Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಅ.21ರಿಂದ ವಾರಾಂತ್ಯಗಳಲ್ಲೂ ತೆರೆದಿರಲಿವೆ...

ಅ.21ರಿಂದ ವಾರಾಂತ್ಯಗಳಲ್ಲೂ ತೆರೆದಿರಲಿವೆ ನೋಂದಣಿ ಕಚೇರಿ : ಸಚಿವ ಕೃಷ್ಣ ಬೈರೇಗೌಡ

ವಾರ್ತಾಭಾರತಿವಾರ್ತಾಭಾರತಿ23 Sept 2024 8:56 PM IST
share
ಅ.21ರಿಂದ ವಾರಾಂತ್ಯಗಳಲ್ಲೂ ತೆರೆದಿರಲಿವೆ ನೋಂದಣಿ ಕಚೇರಿ : ಸಚಿವ ಕೃಷ್ಣ ಬೈರೇಗೌಡ

ಬೆಂಗಳೂರು : ಜನರಿಗೆ ಸುಗಮ ಆಡಳಿತ ನೀಡುವ ಭಾಗವಾಗಿ ಅ.21ರ ನಂತರ ನೋಂದಣಿ ಕಚೇರಿಗಳು ಶನಿವಾರ ಹಾಗೂ ರವಿವಾರದ ರಜೆ ದಿನಗಳಲ್ಲೂ ಕಾರ್ಯನಿರ್ವಹಿಸಲಿವೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು.

ಸೋಮವಾರ ವಿಕಾಸಸೌಧದಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ದುಡಿಯುವ ಮಧ್ಯಮ ವರ್ಗದ ಜನ ವಾರದ ದಿನಗಳಲ್ಲಿ ತಮ್ಮ ಕೆಲಸಗಳನ್ನು ಬಿಟ್ಟು ನೋಂದಣಿ ಕಚೇರಿಗಳಿಗೆ ಆಗಮಿಸುವುದು ಕಷ್ಟ. ಅಲ್ಲದೆ, ನೋಂದಣಿಗಾಗಿ ಹೊರ ರಾಜ್ಯದಿಂದ ಆಗಮಿಸುವವರಿಗೂ ಅನಾನುಕೂಲ ಉಂಟಾಗುತ್ತಿದೆ. ಹೀಗಾಗಿ ದುಡಿಯುವ ವರ್ಗದ ಜನರಿಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಎರಡನೇ ಮತ್ತು ನಾಲ್ಕನೇ ಶನಿವಾರ ಹಾಗೂ ರವಿವಾರಗಳಲ್ಲೂ ನೋಂದಣಿ ಕಚೇರಿಗಳನ್ನು ತೆರೆಯಲು ನಿರ್ಧರಿಸಲಾಗಿದೆ ಎಂದರು.

ರಜೆ ದಿನಗಳಲ್ಲಿ ಯಾವ ನೋಂದಣಿ ಕಚೇರಿ ಕಾರ್ಯನಿರ್ವಹಿಸಲಿವೆ ಎಂದು ಅವಧಿಗೆ ಮೊದಲೇ ಪಟ್ಟಿ ಬಿಡುಗಡೆ ಮಾಡಲಾಗುತ್ತದೆ. ನೋಂದಣಿಗಾಗಿ ಸಾರ್ವಜನಿಕರು ಅರ್ಜಿ ಹಾಕಿದಾಗ ಯಾವ ಕಚೇರಿ ತೆರೆದಿರುತ್ತದೆ ಎಂಬ ಮಾಹಿತಿಯನ್ನು ಆನ್‍ಲೈನ್ ಮೂಲಕ ನೀಡಲಾಗುತ್ತದೆ ಎಂದು ಅವರು ತಿಳಿಸಿದರು.

ಡಿಜಿಟಲ್ ಇಂಟಗ್ರೇಷನ್ ಖಾತಾ ಜಾರಿ: ಅಕ್ರಮ ನೋಂದಣಿ ಹಾಗೂ ತೆರಿಗೆ ವಂಚನೆಯನ್ನು ತಡೆಯುವ ಸಲುವಾಗಿ ನೋಂದಣಿ ಸಮಯದಲ್ಲಿ ಡಿಜಿಟಲ್ ಇಂಟಗ್ರೇಷನ್ ಖಾತಾ ನಿಯಮವನ್ನು ಜಾರಿಗೊಳಿಸಲಾಗಿದೆ. ನಿಜವಾದ ಸ್ವತ್ತಿಗೆ ಖಾತೆ ಇಲ್ಲದಿದ್ದರೂ ಕೆಲವರು ಕೇವಲ ಪೇಪರ್‌ನಲ್ಲಿ ಖಾತೆ ಪ್ರಿಂಟ್ ಮಾಡಿಸಿ ಅದರ ಮೂಲಕ ನೋಂದಣಿ ಮಾಡಿಸಿಕೊಳ್ಳುತ್ತಿದ್ದಾರೆ. ಗ್ರಾಮ ಪಂಚಾಯತ್, ಬಿಬಿಎಂಪಿ, ನಗರಸಭೆ ಖಾತೆ ಮಾಡಿಸದಿದ್ದರೂ ಇಂತಹ ಬೋಗಸ್ ಖಾತೆ ಮೂಲಕ ಅಕ್ರಮ ನೋಂದಣಿ ಮಾಡಲಾಗುತ್ತಿದೆ ಎಂದು ಕೃಷ್ಣ ಬೈರೇಗೌಡ ಬೇಸರ ವ್ಯಕ್ತಪಡಿಸಿದರು.

ನೋಂದಣಿ ಮಾಡಿಸುವಾಗ ಇತರೆ ಎಂಬ ಒಂದು ಕ್ಯಾಟಗರಿ ಇದೆ. ಆಶ್ರಯ ನಿವೇಶನಗಳನ್ನು ನೋಂದಾಯಿಸುವಾಗ ಮಾತ್ರ ಈ ಕ್ಯಾಟಗರಿಯನ್ನು ಬಳಸಲಾಗುತ್ತದೆ. ಇದರಲ್ಲಿ ಮಾರುಕಟ್ಟೆ ಬೆಲೆ (ಗೈಡನ್ಸ್ ವ್ಯಾಲ್ಯೂ) ಕಡಿಮೆ ಇರತ್ತೆ. ನೋಂದಣಿ ಶುಲ್ಕವೂ ಕಡಿಮೆ ಇರುತ್ತದೆ. ಹೀಗಾಗಿ ಹಲವರು ತಮ್ಮದು ಖಾಸಗಿ ಸ್ವತ್ತಾಗಿದ್ರೂ ಇತರೆ ಎಂದು ತೋರಿಸಿ ದೊಡ್ಡ ಪ್ರಮಾಣದಲ್ಲಿ ಕಟ್ಟಬೇಕಿರುವ ವೆಚ್ಚವನ್ನು ಮೋಸ ಮಾಡುತ್ತಿದ್ದಾರೆ ಎಂದು ಅವರು ತಿಳಿಸಿದರು.

ಈ ಹಿಂದೆ ನೋಂದಣಿ ಮುಖ್ಯಸ್ಥರಾಗಿದ್ದ ತ್ರಿಲೋಕ್ ಚಂದ್ರ ನಡೆಸಿದ ಅಧ್ಯಯನದಂತೆ ಬೆಂಗಳೂರಿನ 4 ನೋಂದಣಿ ಕಚೇರಿಗಳಲ್ಲಿ ನಕಲಿ ಖಾತೆ ಮೂಲಕ ಎಷ್ಟು ನೋಂದಣಿಯಾಗುತ್ತಿವೆ ಹಾಗೂ ತೆರಿಗೆ ವಂಚನೆ ಪ್ರರಕಣಗಳನ್ನೂ ಗುರುತಿಸಿದ್ದಾರೆ. ಅವರ ಪ್ರಕಾರ 2018ರ ಜು.1ರಿಂದ 2019ರ ಡಿ.10ರ ಅವಧಿಯಲ್ಲಿ ಬೆಂಗಳೂರು ಒಂದರಲ್ಲೇ 250 ಕೋಟಿ ರೂ.ನಷ್ಟವಾಗಿದೆ ಎಂದು ಅಂದಾಜಿಸಿದ್ದಾರೆ ಎಂದು ಕೃಷ್ಣ ಬೈರೇಗೌಡ ತಿಳಿಸಿದರು.

ಇನ್ನೂ ನೋಂದಣಿ ಮಾಡುವಾಗ ಸ್ಕೆಚ್ ಕಡ್ಡಾಯ ಬೇಕು. ಆದರೆ ಕೆಲವೆಡೆ ಸ್ಕೆಚ್ ಇಲ್ಲದೆಯೂ ನೋಂದಣಿ ಮಾಡಲಾಗಿದೆ. ಜನವರಿಯಿಂದ ಈಚೆಗೆ 200 ನೋಂದಣಿ ಸ್ಕೆಚ್ ಇಲ್ಲದೆ ಮಾಡಲಾಗಿದೆ. ಸೈಟು ಅಥವಾ ಜಮೀನನನ್ನು ಟಿಡಿಆರ್ ಅಂತೇಳಿ ನೋಂದಣಿ ಮಾಡಿಸಿದ್ದಾರೆ. ಇದರಿಂದ ಅಕ್ರಮದ ಜೊತೆಗೆ ತೆರಿಗೆ ಹಣವೂ ವಂಚಿಸಲಾಗುತ್ತಿದೆ ಎಂದು ಅವರು ಹೇಳಿದರು.

ಗ್ರಾಮ ಪಂಚಾಯತ್, ಮುನಿಸಿಪಾಲಿಟಿ, ಬಿಬಿಎಂಪಿ, ಬಿಡಿಎ ಯಾರೇ ಇರಬಹುದು, ಎಲ್ಲ ಖಾತೆಯನ್ನೂ ಡಿಜಿಟಲ್ ಮಾಡಬೇಕು. ನೋಂದಣಿ ಸಮಯದಲ್ಲಿ ನಮ್ಮ ಹಾಗೂ ಅವರ ಸಿಸ್ಟಂ ಲಿಂಕ್ ಮಾಡಿ, ಖಾತೆ ನಂಬರ್ ಹೆಸರು ಹಾಗೂ ವಿಳಾಸ ಹೊಂದಾಣಿಕೆ ಆದರೆ ಆಟೋಮ್ಯಾಟಿಕ್ ಖಾತೆ ಮಾಡಿಕೊಡಲಾಗುವುದು ಎಂದು ಕೃಷ್ಣ ಬೈರೇಗೌಡ ತಿಳಿಸಿದರು.

ಡಿಜಿಟಲ್ ಇಂಟಗ್ರೇಷನ್ ಖಾತಾವನ್ನು ಈ ತಿಂಗಳ ಆರಂಭದಲ್ಲೆ ಪ್ರಾಯೋಗಿಕವಾಗಿ 4 ಜಿಲ್ಲೆಗಳಲ್ಲಿ ಜಾರಿ ಮಾಡಲಾಗಿದೆ. ಇಂದಿನಿಂದ 8 ಜಿಲ್ಲೆಗಳಲ್ಲಿ ಅನುಷ್ಠಾನಗೊಳಿಸಲಾಗುವುದು. ರಾಜ್ಯದಲ್ಲಿ ಈವರೆಗೆ ಎಲ್ಲೂ ಸಮಸ್ಯೆ ಬಂದಿಲ್ಲ. ಬೆಂಗಳೂರಲ್ಲಿ ಸಮಸ್ಯೆ ಬರಬಹುದು. ಹೀಗಾಗಿ ಫೆಬ್ರವರಿಯಲ್ಲೆ ಬಿಡಿಎ, ಕೆಐಎಡಿಬಿ, ಕರ್ನಾಟಕ ಹೌಸಿಂಗ್ ಬೋರ್ಡ್, ಕರ್ನಾಟಕ ರಾಜೀವ್ ಗಾಂಧಿ ವಸತಿ ನಿಗಮ ಎಲ್ಲರನ್ನೂ ಕರೆಸಿ ತಮ್ಮ ಖಾತೆಗಳನ್ನು ಡಿಜಿಟಲೀಕರಣಗೊಳಿಸಿ ಎಂದು ತಿಳಿಸಲಾಗಿದೆ ಎಂದು ಅವರು ಹೇಳಿದರು.

ಬಿಬಿಎಂಪಿಯದ್ದೂ ಮಾಡಬೇಕು. ಅವರಿಗೂ ಸೂಚನೆ ನೀಡಲಾಗಿದೆ. ಮುಂದಿನ ತಿಂಗಳಿನಿಂದ ಬಿಬಿಎಂಪಿಯದ್ದೂ ಇ-ಖಾತಾ ಮೂಲಕವೇ ನೋಂದಣಿ ಮಾಡಲು ತೀರ್ಮಾನ ತೆಗೆದುಕೊಳ್ಳಲಾಗಿದೆ. ಇದರಿಂದ ಒಂದು ಕಡೆ ಮಧ್ಯವರ್ತಿಗಳ ಹಾವಳಿಗೆ ಕಡಿವಾಣ, ಬಹಳ ಮುಖ್ಯವಾಗಿ ಅಕ್ರಮಗಳಿಗೆ ಕಡಿವಾಣ, ಅಮಾಯಕರ ಶೋಷಣೆಗೆ ಕಡಿವಾಣ, ಸರಕಾರಕ್ಕೆ ಬರಬೇಕಾದ ತೆರಿಗೆ ವಂಚನೆ ತಡೆಗೆ ಈ ತೀರ್ಮಾನ ಸಹಕಾರಿಯಾಗಲಿದೆ ಎಂದು ಕೃಷ್ಣ ಬೈರೇಗೌಡ ಭರವಸೆ ನೀಡಿದರು.

ಗಂಗೇನಹಳ್ಳಿ ಗ್ರಾಮದ 1 ಎಕರೆ 11 ಗುಂಟೆ ಜಮೀನಿನ ಡಿನೋಟಿಫೈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿಗಳಾದ ಕುಮಾರಸ್ವಾಮಿ ಹಾಗೂ ಯಡಿಯೂರಪ್ಪ ವಿರುದ್ಧ ಸಚಿವ ಕೃಷ್ಣ ಬೈರೇಗೌಡ ಆರೋಪ ಮಾಡಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ್ದ ಕುಮಾರಸ್ವಾಮಿ, ಕೃಷ್ಣ ಬೈರೇಗೌಡ ಅವರನ್ನು ಹೆಬ್ಬೆಟ್ಟು ಎಂದು ಜರಿದಿದ್ದರು.

ಈ ನಿಂದನೆಗೆ ಪ್ರತಿಕ್ರಿಯಿಸಿರುವ ಕೃಷ್ಣ ಬೈರೇಗೌಡ, ‘ರಾಜಕಾರಣದಲ್ಲಿ ವೈಯಕ್ತಿಕ ದಾಳಿ ನಡೆಸುವುದು ನಿಂದಿಸುವುದು ಕುಮಾರಸ್ವಾಮಿಗೆ ಸಾಮಾನ್ಯ ಸಂಗತಿಯಾಗಿದೆ. ಆದರೆ, ನಮ್ಮದು ಅಂತಹ ಸಂಸ್ಕೃತಿಯಲ್ಲ. ಈಗಲೂ ನಾನು ಅದೇ ಪ್ರಶ್ನೆಯನ್ನು ಮುಂದಿಡುತ್ತೇನೆ. ಕುಮಾರಸ್ವಾಮಿ ಸಿಎಂ ಆಗಿದ್ದಾಗ ಈ ಜಮೀನಿನ ಡಿನೋಟಿಫೈ ಗೆ ಅತ್ಯುತ್ಸಾಹ ತೋರಿದ್ದು ಏಕೆ? ಇವರ ಅತ್ತೆ ಈ ಭೂಮಿಯನ್ನು ತಮ್ಮ ಹೆಸರಿಗೆ ಜಿಪಿಎ ಮಾಡಿಸಿಕೊಂಡಿದ್ದು ಸುಳ್ಳೇ? ಅನಿತಾ ಕುಮಾರಸ್ವಾಮಿ ಅವರ ಸಹೋದರನ ಹೆಸರಿಗೆ ಈ ಜಮೀನು ನೋಂದಣಿಯಾಗಿಲ್ಲವೇ? ಇದು ಅಧಿಕಾರದ ದುರ್ಬಳಕೆ ಅಲ್ಲವೇ? ಈ ಬಗ್ಗೆ ಕುಮಾರಸ್ವಾಮಿ ಸ್ಪಷ್ಟನೆ ನೀಡಲಿ ಸಾಕು’ ಎಂದು ಸವಾಲು ಹಾಕಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X