Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ನವೆಂಬರ್ ಅಂತ್ಯದೊಳಗೆ ಬಗರ್ ಹುಕುಂ ಅರ್ಜಿ...

ನವೆಂಬರ್ ಅಂತ್ಯದೊಳಗೆ ಬಗರ್ ಹುಕುಂ ಅರ್ಜಿ ವಿಲೇವಾರಿ : ತಹಶೀಲ್ದಾರರಿಗೆ ಗಡುವು ವಿಧಿಸಿದ ಸಚಿವ ಕೃಷ್ಣ ಬೈರೇಗೌಡ

ವಾರ್ತಾಭಾರತಿವಾರ್ತಾಭಾರತಿ5 Oct 2024 7:43 PM IST
share
ನವೆಂಬರ್ ಅಂತ್ಯದೊಳಗೆ ಬಗರ್ ಹುಕುಂ ಅರ್ಜಿ ವಿಲೇವಾರಿ : ತಹಶೀಲ್ದಾರರಿಗೆ ಗಡುವು ವಿಧಿಸಿದ ಸಚಿವ ಕೃಷ್ಣ ಬೈರೇಗೌಡ

ಬೆಂಗಳೂರು : ಬಗರ್ ಹುಕುಂ ಅರ್ಜಿಗಳನ್ನು ಎಲ್ಲ ತಹಶೀಲ್ದಾರರು ಅಕ್ಟೋಬರ್ ಹಾಗೂ ನವೆಂಬರ್ ಅಂತ್ಯದವರೆಗೆ ವಿಲೇವಾರಿ ಮಾಡಿ, ಅರ್ಹ ರೈತರಿಗೆ ಭೂ ಮಂಜೂರು ಆಗದಿದ್ದರೆ, ಸಂಬಂಧಿತ ತಹಶೀಲ್ದಾರರಿಗೆ ನೋಟೀಸ್ ಜಾರಿಗೊಳಿಸಿ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಎಚ್ಚರಿಕೆ ನೀಡಿದರು.

ಶನಿವಾರ ವಿಕಾಸಸೌಧದಲ್ಲಿ ರಾಜ್ಯದ ಎಲ್ಲ ತಹಶೀಲ್ದಾರ್ ಹಾಗೂ ಉಪ ವಿಭಾಗಾಧಿಕಾರಿಗಳ ಜೊತೆಗೆ ವಿಡಿಯೋ ಕಾನ್ಫರೆನ್ಸ್ ಸಭೆ ನಡೆಸಿದ ಅವರು, ಅರ್ಹ ಭೂ ಹೀನರಿಗೆ ಜಮೀನು ಮಂಜೂರು ಮಾಡಬೇಕು ಎಂಬುದು ಸರಕಾರದ ಮಹತ್ವಾಕಾಂಕ್ಷಿ ಯೋಜನೆ. ಇದೇ ಕಾರಣಕ್ಕೆ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬರುತ್ತಿದ್ದಂತೆ ಅಕ್ರಮ ಸಕ್ರಮ ಯೋಜನೆಯ ಅಡಿ ‘ಬಗರ್ ಹುಕುಂ’ ಅರ್ಜಿ ಆಹ್ವಾನಿಸಲಾಯಿತು ಎಂದು ತಿಳಿಸಿದರು.

ಅಲ್ಲದೆ, ಕಳೆದ ಒಂದು ವರ್ಷದಿಂದ ಸ್ವತಃ ನಾನು ಎಲ್ಲ ಜಿಲ್ಲೆಗಳಿಗೂ ಪ್ರವಾಸ ಮಾಡುತ್ತಾ, ಬಗರ್ ಹುಕುಂ ಸಂಬಂಧಿತ ಕೆಲಸಗಳಿಗೆ ಹೆಚ್ಚಿನ ಆದ್ಯತೆ ನೀಡಲು ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಆದರೂ, ಕೆಲವು ಅಧಿಕಾರಿಗಳ ಕೆಲಸ ತೃಪ್ತಿಕರವಾಗಿಲ್ಲ. ಬಡವರ, ರೈತರ ಪರ ಕೆಲಸ ಮಾಡಲು ಅಸಡ್ಡೆ ತೋರುತ್ತಿದ್ದಾರೆ ಎಂದು ಅವರು ಅಸಮಾಧಾನ ಹೊರಹಾಕಿದರು.

ಮುಂದುವರೆದು, ಬಗರ್ ಹುಕುಂ ಅರ್ಜಿ ವಿಲೇವಾರಿ ಮಾಡಲು ಅಧಿಕಾರಿಗಳಿಗಿರುವ ಸಮಸ್ಯೆ ಏನು? ಒಂದು ವರ್ಷದ ನಂತರವೂ ಅಧಿಕಾರಿಗಳು ಈ ಬಗ್ಗೆ ತಡ ಮಾಡುವುದರಲ್ಲಿ ಅರ್ಥವಿಲ್ಲ. ನಮೂನೆ 50, 53 ಮತ್ತು 57ರ ಅಡಿಯಲ್ಲಿ 14ಲಕ್ಷ ಅರ್ಜಿಗಳು ಸಲ್ಲಿಕೆಯಾಗಿದ್ದು, ಈ ಪೈಕಿ ಅನರ್ಹ ಅರ್ಜಿಗಳೇ ಬಹುಪಾಲಿವೆ ಎಂದು ಅವರು ಹೇಳಿದರು.

ಹೀಗಾಗಿ ಅಧಿಕಾರಿಗಳು ತಮ್ಮ ವಿವೇಚನೆಯ ಮೇಲೆ ಅನರ್ಹ ಅರ್ಜಿಗಳನ್ನು ಅನೂರ್ಜಿತಗೊಳಿಸಿ ಅರ್ಹರಿಗೆ ಶೀಘ್ರ ಜಮೀನು ಮಂಜೂರು ಮಾಡಬೇಕು. ಅಕ್ಟೋಬರ್-ನವೆಂಬರ್ ತಿಂಗಳಲ್ಲಿ ಈ ಕೆಲಸಗಳಿಗೆ ಹೆಚ್ಚಿನ ಆದ್ಯತೆ ನೀಡಬೇಕು. ಇದೇ ತಿಂಗಳ ಅಂತ್ಯದಲ್ಲಿ ಮತ್ತೊಂದು ವಿಡಿಯೋ ಕಾನ್ಫರೆನ್ಸ್ ಸಭೆ ನಡೆಸಿ ಪ್ರಗತಿ ಪರಿಶೀಲನೆ ನಡೆಸಲಾಗುವುದು ಎಂದು ಕೃಷ್ಣ ಬೈರೇಗೌಡ ತಿಳಿಸಿದರು.

ಅರ್ಹ ಫಲಾನುಭವಿಗಳಿಗೆ ಭೂ ಮಂಜೂರು ಮಾಡಲು ವಿಳಂಬ ಧೋರಣೆ ಸರಿಯಲ್ಲ. ಈವರೆಗೆ ಎಷ್ಟು ಜನರ ಅರ್ಜಿಗಳು ಅರ್ಹ ಎಂದು ಅಧಿಕಾರಿಗಳು ಗುರುತಿಸಿದ್ದೀರೋ ಆ ಎಲ್ಲರಿಗೂ ಮುಂದಿನ ಒಂದೆರಡು ವಾರದಲ್ಲಿ ಸಾಗುವಳಿ ಚೀಟಿ ನೀಡಿ. ಬಗರ್ ಹುಕುಂ ಕಮಿಟಿ ಸಭೆ ನಡೆಸಲು ಶಾಸಕರು ಸಮಯ ನೀಡದಿದ್ದರೆ ದಯವಿಟ್ಟು ನನಗೆ ತಿಳಿಸಿ, ನಾನು ಅವರ ಜೊತೆ ಮಾತನಾಡಿ ಸಮಯ ನಿಗದಿಗೊಳಿಸುತ್ತೇನೆ ಎಂದು ಅವರು ಆಶ್ವಾಸನೆ ನೀಡಿದರು.

ಇದೇ ಸಂದರ್ಭದಲ್ಲಿ, ಗುಂಡ್ಲುಪೇಟೆ ತಾಲೂಕಿನಲ್ಲಿ ಈಗಾಗಲೇ 15 ಅರ್ಹ ಫಲಾನುಭವಿಗಳನ್ನು ಗುರುತಿಸಿ ಭೂ ಮಂಜೂರು ಮಾಡಲಾಗಿದ್ದು, ತಹಶೀಲ್ದಾರರ ಕೆಲಸಕ್ಕೆ ಸಚಿವರು ಮೆಚ್ಚುಗೆ ಸೂಚಿಸಿದರು. ಅಲ್ಲದೆ, ಉಳಿದ ಅರ್ಜಿಗಳನ್ನೂ ಶೀಘ್ರ ವಿಲೇವಾರಿಗೊಳಿಸುವಂತೆ ಸೂಚಿಸಿದರು.

ಈಗಾಗಲೇ ಸಲ್ಲಿಕೆಯಾಗಿರುವ ಬಗರ್ ಹುಕುಂ ಅರ್ಜಿಗಳ ಪೈಕಿ ಅರ್ಹ ಅರ್ಜಿಗಳು ಯಾವುವು? ಅನರ್ಹ ಅರ್ಜಿಗಳು ಯಾವುವು ಎಂದು ತಹಶೀಲ್ದಾರ್ ಗಳಿಗೆ ಪ್ರಾಥಮಿಕ ಪರಿಶೀಲನೆಯಲ್ಲೆ ತಿಳಿಯುತ್ತದೆ. ಹೀಗಾಗಿ ಈ ಕೆಲಸವನ್ನು ಅಧಿಕಾರಿಗಳು ಕಚೇರಿಯಲ್ಲೇ ಮುಗಿಸಿ. ಗ್ರಾಮ ಆಡಳಿತ ಅಧಿಕಾರಿಗಳು ತಮ್ಮ ಕೆಳಗೆ ಕೆಲಸ ನಿರ್ವಹಿಸುತ್ತಿದ್ದಾರೆ ಎಂದು ಅವರಿಗೆ ಅನಗತ್ಯವಾಗಿ ಕೆಲಸ ನೀಡಬೇಡಿ. ಅನರ್ಹ ಅರ್ಜಿಗಳ ಪರಿಶೀಲನೆಗಾಗಿ ಅವರನ್ನು ಹೊರಗೆ ಕಳುಹಿಸಬೇಡಿ ಎಂದು ಕೃಷ್ಣ ಬೈರೇಗೌಡ ತಾಕೀತು ಮಾಡಿದರು.

ಸಭೆಯಲ್ಲಿ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಕಟಾರಿಯ ಹಾಗೂ ಕಂದಾಯ ಆಯುಕ್ತ ಸುನೀಲ್ ಕುಮಾರ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X