Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಬಿಜೆಪಿ ಅವಧಿಯ ಹಗರಣಗಳಿಗೆ ತಾರ್ಕಿಕ...

ಬಿಜೆಪಿ ಅವಧಿಯ ಹಗರಣಗಳಿಗೆ ತಾರ್ಕಿಕ ಅಂತ್ಯ ನೀಡುತ್ತೇವೆ : ಸಚಿವ ಎಂ.ಬಿ.ಪಾಟೀಲ್

ವಾರ್ತಾಭಾರತಿವಾರ್ತಾಭಾರತಿ2 Sept 2024 8:27 PM IST
share
ಬಿಜೆಪಿ ಅವಧಿಯ ಹಗರಣಗಳಿಗೆ ತಾರ್ಕಿಕ ಅಂತ್ಯ ನೀಡುತ್ತೇವೆ : ಸಚಿವ ಎಂ.ಬಿ.ಪಾಟೀಲ್

ಬೆಂಗಳೂರು : ಬಿಜೆಪಿ ಸರಕಾರದ ಅವಧಿಯಲ್ಲಿನ ಎಲ್ಲಾ ಹಗರಣಗಳನ್ನು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯಲಾಗುವುದು. ಇದರಲ್ಲಿ ರಾಜಿಯಾಗುವ ಪ್ರಶ್ನೆಯೇ ಇಲ್ಲ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ತಿಳಿಸಿದ್ದಾರೆ.

ಸೋಮವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೋವಿಡ್ ಹಗರಣ, ಪಿಎಸ್‍ಐ, ಬಿಟ್ ಕಾಯಿನ್ ಹಗರಣ ಸೇರಿದಂತೆ ಎಲ್ಲವನ್ನೂ ತನಿಖೆಗೆ ಒಳಪಡಿಸಿದ್ದು, ವರದಿ ಬಂದ ನಂತರ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದರು.

ಕೋವಿಡ್ ಸಂದರ್ಭದಲ್ಲಿನ ಹಗರಣಗಳಿಗೆ ಹಿಂದಿನ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಅವರೇ ಹೊಣೆಗಾರರಾಗಿದ್ದಾರೆ. ಈ ಹಗರಣಕ್ಕೆ ಸಂಬಂಧಿಸಿದ ತನಿಖಾ ವರದಿಯನ್ನು ಮುಖ್ಯಮಂತ್ರಿ ಸ್ವೀಕರಿಸಿದ್ದು, ಶೀಘ್ರ ಕ್ರಮ ಜರುಗಲಿದೆ ಎಂದು ಅವರು ಹೇಳಿದರು.

ವೈದ್ಯಕೀಯ ಕಾಲೇಜುಗಳ ನಿರ್ಮಾಣದಲ್ಲಿ ಏಕಾಏಕಿ ಹಲವಾರು ಪಟ್ಟು ಯೋಜನಾ ವೆಚ್ಚವನ್ನು ಹೆಚ್ಚಿಸಲಾಗಿದೆ. ಸುಮಾರು 15-20 ಸಚಿವ ಸಂಪುಟ ಸಭೆಗಳಲ್ಲಿ ಈ ಬಗ್ಗೆ ನಿರಂತರ ಚರ್ಚೆಯಾಗಿದೆ. 300-400 ಕೋಟಿ ರೂ. ಏಕಾಏಕಿ ಹೆಚ್ಚಿಸುವ ಬಗ್ಗೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಸೇರಿದಂತೆ ಹಲವರು ಆತಂಕ ವ್ಯಕ್ತಪಡಿಸಿದ್ದಾರೆ ಎಂದು ಎಂ.ಬಿ.ಪಾಟೀಲ್ ತಿಳಿಸಿದರು.

ನಮ್ಮ ಅನಿವಾರ್ಯತೆಗಳು ಹೇಗಿದ್ದವು ಎಂದರೆ, ಅವರ ಕಾಲದಲ್ಲಿ ಮಾಡಿದ್ದ ಭ್ರಷ್ಟಾಚಾರ ಕಣ್ಣೆದುರಿಗೇ ಇದ್ದರೂ ಬಾಕಿ ಉಳಿದ ಕಾಮಗಾರಿಗಳಿಗೆ ಹಣ ಬಿಡುಗಡೆ ಮಾಡುವ ಪರಿಸ್ಥಿತಿ ಎದುರಾಗಿತ್ತು. ಇಲ್ಲವಾದರೆ ಕಾಮಗಾರಿ ಅರ್ಧಕ್ಕೇ ನಿಲ್ಲುತ್ತಿತ್ತು. ಯೋಜನೆ ವ್ಯರ್ಥವಾಗುತ್ತಿತ್ತು. ಜನರಿಗೆ ಹಾಗೂ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಬಾಕಿ ಬಿಡುಗಡೆ ಮಾಡಿ ಕಾಮಗಾರಿ ಪೂರ್ಣಗೊಳಿಸಬೇಕಾಗಿದೆ ಎಂದು ಎಂ.ಬಿ.ಪಾಟೀಲ್ ಹೇಳಿದರು.

ಸ್ವಂತ ವಿವೇಚನೆಯಿಂದ ಕೆಲಸ ಮಾಡಿಲ್ಲ: ಮುಡಾ ಹಗರಣದಲ್ಲಿ ರಾಜ್ಯಪಾಲರು ಪ್ರಾಸಿಕ್ಯೂಷನ್‍ಗೆ ಅನುಮತಿ ನೀಡುವಾಗ ಸ್ವಂತ ವಿವೇಚನೆಯಿಂದ ಕೆಲಸ ಮಾಡಿಲ್ಲವೆಂದು ಮೇಲ್ನೋಟಕ್ಕೆ ಕಂಡುಬರುತ್ತಿದೆ. ಕೇಂದ್ರ ಸರಕಾರ ಹಾಗೂ ಬಿಜೆಪಿ ಅಣತಿಯಂತೆ ವರ್ತಿಸುತ್ತಿದ್ದಾರೆ. ರಾಜಭವನ ಚಲೋ ನಡೆಸಿ ನಾವು ರಾಜ್ಯಪಾಲರನ್ನು ಭೇಟಿ ಮಾಡಿದಾಗ ಶಶಿಕಲಾ ಜೊಲ್ಲೆ ಪ್ರಕರಣವನ್ನು ಇತ್ಯರ್ಥಪಡಿಸಲಾಗಿದೆ. ಉಳಿದ ಮೂರು ಪ್ರಕರಣಗಳ ಅಭಿಯೋಜನೆಗೆ ಪೂರ್ವಾನುಮತಿ ಕೇಳಿದ್ದ ಕಡತಕ್ಕೆ ಸ್ಪಷ್ಟನೆ ಕೇಳಿ ವಾಪಸ್ ಕಳುಹಿಸಿರುವುದಾಗಿ ತಿಳಿಸಿದ್ದಾರೆ. ಒಟ್ಟಿನಲ್ಲಿ ಕಡತಗಳಿನ್ನೂ ರಾಜ್ಯಪಾಲರ ಬಳಿಯೇ ಉಳಿದುಕೊಂಡಿವೆ ಎಂದು ಎಂ.ಬಿ.ಪಾಟೀಲ್ ವಿವರಿಸಿದರು.

ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪಾತ್ರ ಇಲ್ಲ. ಹೀಗಾಗಿ ನ್ಯಾಯಾಲಯದಲ್ಲಿ ಜಯ ಸಿಗುವ ವಿಶ್ವಾಸವಿದೆ. ಮತ್ತಷ್ಟು ಶಕ್ತಿಶಾಲಿಯಾಗಿ ಸಿದ್ದರಾಮಯ್ಯ ಹೊರಹೊಮುತ್ತಾರೆ. ಆರ್.ವಿ.ದೇಶಪಾಂಡೆ ಸೇರಿದಂತೆ ಹಲವು ಮಂದಿ ಮುಖ್ಯಮಂತ್ರಿಯಾಗುವ ಕುರಿತು ಹೇಳಿಕೆ ನೀಡಿರುವುದು ಸಾಂದರ್ಭಿಕ ಅಷ್ಟ್ರೇ. ನಾನು ಕೂಡ ಈ ಮೊದಲು ಇಂತಹ ಹೇಳಿಕೆ ನೀಡಿದ್ದೇನೆ. ಆದರೆ, ನಮ್ಮಲ್ಲಿ ಯಾವುದೇ ಗೊಂದಲಗಳಿಲ್ಲ. ಮುಖ್ಯಮಂತ್ರಿ ಬದಲಾವಣೆ ಎಂಬುದು ಹಗಲು ಕನಸು. ಅದು ಸಾಧ್ಯವಿಲ್ಲ ಎಂದು ಎಂ.ಬಿ.ಪಾಟೀಲ್ ಸ್ಪಷ್ಟಪಡಿಸಿದರು.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಸುದೀರ್ಘ ರಾಜಕೀಯ ಅನುಭವವಿದ್ದು, ರಾಜ್ಯ ರಾಜಕಾರಣಕ್ಕೆ ಮರಳಲಿದ್ದಾರೆ ಎಂಬುದು ಹಲವರ ಆಧಾರರಹಿತ ಹೇಳಿಕೆಯಾಗಿದೆ ಎಂದು ಎಂ.ಬಿ.ಪಾಟೀಲ್ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X