Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಬೆಂಗಳೂರಿನಲ್ಲಿ 2ನೇ ಅಂತಾರಾಷ್ಟ್ರೀಯ...

ಬೆಂಗಳೂರಿನಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಖಚಿತ : ಸಚಿವ ಎಂ.ಬಿ.ಪಾಟೀಲ್

ವಾರ್ತಾಭಾರತಿವಾರ್ತಾಭಾರತಿ10 July 2024 6:17 PM IST
share
ಬೆಂಗಳೂರಿನಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಖಚಿತ : ಸಚಿವ ಎಂ.ಬಿ.ಪಾಟೀಲ್

ಬೆಂಗಳೂರು : ಜಾಗತಿಕ ಮಟ್ಟದಲ್ಲಿ ಕೈಗಾರಿಕಾ ಬೆಳವಣಿಗೆ ಮತ್ತು ಜನಸಂಖ್ಯೆಯ ದೃಷ್ಟಿಯಿಂದ ಅತ್ಯಂತ ಕ್ಷಿಪ್ರವಾಗಿ ಬೆಳೆಯುತ್ತಿರುವ ಬೆಂಗಳೂರು ನಗರಕ್ಕೆ ವಾರ್ಷಿಕವಾಗಿ 100 ಮಿಲಿಯನ್ ಪ್ರಯಾಣಿಕರನ್ನು ನಿರ್ವಹಿಸುವ ಮತ್ತೊಂದು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಅತ್ಯಗತ್ಯವಾಗಿದೆ. ಇದಕ್ಕಾಗಿ ನಾಲ್ಕೂವರೆ ಸಾವಿರದಿಂದ ಐದು ಸಾವಿರ ಎಕರೆ ಭೂಮಿ ಬೇಕಾಗಲಿದ್ದು, ಹಲವು ಅಂಶಗಳನ್ನು ಪರಿಗಣಿಸಿ ಇದನ್ನು ಉನ್ನತ ಮಟ್ಟದ ಸಮಿತಿಯು ಆಖೈರು ಮಾಡಲಿದೆ ಎಂದು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ.ಪಾಟೀಲ್ ಬುಧವಾರ ಘೋಷಿಸಿದ್ದಾರೆ.

ವಿಧಾನಸೌಧದಲ್ಲಿ ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಅವರು, "ಬೆಂಗಳೂರು ದೇಶದ ತಂತ್ರಜ್ಞಾನ ಮತ್ತು ನವೋದ್ಯಮಗಳ ರಾಜಧಾನಿಯೂ ಆಗಿದ್ದು, ಈಗಿರುವ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು ದಿಲ್ಲಿ ಮತ್ತು ಮುಂಬೈ ನಂತರ ಅತಿದಟ್ಟಣೆಯಿಂದ ಕೂಡಿರುವ ಮೂರನೇ ಏರ್-ಪೋರ್ಟ್ ಆಗಿದೆ. ಸದ್ಯಕ್ಕೆ ಇಲ್ಲಿ ವರ್ಷಕ್ಕೆ 52 ಮಿಲಿಯನ್ ಪ್ರಯಾಣಿಕರ ಮತ್ತು 0.71 ಮಿಲಿಯನ್ ಟನ್ ಸರಕು ಸಾಗಣೆ ನಿರ್ವಹಣೆ ಆಗುತ್ತಿದೆ. ಇವುಗಳನ್ನು ಕ್ರಮವಾಗಿ 110 ಮಿಲಿಯನ್ ಮತ್ತು 1.10 ಮಿಲಿಯನ್ ಟನ್ ತನಕ ವಿಸ್ತರಿಸಬಹುದಾಗಿದ್ದು, 2035ರ ವೇಳೆಗೆ ಇದು ಗರಿಷ್ಠ ಮಟ್ಟ ತಲುಪಲಿದೆ. ಆದರೆ ಈಗ ಎರಡು ರನ್-ವೇ ಇದ್ದು, ಇದರಲ್ಲಿ ವಿಸ್ತರಣೆ ಸಾಧ್ಯವಿಲ್ಲದಂತಾಗಿದೆ ಎಂದು ಅವರು ವಿವರಿಸಿದರು.

ಯಾವ ದೃಷ್ಟಿಯಿಂದ ನೋಡಿದರೂ ಕೆಂಪೇಗೌಡ ಏರ್-ಪೋರ್ಟ್ 2035ರ ವೇಳೆಗೆ ತನ್ನ ಧಾರಣಾಶಕ್ತಿಯ ತುತ್ತತುದಿ ಮುಟ್ಟಲಿದೆ. ನಾವು ಈ ಯೋಜನೆಯನ್ನು ಘೋಷಿಸಿದ ನಂತರವಷ್ಟೇ ತಮಿಳುನಾಡು ಸರಕಾರವು ಹೊಸೂರಿನಲ್ಲಿ ನೂತನ ಏರ್-ಪೋರ್ಟ್ ನಿರ್ಮಿಸುವ ಮಾತುಗಳನ್ನಾಡಲು ಆರಂಭಿಸಿದೆ. ಅದರಿಂದ ನಮಗೇನೂ ತೊಂದರೆ ಇಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ನೂತನ ವಿಮಾನ ನಿಲ್ದಾಣ ಬರಬೇಕೆಂದರೆ ಸುತ್ತಮುತ್ತ ಎಲ್ಲೂ ಬೆಟ್ಟಗುಡ್ಡ, ನದಿ/ಸಮುದ್ರಗಳಿರಬಾರದು. ಜತೆಗೆ ಗುಣಮಟ್ಟದ ರಾಜ್ಯ/ರಾಷ್ಟ್ರ ಹೆದ್ದಾರಿ, ರೈಲು ಮತ್ತು ಮೆಟ್ರೋ ಸಂಪರ್ಕ ಇರಬೇಕು. ಅಲ್ಲದೆ, ಕೇವಲ ಪ್ರಯಾಣಿಕರ ಹರಿವಿನ ದಟ್ಟಣೆಯನ್ನು ಪರಿಗಣಿಸಬೇಕೋ ಅಥವಾ ಕೈಗಾರಿಕಾ ಅಗತ್ಯಗಳನ್ನೂ ನೋಡಬೇಕೋ ಎನ್ನುವ ಅಂಶಗಳು ಮುಖ್ಯವಾಗುತ್ತವೆ. ಒಟ್ಟಿನಲ್ಲಿ ರಾಜ್ಯ ಸರಕಾರದ ಮನಸ್ಸಿನಲ್ಲಿ ಕನಕಪುರ ರಸ್ತೆ, ಮೈಸೂರು ರಸ್ತೆ, ಮಾಗಡಿ, ದೊಡ್ಡಬಳ್ಳಾಪುರ, ಡಾಬಸಪೇಟೆ, ತುಮಕೂರು ಮುಂತಾದ ಸ್ಥಳಗಳಿವೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಕೆಂಪೇಗೌಡ ವಿಮಾನ ನಿಲ್ದಾಣ ನಿರ್ಮಿಸಿರುವ ಬೆಂಗಳೂರು ಇಂಟರ್ನ್ಯಾಷನಲ್ ಏರ್ಪೋರ್ಟ್ ಲಿಮಿಟೆಡ್ (ಬಿಐಎಎಲ್) 2033ರವರೆಗೆ 150 ಕಿ.ಮೀ. ಸುತ್ತಳತೆಯಲ್ಲಿ ಹೊಸ ವಿಮಾನ ನಿಲ್ದಾಣ ಸ್ಥಾಪಿಸಬಾರದು ಎನ್ನುವ ಷರತ್ತನ್ನು ಹಾಕಿತ್ತು. ಇದು 2033ಕ್ಕೆ ಮುಗಿಯಲಿದೆ. ನಾವು ಈಗಿನಿಂದಲೇ ಕೆಲಸ ಮಾಡಿದರೆ ಆ ವೇಳೆಗೆ ನೂತನ ವಿಮಾನ ನಿಲ್ದಾಣ ಅಭಿವೃದ್ಧಿಪಡಿಸಿಯೇ ಬಿಡಬಹುದು ಎಂದು ಎಂ.ಬಿ.ಪಾಟೀಲ್ ನುಡಿದರು.

ದಿಲ್ಲಿ ಮತ್ತು ಮುಂಬೈಗಳಲ್ಲಿ ಹಳೆಯ ವಿಮಾನ ನಿಲ್ದಾಣಗಳಿಂದ 35-40 ಕಿ.ಮೀ. ದೂರದಲ್ಲೇ ಎರಡನೆಯ ವಿಮಾನ ನಿಲ್ದಾಣಗಳನ್ನೂ ನಿರ್ಮಿಸಲಾಗಿದೆ. ಇದನ್ನು ಕೂಡ ನಾವು ಪರಿಗಣಿಸಲಿದ್ದೇವೆ. ಒಟ್ಟಿನಲ್ಲಿ ಉದ್ದೇಶಿತ ವಿಮಾನ ನಿಲ್ದಾಣದಿಂದ ಬೆಂಗಳೂರಿಗೆ ಎಲ್ಲ ದೃಷ್ಟಿಯಿಂದಲೂ ಮತ್ತಷ್ಟು ಅನುಕೂಲವಾಗುವಂತೆ ನೋಡಿಕೊಳ್ಳಲಾಗುವುದು ಎಂದು ಅವರು ಭರವಸೆ ನೀಡಿದ್ದಾರೆ.

ಎಚ್‌ಡಿಕೆ‌‌ ಜತೆ‌ ಮಾತುಕತೆ :

ರಾಜ್ಯದಲ್ಲಿನ ಕೈಗಾರಿಕಾಭಿವೃದ್ಧಿಗೆ ಕೇಂದ್ರದ ನೆರವು ಕೋರುವ ಬಗ್ಗೆ ಕೇಂದ್ರ ಕೈಗಾರಿಕಾ ಸಚಿವ ಎಚ್‌ಡಿ ಕುಮಾರಸ್ವಾಮಿ ಅವರೊಂದಿಗೂ ದೂರವಾಣಿ ಮೂಲಕ ಮಾತುಕತೆ ನಡೆಸಿದ್ದು, ಸದ್ಯದಲ್ಲೇ ಖುದ್ದು ಭೇಟಿ ನೀಡಿ ಪ್ರಸ್ತಾವ ಸಲ್ಲಿಸಲಾಗುವುದು. ಅವರಿಗೂ ರಾಜ್ಯಕ್ಕೆ ಸೆಮಿಕಂಡಕ್ಟರ್ ಸೇರಿದಂತೆ ಬೃಹತ್ ಕೈಗಾರಿಕೆಗಳನ್ನು ತರಲು ಆಸಕ್ತಿ ಇದ್ದು ರಾಜ್ಯ ಸರಕಾರ ಸಂಪೂರ್ಣ ಸಹಕಾರ‌ ನೀಡಲಿದೆ ಎಂದು ಎಂ.ಬಿ.ಪಾಟೀಲ್‌ ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X