Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. 600 ಕೋಟಿ ರೂ.ವೆಚ್ಚದ ಡಿಎನ್...

600 ಕೋಟಿ ರೂ.ವೆಚ್ಚದ ಡಿಎನ್ ಸೊಲ್ಯೂಷನ್ಸ್ ತಯಾರಿಕೆ, ಆರ್ ಆಂಡ್ ಡಿ ಘಟಕಕ್ಕೆ ಸಚಿವ ಎಂ.ಬಿ. ಪಾಟೀಲ್ ಚಾಲನೆ

►2 ವರ್ಷಗಳಲ್ಲಿ ಕಾರ್ಯರೂಪಕ್ಕೆ ಬಂದ ಯೋಜನೆ ►ಮಶೀನ್ ಟೂಲ್ಸ್ ತಯಾರಿಕೆ ಕ್ಷೇತ್ರದ ದಿಗ್ಗಜ ಕಂಪೆನಿ

ವಾರ್ತಾಭಾರತಿವಾರ್ತಾಭಾರತಿ27 Aug 2026 12:43 AM IST
share
600 ಕೋಟಿ ರೂ.ವೆಚ್ಚದ ಡಿಎನ್ ಸೊಲ್ಯೂಷನ್ಸ್ ತಯಾರಿಕೆ, ಆರ್ ಆಂಡ್ ಡಿ ಘಟಕಕ್ಕೆ ಸಚಿವ ಎಂ.ಬಿ. ಪಾಟೀಲ್ ಚಾಲನೆ

ಬೆಂಗಳೂರು: ದೇವನಹಳ್ಳಿ ತಾಲೂಕಿನ ಕುಂದಾಣ ಸಾಮಾನ್ಯ ಕೈಗಾರಿಕಾ ಪ್ರದೇಶದಲ್ಲಿ ದಕ್ಷಿಣ ಕೊರಿಯಾ ಮೂಲದ ಡಿ.ಎನ್.ಸೊಲ್ಯೂಷನ್ಸ್ ಕಂಪೆನಿಯು 600 ಕೋಟಿ ರೂ.ವೆಚ್ಚದಲ್ಲಿ ನಿರ್ಮಿಸಿರುವ ನೂತನ ತಯಾರಿಕೆ ಹಾಗೂ ಸಂಶೋಧನೆ ಮತ್ತು ಅಭಿವೃದ್ಧಿ ಘಟಕವನ್ನು ಬೃಹತ್ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಬುಧವಾರ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ‘ಮಶೀನ್ ಟೂಲ್ ತಯಾರಿಕೆಗೆ ಹೆಸರಾಗಿರುವ ಡಿ.ಎನ್. ಸೊಲ್ಯೂಷನ್ಸ್ ಕಂಪೆನಿಯೊಂದಿಗೆ ಎರಡು ವರ್ಷಗಳ ಹಿಂದೆ ನಾನು ಕೊರಿಯಾ ಪ್ರವಾಸ ಕೈಗೊಂಡಿದ್ದಾಗ ಈ ಒಡಂಬಡಿಕೆ ಆಗಿತ್ತು. ಇಷ್ಟು ಕ್ಷಿಪ್ರ ಅವಧಿಯಲ್ಲಿ ತಯಾರಿಕೆ ಮತ್ತು ಆರ್ ಆಂಡ್ ಡಿ ಘಟಕಗಳು ಸಿದ್ಧವಾಗಿರುವುದು ದಾಖಲೆಯಾಗಿದೆ. 2 ಸ್ಥಾವರಗಳು ಒಂದೆಡೆ ಸಾಕಾರಗೊಂಡಿರುವುದು ವಿಶಿಷ್ಟ ಸಂಗತಿಯಾಗಿದೆ ಎಂದು ಹೇಳಿದರು.

ರಾಜ್ಯವು ಸೇವಾಧಾರಿತ ಆರ್ಥಿಕತೆಯಿಂದ ಉತ್ಪಾದನೆ ಆಧರಿತ ಆರ್ಥಿಕತೆಯಾಗಿ ರೂಪಾಂತರ ಗೊಳ್ಳುತ್ತಿರುವ ಸಂಕ್ರಮಣಾವಸ್ಥೆಯಲ್ಲಿದೆ. ತಯಾರಿಕೆ ವಲಯದಲ್ಲಿ ಬರುವ ಆಟೋ ಮೊಬೈಲ್, ಹೆವಿ ಎಂಜಿನಿಯರಿಂಗ್, ಏರೋಸ್ಪೇಸ್, ರಕ್ಷಣೋದ್ಯಮ, ಪ್ರಿಸಿಷನ್ ತಯಾರಿಕೆ ಹೀಗೆ ಪ್ರತಿಯೊಂದರಲ್ಲೂ ಮಶೀನ್ ಟೂಲ್ಸ್ ನಿರ್ಣಾಯಕ ಪಾತ್ರ ವಹಿಸುತ್ತದೆ. ನಾವು ಹೆಚ್ಚಾಗಿ ಈ ಸ್ವರೂಪದ ಬಂಡವಾಳ ಹೂಡಿಕೆಗೆ ಆದ್ಯತೆ ಕೊಡುತ್ತಿದ್ದೇವೆ ಎಂದು ಅವರು ತಿಳಿಸಿದರು.

ದೇಶದ ಒಟ್ಟಾರೆ ಮಶೀನ್ ಟೂಲ್ಸ್ ತಯಾರಿಕೆ ವಲಯಕ್ಕೆ ರಾಜ್ಯವು ಶೇ.52ರಷ್ಟು ಕೊಡುಗೆ ನೀಡುತ್ತಿದೆ. ಡಿ.ಎನ್. ಸೊಲ್ಯೂಷನ್ಸ್ ತನ್ನ ಹೂಡಿಕೆಗೆ ನಮ್ಮಲ್ಲಿಗೆ ಬರಲು ಇದು ಪ್ರಮುಖ ಕಾರಣ. ಇಲ್ಲಿ ಈಗಾಗಲೇ 350 ಮಂದಿ ಉದ್ಯೋಗನಿರತರಾಗಿರುವುದು ಸಂತಸದ ಸಂಗತಿಯಾಗಿದೆ. ಕಂಪೆನಿಯು ಇಲ್ಲಿಂದಲೇ ತನ್ನ ಜಾಗತಿಕ ಮಟ್ಟದ ಪೂರೈಕೆಯನ್ನು ನಿರ್ವಹಿಸಬೇಕು. ಜತೆಗೆ ನಮ್ಮಲ್ಲಿರುವ ತಾಂತ್ರಿಕ ಶಿಕ್ಷಣ ಸಂಸ್ಥೆಗಳು, ಪ್ರಶಿಕ್ಷಣ, ತರಬೇತಿ ಮತ್ತು ಉದ್ಯಮಸಂಬಂಧಿ ಕಾರ್ಯಕ್ರಮಗಳಲ್ಲಿ ಕಂಪೆನಿಯು ಸಕ್ರಿಯ ಭಾಗವಾಗಬೇಕು ಎಂದು ಅವರು ನುಡಿದಿದರು.

ಸರಕಾರವು ಕೈಗಾರಿಕಾ ಸ್ನೇಹಿ ನೀತಿಗಳಲ್ಲಿ ಮುಂಚೂಣಿಯಲ್ಲಿದೆ. ಏಕಗವಾಕ್ಷಿ ವ್ಯವಸ್ಥೆ ಮತ್ತು ತಿದ್ದುಪಡಿಯ ಮೂಲಕ ರೂಪಿಸಿರುವ ಕೈಗಾರಿಕಾ ಸೌಲಭ್ಯ ವಿಧೇಯಕಗಳು ಹೂಡಿಕೆದಾರರಿಗೆ ಬೆರಳತುದಿಯಲ್ಲಿ ಸೇವೆ ಒದಗಿಸುತ್ತಿವೆ. ಇದು ನಮ್ಮ ಸುಗಮ ವಾಣಿಜ್ಯ ಸಂಸ್ಕೃತಿಯ ಭಾಗವಾಗಿದ್ದು, ಅಗತ್ಯ ಪ್ರಕ್ರಿಯೆಗಳನ್ನೆಲ್ಲ ತುಂಬಾ ಸರಳಗೊಳಿಸಲಾಗಿದೆ ಎಂದು ಪಾಟೀಲ್ ಅಭಿಪ್ರಾಯಪಟ್ಟರು.

ಕಂಪೆನಿಯ ಅಧ್ಯಕ್ಷ ವೊನ್ ಜಾಂಗ್ ಕಿಮ್ ಅವರು ಸಂಸ್ಥೆ ನಡೆದು ಬಂದ ಹಾದಿ ಬಗ್ಗೆ ಪ್ರಾತ್ಯಕ್ಷಿಕೆ ಮೂಲಕ ವಿವರಿಸಿದರು. ಮಿಷಿನ್ ಟೂಲ್ ಉತ್ಪಾದನೆಯಲ್ಲಿ 2035ರ ವೇಳೆಗೆ ದೇಶದಲ್ಲೇ ಮೊದಲ ಸ್ಥಾನಕ್ಕೇರುವ ವಿಶ್ವಾಸ ಇದ್ದು, ಈ ನಿಟ್ಟಿನಲ್ಲಿ ನಮ್ಮ ಪ್ರಯತ್ನಗಳು ಸಾಗಲಿವೆ ಎಂದು ಜಾಂಗ್ ಹೇಳಿದರು.

ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಎಸ್.ಸೆಲ್ವಕುಮಾರ್, ಕ್ರಾಫ್ಟ್ಸ್ ಮ್ಯಾನ್ ಅಟೊಮೇಷನ್ ಅಧ್ಯಕ್ಷ ಶ್ರೀನಿವಾಸನ್ ರವಿ, ಸಫರನ್ ಏರ್ ಕ್ರಾಫ್ಟ್ ಎಂಜಿನ್ಸ್ ವ್ಯವಸ್ಥಾಪಕ ನಿರ್ದೇಶಕ ಅಶುತೋಷ್ ಕುಮಾರ್, ಫಾನುಕ್ ಕಾರ್ಪೋರೇಷನ್ ಅಧ್ಯಕ್ಷ ಕುಂಜ್ ಯಮಗುಜಿ ಮಾತನಾಡಿದರು. ಉದ್ಯೋಗ ಮಿತ್ರ ವ್ಯವಸ್ಥಾಪಕ ನಿರ್ದೇಶಕ ದೊಡ್ಡ ಬಸವರಾಜ ಉಪಸ್ಥಿತರಿದ್ದರು.

ಕೋರಿಯಾ ಕೈಗಾರಿಕಾ ಪಾರ್ಕ್ ಸ್ಥಾಪನೆ:

ಜಪಾನ್ ಟೂಲ್ಸ್ ಪಾರ್ಕ್ ಮಾದರಿಯಲ್ಲೇ ಕೋರಿಯಾ ದೇಶದ ಕಂಪೆನಿಗಳ ಸಲುವಾಗಿ ರಾಜ್ಯದಲ್ಲಿ ಪ್ರತ್ಯೇಕ ಕೈಗಾರಿಕಾ ಪಾರ್ಕ್ ಅಭಿವೃದ್ಧಿಪಡಿಸಲಾಗುವುದು ಎಂದು ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಹೇಳಿದರು.

ತುಮಕೂರು ಸಮೀಪ ಸ್ಥಾಪಿಸಿರುವ ಜಪಾನ್ ಟೂಲ್ಸ್ ಕೈಗಾರಿಕಾ ಪಾರ್ಕ್ ಈಗ ಯಶಸ್ವಿಯಾಗಿದ್ದು, ಅದೇ ಮಾದರಿಯಲ್ಲಿ ಕೋರಿಯಾ ಪಾರ್ಕ್ ಅಭಿವೃದ್ಧಿ ಪಡಿಸಲಾಗುವುದು. ಎಲ್ಲಿ ಮಾಡಬೇಕು ಎಂಬುದನ್ನು ನಂತರದ ದಿನಗಳಲ್ಲಿ ತೀರ್ಮಾನಿಸಲಾಗುವುದು ಎಂದು ಅವರು ಹೇಳಿದರು.

Tags

M.B. PatilDN Solutions
share
ವಾರ್ತಾಭಾರತಿ
ವಾರ್ತಾಭಾರತಿ
Next Story
X