಗಳು ಇದ್ದರೂ ಅನೇಕರಿಗೆ ಅದರ ಪ್ರಯೋಜನ ಸಿಗುತ್ತಿಲ್ಲ. ಈ ಸಮಸ್ಯೆಗಳಿಂದ ಕಂದಾಯ ಇಲಾಖೆ ಪೋಡಿ ದುರಸ್ಥಿ 1-5 ಕಡತಗಳನ್ನು ಕಂಪ್ಯೂಟರ್ಗದಳನ್ನು ಬಳಸಿ ಗಣಕೀಕರಿಸಿದ (ಡಿಜಿಟಲ್) 1-5 ಕಡತಗಳನ್ನು ತಯಾರಿಸಲು ಆರಂಭಿಸಿದೆ ಎಂದು ಅವರು ತಿಳಿಸಿದರು.

ಡಿಜಿಟಲ್ ಆ್ಯಪ್ ಮುಖಾಂತರ ಮಾಡುವುದರಿಂದ ಸರಳ, ವೇಗವಾಗಿ ಕಡತಗಳನ್ನು ತಯಾರಿಸಬಹುದು. ಯಾರ ಬಳಿ ವಿಳಂಬವಾಗಿದೆ ಎಂಬುದು ಪಾರದರ್ಶಕವಿರುವುದರಿಂದ, ವೇಗವಾಗಿ ಕೆಲಸವಾಗಬಹುದು. ಮೂಲ ಮಂಜೂರಿ ದಾಖಲೆಗಳನ್ನು ಸುರಕ್ಷಿತವಾಗಿಡಬಹುದು. ಮುಂದೆ ತಿದ್ದಲು, ನಕಲು ಮಾಡಲು ಸಾಧ್ಯವಿಲ್ಲ. ಒಬ್ಬ ರೈತನಿಗೆ ತಯಾರು ಮಾಡಿದ 1-5 (ನಮೂನೆ)ಕಡತ, ಆ ಸರ್ವೆ ನಂಬರಿನ ಎಲ್ಲ ರೈತರಿಗೂ ಅದೇ ಕಡತ ಅನುಕೂಲವಾಗುತ್ತದೆ. 1-5(ನಮೂನೆ)ಕಡತ ಕಾಣೆಯಾಗಲು ಅಥವಾ ಕಳೆದು ಹೋಗಲು ಸಾಧ್ಯವಿಲ್ಲ ಎಂದು ಕೃಷ್ಣ ಬೈರೇಗೌಡ ತಿಳಿಸಿದರು.

ಈ ಅಭಿಯಾನವನ್ನು ಸೆ.2 ರಿಂದ ರಾಜ್ಯಾದ್ಯಂತ ಆರಂಭಿಸುತ್ತಿದ್ದೇವೆ. ರಾಜ್ಯದಲ್ಲಿ ಎಲ್ಲೆಲ್ಲಿ ರೈತರಿಗೆ ಮಂಜೂರಾಗಿರುವ ಜಮೀನುಗಳ ದುರಸ್ಥಿಯಾಗದೆ ಬಾಕಿ ಉಳಿದಿದೆ ಅಂತಹ ಪ್ರತಿಯೊಂದು ಕಡೆಯಲ್ಲೂ ಡಿಜಿಟಲಾಗಿ 1-5(ನಮೂನೆ)ಕಡತ ಸೆ.2 ರಿಂದ ತಯಾರಿ ಮಾಡಲಾಗುವುದು. 1-5(ನಮೂನೆ)ಕಡತ ಎಲ್ಲ ಸರಕಾರಿ ಜಮೀನಿಗೆ (ರೈತರಿಗೆ ಮಂಜೂರಾಗಿರುವ), ರೈತರ ಅರ್ಜಿಗೆ ಕಾಯದೆ ಕಂದಾಯ ಇಲಾಖೆ ಸ್ವಯಂ ಕಡತಗಳನ್ನು ತಯಾರಿಸಲಿದೆ ಎಂದು ಅವರು ನುಡಿದರು.

1-5ನಮೂನೆ ಪ್ರಕಾರ ತಯಾರಾದ ಕಡತಗಳನ್ನು ಮುಂದೆ 6-10 ಮಾಡಿ ಅವರಿಗೆ ಸರ್ವೆಯೊಂದಿಗೆ ದುರಸ್ಥಿ ಮಾಡಿದ ನಂತರ ಹೊಸ ಸರ್ವೆ ನಂಬರ್ ಪಹಣಿಯೊಂದಿಗೆ ಸಂಪೂರ್ಣ ದಾಖಲೆ ಮಾಡಿಕೊಡಲಾಗುವುದು. ಇದನ್ನು ಅಭಿಯಾನ ಮಾದರಿಯಲ್ಲಿ ಅನುಷ್ಠಾನ ಮಾಡಲಾಗುವುದು. ಇದೊಂದು ದೀರ್ಘಕಾಲದ ಸಮಸ್ಯೆಗೆ ಶಾಶ್ವತ ಪರಿಹಾರ ನೀಡಿ ರೈತರಿಗೆ ನೆಮ್ಮದಿಯನ್ನು ನೀಡುವ ಅಭಿಯಾನವಾಗಲಿದೆ. ಹೀಗಾಗಿ ಎಲ್ಲಾ ಅಧಿಕಾರಿಗಳೂ ಈ ಯೋಜನೆ ಯಶಸ್ವಿಯಾಗಲು ಸಹಕರಿಸಬೇಕಿದೆ. ಆ ಮೂಲಕ ರೈತರ ದೀರ್ಘ ಕಾಲದ ಸಮಸ್ಯೆಗಳನ್ನು ಪರಿಹರಿಸಲು ತಮ್ಮಿಂದಾದ ಸಹಕಾರ ನೀಡಬೇಕಿದೆ ಎಂದು ಕೃಷ್ಣ ಬೈರೇಗೌಡ ಮನವಿ ಮಾಡಿದರು.

ಹಾಸನದಲ್ಲಿ ಯಶಸ್ವಿಯಾದ ಯೋಜನೆ: ಡಿಜಿಟಲಾಗಿ 1-5(ನಮೂನೆ) ಪೋಡಿ ದುರಸ್ಥಿ ಕಾರ್ಯವನ್ನು ರಾಜ್ಯಾದ್ಯಂತ ವಿಸ್ತರಿಸುವ ಮುನ್ನ ಈ ಯೋಜನೆಯನ್ನು ಹಾಸನದಲ್ಲಿ ಪ್ರಾಯೋಗಿಕವಾಗಿ ನಡೆಸಲಾಗಿದೆ. ಈ ಪ್ರಾಯೋಗಿಕ ಯೋಜನೆ ಯಶಸ್ವಿಯಾಗಿರುವುದನ್ನು ಖಚಿತಪಡಿಸಿಕೊಂಡ ನಂತರವೇ ಇದೀಗ ರಾಜ್ಯಾದ್ಯಂತ ವಿಸ್ತರಿಸಲಾಗುತ್ತಿದೆ ಎಂದು ಕೃಷ್ಣ ಬೈರೇಗೌಡ ಅಧಿಕಾರಿಗಳಿಗೆ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X