Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ತಮ್ಮ ವೈಫಲ್ಯ ಮುಚ್ಚಿಕೊಳ್ಳಲು...

ತಮ್ಮ ವೈಫಲ್ಯ ಮುಚ್ಚಿಕೊಳ್ಳಲು ಬಿಜೆಪಿಯಿಂದ ಪಾದಯಾತ್ರೆ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಕುಮಾರಸ್ವಾಮಿ ನೈತಿಕತೆ ಇಲ್ಲದ ರಾಜಕಾರಣಿ : ಜನಾಂದೋಲನ ಕಾರ್ಯಕ್ರಮದಲ್ಲಿ ಸಚಿವೆ ವಾಗ್ದಾಳಿ

ವಾರ್ತಾಭಾರತಿವಾರ್ತಾಭಾರತಿ6 Aug 2024 3:24 PM IST
share
ತಮ್ಮ ವೈಫಲ್ಯ ಮುಚ್ಚಿಕೊಳ್ಳಲು ಬಿಜೆಪಿಯಿಂದ ಪಾದಯಾತ್ರೆ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಮಂಡ್ಯ: ಬಿಜೆಪಿ ಹಾಗೂ ಜೆಡಿಎಸ್ ಪಕ್ಷದವರು ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರಕಾರವನ್ನು ಬೀಳಿಸುವ ಕನಸು ಕಾಣುತ್ತಿದ್ದಾರೆ. ಕರ್ನಾಟಕದ ಜನತೆಗೆ ಕೇಂದ್ರ ಸರಕಾರ ಮೋಸ ಮಾಡುತ್ತಲೇ ಬಂದಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಆರೋಪಿಸಿದರು ‌

ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ನೇತೃತ್ವದಲ್ಲಿ ಮಂಡ್ಯದಲ್ಲಿ ಮಂಗಳವಾರ ನಡೆದ ಜನಾಂದೋಲನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕೇಂದ್ರದಲ್ಲಿ ಬಿಜೆಪಿ ಸರಕಾರ 10 ವರ್ಷದಿಂದ ಅಧಿಕಾರದಲ್ಲಿದ್ದರೂ ಕರ್ನಾಟಕಕ್ಕೆ ಅವರ ಕೊಡುಗೆ ಶೂನ್ಯ. ತಮ್ಮ ವೈಫಲ್ಯವನ್ನು ಮುಚ್ಚಿಹಾಕಿಕೊಳ್ಳಲು ಇಂದು ಬಿಜೆಪಿ ಪಾದಯಾತ್ರೆ ಹೆಸರಿನಲ್ಲಿ ರಾಜಕೀಯ ಮಾಡುತ್ತಿದೆ ಎಂದರು.

ತನ್ನ ಗರ್ಭದಲ್ಲಿ ಭ್ರಷ್ಟಾಚಾರವನ್ನೇ ತುಂಬಿಕೊಂಡು, ಭ್ರಷ್ಟಾಚಾರಕ್ಕೆ ಇನ್ನೊಂದು ಹೆಸರು ಎನ್ನುವಂತಿರುವ ಬಿಜೆಪಿ ಮತ್ತು ಜೆಡಿಎಸ್‌ನವರು ಕೇವಲ ಒಂದು ವರ್ಷದ ಹಿಂದೆ ಆಡಳಿತಕ್ಕೆ ಬಂದಿರುವ ನಮ್ಮ ಸರಕಾರದ ಮೇಲೆ ಇಲ್ಲದ ಆರೋಪಗಳನ್ನು ಮಾಡುವ ಮೂಲಕ ಜನಪರ ಆಡಳಿತ ನಡೆಸುವುದಕ್ಕೆ ಸಹಕಾರ ನೀಡುವ ಬದಲು ವಿನಾಕಾರಣ ಅಡ್ಡಿ ಉಂಟು ಮಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಇಂದಿರಾಗಾಂಧಿ ಪ್ರಧಾನಿಯಾಗಿದ್ದ ವೇಳೆ ಬ್ಯಾಂಕ್ ಗಳನ್ನು ರಾಷ್ಟ್ರೀಕರಣ ಮಾಡಿ, ಜನ ಸಾಮಾನ್ಯರಿಗೂ ಸಾಲ ಸಿಗುವಂತೆ ಮಾಡಿದರು. ಆದರೆ, ಇಂದಿನ ಬಿಜೆಪಿ ನೇತೃತ್ವದ ಎನ್ ಡಿಎ ಸರಕಾರ ದೇಶದ ಬ್ಯಾಂಕ್ ಗಳನ್ನೇ ಖಾಸಗೀಕರಣ ಮಾಡುತ್ತಿದೆ. ದೇಶದ ಶ್ರೀಮಂತರ ಪರವಾಗಿ ಕೇಂದ್ರ ಸರಕಾರ ಕಾರ್ಯನಿರ್ವಹಿಸುತ್ತಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕಿಡಿಕಾರಿದರು.

ಕುಮಾರಸ್ವಾಮಿ ನೈತಿಕತೆ ಇಲ್ಲದ ರಾಜಕಾರಣಿ :

ನಮ್ಮ ಕುಟುಂಬಕ್ಕೆ ವಿಷ ಹಾಕಿದ ಹಾಸನದ ಮಾಜಿ ಶಾಸಕ ಪ್ರೀತಂ ಗೌಡ ಜೊತೆ ವೇದಿಕೆ ಹಂಚಿಕೊಳ್ಳುವುದಿಲ್ಲ. ಪಾದಯಾತ್ರೆಯಲ್ಲಿ ಪಾಲ್ಗೊಳ್ಳುವುದಿಲ್ಲ ಎಂದು ಹೇಳುತ್ತಿದ್ದ ಕುಮಾರಸ್ವಾಮಿ ಅವರು ಪ್ರಜ್ವಲ್ ರೇವಣ್ಣ ಅವರಿಂದ ಅವಮಾನವಾಗಿರುವ ನೂರಾರು ಮಹಿಳೆಯರ ಬಗ್ಗೆ ಯೋಚಿಸುತ್ತಿಲ್ಲ. ಇಂದೆಥಾ ನ್ಯಾಯ. ಇದನ್ನು ನೋಡಿದರೆ ಕುಮಾರಸ್ವಾಮಿ ಒಬ್ಬ ನೈತಿಕತೆ ಇಲ್ಲದ ರಾಜಕಾರಣಿ ಎಂದು ಟೀಕಿದರು.

ಈ ಹಿಂದೆ ವಿಧಾನ ಪರಿಷತ್ ನಲ್ಲಿ ಬಿಎಸ್ ಯಡಿಯೂರಪ್ಪ ಅವರೇ, ಮುಡಾದಲ್ಲಿ ದೇವೇಗೌಡ, ಕುಮಾರಸ್ವಾಮಿ ಕುಟುಂಬಕ್ಕೆ ಸೈಟ್ ಹಂಚಲಾಗಿದೆ ಎಂದು ಆರೋಪಿಸಿದ್ದರು. ಆದರೆ, ಈಗ ಕುಮಾರಸ್ವಾಮಿ, ವಿಜಯೇಂದ್ರ ಅವರೇ ಒಟ್ಟಾಗಿ ಪಾದಯಾತ್ರೆ ನಡೆಸುತ್ತಿರುವುದು ವಿಪರ್ಯಾಸ ಎಂದರು.

ಇಂದೇ ಗೃಹಲಕ್ಷ್ಮಿ ಯೋಜನೆ ಹಣ ಜಮಾ :

ಕಳೆದ ಎರಡು ತಿಂಗಳ ಗೃಹಲಕ್ಷ್ಮಿ ಯೋಜನೆಯ ಹಣವನ್ನು ಇಂದೇ(ಆ.6) ಜಮಾ ಮಾಡಲಾಗುವುದು. ಎರಡು ತಿಂಗಳ ಹಣ ಇಂದು ಮನೆ ಒಡತಿಯರ ಬ್ಯಾಂಕ್ ಅಕೌಂಟ್ ಗೆ ಜಮಾ ಆಗಲಿದ್ದು, ಇದರ ಬಗ್ಗೆ ಗೊಂದಲ ಬೇಡ. ಯಾವುದೇ ಕಾರಣಕ್ಕೂ ರಾಜ್ಯ ಸರಕಾರದ ಪಂಚ ಗ್ಯಾರಂಟಿ ಯೋಜನೆಗಳು ನಿಲ್ಲುವುದಿಲ್ಲ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X