Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ರಸ್ತೆ, ಸೇತುವೆ, ಹೆದ್ದಾರಿ...

ರಸ್ತೆ, ಸೇತುವೆ, ಹೆದ್ದಾರಿ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಲು ಸಚಿವ ಮಧು ಬಂಗಾರಪ್ಪ ಸೂಚನೆ

ವಾರ್ತಾಭಾರತಿವಾರ್ತಾಭಾರತಿ4 Nov 2023 7:18 PM IST
share
ರಸ್ತೆ, ಸೇತುವೆ, ಹೆದ್ದಾರಿ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಲು ಸಚಿವ ಮಧು ಬಂಗಾರಪ್ಪ ಸೂಚನೆ

ಶಿವಮೊಗ್ಗ(ನ.04) ; ಜಿಲ್ಲೆಯಲ್ಲಿ ಈಗಾಗಲೇ ಕೈಗೊಳ್ಳಲಾಗಿರುವ ರಸ್ತೆ, ವರ್ತುಲ ರಸ್ತೆ, ಸೇತುವೆ, ಮೇಲ್ಸೇತುವೆ, ಹೆದ್ದಾರಿ ಕಾಮಗಾರಿಗಳನ್ನು ನಿಗಧಿಪಡಿಸಿದ ಕಾಲಮಿತಿಯೊಳಗಾಗಿ ಪೂರ್ಣಗೊಳಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಹಾಗೂ ಈ ಕಾಮಗಾರಿಗಳು ಗುಣಮಟ್ಟದ್ದಾಗಿರುವಂತೆ ನೋಡಿಕೊಳ್ಳುವಂತೆ ರಾಜ್ಯ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಧು ಎಸ್.ಬಂಗಾರಪ್ಪ ಅವರು ಲೋಕೋಪಯೋಗಿ ಇಲಾಖಾ ಅಭಿಯಂತರರಿಗೆ ಸೂಚಿಸಿದರು.

ಅವರು ಜಿಲ್ಲಾ ಪಂಚಾಯತಿಯ ಅಬ್ದುಲ್ ನಝೀರ್‌ಸಾಬ್ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಜಿಲ್ಲಾ, ರಾಜ್ಯ ಮತ್ತು ರಾಷ್ಟ್ರೀಯ ಸಂಪರ್ಕ ರಸ್ತೆಗಳ ಅಭಿವೃದ್ಧಿ ಸೇರಿದಂತೆ ಲೋಕೋಪಯೋಗಿ ಇಲಾಖೆಯಿಂದ ಕೈಗೊಳ್ಳಲಾಗಿರುವ ಪ್ರಮುಖ ಅಭಿವೃದ್ಧಿ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಈ ಯೋಜನೆಗಳ ಸಕಾಲಿಕ ಅನುಷ್ಠಾನದಿಂದಾಗಿ ನಗರಗಳಲ್ಲಿನ ಸಂಚಾರ ದಟ್ಟಣೆ ನಿಯಂತ್ರಣಗೊಳ್ಳಲಿದೆ. ಅಲ್ಲದೇ ಆಕಸ್ಮಿಕ ಅಪಘಾತಗಳು ನಿಯಂತ್ರಣಗೊಳ್ಳಲಿದೆ ಮಾತ್ರವಲ್ಲ ಮಾಲಿನ್ಯ ನಿಯಂತ್ರಣಗೊಳ್ಳಲಿದೆ. ಪ್ರವಾಸಿಗರಿಗೆ ಕ್ರಮಿಸುವ ದೂರ ಹಾಗೂ ಸಮಯದ ಉಳಿತಾಯವಾಗಲಿದೆ ಎಂದರು.

ಈ ಕಾಮಗಾರಿಗಳನ್ನು ಪೂರ್ಣಗೊಳಿಸುವಲ್ಲಿ ಇರಬಹುದಾದ ಹಾಗೂ ನ್ಯಾಯಾಲಯದಲ್ಲಿರುವ ಮೊಕದ್ದಮೆಗಳನ್ನು ನಿಯಮಾನುಸಾರ ತ್ವರಿತಗತಿಯಲ್ಲಿ ಇತ್ಯರ್ಥಪಡಿಸಿಕೊಳ್ಳಬೇಕು. ಅದಕ್ಕಾಗಿ ಅಧಿಕಾರಿಗಳು ಸಕಾಲಿಕ ಕ್ರಮ ಕೈಗೊಳ್ಳಬೇಕು. ಭೂಸ್ವಾದೀನ ಪ್ರಕ್ರಿಯೆ ಬಾಕಿ ಇದ್ದಲ್ಲಿ ಸಂಬಂಧಿತ ವ್ಯಕ್ತಿ ಅಥವಾ ಆಸ್ತಿಗಳ ಮಾಲೀಕರನ್ನು ವಿಶ್ವಾಸಕ್ಕೆ ತೆಗೆದುಕೊಂಡು, ಸಂಬಂಧಿತ ಇಲಾಖಾ ಅಧಿಕಾರಿಗಳು ಹಾಗೂ ಸ್ಥಳೀಯ ಅಧಿಕಾರಿಗಳ ಉಪಸ್ಥಿತಿಯಲ್ಲಿ ರೈತರು, ಸಂತ್ರಸ್ಥರ ಸಭೆಯನ್ನು ಕರೆದು ಮನವೊಲಿಸಿ, ಯೋಜನೆಗಳನ್ನು ಅನುಷ್ಠಾನಗೊಳಿಸಬೇಕು. ಇದಕ್ಕಾಗಿ ಸರ್ಕಾರದ ವತಿಯಿಂದ ಅಗತ್ಯ ಸಹಕಾರವನ್ನು ಒದಗಿಸಲಾಗುವುದು ಎಂದರು.

ಈ ಎಲ್ಲಾ ಯೋಜನೆಗಳ ಅನುಷ್ಠಾನದಲ್ಲಿ ಕಂದಾಯ, ರಾಷ್ಟ್ರೀಯ ಹೆದ್ದಾರಿ, ಲೋಕೋಪಯೋಗಿ, ಅರಣ್ಯ ಇಲಾಖೆ ಸೇರಿದಂತೆ ಸಂಬಂಧಿತ ಇಲಾಖಾ ಅಧಿಕಾರಿಗಳ ನಡುವೆ ಸಮನ್ವಯತೆ ಅಗತ್ಯವಿದೆ. ಕೆಲವು ಕಾಮಗಾರಿಗಳು ಆರಂಭಗೊಂಡು ಕೆಲವು ವರ್ಷಗಳೇ ಕಳೆದಿದ್ದರೂ ನಿರೀಕ್ಷಿತ ಪ್ರಗತಿ ಸಾಧ್ಯವಾಗದಿರುವುದು ಬೇಸರವೆನಿಸಿದೆ. ಸಂಬಂಧಿತ ಇಲಾಖೆಗಳ ಅಧಿಕಾರಿಗಳು ಗುತ್ತಿಗೆದಾರರಿಗೆ ಗಡುವು ನೀಡಿ ಗುಣಮಟ್ಟದ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ಹಾಗೂ ಕಾಮಗಾರಿಗಳಿಗೆ ಬಳಸುತ್ತಿರುವ ಮಾನವ ಸಂಪನ್ಮೂಲವನ್ನು ಹೆಚ್ಚಿಸಿಕೊಂಡು ಕೂಡಲೇ ಪೂರ್ಣಗೊಳಿಸಲು ಸೂಚಿಸುವಂತೆ ಸಚಿವರು ಅಧಿಕಾರಿಗಳಿಗೆ ಹೇಳಿದರು.

ಶಿವಮೊಗ್ಗ ವಿದ್ಯಾನಗರದ ರೈಲ್ವೇ ಮೇಲ್ಸೇತುವೆ ಕಾಮಗಾರಿ ವಿಳಂಬದಿಂದಾಗಿ ಜನಸಾಮಾನ್ಯರಿಗೆ ತೀವ್ರತರಹದ ಅಡಚಣೆ ಉಂಟಾಗುತ್ತಿರುವ ಬಗ್ಗೆ ಸಾಕಷ್ಟು ದೂರುಗಳು ಬಂದಿವೆ. ತುಂಗಾ ಸೇತುವೆಯ ಒತ್ತುವರಿಯನ್ನು ತೆರವುಗೊಳಿಸಿ, ಉದ್ದೇಶಿತ ಕಾಮಗಾರಿಯನ್ನು ಕೂಡಲೇ ಪೂರ್ಣಗೊಳಿಸುವಂತೆ ಸೂಚಿಸಿದರು.

ಸಾಗರದ ಚತುಷ್ಟಥ ರಸ್ತೆ, ಶಿಕಾರಿಪುರ ವರ್ತುಲ ರಸ್ತೆ, ಬೈಂದೂರು-ರಾಣೆಬೆನ್ನೂರು ರಸ್ತೆ ಅಗಲೀಕರಣ ಕಾಮಗಾರಿ, ತುಮಕೂರು-ಹೊನ್ನಾವರ ರಸ್ತೆ, ಮೇಗರವಳ್ಳಿ-ಆಗುಂಬೆ, ಶಿವಮೊಗ್ಗ-ಚಿತ್ರದುರ್ಗ ರಸ್ತೆ ಮುಂತಾದ ಕಾಮಗಾರಿ ಹಾಗೂ ಸಮೀಕ್ಷೆ ಕಾರ್ಯವನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ಅವರು ಸೂಚಿಸಿದರು.

ಶಿವಮೊಗ್ಗ-ಮಂಗಳೂರು ಚತುಷ್ಪಥ ರಸ್ತೆ ಭೂಸ್ವಾದೀನ ಪ್ರಕ್ರಿಯೆ ಪ್ರಗತಿಯಲ್ಲಿದೆ. ಸಿಗಂಧೂರು ಸೇತುವೆ ನಿರ್ಮಾಣಕ್ಕೆ ನೀರಿನ ಕೊರತೆ ಇದೆ ಅಲ್ಲದೇ ನಿರಂತರ ವಿದ್ಯುತ್ ಇಲ್ಲದಿರುವುದು ಅಡಚಣೆಗೆ ಕಾರಣವಾಗಿದೆ. ವಿದ್ಯುತ್ತನ್ನು ನಿರಂತರವಾಗಿ ಕೆಲಸಕ್ಕೆ ಅಡಚಣೆ ಉಂಟಾಗದಂತೆ ಸರಬರಾಜು ಮಾಡಲು ಮೆಸ್ಕಾಂ ಅಧಿಕಾರಿಗಳಿಗೆ ಸೂಚಿಸಿರುವುದಾಗಿ ಸಚಿವರು ತಿಳಿಸಿದರು.

ಅಲ್ಲದೇ ಜಿಲ್ಲೆಯ ಕೈಗೊಳ್ಳಲಾಗಿರುವ ಅನೇಕ ಕಾಮಗಾರಿಗಳನ್ನು ತ್ವರಿತಗತಿಯಲ್ಲಿ ನಿಗಧಿಪಡಿಸಿದ ಕಾಲಮಿತಿಯಲ್ಲಿ ಪೂರ್ಣಗೊಳಿಸುವಂತೆ ಹಾಗೂ ಅಗತ್ಯವಿರುವಲ್ಲಿ ಜಿಲ್ಲಾಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿ, ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವಂತೆ ಸಚಿವರು ಲೋಕೋಪಯೋಗಿ ಇಲಾಖಾಧಿಕಾರಿಗಳಿಗೆ ಸೂಚಿಸಿದರು.

ಸಭೆಯಲ್ಲಿ ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ, ಸಿಸಿಎಫ್ ಹನುಮಂತಪ್ಪ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸ್ನೇಹಲ್ ಸುಧಾಕರ್ ಲೋಖಂಡೆ, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಜಿ.ಕೆ.ಮಿಥುನ್‌ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X