Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಕರ್ನಾಟಕದ ರಾಯಭಾರಿಗಳಾಗಿ ಹೂಡಿಕೆ...

ಕರ್ನಾಟಕದ ರಾಯಭಾರಿಗಳಾಗಿ ಹೂಡಿಕೆ ತರುವಂತೆ ಜಪಾನ್ ಉದ್ಯಮಿಗಳಿಗೆ ಸಚಿವ ಎಂ.ಬಿ.ಪಾಟೀಲ್ ಕರೆ

ವಾರ್ತಾಭಾರತಿವಾರ್ತಾಭಾರತಿ11 July 2024 8:14 PM IST
share
ಕರ್ನಾಟಕದ ರಾಯಭಾರಿಗಳಾಗಿ ಹೂಡಿಕೆ ತರುವಂತೆ ಜಪಾನ್ ಉದ್ಯಮಿಗಳಿಗೆ ಸಚಿವ ಎಂ.ಬಿ.ಪಾಟೀಲ್ ಕರೆ

ಬೆಂಗಳೂರು: ಜಪಾನ್ ನಿಂದ ರಾಜ್ಯಕ್ಕೆ ಹೆಚ್ಚಿನ ಹೂಡಿಕೆ ತರಲು ಪೂರಕವಾಗಿ ಈಗಾಗಲೇ ಹೂಡಿಕೆ ಮಾಡಿರುವ ಜಪಾನ್ ದೇಶದ ಕಂಪನಿಗಳೆ ಕರ್ನಾಟಕದ ರಾಯಭಾರಿಗಳಾಗಿ ಕಾರ್ಯ ನಿರ್ವಹಿಸಬೇಕು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಕರೆ ನೀಡಿದ್ದಾರೆ.

ಗುರುವಾರ ನಗರದಲ್ಲಿ ಜಪಾನ್ ಚೇಂಬರ್ ಆಫ್ ಕಾಮರ್ಸ್ ಅಂಡ್ ಇಂಡಸ್ಟ್ರೀಸ್ (ಜೆಸಿಸಿಐ) ಇಲ್ಲಿ ಏರ್ಪಡಿಸಿದ್ದ ರಾಜ್ಯದಲ್ಲಿ ನೆಲೆಯೂರಿರುವ ಜಪಾನ್ ಮೂಲದ ಉದ್ಯಮ ಸಂಸ್ಥೆಗಳ ಜತೆಗಿನ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕರ್ನಾಟಕ ಹೇಗೆ ಹೂಡಿಕೆ ಸ್ನೇಹಿ? ಇಲ್ಲಿ ಲಭ್ಯ ಇರುವ ಮಾನವ ಸಂಪನ್ಮೂಲ, ಕಾನೂನು ಸುವ್ಯವಸ್ಥೆ, ಹವಾಮಾನ ಇತ್ಯಾದಿ ವಿಷಯಗಳ ಬಗ್ಗೆ ತಮ್ಮ ದೇಶದ ಇತರ ಕಂಪನಿಗಳಿಗೂ ತಿಳಿಸುವಂತೆ ಕರೆ ನೀಡಿದರು.

ತಮ್ಮ ನೇತೃತ್ವದ ನಿಯೋಗ ಇತ್ತೀಚೆಗಷ್ಟೇ ಜಪಾನ್ ಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಪರಸ್ಪರ ಲಾಭದ ಅವಕಾಶಗಳಿರುವ ಹಲವಾರು ಹೂಡಿಕೆ ಸಾಧ್ಯತೆಗಳನ್ನು ಗುರುತಿಸಲಾಯಿತು. ಅದೊಂದು ಫಲಪ್ರದವಾದ ಭೇಟಿಯಾಗಿತ್ತು. ಇದೇ ವೇಳೆ, ಜಪಾನ್ ನ ಹಲವಾರು ಅಂಶಗಳು, ಅದರಲ್ಲೂ ಅಲ್ಲಿನ ಸಾರಿಗೆ ವ್ಯವಸ್ಥೆ ವೈಯಕ್ತಿಕವಾಗಿ ತಮಗೆ ಅತ್ಯಂತ ಹೆಚ್ಚಿನ ಅಚ್ಚರಿ ಮೂಡಿಸಿತು ಎಂದು ಅವರು ವಿವರಿಸಿದರು.

ಮುಂಬರುವ ಫೆ.12-14ರವರೆಗೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿರುವ ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವಂತೆ ಎಲ್ಲ ಉದ್ಯಮ ಪ್ರತಿನಿಧಿಗಳಲ್ಲಿ ಎಂ.ಬಿ.ಪಾಟೀಲ್ ಮನವಿ ಮಾಡಿದರು.

ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ ಎಸ್.ಸೆಲ್ವಕುಮಾರ್, ಆಯುಕ್ತರಾದ ಗುಂಜನ್ ಕೃಷ್ಣ ಈ ಸಂದರ್ಭದಲ್ಲಿ ಮಾತನಾಡಿ, ಹೂಡಿಕೆ ಆಧಾರದ ಮೇಲೆ ರಿಯಾಯಿತಿಗಳನ್ನು ನೀಡುವ ವ್ಯವಸ್ಥೆ ರೂಪಿಸಲಾಗಿದ್ದು, ತಮ್ಮ ದೇಶದ ಇತರ ಕಂಪನಿಗಳು ರಾಜ್ಯದಲ್ಲಿ ಹೂಡಿಕೆ ಮಾಡುವ ಹಾಗೆ ಮಾಡಬೇಕು ಎಂದರು.

ಈ ಸಂದರ್ಭದಲ್ಲಿ ಬೆಂಗಳೂರಿನಲ್ಲಿರುವ ಜಪಾನ್ ಕಾನ್ಸುಲೇಟ್ ಜನರಲ್ ಟ್ಸುಟೊಮು ನಕಾನೆ, ಉಪ ಕಾನ್ಸುಲೇಟ್ ಜನರಲ್ ಹೊಕುಟೊ ಕಾಯ ಸೇರಿದಂತೆ ನೂರಕ್ಕೂ ಹೆಚ್ಚು ಜಪಾನಿ ಉದ್ಯಮಿಗಳು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X