Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಗೆಜೆಟ್‍ನಲ್ಲಿನ ತಪ್ಪಿನಿಂದಾಗಿ ಗೊಂದಲ |...

ಗೆಜೆಟ್‍ನಲ್ಲಿನ ತಪ್ಪಿನಿಂದಾಗಿ ಗೊಂದಲ | ವಕ್ಫ್ ಆಸ್ತಿ ಬರೀ 11 ಎಕರೆ, ಮಿಕ್ಕಿದ್ದು ಹೊನವಾಡ ಗ್ರಾಮದ ರೈತರದ್ದು : ಎಂ.ಬಿ.ಪಾಟೀಲ್

ವಾರ್ತಾಭಾರತಿವಾರ್ತಾಭಾರತಿ26 Oct 2024 8:21 PM IST
share
ಗೆಜೆಟ್‍ನಲ್ಲಿನ ತಪ್ಪಿನಿಂದಾಗಿ ಗೊಂದಲ | ವಕ್ಫ್ ಆಸ್ತಿ ಬರೀ 11 ಎಕರೆ, ಮಿಕ್ಕಿದ್ದು ಹೊನವಾಡ ಗ್ರಾಮದ ರೈತರದ್ದು : ಎಂ.ಬಿ.ಪಾಟೀಲ್

ಬೆಂಗಳೂರು : ಗೆಜೆಟ್‍ನಲ್ಲಿ ತಪ್ಪಾಗಿ ನಮೂದಿಸಿದ್ದರಿಂದಾಗಿ ವಿಜಯಪುರ ಜಿಲ್ಲೆಯ ತಿಕೋಟಾ ತಾಲೂಕಿನ ಹೊನವಾಡ ಗ್ರಾಮದ 1,200 ಎಕರೆ ವಕ್ಫ್ ಆಸ್ತಿ ಎನ್ನುವ ಗೊಂದಲ ಸೃಷ್ಟಿಯಾಗಿದೆಯಷ್ಟೇ ಎಂದು ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ್ ತಿಳಿಸಿದರು.

ಶನಿವಾ ಸದಾಶಿವನಗರದಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಇಲ್ಲಿ 11 ಎಕರೆ ಮಾತ್ರ ವಕ್ಫ್ ಗೆ ಸೇರಿದ್ದು, ಇದರಲ್ಲಿ 10 ಎಕರೆ 14 ಗುಂಟೆಯಲ್ಲಿ ಖಬರಸ್ತಾನವಿದೆ. ಉಳಿದ 24 ಗುಂಟೆಯಲ್ಲಿ ಈದ್ಗಾ, ಮಸೀದಿ ಇತ್ಯಾದಿ ಕಟ್ಟಡಗಳಿವೆ. ಉಳಿದ ಜಮೀನೆಲ್ಲ ರೈತರಿಗೆ ಸೇರಿದೆ. ಇದನ್ನು ತಹಶೀಲ್ದಾರ್ ಮತ್ತು ಜಿಲ್ಲಾಧಿಕಾರಿಯೂ ಸ್ಪಷ್ಟಪಡಿಸಿದ್ದಾರೆ ಎಂದು ಹೇಳಿದರು.

ವಿಜಯಪುರ ಜಿಲ್ಲೆಯಲ್ಲಿ 1974, 1978 ಮತ್ತು 2016ರಲ್ಲಿ ವಕ್ಫ್ ಆಸ್ತಿಗಳ ಅಧಿಸೂಚನೆ ಹೊರಬಿದ್ದಿದೆ. ವಕ್ಫ್ ಆಸ್ತಿ ಇರುವುದು ವಿಜಯಪುರ ನಗರದ ವ್ಯಾಪ್ತಿಯಲ್ಲಿರುವ ಮಹಲ್ ಬಾಗಾಯತ ಗ್ರಾಮದಲ್ಲಿ. ಆದರೆ ಗೆಜೆಟ್ ನ ಬ್ರ್ಯಾಕೆಟ್ ಒಳಗೆ ಹೊನವಾಡ ಎಂದು ಬರೆದು ಬಿಟ್ಟಿದ್ದಾರೆ. ಈ ವಿಷಯವನ್ನು ರೈತರು ನಮ್ಮ ಗಮನಕ್ಕೆ ತಂದ ಕೂಡಲೇ ಅ.19ರಂದು ಜಿಲ್ಲಾಧಿಕಾರಿ, ತಹಶೀಲ್ದಾರ್ ಎಲ್ಲರನ್ನೂ ಕರೆದು, ಸಭೆ ನಡೆಸಿ, ಸೂಕ್ತ ನಿರ್ದೇಶನ ಕೊಟ್ಟಿದ್ದೇನೆ ಎಂದು ಅವರು ತಿಳಿಸಿದರು.

ಈ ವಿಚಾರದಲ್ಲಿ ಬಿಜೆಪಿ ನಾಯಕರಾದ ತೇಜಸ್ವಿ ಸೂರ್ಯ, ಯತ್ನಾಳ್ ರಾಜಕೀಯ ಮಾಡಬೇಕಾಗಿಲ್ಲ. ರೈತರ ಒಂದಿಂಚು ಕೂಡ ವಕ್ಫ್ ಆಸ್ತಿ ಆಗಲು ಬಿಡಲ್ಲ. ಹೊನವಾಡ ಗ್ರಾಮವು ನಾನು ಪ್ರತಿನಿಧಿಸುವ ಬಬಲೇಶ್ವರ ಕ್ಷೇತ್ರದಲ್ಲೇ ಇದೆ. ಇಲ್ಲಿನ ಹತ್ತು ಸರ್ವೇ ನಂಬರುಗಳಲ್ಲಿರುವ 11 ಎಕರೆ ಮಾತ್ರ ವಕ್ಫ್ ಆಸ್ತಿಯಷ್ಟೇ. 1974ರ ಗೆಜೆಟ್ ನಲ್ಲಿನ ತಪ್ಪುಗಳನ್ನು ವಕ್ಫ್ ಮಂಡಳಿಯೆ 1977ರಲ್ಲಿ ತಿದ್ದುಪಡಿ ಮಾಡಿ, ಬ್ರ್ಯಾಕೆಟ್‍ನಲ್ಲಿದ್ದ ಹೊನವಾಡ ಹೆಸರನ್ನು ತೆಗೆದಿದೆ ಎಂದು ಎಂ.ಬಿ.ಪಾಟೀಲ್ ಸ್ಪಷ್ಟಪಡಿಸಿದರು.

ಯಾವುದು ನಿಯಮಾನುಸಾರ ವಕ್ಫ್ ಆಸ್ತಿಯೋ ಅದಷ್ಟೇ ಅವರಿಗೆ ಸೇರುತ್ತದೆ. ರೈತರಾಗಲಿ, ಖಾಸಗಿ ಮಾಲಕರಾಗಲಿ ಈ ಬಗ್ಗೆ ಗೊಂದಲಕ್ಕೆ ಒಳಗಾಗಬೇಕಾಗಿಲ್ಲ. ಈ ಸಂಬಂಧ ನಾನು ಅಧಿಕಾರಿಗಳೊಂದಿಗೆ ಸದ್ಯದಲ್ಲೇ ಮತ್ತೊಂದು ಸಭೆ ನಡೆಸುತ್ತೇನೆ ಎಂದು ಎಂ.ಬಿ.ಪಾಟೀಲ್ ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X