Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಅಮೆರಿಕದಲ್ಲಿ ‘ಕ್ವಿನ್ ಸಿಟಿ’ ಕೇಂದ್ರಿತ...

ಅಮೆರಿಕದಲ್ಲಿ ‘ಕ್ವಿನ್ ಸಿಟಿ’ ಕೇಂದ್ರಿತ ಹೂಡಿಕೆ ಚರ್ಚೆ : ಸಚಿವ ಎಂ.ಬಿ.ಪಾಟೀಲ್

ಅಮೆರಿಕಾ ಉದ್ಯಮಿಗಳ ಜತೆ ದುಂಡು ಮೇಜಿನ ಸಭೆ

ವಾರ್ತಾಭಾರತಿವಾರ್ತಾಭಾರತಿ12 Oct 2024 7:52 PM IST
share
ಅಮೆರಿಕದಲ್ಲಿ ‘ಕ್ವಿನ್ ಸಿಟಿ’ ಕೇಂದ್ರಿತ ಹೂಡಿಕೆ ಚರ್ಚೆ : ಸಚಿವ ಎಂ.ಬಿ.ಪಾಟೀಲ್

ಬೆಂಗಳೂರು: ರಾಜ್ಯ ಸರಕಾರ ಇತ್ತೀಚೆಗೆ ಚಾಲನೆ ನೀಡಿರುವ ಮಹತ್ವಾಕಾಂಕ್ಷಿ ಜ್ಞಾನ, ಆರೋಗ್ಯ ಮತ್ತು ನಾವೀನ್ಯತಾ ನಗರ(ಕ್ವಿನ್ ಸಿಟಿ)ಯೋಜನೆಯು, ಅಮೆರಿಕದಲ್ಲಿನ ಜಾಗತಿಕ ಉದ್ಯಮ ದಿಗ್ಗಜರ ಜೊತೆಗಿನ ಸಮಾಲೋಚನೆಗಳಲ್ಲಿ ಚರ್ಚೆಯ ಕೇಂದ್ರಬಿಂದು ಆಗಿದೆ ಎಂದು ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್ ತಿಳಿಸಿದ್ದಾರೆ.

ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶದಲ್ಲಿ ಭಾಗವಹಿಸಲು ಅಮೆರಿಕದ ದೈತ್ಯ ಉದ್ಯಮಗಳಿಗೆ ಆಹ್ವಾನ ನೀಡಲು ಅಮೆರಿಕ ಪ್ರವಾಸದಲ್ಲಿರುವ ಸಚಿವ ಪಾಟೀಲ್, ನ್ಯೂಯಾರ್ಕ್‍ನಲ್ಲಿ ಫಿಡೆಲಿಟಿ, ಕೊಲಂಬಿಯಾ ವಿಶ್ವವಿದ್ಯಾಲಯ ಆಕ್ಸಿಯಂ ಸ್ಪೇಸ್, ಬೇಟಾ ಟೆಕ್ನಾಲಜಿ ಕಂಪೆನಿಗಳ ಪ್ರಮುಖರ ಜೊತೆಗೆ ನಡೆಸಿದ ಸಭೆಗಳಲ್ಲಿ ‘ಕ್ವಿನ್ ಸಿಟಿ’ ಯೋಜನೆಯನ್ನು ಪ್ರಮುಖವಾಗಿ ಪ್ರಸ್ತಾಪಿಸಿದ್ದಾರೆ.

ರಾಜ್ಯದಲ್ಲಿ ಸಮತೋಲನದ ಕೈಗಾರಿಕಾ ಬೆಳವಣಿಗೆ ಸಾಧಿಸಲು ದಾಬಸ್‍ಪೇಟೆ ಬಳಿ 5,800 ಎಕರೆ ಪ್ರದೇಶದಲ್ಲಿ ಅಸ್ತಿತ್ವಕ್ಕೆ ಬರಲಿರುವ ‘ಕ್ವಿನ್ ಸಿಟಿ’ ಯೋಜನೆಯಲ್ಲಿ ಭಾಗಿಯಾಗುವ ಬಗ್ಗೆ ಅಮೆರಿಕದ ವಿವಿಧ ಕಂಪನಿಗಳು ತೀವ್ರ ಆಸಕ್ತಿ ತೋರಿಸಿವೆ. ಫಿಡೆಲಿಟಿ ಸೆಂಟರ್ ಫಾರ್ ಅಪ್ಲೈಡ್ ಟೆಕ್ನಾಲಜಿಯ ಹಿರಿಯ ಉಪಾಧ್ಯಕ್ಷ ಬಿಜು ಕೆಕೆ ಅವರು, ‘ಕ್ವಿನ್ ಸಿಟಿ’ಯಲ್ಲಿ ವಹಿವಾಟು ವೃದ್ಧಿ ಹಾಗೂ ಬೆಳವಣಿಗೆ ಸಾಧ್ಯತೆಗಳನ್ನು ಪ್ರಮುಖವಾಗಿ ಪ್ರಸ್ತಾಪಿಸಿದ್ದಾರೆ.

‘ಕ್ವಿನ್ ಸಿಟಿ’ಯಲ್ಲಿನ ಹೊಸ ಶಿಕ್ಷಣ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸಲು ಇರುವ ಅವಕಾಶಗಳ ಬಗ್ಗೆ ಕೊಲಂಬಿಯಾ ವಿಶ್ವವಿದ್ಯಾಲಯದ ಉನ್ನತ ಅಧಿಕಾರಿಗಳು ಪ್ರಮುಖವಾಗಿ ಚರ್ಚಿಸಿದ್ದಾರೆ. ಕೊಲಂಬಿಯಾ ವಿಶ್ವವಿದ್ಯಾಲಯದ ಪಾಲ್ಗೊಳ್ಳುವಿಕೆಯು ರಾಜ್ಯದಲ್ಲಿನ ಉನ್ನತ ಶಿಕ್ಷಣದ ಭವಿಷ್ಯ ರೂಪಿಸಲು ನೆರವಾಗಲಿದೆ.

ಆಕ್ಸಿಯಂ ಸ್ಪೇಸ್‍ನ ಮುಖ್ಯ ರೆವಿನ್ಯೂ ಅಧಿಕಾರಿ ತೇಜ್‍ಪೌಲ್ ಭಾಟಿಯಾ ಜೊತೆಗೆ ರಾಜ್ಯದಲ್ಲಿ ಪ್ರವರ್ಧಮಾನಕ್ಕೆ ಬರುತ್ತಿರುವ ಬಾಹ್ಯಾಕಾಶ ಕ್ಷೇತ್ರದಲ್ಲಿ ವಹಿವಾಟು ವಿಸ್ತರಣೆಗೆ ಇರುವ ವಿಪುಲ ಅವಕಾಶಗಳನ್ನು ವಿಸ್ತೃತವಾಗಿ ಚರ್ಚಿಸಲಾಗಿದೆ.

ಬೇಟಾ ಟೆಕ್ನಾಲಜಿಸ್‍ನ ಬ್ಲೇಕ್ ಒಪ್ಸಾಹ್ಲ್ ಮತ್ತು ಹಂಚ್ ಮೊಬಿಲಿಟಿಯ ಪವನ್ ಬಕ್ಷಿ ಅವರನ್ನು ಭೇಟಿಯಾಗಿರುವ ಸಚಿವ ಪಾಟೀಲ್, ನಗರ ವಾಯು ಸಂಚಾರ ಕ್ಷೇತ್ರದಲ್ಲಿನ ಅವಕಾಶಗಳ ಬಗ್ಗೆ ಚರ್ಚಿಸಿದ್ದಾರೆ. ರಾಜ್ಯದಲ್ಲಿ ತನ್ನ ತಯಾರಿಕಾ ಘಟಕ ಸ್ಥಾಪಿಸಬೇಕು ಎಂದು ಅವರು ಬೇಟಾ ಟೆಕ್ನಾಲಜಿಸ್‍ಗೆ ಆಹ್ವಾನ ನೀಡಿದ್ದಾರೆ. ರಾಜ್ಯದಲ್ಲಿ ಬಂಡವಾಳ ಹೂಡಿಕೆ ಅವಕಾಶ ಕುರಿತು ಸಚಿವರು ಬೀಕನ್ ಇಂಡಸ್ಟ್ರೀಸ್‍ನ ಸುರೇಶ್ ಮೀರಚಂದಾನಿ ಜೊತೆಗೆ ವಿವರವಾಗಿ ಚರ್ಚಿಸಿದ್ದಾರೆ.

ದುಂಡುಮೇಜಿನ ಸಭೆ: ನ್ಯೂಯಾರ್ಕ್‍ನಲ್ಲಿನ ಭಾರತದ ಕಾನ್ಸುಲೇಟ್ ಜನರಲ್, ಅಮೆರಿಕ-ಭಾರತ ಕಾರ್ಯತಂತ್ರ ಪಾಲುದಾರಿಕೆ ವೇದಿಕೆ (ಯುಎಸ್‍ಐಎಸ್‍ಪಿ)ಸಹಯೋಗದಲ್ಲಿ ದುಂಡುಮೇಜಿನ ಸಭೆ ಆಯೋಜಿಸಿತ್ತು. ಅಂತರರಾಷ್ಟ್ರೀಯ ಸಹಯೋಗ ಮತ್ತು ಆರ್ಥಿಕ ಪಾಲುದಾರಿಕೆಗೆ ಕರ್ನಾಟಕವು ಸನ್ನದ್ಧ ಸ್ಥಿತಿಯಲ್ಲಿ ಇರುವುದನ್ನು ಸಭೆಯಲ್ಲಿ ಪ್ರಸ್ತುತಪಡಿಸಲಾಯಿತು. ಇಲಾಖೆ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್, ಆಯುಕ್ತೆ ಗುಂಜನ್ ಕೃಷ್ಣ, ಕೆಐಎಡಿಬಿ ಸಿಇಒ ಡಾ.ಮಹೇಶ ಹಾಗೂ ಅಮೆರಿಕಾದ ಉದ್ಯಮಿಗಳು ಈ ಸಭೆಯಲ್ಲಿ ಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X