Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಎಸ್ಸಿಎಪಿ/ಟಿಎಸ್‍ಪಿ ಯೋಜನೆ ಹಣ ಪರಿಶಿಷ್ಟ...

ಎಸ್ಸಿಎಪಿ/ಟಿಎಸ್‍ಪಿ ಯೋಜನೆ ಹಣ ಪರಿಶಿಷ್ಟ ಸಮುದಾಯಗಳಿಗೆ ತಲುಪುತ್ತಿದೆ : ಸಚಿವ ಮಹದೇವಪ್ಪ

ವಾರ್ತಾಭಾರತಿವಾರ್ತಾಭಾರತಿ19 July 2024 10:01 PM IST
share
ಎಸ್ಸಿಎಪಿ/ಟಿಎಸ್‍ಪಿ ಯೋಜನೆ ಹಣ ಪರಿಶಿಷ್ಟ ಸಮುದಾಯಗಳಿಗೆ ತಲುಪುತ್ತಿದೆ : ಸಚಿವ ಮಹದೇವಪ್ಪ

ಬೆಂಗಳೂರು : ಪರಿಶಿಷ್ಟ ಸಮುದಾಯಗಳಿಗೆ ಮೀಸಲಿಟ್ಟ ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಸಿಕೊಂಡರೂ, ಅದೇ ಸಮುದಾಯದವರ ಫಲಾನುಭವಿಗಳಿಗೆ ಸಿಗುವುದರಿಂದ ಇದರಲ್ಲಿ ದುರುಪಯೋಗ ಆಗಿಲ್ಲ ಎಂದು ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ.ಮಹದೇವಪ್ಪ ಸ್ಪಷ್ಟಪಡಿಸಿದ್ದಾರೆ.

ಶುಕ್ರವಾರ ವಿಧಾನ ಪರಿಷತ್‍ನಲ್ಲಿ ಕಾಂಗ್ರೆಸ್ ಸದಸ್ಯ ಸುಧಾಮದಾಸ್ ‘ಗ್ಯಾರಂಟಿ ಯೋಜನೆಗಳಿಗೆ ಎಸ್ಸಿಎಸ್‍ಪಿ/ ಟಿಎಸ್‍ಪಿ ಯೋಜನೆಯಡಿ ಮೀಸಲಿಟ್ಟ ಅನುದಾನವನ್ನು ಬಳಸಿಕೊಳ್ಳಲಾಗುತ್ತದೆಯೇ ಎಂದು ಪ್ರಶ್ನಿಸಿದಾಗ ಅವರು ಉತ್ತರಿಸಿದರು.

ದೇಶದಲ್ಲೇ ಮೊದಲ ಬಾರಿಗೆ ನಮ್ಮ ರಾಜ್ಯದಲ್ಲಿ ಎಸ್ಸಿಎಪಿ/ಟಿಎಸ್‍ಪಿ ಯೋಜನೆಯನ್ನು ನಮ್ಮ ಸರಕಾರ ಜಾರಿ ಮಾಡಿದೆ. ಇದನ್ನು ಹೊರತುಪಡಿಸಿದರೆ ಆಂಧ್ರ ಮತ್ತು ತೆಲಂಗಾಣದಲ್ಲಿ ಈ ಯೋಜನೆ ಇದೆ. ಪರಿಶಿಷ್ಟ ಸಮುದಾಯಕ್ಕೆ ಸೇರಿದವರಿಗೆ ಈ ಹಣ ತಲುಪುತ್ತದೆ. ಹೀಗಾಗಿ ದುರುಪಯೋಗವಾಗುವ ಪ್ರಶ್ನೆ ಉದ್ದವಿಸುವುದಿಲ್ಲ ಎಂದು ಹೇಳಿದರು.

ಸೆಕ್ಷನ್ ಎ, ಬಿ, ಸಿ ಅಡಿ ಮೀಸಲಿಟ್ಟ ಅನುದಾನವನ್ನು ವಿವಿಧ ಯೋಜನೆಗಳಿಗೆ ಬಳಸಿಕೊಳ್ಳಲು ಅವಕಾಶವಿತ್ತು. ಹಿಂದಿನ ಬಿಜೆಪಿ ಸರಕಾರ 8 ಸಾವಿರ ಕೋಟಿ ಹಣವನ್ನು ಅನ್ಯ ಯೋಜನೆಗಳಿಗೆ ಬಳಸಿಕೊಂಡಿರುವ ನಿಧರ್ಶನಗಳಿವೆ. ಹೀಗಾಗಿ ಅನ್ಯ ಕಾರ್ಯಗಳಿಗೆ ಅನುದಾನ ಬಳಸಿಕೊಳ್ಳಲು ಇದ್ದ ಸೆಕ್ಷನ್ ಡಿ ಕಾಯ್ದೆಯನ್ನು ತೆಗೆದು ಹಾಕಲಾಗಿದೆ ಎಂದು ವಿವರಿಸಿದರು.

ಸಚಿವರ ಉತ್ತರಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಬಿಜೆಪಿ ಸದಸ್ಯ ಛಲವಾದಿ ನಾರಾಯಣಸ್ವಾಮಿ, ಎಸ್ಸಿಎಪಿ/ಟಿಎಸ್‍ಪಿ ಯೋಜನೆಯ ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಸಲಾಗುತ್ತಿದೆ. ಕಾಯ್ದೆಯ ಸೆಕ್ಷನ್ 7ಡಿ ಯನ್ನು ಸರಕಾರ ತೆಗೆದು ಹಾಕಿಲ್ಲ. ಪರಿಶಿಷ್ಟ ಜಾತಿಗಳಿಗೆ ಮೀಸಲಿಟ್ಟ ಹಣ ಬೇರೆ ಇಲಾಖೆಯ ಗ್ಯಾರಂಟಿ ಯೋಜನೆಗಳಿಗೆ ಹೇಗೆ ಬಳಸುತ್ತಿದ್ದೀರಾ? ಉಚಿತ ಬಸ್‍ನಲ್ಲಿ ಪ್ರಯಾಣಿಸುವವರಿಗೆ ಜಾತಿ ನೋಡಿ ಟಿಕೆಟ್ 5 ಕೊಡುತ್ತೀರಾ? ಅನ್ನಭಾಗ್ಯ ಯೋಜನೆ ಅಡಿ ಜಾತಿ ನೋಡಿ ಅಕ್ಕಿ ಕೊಡಿತ್ತೀರಾ ಎಂದು ಪ್ರಶ್ನಿಸಿದರು.

ಇದಕ್ಕೆ ಉತ್ತರಿಸಿದ ಸಚಿವ ಡಾ.ಮಹದೇವಪ್ಪ, ಹಿಂದಿನ ಸಿದ್ದರಾಮಯ್ಯ ಸರಕಾರದಲ್ಲಿ ಎಸ್ಸಿಎಪಿ/ಟಿಎಸ್‍ಪಿ ಯೋಜನೆಯನ್ನು ತರಲಾಯಿತು. ಇದರ ಅಡಿ ಹಣವನ್ನು ಯಾವ ರೀತಿ ಬಳಕೆ ಮಾಡಬೇಕು ಅಂತ ಸೆವೆನ್ ಎ, ಸೆವೆನ್ ಬಿ, ಸೆವನ್ ಸಿ, ಸೆವೆನ್ ಡಿ ಅಂತ ಮಾಡಲಾಗಿದೆ. ಸೆವೆನ್ ಡಿ ಸೆಕ್ಷನ್ ಅನ್ನು ನಿನ್ನೆಯ ಕ್ಯಾಬಿನೆಟ್‍ನಲ್ಲಿ ತೆಗೆದು ಹಾಕಿದ್ದೇವೆ. ಅನ್ಯ ಉದ್ದೇಶಗಳಿಗೆ ಯೋಜನೆ ಹಣ ಬಳಸಲು ಸಾಧ್ಯವಿಲ್ಲ. ಅದೇ ಸಮುದಾಯಕ್ಕೆ ಹಣ ಬಳಕೆ ಆಗಲಿದೆ ಎಂದರು.

ಸಚಿವ ಪ್ರಿಯಾಂಕ್ ಖರ್ಗೆ ಮಾತನಾಡಿ, ಹಣವನ್ನು ನಾವು ಬೇರೆ ಯೋಜನೆಗಳಿಗೆ ಬಳಸಿಕೊಂಡಿಲ್ಲ. ಕಾಯ್ದೆಯಲ್ಲಿ ಯಾವೆಲ್ಲ ನಿಯಮಗಳಿವೆಯೋ ಅದೇ ರೀತಿ ನಮ್ಮ ಸರಕಾರ ನಡೆದುಕೊಂಡಿದೆ. ಹೀಗಾಗಿ ಕಾಯ್ದೆ ಉಲ್ಲಂಘನೆಯಾಗುವ ಪ್ರಶ್ನೆ ಬರುವುದೇ ಇಲ್ಲ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X